NEWSಕೃಷಿನಮ್ಮಜಿಲ್ಲೆ

ರಾಜಕೀಯ ಪಕ್ಷಗಳ ಚುನಾವಣಾ ಪ್ರಣಾಳಿಕೆಗಳು ಜನರ ವಂಚಿಸುವ ಮಂತ್ರ ದಂಡಗಳು : ಕುರುಬೂರ್‌ ಶಾಂತಕುಮಾರ್‌

ವಿಜಯಪಥ ಸಮಗ್ರ ಸುದ್ದಿ

ನಂಜನಗೂಡು:ಬರಗಾಲದ ರೈತರ ಕಷ್ಟ ಅರಿಯದ. ಬರ ಪರಿಹಾರ ನೀಡದ ಸರ್ಕಾರಕ್ಕೆ ರೈತರ ಓಟು ಕೇಳುವ ನೈತಿಕತೆ ಇಲ್ಲ ಇಂದು ರಾಜಕೀಯ ಪಕ್ಷಗಳ ಕುಟುಂಬ ರಾಜಕಾರಣ ವ್ಯಾಪಾರಿಕರಣವಾಗಿದ್ದು, ಮತ ನೀಡಿದ ಪ್ರಜೆಗಳು ಸಂಕಷ್ಟ ಪಡುವಂತಾಗಿದೆ ಎಂದು ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರ ಸಂಘದ ರಾಜ್ಯಾಧ್ಯಕ್ಷ ರೈತರತ್ನ ಕುರುಬೂರು ಶಾಂತಕುಮಾರ್ ಕಿಡಿಕಾರಿದ್ದಾರೆ.

ಬರಗಾಲದಿಂದ ತತ್ತರಿಸಿರುವ ರೈತರ ಸಂಕಷ್ಟ ಆಲಿಸಲು ಯಾರು ಇಲ್ಲ. ಆದರೆ, ಅಧಿಕಾರ ಹಿಡಿಯಲು ಪೈಪೋಟಿ ನಡೆಸುತ್ತಿದ್ದಾರೆ. ರಾಜಕೀಯ ಕ್ಷೇತ್ರ ವ್ಯಾಪಾರಕ್ಕಿಂತಲೂ ಹೆಚ್ಚು ಲಾಭಗಳಿಸುವ ಕ್ಷೇತ್ರವಾಗಿದೆ ಎಂದು ಎಲ್ಲರೂ ಚುನಾವಣೆಗೆ ಪೈಪೋಟಿ ನಡೆಸುತ್ತಿದ್ದಾರೆ ಎಂದು ನಂಜನಗೂಡು ತಾಲೂಕು ರೈತರ ಸಭೆಯಲ್ಲಿ ಆಕ್ರೋಶ ಹೊರಹಾಕಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರ ಬರದ ಸಂಕಷ್ಟ ಕಾಲದಲ್ಲಿ ಜಗಳವಾಡುತ್ತಾ ಸಂಕಷ್ಟದ ಜನರಿಗೆ ಮನರಂಜನೆ ನಿಡುತ್ತಿದ್ದಾರೆ ಇದರಿಂದ ರೈತರ ಹೊಟ್ಟೆ ತುಂಬುವುದಿಲ್ಲ, ಈ ನಾಟಕ ಬಿಡಿ ಪರಿಹಾರ ನೀಡಿ, ಇಲ್ಲವೇ ಮತ ಕೇಳಲು ಬರಬೇಡಿ ಎಂದು ಮತ ಕೇಳಲು ಬರುವ ಅಭ್ಯರ್ಥಿಗಳನ್ನು ಊರಿಂದ ಹೊರಗಿಡಿ ಎಂದು ಕರೆ ನೀಡಿದರು.

ಬರಗಾಲದಿಂದ ತತ್ತರಿಸಿರುವ ರೈತರ ಸಂಕಷ್ಟ ಆಲಿಸಲು ಯಾರು ಇಲ್ಲವಾಗಿದ್ದಾರೆ ಹಳ್ಳಿಗಳಲ್ಲಿ ಕುಡಿಯುವ ನೀರು ದನಕರುಗಳಿಗೆ ಮೇವು ಸಿಗದಂತಾಗಿದೆ ಅಧಿಕಾರಿಗಳು ಚುನಾವಣೆ ಕಾರಣ ಹೇಳಿ ರೈತರನ್ನು ನಿರ್ಲಕ್ಷ್ಯ ಮಾಡಿದ್ದಾರೆ . ಎಂಎಲ್ಎ ಮಂತ್ರಿಗಳು ಅಧಿಕಾರ ಹಿಡಿಯುವ ಹುಚ್ಚಿನಲ್ಲಿ ತೇಲಾಡುತ್ತಿದ್ದಾರೆ.

ಬರಗಾಲದ ಕಾರಣ ಕೊಳವೆ ಬಾವಿಗಳಲ್ಲಿ ನೀರು ಬತ್ತಿ ಹೋಗಿವೆ. ಕೃಷಿ ಕ್ಷೇತ್ರ ದುರ್ಬಲವಾಗುತ್ತಿದೆ ಇದು ರಾಜಕೀಯ ಪಕ್ಷಗಳಿಗೆ ಕಾಣುತ್ತಿಲ್ಲವೇ ಜನರನ್ನ ಆಕರ್ಷಿಸಲು ಸುಳ್ಳಿನ ಪ್ರಣಾಳಿಕೆಗಳನ್ನು ಹೊರಡಿಸಿದ್ದಾರೆ ಎಂದರು.

ಕಾಡಂಚಿನ ಪ್ರದೇಶದ ರೈತರ ಬೆಳೆಗಳನ್ನು ಪ್ರಾಣಿಗಳು ನಾಶ ಮಾಡುತ್ತಿವೆ. ಅರಣ್ಯ ಇಲಾಖೆ ಅಧಿಕಾರಿಗಳ ಬೇಜವಾಬ್ದಾರಿತನ ಇದಕ್ಕೆ ಕಾರಣವಾಗಿದೆ. ರೈತರು ಹಳ್ಳಿಗಳಲ್ಲಿ ಕೆರೆ ಕಟ್ಟೆಗಳ ಹೂಳೆತ್ತುವ, ಪುನಶ್ಚೇತನಗೊಳಿಸುವ, ಹೊಸದಾಗಿ ಕೆರೆಕಟ್ಟಿ ನಿರ್ಮಿಸುವ ಕೆಲಸದಲ್ಲಿ ಶ್ರದ್ದೆ ವಹಿಸಿದರೆ ಕೊಳವೆ ಬಾವಿಗಳಲ್ಲಿ ಅಂತರ್ಜಲ ಏರಿಕೆಯಾಗಿ ನೀರು ಶೇಖರಣೆಯಾಗಿ ಕೃಷಿ ಕ್ಷೇತ್ರ ಸಮೃದ್ಧಿಯಾಗಲು ಸಹಕಾರಿಯಾಗುತ್ತದೆ. ಇಂದಿನ ರಾಜಕಾರಣಿಗಳಿಗೆ ಇದೆಲ್ಲ ಕಾಣುವುದಿಲ್ಲ ಅವರಿಗೆ ಬೇಕಾಗಿಯೂ ಇಲ್ಲ ಎಂದರು.

ನಾವು ಆಯ್ಕೆ ಮಾಡುವ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು, ರೈತರ ಪಾಲಿಗೆ ಮರಳುಗಾಡಿನ ಮರೀಚಿಕೆ ಇದ್ದಂತೆ ಎಂಬುದನ್ನು ಅರಿತುಕೊಳ್ಳಬೇಕು.

ಜಿಲ್ಲಾಧ್ಯಕ್ಷ ಪಿ.ಸೋಮಶೇಖರ್, ತಾಲೂಕ ಅಧ್ಯಕ್ಷ ದೇವನೂರು ವಿಜಯೇಂದ್ರ, ಅಂಬಳೆ ಮಂಜುನಾಥ್, ಅಲತ್ತೂರು ಪುಟ್ಟಸ್ವಾಮಿ, ಸಿಂದುವಳ್ಳಿ ಬಸವಣ್ಣ, ಕಮಲಮ್ಮ, ಶಿವಶಂಕರ್ ಬಿಲಿಗೆರೆ, ಅತ್ತಹಳಿ ದೇವರಾಜ್, ಕಿರಗಸೂರು ಶಂಕರ, ಬರಡನಪುರ ನಾಗರಾಜು, ನೀಲಕಂಠಪ್ಪ, ರೇವಣ್ಣ ಸೇರಿದಂತೆ 200ಕ್ಕೂ ಹೆಚ್ಚಿನ ರೈತರು ಇದ್ದರು.

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ