NEWSಉದ್ಯೋಗದೇಶ-ವಿದೇಶ

ಬ್ಯಾಂಕ್‌ಗಳಿಗೆ ಸ್ಥಳೀಯ ಭಾಷೆ ಮಾತನಾಡುವರನ್ನೇ ನೇಮಿಸಿ : ನಿರ್ಮಲಾ ಸೀತಾರಾಮನ್

ವಿಜಯಪಥ ಸಮಗ್ರ ಸುದ್ದಿ

ಮುಂಬೈ: ಇನ್ನುಮುಂದೆ ಬ್ಯಾಂಕ್‌ಗಳಿಗೆ ಸ್ಥಳೀಯ ಭಾಷೆ ಮಾತನಾಡುವವರನ್ನೇ ಸಿಬ್ಬಂದಿಯಾಗಿ ನೇಮಕ ಮಾಡಿ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಲಹೆ ನೀಡಿದ್ದಾರೆ.

ಮುಂಬೈನಲ್ಲಿ ಭಾರತೀಯ ಬ್ಯಾಂಕ್‌ಗಳ ಸಂಘದ 75 ನೇ ವಾರ್ಷಿಕ ಮಹಾಸಭೆಯಲ್ಲಿ ಮಾತನಾಡಿದ ಅವರು, ನೀವು ಅಲ್ಲಿ ಗ್ರಾಹಕರೊಂದಿಗೆ ವ್ಯವಹರಿಸಲು ಇದ್ದೀರೇ ಹೊರತು, ವ್ಯವಸ್ಥೆಯನ್ನು ಬೆಳೆಸಲು ಅಲ್ಲ ಎಂದು ಹೇಳಿರುವುದಾಗಿ ದಿ ಹಿಂದು ವರದಿ ಮಾಡಿದೆ.

ಶಾಖಾ ಮಟ್ಟದ ಬ್ಯಾಂಕ್‌ಗಳನ್ನು ನೋಡಿದಾಗ ಕೆಲವರು ಹೇ ನೀವು ಹಿಂದಿ ಮಾತನಾಡುವುದಿಲ್ಲವೇ, ನೀವೆಲ್ಲೋ ಭಾರತೀಯರಲ್ಲ ಅನ್ನಿಸುತ್ತದೆ ಅಂದುಕೊಳ್ಳುತ್ತಾರೆ. ಇದು ಉತ್ತಮ ವ್ಯಾವಹಾರಿಕ ಸಂಬಂಧದ ಲಕ್ಷಣವಲ್ಲ ಎಂದು ನಾನು ಭಾವಿಸುತ್ತೇನೆ ಎಂದಿದ್ದಾರೆ.

ಹೀಗಾಗಿ ಸ್ಥಳೀಯ ಭಾಷೆಯಲ್ಲಿ ವ್ಯವಹರಿಸಲು ಸಾಧ್ಯವಾಗದ ಸಿಬ್ಬಂದಿಯನ್ನು ಪ್ರಾದೇಶಿಕ ಶಾಖೆಗಳಿಗೆ ನೇಮಕ ಮಾಡಬಾರದು. ಭಾಷೆ ಬಲ್ಲ ಉತ್ತಮ ಸಿಬ್ಬಂದಿ ನೇಮಕ ಮಾಡಿಕೊಳ್ಳಲು ಹೆಚ್ಚು ಸಂವೇದನಾ ಶೀಲ ಮಾರ್ಗಗಳನ್ನು ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ ಎಂದು ತಿಳಿಸಿದೆ.

Leave a Reply

error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...