NEWSನಮ್ಮಜಿಲ್ಲೆನಮ್ಮರಾಜ್ಯ

ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಸಜ್ಜಾದ ನೌಕರರ ಸಂಘ : ಬೇಡಿಕೆ ಈಡೇರದಿದ್ದರೆ ಕೆಲಸಕ್ಕೆ ಗೈರಾಗಿ ಅನಿರ್ದಿಷ್ಟಾವಧಿ ಪ್ರತಿಭಟನೆ – ಖಡಕ್‌ ಎಚ್ಚರಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯ ಸರ್ಕಾರ ಇನ್ನು ಏಳು ದಿನಗಳೊಳಗೆ ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಮಾರ್ಚ್‌ 1ರಿಂದ ಎಲ್ಲ ಸರ್ಕಾರಿ ನೌಕರರು ಮತ್ತು ಅನುದಾನಿತ ಸಂಸ್ಥೆಗಳ ನೌಕರರು ಕೆಲಸಕ್ಕೆ ಗೈರಾಗುವ ಮೂಲಕ ಅನಿರ್ದಿಷ್ಟಾವಧಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಕ್ಷರಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ರಾಜ್ಯ ಸರ್ಕಾರ ಈ ವರ್ಷದ ಬಜೆಟ್​ನಲ್ಲಿ 7ನೇ ವೇತನ ಆಯೋಗ ಹಾಗೂ ಒಪಿಎಸ್​ ಪಿಂಚಣಿ ಯೋಜನೆಯ ಬಗ್ಗೆ ಯಾವುದೇ ಪ್ರಸ್ತಾಪ ಮಾಡಿಲ್ಲ. ಈ ಹಿನ್ನೆಲೆಯಲ್ಲಿ ಮಂಗಳವಾರ ಸರ್ಕಾರಿ ನೌಕರರ ಸಂಘ ಸಭೆ ನಡೆಸಿದ್ದು, ಇನ್ನು ಏಳು ದಿನಗಳಲ್ಲಿ 7ನೇ ವೇತನ ಆಯೋಗ ಹಾಗೂ ಹಳೆಯ​ ಪಿಂಚಿಣಿ ಯೋಜನೆಯನ್ನು ಅನುಷ್ಠಾನಕ್ಕೆ ತರಬೇಕೆಂದು ಒತ್ತಾಯಿಸಿದೆ. ಒಂದು ವೇಳೆ ತಮ್ಮ ಬೇಡಿಕೆಗೆ ಸ್ಪಂದಿಸದಿದ್ದರೆ ಅನಿರ್ದಿಷ್ಟಾವಧಿಗೆ ಹೋರಾಟ ಮಾಡುವುದಾಗಿ ಸಭೆಯಲ್ಲಿ ನಿರ್ಧರಿಸಿದೆ.

ಸರ್ಕಾರಿ ನೌಕರರ ಸಂಘದ ತುರ್ತು ರಾಜ್ಯ ಕಾರ್ಯಕಾರಣಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. 7ನೇ ವೇತನ ಆಯೋಗ ಹಾಗೂ ಒಪಿಎಸ್​ ಪಿಂಚಣಿ ಯೋಜನೆ ಅನುಷ್ಠಾನ ಮಾಡುವ ಕುರಿತು ನಿರ್ಧಾರ ತೆಗೆದುಕೊಳ್ಳಲು ಫೆಬ್ರವರಿ 22ರಿಂದ 28ರವರೆಗೆ ಏಳು ದಿನಗಳ ಕಾಲ ಸರ್ಕಾರಕ್ಕೆ ಗಡುವು ನೀಡಲಾಗಿದೆ. ಒಂದು ವೇಳೆ ಸರ್ಕಾರ ಗಡುವಿಗೆ ಸ್ಪಂದಿಸದೇ ಹೋದರೆ ಅನಿರ್ಧಿಷ್ಟಾವಧಿ ಹೋರಾಟ ಮಾಡುತ್ತೇವೆ ಎಂದು ನೌಕರರ ಸಂಘ ತಿಳಿಸಿದೆ.

ನೌಕರರ ಸಂಘ ಗಡುವು ನೀಡಿರುವ 7 ದಿನಗಳಲ್ಲಿ ಸರ್ಕಾರ ಬೇಡಿಕೆಗೆ ಸ್ಪಂದಿಸದಿದ್ದರೆ ಮಾರ್ಚ್​ 1ರಿಂದ ಕರ್ತವ್ಯಕ್ಕೆ ಗೈರಾಗಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಲು ಸರ್ಕಾರಿ ನೌಕರರ ಸಂಘದ ತುರ್ತು ರಾಜ್ಯ ಕಾರ್ಯಕಾರಣಿ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ.

ಅಲ್ಲದೆ ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಪತ್ರವನ್ನು ನೀಡಲು ಸಭೆಯಲ್ಲಿ ನಿರ್ಧರಿಸಲಾಗಿದೆ. ರಾಜ್ಯ ಸರ್ಕಾರಿ ನೌಕರ ಸಂಘದ ಕಚೇರಿ ಮುಂದೆ ಜರುಗುತ್ತಿರುವ ಸಭೆಯಲ್ಲಿ ಸುಮಾರು ಆರು ಸಾವಿರಕ್ಕೂ ಹೆಚ್ಚು ಸಿಬ್ಬಂದಿ ಭಾಗಿಯಾಗಿದ್ದರು.

ಅನಿರ್ದಿಷ್ಟಾವಧಿ ಮುಷ್ಕರ: ಸರ್ಕಾರಿ ನೌಕರರ ಪ್ರಮುಖ ಬೇಡಿಕೆ ಈಡೇರಿಸಬೇಕು. ಫೆಬ್ರವರಿ 28ರೊಳಗೆ ಸರ್ಕಾರಿ ನೌಕರರ ಸಂಘದ‌ ಜತೆ ಮಾತನಾಡಬೇಕು. ಬೇಡಿಕೆ ಈಡೇರಿಸದೇ ಹೋದಲ್ಲಿ ಮಾರ್ಚ್​ 1ರಿಂದ ಅನಿರ್ದಿಷ್ಟಾವಧಿ ಮುಷ್ಕರ ಮಾಡಲಾಗುವುದು ಎಂದು ಬಹಿರಂಗ ಸಭೆಯಲ್ಲಿ ಪ್ರಾಥಮಿಕ, ಪ್ರೌಢಶಾಲೆ ಶಿಕ್ಷಕರು, ಬಿಬಿಎಂಪಿ, ಆರೋಗ್ಯ ಇಲಾಖೆ ನೌಕರರ ಸಂಘದ ಅಧ್ಯಕ್ಷರು ತಿಳಿಸಿದ್ದಾರೆ.

ನಿವೃತ್ತ ನೌಕರರಿಂದಲೂ ಬೆಂಬಲ: ಈ ಮುಷ್ಕರಕ್ಕೆ ನಿವೃತ್ತ ನೌಕರರು ಬೆಂಬಲ ವ್ಯಕ್ತಪಡಿಸಿದ್ದಾರೆ. ಸುಮಾರು ಆರು ಲಕ್ಷ ನಿವೃತ್ತ ನೌಕರರು ಮುಷ್ಕರಕ್ಕೆ ಬೆಂಬಲ ನೀಡಿದ್ದಾರೆ. ಇನ್ನು ಇತ್ತ ಸರ್ಕಾರ 7 ದಿನಗಳೊಳಗೆ ನೌಕರರ ಸಂಘದ ಬೇಡಿಕೆಗಳನ್ನು ಈಡೇರಿಸದಿದ್ದರೆ, ಮಾರ್ಚ್​ 1ರಿಂದ ಬೆಂಗಳೂರಿನಲ್ಲಿ ಕಸ ಎತ್ತುವುದಿಲ್ಲ ಎಂದು ಬಿಬಿಎಂಪಿ ನೌಕರರ ಸಂಘದ ಅಧ್ಯಕ್ಷ‌ ಅಮೃತ್ ರಾಜ್ ಮಾಹಿತಿ ನೀಡಿದ್ದಾರೆ.

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ