ತೂಬಗೆರೆ: ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಗ್ರಾಮ ಪಂಚಾಯಿತಿಯಲ್ಲಿ ತೆರವಾಗಿದ್ದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಿಗದಿಯಾಗಿತ್ತು. ಅದರಂತೆ ಅಧ್ಯಕ್ಷರ ಸ್ಥಾನಕ್ಕೆ ಮುನಿಲಕ್ಷ್ಮಮ್ಮ ರಾಮಕೃಷ್ಣ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧವಾಗಿ ಮುನಿಲಕ್ಷಮ್ಮ ರಾಮಕೃಷ್ಣ, ಉಪಾಧ್ಯಕ್ಷರಾಗಿ ಮಂಜುಳಮ್ಮ ರಾಜಕುಮಾರ್ ಅವಿರೋಧವಾಗಿ ಆಯ್ಕೆಯಾದರು.
ಉಪಾಧ್ಯಕ್ಷ ಸ್ಥಾನಕ್ಕೆ ಮಂಜುಳಮ್ಮ ರಾಜಕುಮಾರ್ ಹಾಗೂ ಕೆ.ಗೀತಾ ಇಬ್ಬರು ನಾಮಪತ್ರಗಳು ಸಲ್ಲಿಸಿದ್ದರು, ಕೊನೆ ಕ್ಷಣದಲ್ಲಿ ಕೆ.ಗೀತಾ ನಾಮಪತ್ರ ವಾಪಸ್ ಪಡೆದಿರುವುದರಿಂದ ಮಂಜುಳಮ್ಮ ರಾಜಕುಮಾರ್ ಅವರನ್ನು ಅವಿರೋಧವಾಗಿ ಉಪಾಧ್ಯಕ್ಷರ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ರೇಷ್ಮೆ ಇಲಾಖೆಯ ಸಹಾಯಕ ನಿರ್ದೇಶಕಿ ಗಿರಿಜಾಂಬ ಹೇಳಿದ್ದಾರೆ.
ಇನ್ನು ಆಯ್ಕೆಯಾದ ನೂತನ ಅಧ್ಯಕ್ಷೆ ಮಾತನಾಡಿ, ಗ್ರಾಮ ಪಂಚಾಯಿತಿಯ ಹಳ್ಳಿಗಳಲ್ಲಿ ಕುಡಿಯುವ ನೀರು, ವಿದ್ಯುತ್, ಚರಂಡಿ ಬೀದಿ ದೀಪಗಳನ್ನು ಎಲ್ಲ ಸದಸ್ಯರ ಸಮ್ಮುಖದಲ್ಲಿ ಸಮಸ್ಯೆ ಬಗೆಹರಿಸುತ್ತೇನೆ ಹಾಗೂ ಊರಿನ ಸ್ವಚ್ಛತೆ ಬಗ್ಗೆಯೂ ಹೆಚ್ಚಿನ ಗಮನ ಕೊಡುತ್ತೇನೆ ಎಂದು ಹೇಳಿದರು.
ಕೆಪಿಸಿಸಿ ಸದಸ್ಯ ಎಸ್.ಅರ್. ಮುನಿರಾಜು, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಚ್.ಅಪ್ಪಯ್ಯಣ್ಣ, ತೂಬಗೆರೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಟಿ.ವಿ.ವೆಂಕಟೇಶ್, ನಂಜಮ್ಮ, ನರಸಿಂಹಮೂರ್ತಿ, ಸದಸ್ಯರಾದ ಮುನಿಕೃಷ್ಣಪ್ಪ, ನರಸಿಂಹಮೂರ್ತಿ, ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ವೆಂಕಟಪ್ಪ, ತೂಬಗೆರೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವೆಂಕಟೇಶ್, ಲೆಕ್ಕ ಸಹಾಯಕರು ವೆಂಕಟೇಶ್, ಕಾರ್ಯದರ್ಶಿ ಸಂಜಯ್ ಹಾಗೂ ಸಿಬ್ಬಂದಿ ವರ್ಗದವರು ಇದ್ದರು.