NEWSನಮ್ಮಜಿಲ್ಲೆನಮ್ಮರಾಜ್ಯ

ದೀಪಾವಳಿ ಸಂಭ್ರಮದಲ್ಲಿ ಎಚ್‌ಡಿಕೆ ಮನೆಯಲ್ಲಿ ಎಡವಟ್ಟು: ವಿದ್ಯುತ್ ದೀಪಗಳ ಅಲಂಕಾರಕ್ಕೆ ವಿದ್ಯುತ್ ಕಳ್ಳತನ – ಕಾಂಗ್ರೆಸ್‌ ಆರೋಪ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಸೋಮವಾರ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಮನೆಗೆ ಅಕ್ರಮವಾಗಿ ವಿದ್ಯುತ್‌ ಸಂಪರ್ಕ ಮಾಡಿಕೊಂಡು ವಿದ್ಯುತ್‌ ದೀಪಗಳ ಅಲಂಕಾರ ಮಾಡಲಾಗಿತ್ತು ಎಂದು ರಾಜ್ಯ ಕಾಂಗ್ರೆಸ್‌ ಎಕ್ಸ್‌ ಮಾಡಿತ್ತು.

ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನನಗೆ ಗೊತ್ತಿಲ್ಲ ತಿಳಿದುಕೊಂಡ ಮೇಲೆ ಮಾತನಾಡುತ್ತೇನೆ ಎಂದು ಹೇಳಿದ್ದರು. ಅದರಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯಿಸಿ ಬೆಸ್ಕಾಂ ಅಧಿಕಾರಿಗಳು ಈ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಹೇಳಿದ್ದರು.

ಈ ನಡುವೆ ಮಾಜಿ ಮಾಜಿ ಸಿಎಂ ಎಚ್‌ಡಿಕೆ ಎಕ್ಸ್‌ ಮಾಡಿದ್ದು, ದೀಪಾವಳಿ ಹಬ್ಬಕ್ಕೆ ನನ್ನ ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಲು ಖಾಸಗಿ ಡೆಕೋರೇಟರ್ ಒಬ್ಬರಿಗೆ ಹೇಳಲಾಗಿತ್ತು. ಅವರು ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಿದ ಮೇಲೆ ಪಕ್ಕದಲ್ಲಿಯೇ ಇದ್ದ ಕಂಬದಿಂದ ವಿದ್ಯುತ್ ಸಂಪರ್ಕ ಪಡೆದು ಪರೀಕ್ಷೆ ಮಾಡಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಅಲ್ಲದೆ ಆ ವೇಳೆ ನಾನು ಬಿಡದಿಯ ತೋಟದಲ್ಲಿದ್ದೆ. ನಿನ್ನೆ ರಾತ್ರಿ ಮನೆಗೆ ವಾಪಸ್ ಬಂದಾಗ ಈ ವಿಷಯ ನನ್ನ ಗಮನಕ್ಕೆ ಬಂತು. ತಕ್ಷಣ ಅದನ್ನು ತೆಗೆಸಿ ಮನೆಯ ಮೀಟರ್ ಬೋರ್ಡ್ ನಿಂದಲೇ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಮಾಡಿದ್ದೇನೆ. ಇದು ವಾಸ್ತವ ಸ್ಥಿತಿ. ಇದರಲ್ಲಿ ಮುಚ್ಚುಮರೆ ಏನೂ ಇಲ್ಲ ಎಂದು ತಿಳಿಸಿದ್ದಾರೆ.

ಇನ್ನು ಮುಂದುವರಿದು ಎಕ್ಸ್‌ ಮಾಡಿರುವ ಅವರು, ಈ ಅಚಾತುರ್ಯಕ್ಕೆ ನನ್ನ ವಿಷಾದವಿದೆ. ಬೆಸ್ಕಾಂ ಅಧಿಕಾರಿಗಳು ಬಂದು ಪರೀಕ್ಷೆ ಮಾಡಿ ನೋಟಿಸ್ ನೀಡಲಿ. ದಂಡ ಕಟ್ಟುತ್ತೇನೆ. ಇದನ್ನೇ ಕರ್ನಾಟಕ ಕಾಂಗ್ರೆಸ್‌ ದೊಡ್ಡದು ಮಾಡಿ ಪ್ರಚಾರ ಗಿಟ್ಟಿಸುವ ಕೆಲಸ ಮಾಡುತ್ತಿದೆ. ಆ ಪಕ್ಷದ ಕ್ಷುಲ್ಲಕ ಮನಃಸ್ಥಿತಿಯ ಬಗ್ಗೆ ನನಗೆ ಮರುಕ ಇದೆ ಎಂದು ತಿಳಿಸಿದ್ದಾರೆ.

ಡಿಸಿಎಂ ಶಿವಕುಮಾರ್‌ ಅವರ ವಿರುದ್ಧವೂ ಪರೋಕ್ಷವಾಗಿ ವಾಗ್ದಾಳಿ ನಡೆಸಿರುವ ಎಚ್‌ಡಿಕೆ ನಾನೇನು ರಾಜ್ಯದ ಆಸ್ತಿ ಕಬಳಿಸಿಲ್ಲ. ಕಂಡವರ ಭೂಮಿಗೆ ಬೇಲಿ ಹಾಕಿಲ್ಲ. ಇನ್ನೊಬ್ಬರ ರಕ್ತ ಕುಡಿದು ಧನದಾಹ ತೀರಿಸಿಕೊಂಡಿಲ್ಲ ಎಂದು ಹೇಳಿದ್ದಾರೆ.

ಕುಮಾರಸ್ವಾಮಿ ವಿದ್ಯುತ್ ಕಳ್ಳತನ ಮಾಡಿದ್ದಾರೆ, ಬೆಸ್ಕಾಂ ಕ್ರಮ ಕೈಗೊಳ್ಳಲಿ ಎಂದು ಉಪ ಮುಖ್ಯಮಂತ್ರಿಗಳು ಹೇಳಿದ್ದಾರೆ. ನಾನು ಮನೆಯಲ್ಲೇ ಇದ್ದೇನೆ. ಬೆಸ್ಕಾಂ ಅಧಿಕಾರಿಗಳು ಬರಲಿ. ಅವರ ಯಾವುದೇ ಕ್ರಮಕ್ಕೆ ನಾನು ಸಿದ್ಧನಿದ್ದೇನೆ ಎಂದಿದ್ದಾರೆ.

Leave a Reply

error: Content is protected !!
LATEST
ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ