NEWSನಮ್ಮಜಿಲ್ಲೆನಮ್ಮರಾಜ್ಯ

BMTC ಬಸ್‌ ಚಾಲಕರ ಮೇಲೆ ಎಲೆಕ್ಟ್ರಿಕ್‌ ಬಸ್‌ ಚಾಲಕರಿಂದ ಹಲ್ಲೆ: ರಿಪೀಟ್‌ ಆದರೆ ಕಂಬಿ ಎಣಿಸುತ್ತೀರಿ – ಎಚ್ಚರಿಕೆ ಕೊಟ್ಟ ಅಧಿಕಾರಿಗಳು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು:‌ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್‌ ಚಾಲನಾ ಸಿಬ್ಬಂದಿ ಮತ್ತು ಬಿಎಂಟಿಸಿ ಗುತ್ತಿಗೆ ಆಧಾರದ ಮೇಲೆ ಎಲೆಕ್ಟ್ರಿಕ್‌ ಬಸ್‌ಗಳಲ್ಲಿ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ನೌಕರರ ಮಧ್ಯೆ ಗಲಾಟೆಗಳು ನಡೆಯುತ್ತಿದ್ದು, ಇದಕ್ಕೆ ಮೇಲಧಿಕಾರಿಗಳು ಕಡಿವಾಣ ಹಾಕಬೇಕಿದೆ.

ಇಲ್ಲಿ ಬಿಎಂಟಿಸಿ ಬಸ್‌ ಚಾಲಕರು ಮೇಲಧಿಕಾರಿಗಳ ಭಯದಿಂದ ಕರ್ತವ್ಯ ನಿರ್ವಹಸುತ್ತಿದ್ದಾರೆ. ಆದರೆ, ಇದೇ ಬಿಎಂಟಿಸಿಯ ಎಲೆಕ್ಟ್ರಿಕ್‌ ಬಸ್‌ಗಳಲ್ಲಿ ಡ್ಯೂಟಿ ಮಾಡುತ್ತಿರುವ ನೌಕರರು ಗುತ್ತಿಗೆ ಆಧಾರ ಮೇಲೆ ನೇಮಕಗೊಂಡಿರುವುದರಿಂದ ಇವರಿಗೆ ಸಂಬಂಧಪಟ್ಟ ಅಧಿಕಾರಿಗಳ ಬಗ್ಗೆ ಭಯವಿಲ್ಲದಂತಾಗಿದೆ. ಈ ಕಾರಣದಿಂದ ಮನ ಬಂದಂತೆ ಕೆಲ ನೌಕರರು ಗುತ್ತಿಗೆ ಚಾಲಕರು BMTC ಬಸ್‌ ಚಾಲಕರ ಮೇಲೆ ಹಲ್ಲೆ ಮಾಡುತ್ತಿದ್ದಾರೆ.

ಬೆಂಗಳೂರು ಮಹಾನಗರ ಸಾರಿಗೆ ಬಸ್‌ ಚಾಲಕರು ಮತ್ತು ಬಿಎಂಟಿಸಿ ಎಲೆಕ್ಟ್ರಿಕ್‌ ಬಸ್‌ ಚಾಲಕರ ನಡುವೆ ಆಗಿಂದಾಗೆ ತಿಕ್ಕಾಟ ನಡೆಯುತ್ತಿದ್ದು, ಬಿಎಂಟಿಸಿಯ ಕೆಲ ಚಾಲಕರು ತೀವ್ರ ತರದ ಹಲ್ಲೆಗೆ ಒಳಗಾಗಿ ಈಗಲೂ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೂ ಗುತ್ತಿಗೆ ಚಾಲಕರಿಗೆ ತಿಳಿ ಹೇಳುವ ಕೆಲಸ ಸಮರ್ಪಕವಾಗಿ ಆಗುತ್ತಿಲ್ಲ. ಇದರಿಂದ ಕೆಲ ಚಾಲಕರು ಹಲ್ಲೆ ಮಾಡುವಂತಹ ಕೆಟ್ಟ ಚಾಳಿಯನ್ನು ಮೈಗೂಡಿಸಿಕೊಂಡಿದ್ದಾರೆ.

ಅಲ್ಲದೆ ಎಲೆಕ್ಟ್ರಿಕ್‌ ಬಸ್‌ಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ನೌಕರರು ಹಲ್ಲೆ ಮಾಡಿದ ಬಳಿಕ ಈ ಕೆಲಸವೇ ಬೇಡ ಎಂದು ಪರಾರಿಯಾಗುತ್ತಿದ್ದಾರೆ. ಆದರೆ ಇಂತ ನೌಕರರಿಗೆ ಯಾವ ರೀತಿ ನೀಡೆದುಕೊಳ್ಳಬೇಕು ಎಂಬ ಬಗ್ಗೆ ಸಂಬಂಧಪಟ್ಟವರು ತಿಳಿವಳಿಕೆ ನೀಡದೆ ಇರುವುದರಿಂದ ಈ ರೀತಿಯ ಘಟನೆಗಳು ನಡೆಯುತ್ತಿವೆ. ನಾವು ಹಿರಿಯ ಚಾಲಕರಿದ್ದೇವೆ ಆದರೂ ನಮ್ಮನ್ನೇ ನಿಂದಿಸುತ್ತಾರೆ ಎಂದು ಬಿಎಂಟಿಸಿ ಬಸ್‌ ಚಾಲಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನು ನಿನ್ನೆ (ಜೂನ್‌ 29) ಕೂಡ ಬಿಎಂಟಿಸಿ ಚಾಲಕರೊಬ್ಬರ ಮೇಲೆ ಬಿಎಂಟಿಸಿ 30ನೇ ಘಟಕದ ಎಲೆಕ್ಟ್ರಿಕ್‌ ಬಸ್‌ ಚಾಲಕ ಮೇಲೆ ಹಲ್ಲೆ ಮಾಡಿದ್ದು, ಭುಜ ಸಂದಿನ ಮೂಳೆಯ ಗೋಲಿ ಜಾರಿದ್ದು ತೀವ್ರತರದ ನೋವು ಅನುಭವಿಸುತ್ತಿದ್ದಾರೆ. ಸದ್ಯ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಈ ಸಂಬಂಧ ಪೊಲೀಸ್‌ ಠಾಣೆಗೆ ದೂರು ನೀಡಲು ಹಲ್ಲೆಗೊಳಗಾದ ಚಾಲಕರು ಮುಂದಾಗಿದ್ದರು.

ಆದರೆ, ಬಿಎಂಟಿಸಿ ಡಿಪೋ ವ್ಯವಸ್ಥಾಪಕರು ಮತ್ತು ಇತರೆ ಮೇಲಧಿಕಾರಿಗಳು ಈ ಬಗ್ಗೆ ದೂರು ಕೊಟ್ಟರೆ ಸಮಸ್ಯೆ ಹೆಚ್ಚಾಗುತ್ತದೆ. ಈ ಬಗ್ಗೆ ಆತನ ಕರೆಸಿ ಮತ್ತು ಸಂಬಂಧಪಟ್ಟ ಗುತ್ತಿಗೆದಾರರ ಕರೆಸಿ ಎಚ್ಚರಿಕೆ ನೀಡುವ ಮೂಲಕ ಇನ್ನು ಮುಂದೆ ಇಂಥ ಘಟನೆಗಳು ನಡೆಯದಂತೆ ನೋಡಿಕೊಳ್ಳಲಾಗುವುದು ಎಂದು ಸಮಾಧಾನ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಅಲ್ಲದೆ ಮುಂದೆ ಬಿಎಂಟಿಸಿ ಸಂಸ್ಥೆಯ ಚಾಲನಾ ಸಿಬ್ಬಂದಿಗಳ ಮೇಲೆ ಎಲೆಕ್ಟ್ರಿಕ್‌ ಬಸ್‌ ಚಾಲಕರು ಹಲ್ಲೆ ಮಾಡಿದರೆ ಅಂಥ ಚಾಲಕರಿಗೆ ಕಾನೂನಿನಡಿ ವಿಭಾಗೀಯ ನಿಯಂತ್ರಣಾಧಿಕಾರಿಗಳು ಮತ್ತು ಘಟಕ ವ್ಯವಸ್ಥಾಪಕರಾದ ನಾವೇ ಖುದ್ದು ಪೊಲೀಸ್‌ ಠಾಣೆ ಹೋಗಿ ನಿಮ್ಮ ಪರವಾಗಿ ದೂರು ದಾಖಲಿಸುತ್ತೇವೆ ಎಂದು ಭರವಸೆ ನೀಡಿದ್ದಾರೆ ಎಂದು ನೌಕರರು ತಿಳಿಸಿದ್ದಾರೆ.

ಇನ್ನು ಗುತ್ತಿಗೆ ಆಧಾರ ಮೇಲೆ ಕರ್ತವ್ಯ ನಿರತ ಬಿಎಂಟಿಸಿ ಎಲೆಕ್ಟ್ರಿಕ್‌ ಬಸ್‌ ಚಾಲಕರು ಕೂಡ ಟ್ರಿಪ್‌ ಪೂರ್ಣಗೊಳಿಸುವ ಒತ್ತಡದಲ್ಲಿ ಕೆಲಸ ಮಾಡುತ್ತಿದ್ದು, ಈ ವೇಳೆ ಅಪಘಾತಗಳು ಹೆಚ್ಚಾಗಿ ಸಂಭವಿಸುತ್ತಿವೆ. ಜತೆಗೆ ಈ ರೀತಿ ನಮ್ಮ ಮತ್ತು ಅವರ ಮಧ್ಯೆ ಗಲಾಟೆಗಳು ಆಗುತ್ತಿವೆ, ಇದರಿಂದ ನಾವು ಕೂಡ ನೋವು ಅನುಭವಿಸುತ್ತಿದ್ದೇವೆ ಎಂದು ಎಲೆಕ್ಟ್ರಿಕ್‌ ಚಾಲಕರು ಅಳಲು ತೋಡಿಕೊಂಡಿದ್ದಾರೆ.

ಒಟ್ಟಾರೆ ಬಿಎಂಟಿಸಿ ಬಸ್‌ ಮತ್ತು ಎಲೆಕ್ಟ್ರಿಕ್‌ ಬಸ್‌ ಚಾಲಕರಿಬ್ಬರು ಸಹೋದರರಂತೆ ನಾವು ಸಾರ್ವಜನಿಕರ ಸೇವೆ ಮಾಡುತ್ತಿದ್ದೇವೆ ಎಂದು ತಿಳಿದುಕೊಂಡರೆ ಇಂಥ ಗಲಾಟೆಗಳಿಗೆ ಪೂರ್ಣವಿರಾಮ ಹಾಕಬಹುದು ಎಂದು ಪ್ರಜ್ಞಾವಂತ ನೌಕರರು ಹೇಳುತ್ತಿದ್ದಾರೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ರಿವು ಮೂಡಿಸಲು ಮುಂದಾಗಬೇಕಿದೆ ಎಂದು ಒತ್ತಾಯಿಸಿದ್ದಾರೆ.

Vijayapatha - ವಿಜಯಪಥ

Leave a Reply

error: Content is protected !!
LATEST
KSRTC ಬಸ್‌ -ಕಾರು ನಡುವೆ ಅಪಘಾತ: ಅನಾರೋಗ್ಯದ ನಡುವೆ ಕಾರು ಚಲಾಯಿಸಿದ ಪತಿ ಮೃತ- ಪ್ರಣಾಪಾಯದಿಂದ ಪತ್ನಿ ಪಾರು 600ರಿಂದ 800 ಮಂದಿ ಅಧಿಕಾರಿಗಳಿಗಾಗಿ 1.07 ಲಕ್ಷ ನೌಕರರಿಗೆ ಅನ್ಯಾಯ ಮಾಡಲು ಹೊರಟಿರುವುದು ನ್ಯಾಯವೇ? KSRTC ನಾಲ್ಕೂ ನಿಗಮಗಳ ಸಾರಿಗೆ ನೌಕರರಿಗೆ ಸಮಾನ ವೇತನ ಲಾಭವೋ-ನಷ್ಟವೋ..!?? ಹರಿಯಾಣದಲ್ಲಿ ಸಮಾವೇಶ: ಎಂಎಸ್‌ಪಿ ಖಾತ್ರಿ ಕಾನೂನು ಜಾರಿಗೆ ಅನ್ನದಾತರ ಪಟ್ಟು ಪ್ರಜಾಪ್ರಭುತ್ವದ ಉಳಿವಿಗಾಗಿ ಮಾನವ ಸರಪಳಿ : ಉಸ್ತುವಾರಿ ಸಚಿವ ಮುನಿಯಪ್ಪ BMTC ಅಧಿಕಾರಿಗಳ ವಾಹನಗಳಿಗೂ ಖಾಸಗಿ ಚಾಲಕರ ನೇಮಕಕ್ಕೆ ಟೆಂಡರ್‌ ಕರೆದ ಸಂಸ್ಥೆ KSRTC ಮಡಿಕೇರಿ: ವೇತನ ಬಿಡುಗಡೆ ಆಗ್ರಹಿಸಿ ಪ್ರತಿಭಟನೆಗೆ ಇಳಿದ ಗುತ್ತಿಗೆ ಚಾಲಕರು KSRTC ನೌಕರರ ನಂಬಿಸಲು ಹೋದ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳಿಂದಲೇ ಅವರ ಊಸರವಳ್ಳಿ ಬಣ್ಣ ಬಯಲು..! KSRTC : ಗಣಪತಿ ಪ್ರತಿಷ್ಠಾಪಿಸಿದ್ದರಿಂದ ಡಿಪೋ ಮುಂದೆ ಚಾಲಕ ರವಿ ಪಾರ್ಥಿವ ಶರೀರ ಇಡಲಾತ್ತು, ಪ್ರಮಾದವಾಗಿಲ್ಲ- ಡಿಎಂ ಸಮ... 10 ವರ್ಷದ ಆಧಾರ್‌ ನವೀಕರಣಕ್ಕೆ ಡೆಡ್‌ಲೈನ್‌ ಫಿಕ್ಸ್‌: ನಾಳೆ ಅಂತಿಮ ಗಡುವು- ಬಳಿಕ ದಂಡ