CrimeNEWSಸಿನಿಪಥ

ನೆಚ್ಚಿನ ನಟನ ಬೃಹತ್‌ ಕಟೌಟ್ ಕಟ್ಟುವಾಗ ವಿದ್ಯುತ್‌ ಸ್ಪರ್ಶ: ಮೂವರು ಮೃತ- ಮೂವರಿಗೆ ಗಂಭೀರ ಗಾಯ

ವಿಜಯಪಥ ಸಮಗ್ರ ಸುದ್ದಿ

ಗದಗ: ತಮ್ಮ ನೆಚ್ಚಿನ ನಟನ ಜನ್ಮದಿನವನ್ನು ಅದ್ದೂರಿಯಾಗಿ ಆಚರಿಸಬೇಕು ಎಂದು ತಡ ರಾತ್ರಿ ಬೃಹತ್ ಗಾತ್ರದ ಕಟೌಟ್ ಕಟ್ಟಲು ಹೋಗಿ ವಿದ್ಯುತ್ ಸ್ಪರ್ಶದಿಂದ ಮೂವರು ನಟ ಯಶ್ ಅಭಿಮಾನಿಗಳು ಮೃತಪಟ್ಟಿದ್ದು, ಮೂವರು ತೀವ್ರಗಾಗಿ ಗಾಯಗೊಂಡಿರುವ ಘಟನೆ ಜರುಗಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಲಕ್ಷ್ಮೇಶ್ವರದ ಸೂರಣಗಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಗ್ರಾಮದ ಯುವಕರಾದ ಹನುಮಂತ ಹರಿಜನ್ (24), ಮುರಳಿ ನಡುವಿನಮನಿ (20) ಹಾಗೂ ನವೀನ್ ಗಾಜಿ (20) ಸ್ಥಳದಲ್ಲೇ ಅಸುನೀಗಿದ್ದಾರೆ. ಮತ್ತೆ ಈ ಘಟನೆಯಲ್ಲಿ ಮಂಜುನಾಥ್, ಪ್ರಕಾಶ್ ಹಾಗೂ ಹನುಮಂತ ಎಂಬವವರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ತಡರಾತ್ರಿ 1 ಗಂಟೆಯಲ್ಲಿ ಕಟೌಟ್ ಕಟ್ಟುವ ವೇಳೆ ಈ ದುರ್ಘಟನೆ ನಡೆದಿದೆ. ಗಾಯಾಳುಗಳನ್ನು ಲಕ್ಷ್ಮೇಶ್ವರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಧ್ಯರಾತ್ರಿ ವೇಳೆ, ಹತ್ತಾರು ಜನ ಯುವಕರು ಸೇರಿಕೊಂಡು ತಮ್ಮ ನೆಚ್ಚಿನ ನಟನ ಕಟೌಟ್ ಕಟ್ಟಲು ಮುಂದಾಗಿದ್ದಾರೆ. ರಾತ್ರಿ ಸಮಯ ಆಗಿದ್ದರಿಂದ ವಿದ್ಯುತ್ ತಂತಿ ಯುವಕರ ಗಮನಕ್ಕೆ ಬಂದಿಲ್ಲ. ಇದರಿಂದ ಈ ದುರ್ಘಟನೆ ಸಂಭವಿಸಿದೆ.

ಈ ಅವಘಡದಲ್ಲಿ ಮೃತಪಟ್ಟ ಯುವಕರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಗ್ರಾಮದಲ್ಲಿ ಸೂತಕದ ಛಾಯೆ ಮನೆ ಮಾಡಿದೆ. ಈ ಸಂಬಂಧ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

error: Content is protected !!
LATEST
BMTC ಕಂಡಕ್ಟರ್‌ಗೆ ಕಲ್ಲಿನಿಂದ ಹೊಡೆದ ಕಿರಾತಕ: ಆತಂಕದಲ್ಲೇ ಡ್ಯೂಟಿ, ಚಾಲನಾ ಸಿಬ್ಬಂದಿಗಳಿಗಿಲ್ಲ ಜೀವ ರಕ್ಷಣೆ KKRTC ಬಸ್‌ ಪಲ್ಟಿ ಮಹಿಳೆ ಸಾವು- ಒಬ್ಬರ ಸ್ಥಿತಿ ಗಂಭೀರ, 20ಕ್ಕೂ ಹೆಚ್ಚು ಮಂದಿಗೆ ಗಾಯ ವಿಜಯಪಥ ವರದಿ ಪರಿಣಾಮ-KSRTC ಚಾಲಕನಿಗೆ ಕೊಟ್ಟಿದ್ದ ಮೆಮೋ ವಾಪಸ್‌ ಪಡೆದು 20ದಿನಗಳ ರಜೆ ಮಂಜೂರು ಮಾಡಿದ ಡಿಸಿ ಸಾರಿಗೆ ನೌಕರರಿಂದ ಚುನಾಯಿತರಾಗದ ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ ಸರಿ ಸಮಾನ... KSRTC ನೌಕರರ ಸಂಬಳ ಅ.30ರಂದೇ ಬ್ಯಾಂಕ್ ಖಾತೆಗೆ ಜಮೆ: ಸಂಸ್ಥೆ ನಿರ್ದೇಶಕರು ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ : ಸಚಿವ ಎಚ್.ಕೆ. ಪಾಟೀಲ ಹಸಿರು ಪಟಾಕಿ ಬಳಸಿ ದೀಪಾವಳಿ ಹಬ್ಬ ಆಚರಿಸಿ- ನಿಷೇಧಿತ ಪಟಾಕಿ ಮಾರಾಟ, ಬಳಕೆ ನಿಷೇಧ: ಜಿಲ್ಲಾಧಿಕಾರಿ ಡಾ.ಶಿವಶಂಕರ ಕೆಂಗೇರಿ ಕೆರೆಯಲ್ಲಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ₹5 ಲಕ್ಷ ಪರಿಹಾರ APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ