NEWSನಮ್ಮಜಿಲ್ಲೆನಮ್ಮರಾಜ್ಯ

ಅತೀ ಶೀಘ್ರದಲ್ಲೇ KSRTC ನಾಲ್ಕೂ ನಿಗಮಗಳ ಸಾರಿಗೆ ಕಾರ್ಮಿಕ ಸಂಘಟನೆಗಳ ಚುನಾವಣೆ !

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳಿಗೆ ಕಾರ್ಮಿಕ ಸಂಘಟನೆಗಳ ಚುನಾವಣೆಯೂ ನಿಯಮದ ಪ್ರಕಾರ ಮೂರು ತಿಂಗಳ ಒಳಗೆ ನಡೆಸಬೇಕಿದ್ದು, ಈ ಚುನಾವಣೆ ನಡೆಯಲಿದೆ ಎಂದು ತಿಳಿದು ಬಂದಿದೆ.

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಕೇಂದ್ರ ಸರ್ಕಾರವು ನಾಲ್ಕು ಕಾರ್ಮಿಕ ಸಂಹಿತೆಗಳಿಗೆ ಸಂಬಂಧಿಸಿದ ನಿಯಮಗಳನ್ನು ಅಧಿಸೂಚನೆಯಲ್ಲಿ ಪ್ರಕಟಿಸಿದ್ದು, ಈ ಸಂಹಿತೆಗಳು ಕಾರ್ಮಿಕರಿಗೆ ಕನಿಷ್ಠ ವೇತನ ಹಾಗೂ ಸಾರ್ವತ್ರಿಕ ಸಾಮಾಜಿಕ ಭದ್ರತೆ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಖಾತರಿಪಡಿಸುತ್ತವೆ.

ನಿಯಮಗಳನ್ನು ಅಧಿಸೂಚನೆಯಲ್ಲಿ ಪ್ರಕಟಿಸುವ ಮೂಲಕ ನಾಲ್ಕೂ ಸಂಹಿತೆಗಳನ್ನು ಅನುಷ್ಠಾನಕ್ಕೆ ತಂದಂತೆ ಆಗಿದೆ.

ವೇತನ ಸಂಹಿತೆ 2019, ಕೈಗಾರಿಕಾ ಸಂಬಂಧಗಳ ಸಂಹಿತೆ 2020, ಸಾಮಾಜಿಕ ಭದ್ರತಾ ಸಂಹಿತೆ 2020, ವೃತ್ತಿ ಸ್ಥಳದಲ್ಲಿನ ಸುರಕ್ಷತೆ, ಆರೋಗ್ಯ ಮತ್ತು ಕೆಲಸದ ಸ್ಥಿತಿಗಳ ಕುರಿತ ಸಂಹಿತೆ 2020, ಕಳೆದ ವರ್ಷದ ನವೆಂಬರ್ 21ರಂದು ಇವುಗಳು ಜಾರಿಗೆ ಬಂದಿವೆ.

29 ಕಾರ್ಮಿಕ ಕಾನೂನುಗಳನ್ನು ಆಧುನಿಕರಿಸಿದ್ದು, ಅವುಗಳನ್ನು ಸರಳವಾಗಿ ಹಾಗೂ ಸಮಕಾಲೀನ ಅಗತ್ಯಗಳಿಗೆ ಸರಿಹೊಂದಿಸಿ ಒಂದೇ ಕಡೆ ತರುವ ಉದ್ದೇಶದಿಂದ ನಾಲ್ಕು ಸಂಹಿತೆಗಳನ್ನು ರೂಪಿಸಲಾಯಿತು.

ನಾಲ್ಕು ಸಂಹಿತೆಗಳ ಅಡಿಯಲ್ಲಿ ನಿಯಮಗಳನ್ನು ಸರ್ಕಾರದ ಅಧಿಸೂಚನೆಯಲ್ಲಿ ಪ್ರಕಟಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದರೊಂದಿಗೆ ಕಾರ್ಮಿಕ ಸಂಹಿತೆಗಳ ಪೂರ್ಣ ಅನುಷ್ಠಾನದ ಪ್ರಕ್ರಿಯೆ ಕೊನೆಗೊಂಡಿದೆ ಎಂದು ಅವರು ಹೇಳಿದ್ದಾರೆ.

2025ರ ನವೆಂಬರ್ 21ರಂದೇ ಈ ನಾಲ್ಕೂ ಸಂಹಿತೆಗಳು ಕಾನೂನಾಗಿ ಜಾರಿಗೆ ಬಂದಿದ್ದರೂ, ನಿಯಮಗಳನ್ನು ಜಾರಿಗೆ ತಂದಿಲ್ಲದಿದ್ದ ಕಾರಣದಿಂದಾಗಿ ಕೆಲವು ವಿವರಣೆಗಳು ಲಭ್ಯವಿರಲಿಲ್ಲ ಎಂದು ಅಧಿಕಾರಿ ವಿವರಿಸಿದ್ದಾರೆ.

ಕರಡು ನಿಯಮಗಳನ್ನು 2025ರ ಡಿಸೆಂಬರ್ 30ರಂದು ಪ್ರಕಟಿಸಲಾಗಿತ್ತು. ಇದಕ್ಕೆ ಸಂಬಂಧಪಟ್ಟವರಿಂದ ಪ್ರತಿಕ್ರಿಯೆ ಕೋರಲಾಗಿತ್ತು. ಕಾನೂನು ಪರಿಶೀಲನೆಯ ನಂತರ ಅಂತಿಮ ನಿಯಮಗಳನ್ನು ಅಧಿಸೂಚನೆಯಲ್ಲಿ ಪ್ರಕಟಿಸಲಾಗಿದೆ. ಹೊಸ ಸಂಹಿತೆಗಳು ಪೂರ್ಣ ಪ್ರಮಾಣದಲ್ಲಿ ಜಾರಿಗೆ ಬರುವುದಕ್ಕೆ ನಿಯಮಗಳನ್ನು ಪ್ರಕಟಿಸುವುದು ಅಗತ್ಯವಾಗಿತ್ತು.

ಔದ್ಯಮಿಕ ವಹಿವಾಟುಗಳನ್ನು ಸುಲಭವಾಗಿಸುವ, ಉದ್ಯೋಗ ಸೃಷ್ಟಿಗೆ ಉತ್ತೇಜನ ನೀಡುವ, ಪ್ರತಿ ಕಾರ್ಮಿಕನ ಸುರಕ್ಷತೆ, ಆರೋಗ್ಯ, ಸಾಮಾಜಿಕ ಮತ್ತು ವೇತನ ಭದ್ರತೆಯನ್ನು ಖಾತರಿಪಡಿಸುವ ಗುರಿಯನ್ನು ಈ ಸಂಹಿತೆಗಳು ಹೊಂದಿವೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಇನ್ನು ಕಾರ್ಮಿಕರಿಗೆ ಸಂಬಂಧಿಸಿದ ವಿಚಾರಗಳು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಮವರ್ತಿ ಪಟ್ಟಿಯಲ್ಲಿ ಇರುವ ಕಾರಣದಿಂದಾಗಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ನಾಲ್ಕು ಸಂಹಿತೆಗಳ ಕುರಿತ ನಿಯಮಗಳನ್ನು ಅಧಿಸೂಚನೆಯಲ್ಲಿ ಪ್ರಕಟಿಸಬೇಕು. ಆಗ ಮಾತ್ರ ಇವು ದೇಶದಾದ್ಯಂತ ಪೂರ್ಣ ಪ್ರಮಾಣದಲ್ಲಿ ಜಾರಿಗೆ ಬರುತ್ತವೆ.

ಈ ನಡುವೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳಿಗೆ ಕಾರ್ಮಿಕ ಸಂಘಟನೆಗಳ ಚುನಾವಣೆಯೂ ನಿಯಮದ ಪ್ರಕಾರ ಮೂರು ತಿಂಗಳ ಒಳಗೆ ನಡೆಸಬೇಕಿದ್ದು, ಈ ಚುನಾವಣೆ ನಡೆಯಲಿದೆ ಎಂದು ತಿಳಿದು ಬಂದಿದೆ. ಈ ಚುನಾವಣೆ ಆದರೆ ಸಾರಿಗೆ ನೌಕರರಿಗೂ ಒಮ್ಮತದ ಅಭಿಪ್ರಾಯಕ್ಕೆ ಬರಲು ಸಾಧ್ಯವಾಗುತ್ತದೆ. ಹೀಗಾಗಿ ನೌಕರರು ಹಾಗೂ ಸಂಘಟನೆಗಳು ಕೂಡ ಈ ಚುನಾವಣೆಯನ್ನು ಎದುರು ನೋಡುತ್ತಿವೆ.

Megha
the authorMegha

Leave a Reply

error: Content is protected !!
Latest news
ಗೃಹಲಕ್ಷ್ಮಿ, ಗೃಹಜ್ಯೋತಿಗೆ  ಹೊಸದಾಗಿ ಅರ್ಜಿ ಸಲ್ಲಿಸಬೇಕೆಂಬ ನಿರ್ಧಾರ ಸ್ವಾಗತಾರ್ಹ KSRTC ಪುತ್ತೂರು: ಡ್ರಿಂಕ್ಸ್ ಪರೀಕ್ಷಿಸಲು ಮಷೀನ್ ತಂದಿದ್ದಾರೆ ಎಂದು ತಪ್ಪು ತಿಳಿದು ಹೆದರಿದ ನೌಕರ- ಮೆಟ್ಟಲುಗಳಿಂದ ಬಿ... 2037ರ ವೇಳೆಗೆ ಬೆಂಗಳೂರು ಆಗಲಿದೆ ಜಾಗತಿಕ ಆರ್ಥಿಕ ಶಕ್ತಿಕೇಂದ್ರ: 35 ಲಕ್ಷ ಕೋಟಿ ರೂ.ಗೂ ಅಧಿಕ ಕಾಂಚಾಣ, 30 ಲಕ್ಷ ಹೊಸ ... ಪಂಜಾಬ್ ಮಾದರಿ ಕರ್ನಾಟಕದಲ್ಲೂ ಹೆದ್ದಾರಿ ಟೋಲ್‌ ರದ್ದತಿಗೆ ಆಗ್ರಹಿಸಿ 23ರಂದು ರೈತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ KSRTC ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಓಂಕಾರಪ್ಪನ ಸಹಿ ಮಾಡುವ ಅಧಿಕಾರ ರದ್ದುಗೊಳಿಸಿ ತನಿಖೆಗೆ ಹೈ ಕೋರ್ಟ್‌ ಆದೇಶ BMTC: 30ನೇ ಘಟಕದ ಎಲೆಕ್ಟ್ರಿಕ್‌ ಬಸ್‌ಗಳ ಅಸಮರ್ಪಕ ಕಾರ್ಯಾಚರಣೆ ವಿರುದ್ಧ ಸಿಎಸ್‌ಗೆ ದೂರು ನೀಡಿದ ನಿರ್ವಾಹಕರು ಪಬ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡ -ಅಬಕಾರಿ ಡಿಸಿ ಅಮಾನತಿಗೆ ಶಿಫಾರಸು: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಹೊಲದ ಕೂಲಿ ಕೆಲಸ ಬಿಟ್ಟು ಮತ್ತೆ ಶಿಕ್ಷಣದತ್ತ ಹೆಜ್ಜೆ ಇಟ್ಟ ವಿದ್ಯಾರ್ಥಿನಿ: ಪ್ರಾಂಶುಪಾಲರ ಮಾನವೀಯತೆಗೆ ಬೆಲೆ ಕಟ್ಟಲಾದ... ಕನಿಷ್ಠ ವಿದ್ಯಾರ್ಹತೆ SSLC ಪಾಸ್‌: ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್ ಪ್ರವೇಶಕ್ಕೆ ಅರ್ಜಿ ಆಹ್ವಾನ ಕರ್ನಾಟಕದಲ್ಲಿ ‘ಕರ್ತವ್ಯ’ ಕ್ರಾಂತಿ: ಸ್ವದೇಶಿ ಎಐ ತಂತ್ರಜ್ಞಾನದ ಹೊಸ ಹೆಜ್ಜೆ