CrimeNEWSನಮ್ಮಜಿಲ್ಲೆ

KSRTC ಬಸ್‌ಮೇಲೆ ಕಾಡಾನೆ ದಾಳಿ- ಬಸ್‌ ಜಖಂ, ಪ್ರಯಾಣಿಕರು ಸುರಕ್ಷಿತ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಕೆಂಜಾಳ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್ಸೊಂದಕ್ಕೆ ಕಾಡಾನೆ ದಾಳಿ ಮಾಡಿ ಜಖಂಗೊಳಿಸಿರುವ ಘಟನೆ ಮಂಗಳೂರು ಜಿಲ್ಲೆಯ ಕೆಂಜಾಳ ಸಮೀಪ ತಡರಾತ್ರಿ ನಡೆದಿದೆ.

ಪುತ್ತೂರಿಂದ ಬೆಂಗಳೂರಿಗೆ ಗುರುವಾರ ತಡರಾತ್ರಿ ತೆರಳುತ್ತಿದ್ದ ಕೆಎಸ್‍ಆರ್‌ಟಿಸಿ ಸ್ಲೀಪರ್ ಕೋಚ್ ಬಸ್‌ಗೆ ಕಾಡಾನೆ ದಂತದಿಂದ ತಿವಿದೆ. ಇದರಿಂದ ಬಸ್‌ನ ಬಾಡಿ ಮಧ್ಯಭಾಗದ ಸಮೀಪ ಕಿತ್ತುಹೋಗಿದೆ.

ಸುಬ್ರಹ್ಮಣ್ಯ-ಗುಂಡ್ಯ ರಾಜ್ಯ ಹೆದ್ದಾರಿಯ ಕೆಂಜಾಳ ಸಮೀಪ ಕಾಡಾನೆ ದಾಳಿ ಮಾಡಿದರೂ ಬಸ್‌ನಲ್ಲಿ ಪ್ರಯಾಣಿಕರಿಗೆ ಏನು ತೊಂದರೆ ಮಾಡಿಲ್ಲ. ಎಲ್ಲ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ಸಾರಿಗೆ ಸಿಬ್ಬಂದಿ ತಿಳಿಸಿದರು.

ಬಸ್ ಪುತ್ತೂರಿನಿಂದ ಕಾಣಿಯೂರು ಮಾರ್ಗವಾಗಿ ಸುಬ್ರಹ್ಮಣ್ಯ ಮೂಲಕ ಬೆಂಗಳೂರಿಗೆ ತೆರಳುತ್ತಿತ್ತು. ಬಸ್ ಚಾಲಕ ರಸ್ತೆ ಬದಿ ನಿಂತಿದ್ದ ಕಾಡಾನೆ ಗಮನಿಸಿ ಅದನ್ನು ತಪ್ಪಿಸಲು ಯತ್ನಿಸಿದ್ದಾರೆ. ಆದರೂ ಬಸ್‌ನ ಎಡಭಾಗಕ್ಕೆ ಆನೆ ತನ್ನ ದಂತದಿಂದ ತಿವಿದಿದೆ. ಚಾಲಕನ ಸಮಯ ಪ್ರಜ್ಞೆಯಿಂದ ಸಂಭವಿಸುತ್ತಿದ್ದ ಭಾರಿ ಅನಾಹುತ ತಪ್ಪಿದಂತಾಗಿದೆ.

ಇನ್ನು ವಿಷಯ ತಿಳಿಯುತ್ತಿದ್ದಂತೆ ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿ ರಾಘವೇಂದ್ರ ಭೇಟಿ, ಪರಿಶೀಲನೆ ನೀಡಿಸಿದ್ದಾರೆ. ಆ ಬಳಿಕ ಬಸ್ ಬೆಂಗಳೂರಿನತ್ತ ತೆರಳಿದೆ.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ