CrimeNEWSದೇಶ-ವಿದೇಶ

ಬೆಳ್ಳಂಬೆಳಗ್ಗೆ ಸಚಿವ ಬಂಧಿಸಿದ ಇಡಿ: ಆಂಬುಲೆನ್ಸ್‌ನಲ್ಲಿ ಅಳುತ್ತ ಆಸ್ಪತ್ರೆಗೆ ಹೋದ ಮಂತ್ರಿ

ವಿಜಯಪಥ ಸಮಗ್ರ ಸುದ್ದಿ

ಚೆನ್ನೈ: ಅಕ್ರಮ ಹಣ ವರ್ಗಾವಣೆ ಪ್ರಕರಣದ ಆರೋಪದ ಮೇರೆಗೆ ತಮಿಳುನಾಡು ರಾಜ್ಯದ ಸಚಿವ ಹಾಗೂ ಡಿಎಂಕೆ ನಾಯಕ ವಿ. ಸೆಂಥಿಲ್ ಬಾಲಾಜಿ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಬಂಧಿಸಿ ಬುಧವಾರ ಬೆಳಗ್ಗೆ ವೈದ್ಯಕೀಯ ತಪಾಸಣೆಗಾಗಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಸಚಿವರು ಕಣ್ಣೀರು ಹಾಕಿದ್ದಾರೆ.

ಇಡಿ ಅಧಿಕಾರಿಗಳು ಮಂಗಳವಾರ ಬಾಲಾಜಿ ಅವರ ಮನೆಯ ಮೇಲೆ ದಾಳಿ ನಡೆಸಿದ್ದರು. ಕೆಲ ಗಂಟೆಗಳ ವಿಚಾರಣೆ ಬಳಿಕ ವಾಪಸ್‌ಆಗಿದ್ದ ಅಧಿಕಾರಿಗಳು ಇಂದು ಬೆಳಗ್ಗೆ ಸಚಿವರನ್ನು ಬಂಧಿಸಿ ವಿಚಾರಣೆಗಾಗಿ ಕರೆದೊಯ್ಯುವ ಮೊದಲು ವೈದ್ಯಕೀಯ ತಪಾಸಣೆಗಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.

ಬಂಧನದ ನಂತರ ತನಿಖಾ ಸಂಸ್ಥೆ ಬಾಲಾಜಿಯನ್ನು ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯುತ್ತಿದ್ದಂತೆ, ಚೆನ್ನೈನ ಸರ್ಕಾರಿ ಆಸ್ಪತ್ರೆಯಲ್ಲಿ ನಾಟಕೀಯ ಬೆಳವಣಿಗೆ ನಡೆಯಿತು. ಹೊರಗೆ ಅವರ ಬೆಂಬಲಿಗರು ಜಾರಿ ನಿರ್ದೇಶನಾಲಯದ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದಾಗ ಡಿಎಂಕೆ ನಾಯಕ ಆಂಬುಲೆನ್ಸ್‌ನಲ್ಲಿ ಅಳುತ್ತಿರುವುದು ಕಂಡುಬಂದಿದೆ.

ಅಳುತ್ತಲೇ ಇದ್ದ ಸಚಿವರನ್ನು ಆಂಬುಲೆನ್ಸ್‌ನಿಂದ ಹೊರಗೆ ಕರೆಯಲಾಗಿದೆ. ಬಾಲಾಜಿ ಅವರನ್ನು ಆಸ್ಪತ್ರೆಯ ಐಸಿಯುಗೆ ಸ್ಥಳಾಂತರಿಸಲಾಗಿದೆ ಎಂದು ಡಿಎಂಕೆ ಸಂಸದ ಮತ್ತು ವಕೀಲ ಎನ್‌.ಆರ್. ಎಲಾಂಗೋ ಹೇಳಿದ್ದಾರೆ. ಇಡಿ ಅವರನ್ನು ಬಂಧಿಸಿದ್ದರೆ ಯಾವುದೇ ಸ್ಪಷ್ಟತೆ ಇಲ್ಲ, ಯಾವುದೇ ಬಂಧನ ಮಾರ್ಗಸೂಚಿಗಳನ್ನು ಅನುಸರಿಸಿಲ್ಲ ಎಂದು ಅವರು ಹೇಳಿದ್ದಾರೆ.

ಅವರನ್ನು ಐಸಿಯುಗೆ ಸ್ಥಳಾಂತರಿಸಿದಾಗ ನಾನು ಅವರನ್ನು (ಬಾಲಾಜಿ) ನೋಡಿದೆ. ಅವರ ಆರೋಗ್ಯ ಸ್ಥಿತಿಯನ್ನು ವೈದ್ಯರು ಪರಿಶೀಲನೆ ಮಾಡುತ್ತಿದ್ದಾರೆ. ಅವರನ್ನು ಬಂಧಿಸಲಾಗಿದೆ ಎಂದು ಅಧಿಕೃತವಾಗಿ ನಮಗೆ (ಇಡಿಯಿಂದ) ತಿಳಿಸಲಾಗಿಲ್ಲ ಎಂದು ಎಲಾಂಗೊ ಹೇಳಿದ್ದಾರೆ.

ಸೆಂಥಿಲ್ ಬಾಲಾಜಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಮಿಳುನಾಡು ಕ್ರೀಡಾ ಸಚಿವ ಹಾಗೂ ಡಿಎಂಕೆ ಯುವ ವಿಭಾಗದ ಮುಖ್ಯಸ್ಥ ಉದಯನಿಧಿ ಸ್ಟಾಲಿನ್ ಹೇಳಿದ್ದಾರೆ. ಇದನ್ನು ನಾವು ಕಾನೂನಾತ್ಮಕವಾಗಿ ಎದುರಿಸುತ್ತೇವೆ, ಬಿಜೆಪಿಯ ಬೆದರಿಕೆಗೆ ಡಿಎಂಕೆ ಹೆದರುವುದಿಲ್ಲ ಎಂದು ಹೇಳಿದ್ದಾರೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ