NEWSನಮ್ಮಜಿಲ್ಲೆನಮ್ಮರಾಜ್ಯ

ಉಪವಾಸ ಸತ್ಯಾಗ್ರಹಕ್ಕೆ ಬೆಂಬಲ ನೀಡುವ ಸಂಬಂಧ ಸಾರಿಗೆ ನೌಕರರ ಸಂಘದ ತುರ್ತು ಸಭೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಳಗಾವಿಯಲ್ಲಿ ಸಾರಿಗೆ ನೌಕರರ ಸಮಾನ ಮನಸ್ಕರ ವೇದಿಕೆ ಕಳೆದ ಮೂರು ದಿನದಿಂದ ನಡೆಸುತ್ತಿರುವ ಉಪವಾಸ ಸತ್ಯಾಗ್ರಹಕ್ಕೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಸಂಘ ಬೆಂಬಲ ನೀಡುವ ಸಂಬಂಧ ಇಂದು ಸಂಜೆ 5.30ಕ್ಕೆ ಪದಾಧಿಕಾರಿಗಳ ತುರ್ತು ಸಭೆಯನ್ನು ಕರೆಯಲಾಗಿದೆ.

ಸಂಘದ ಗೌರವಾಧ್ಯಕ್ಷ ಮಾಜಿ ಐಪಿಎಸ್‌ ಅಧಿಕಾರಿ ಭಾಸ್ಕರ್‌ ರಾವ್‌ ಅವರ ನೇತೃತ್ವದಲ್ಲಿ ಸಭೆ ಕರೆದಿದ್ದು, ಈ ಸಭೆಯು ಬಸವನಗುಡಿಯ ಡಿ.ವಿ.ಜಿ.ರಸ್ತೆಯಲ್ಲಿರುವ ಮಣಿ ಸ್ಟೋರ್ ಬಳಿಯ ನಂ.12, ಸಂಪರ್ಕ ಕೇಂದ್ರದಲ್ಲಿ ನಡೆಯಲಿದೆ. ಹೀಗಾಗಿ ಎಲ್ಲ ಪದಾಧಿಕಾರಿಗಳು ತಪ್ಪುದೆ ಹಾಜರಾಗಬೇಕು ಎಂದು ಸಂಘದ ಪ್ರಧಾನ ಕಾರ್ಯದರ್ಶಿ ರಾಮು ತಿಳಿಸಿದ್ದಾರೆ.

ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಾರಿಗೆ ನೌಕರರ ಸಮಾನ ಮನಸ್ಕರ ವೇದಿಕೆ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದು, ಈಗಾಗಲೇ ಸತ್ಯಾಗ್ರಹ ನಿರತರಲ್ಲಿ ಇಬ್ಬರು ಮಹಿಳಾ ಸಿಬ್ಬಂದಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇನ್ನು ಮೂರನೇ ದಿನವಾದ ಇಂದು ಕೂಡ ವೇದಿಕೆ ನೇತೃತ್ವದಲ್ಲಿ ರಾಜ್ಯದ ನಾಲ್ಕೂ ನಿಗಮಗಳ ರಜೆ, ವಾರದ ರಜೆ ಇರುವ ನೌಕರರು ಅವರ ಜತೆಗೆ ಕುಟುಂಬದ ಸದ್ಯರು ಮಹಿಳೆಯರು ಸತ್ಯಾಗ್ರಹದಲ್ಲಿ ಭಾಗವಹಿಸುತ್ತಿದ್ದಾರೆ.

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ