CrimeNEWSಬೆಂಗಳೂರು

ಕಂಠಮಟ್ಟ ಕುಡಿದು ಕಾರು ಓಡಿಸಿದ ಪಡ್ಡೈಕ್ಳು: ಎಂಟು ಬೈಕ್‌ಗಳು ಸಂಪೂರ್ಣ ಜಖಂ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕಂಠಮಟ್ಟ ಕುಡಿದು ನಶೆಯಲ್ಲಿ ಕಾರು ಓಡಿಸಿದ ಪರಿಣಾಮ ಎಂಟು ಬೈಕ್‌ಗಳು ಸಂಪೂರ್ಣ ಜಖಂಗೊಂಡಿರುವ ಘಟನೆ ಉಲ್ಲಾಳು ಬಳಿಯ ಕೆಎಲ್‌ಇ ಲಾ ಕಾಲೇಜು ಬಳಿ ನಡೆದಿದೆ.

ಭರತ್ ಎಂಬ ಯುವಕ ತನ್ನ ಕಾರಿನಲ್ಲಿ ನಾಲ್ವರು ಸ್ನೇಹಿತರನ್ನು ಕರೆದುಕೊಂಡು ಹೋಗಿ ಪಾರ್ಟಿ ಮಾಡಿದ್ದಾನೆ. ಬಳಿಕ ಸ್ನೇಹಿತ ಗುರುದೀಪ್‌ಗೆ ಕಾರು ಚಲಾಯಿಸಲು ಹೇಳಿದ್ದಾನೆ. ಲಾಂಗ್‌ ಡ್ರೈವ್‌ ಹೋಗಿದ್ದು, ಕುಡಿದಿದ್ದರಿಂದ ಕಾರನ್ನು ನಿಯಂತ್ರಿಸಲು ಸಾಧ್ಯವಾಗದೆ ಬೈಕ್‌ಗಳಿಗೆ ಗುದಿದ್ದಾನೆ.

ಪೋಷಕರು ತಮ್ಮ ಮಕ್ಕಳು ಚೆನ್ನಾಗಿ ಇರಲಿ ಎಂದು ಓಡಾಡಲು ಕಾರು ಕೊಡಿಸಿದ್ದಾರೆ. ಅದರ ಜತೆಗೆ ಪಾಕೆಟ್ ಮನಿ ಅದೂ ಇದು ಅಂತಾ ಕೊಡುತ್ತಿರುತ್ತಾರೆ. ಆ ಎಲ್ಲ ಹಣದಲ್ಲಿ ಖರ್ಚಾಗಿ ಉಳಿಸಿದ್ದರಲ್ಲಿ ಕಂಠಮಟ್ಟ ಕುಡಿದು ಕಾರಿನಲ್ಲಿ ಮೋಜಿನ ರೈಡ್ ಹೋಗಿ ಈ ಅಪಘಾತ ಮಾಡಿಕೊಂಡಿದ್ದಾರೆ ಪಡ್ಡೈಕ್ಳು ಎಂದು ಹೇಳಲಾಗುತ್ತಿದೆ.

ಮದ್ಯದ ನಶೆಯಲ್ಲಿದ್ದ ಗುರುದೀಪ್ ಕೆಎಲ್‌ಇ ಲಾ ಕಾಲೇಜಿನ ಬಳಿ ವೇಗವಾಗಿ ಕಾರು ಚಲಾಯಿಸಿಕೊಂಡು ಬಂದಿದ್ದಾನೆ. ಈ ವೇಳೆ ಕಾರು ನಿಯಂತ್ರಣ ತಪ್ಪಿ ಬೇಕರಿ ಬಳಿ ನಿಂತಿದ್ದ ಬೈಕ್‌ಗಳ ಮೇಲೆ ಹರಿದಿದೆ. ಕಾರು ಗುದ್ದಿದ ರಭಸಕ್ಕೆ ಎಂಟು ಬೈಕುಗಳು ಸಂಪೂರ್ಣವಾಗಿ ಜಖಂಗೊಂಡಿವೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ.

ಅಪಘಾತ ಸಂಬಂಧ ಜ್ಞಾನಭಾರತಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಭರತ್ ಹಾಗೂ ಗುರುದೀಪ್‌ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ