NEWSನಮ್ಮರಾಜ್ಯಶಿಕ್ಷಣ-

ವಿಶೇಷ ಸರಣಿ ಉಪನ್ಯಾಸದಿಂದ ಜ್ಞಾನವೃದ್ಧಿ: ಬೆಂವಿವಿ ಪ್ರಾಧ್ಯಾಪಕಿ ಉಪಾದೇವಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ತತ್ವಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದಿಂದ ಆಯೋಜಿಸಿದ್ದ “ಆಧುನಿಕ ಸಮಾಜದಲ್ಲಿ ಭಾರತೀಯ ಧರ್ಮದ ಪ್ರಸ್ತುತತೆ” ಎಂಬ ವಿಷಯದ ಮೇಲೆ ಒಂದು ದಿನದ ವಿಶೇಷ ಸರಣಿ ಉಪನ್ಯಾಸವನ್ನು ಆಯೋಜಿಸಲಾಗಿತ್ತು.

ವಿಷಯ ಸಂಪನ್ಮೂಲ ವ್ಯಕ್ತಿಗಳಾಗಿ ಬೆಂಗಳೂರು ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಕೇಂದ್ರದ ನಿರ್ದೇಶಕ ಪ್ರೊ.ಡಿ. ಡೊಮಿನಿಕ್ ಹಾಗೂ ಬೆಂಗಳೂರು ವಿಶ್ವವಿದ್ಯಾಲಯದ ಇತಿಹಾಸ ವಿಭಾಗದ ಹಿರಿಯ ಪ್ರಾಧ್ಯಾಪಕಿ ಮತ್ತು ಸಂಪನ್ಮೂಲ ವ್ಯಕ್ತಿಯಾಗಿ ಪ್ರೊ. ಎಂ.ವಿ. ಉಷಾದೇವಿ, ಡಾ. ರಾಣಿ ತಣಿಗಾಚಲಂ, ಡಾ.ತಬಸ್ಸುಮ್ ಜಾವೀದ್ ಅವರು, ವಿವಿಧ ದೃಷ್ಟಿಕೋನಗಳ ಮೂಲಕ ಭಾರತೀಯ ಆಧುನಿಕ ಸಮಾಜದಲ್ಲಿ ಧರ್ಮದ ಪ್ರಸ್ತುತತೆ ಬಗ್ಗೆ ವಿವಿಧ ಆಯಾಮ ಹಾಗೂ ಪ್ರಚಲಿತ ವಸ್ತುಸ್ಥಿತಿಯ ಬಗ್ಗೆ ವಿಚಾರ ಮಂಡನೆ ಮಾಡಿದರು.

ತತ್ವಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕ ಟಿ.ರಾಜೇಂದ್ರ ಪ್ರಸಾದ್, ಮಾತನಾಡಿ, ವಿದ್ಯಾರ್ಥಿಗಳ ಬೌದ್ಧಿಕ ಮತ್ತು ಶೈಕ್ಷಣಿಕ ಬೆಳವಣಿಗೆಯ ವಿಷಯದಲ್ಲಿ ವಿಶೇಷ ಸರಣಿ ಉಪನ್ಯಾಸದಿಂದ ಬಹುದೊಡ್ಡ ಪಾತ್ರ ನಿರ್ವಹಿಸುತ್ತವೆ. ಇಂತಹ ಕಾರ್ಯಾಗಾರಗಳಿಂದ ವಿದ್ಯಾರ್ಥಿಗಳಿಗೆ ಜ್ಞಾನ ಸಂಪಾದನೆ ಮತ್ತು ವ್ಯಕ್ತಿತ್ವ ವಿಕಸನಕ್ಕೆ ಉತ್ತಮ ವೇದಿಕೆಯಾಗಿದೆ ಎಂದರು.

ಕಾರ್ಯಕ್ರಮದ ಕೊನೆಯಲ್ಲಿ ಹಲವು ವಿಚಾರಗಳ ಬಗ್ಗೆ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಾಯಿತು.

ಅರ್ಥಶಾಸ್ತ್ರ ವಿಭಾಗದ ಸಂಶೋಧನಾರ್ಥಿ ಮತ್ತು ವಿದ್ಯಾರ್ಥಿ ಮುಖಂಡ ಶ್ರೀಗುರು ರಾಘವೇಂದ್ರ ಹಾಗೂ ತತ್ವಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಉಪನ್ಯಾಸಕರಾದ ಡಾ.ಎಂ. ಗೋವಿಂದರಾಜು, ಡಾ.ಚಂದ್ರಶೇಖರ್, ಡಾ. ದಿವಾಕರ ಟಿ.ಎಸ್, ಡಾ.ಎಂ.ಮಹೇಶ್ವರಪ್ಪ, ವಿಚಾರ ಸಂಕಿರಣ ಕೋರ್ಡಿನೇಟರ್ ಡಾ. ಸಿ.ಎಸ್. ಶಕುಂತಲಾ ಮತ್ತು ಬೋಧಕೇತರ ಸಿಬ್ಬಂದಿಗಳಾದ ನಾಗೇಶ್, ಗಾಯತ್ರಿ, ಉಮಾ ಹಾಗೂ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Leave a Reply

error: Content is protected !!
LATEST
ಮಧ್ಯಮ ವರ್ಗದ ವ್ಯಕ್ತಿ ಕೇಳಿದ ಪ್ರಶ್ನೆಗೆ ಉತ್ತರಿಸಲಾಗದೆ ಮೌನಕ್ಕೆ ಶರಣಾದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ BBMP-ಡೆಂಗ್ಯೂ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ : ಸುರಳ್ಕರ್ ವಿಕಾಸ್ ಕಿಶೋರ್ ಉಚಿತ ಕೋಳಿ ಸಾಕಾಣಿಕೆ ತರಬೇತಿಗೆ 18 ರಿಂದ 45 ವರ್ಷದವರಿಂದ ಅರ್ಜಿ ಆಹ್ವಾನ ಪ್ರತಿಷ್ಠಿತ ಶಾಲೆಗಳಿಗೆ ಸೇರ ಬಯಸುವ ಮಕ್ಕಳಿಂದ ಅರ್ಜಿ ಆಹ್ವಾನ: ಷರತ್ತು ಅನ್ವಯ ವಸತಿ ಶಾಲೆಗಳಲ್ಲಿ ಪ್ರಥಮ ಪಿಯುಸಿ ತರಗತಿ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ KSRTC: ₹8.76 ಲಕ್ಷ ನಷ್ಟವುಂಟು ಮಾಡಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಸರ್ಕಾರದ ಮುಖ್ಯ ಕಾರ್ಯದರ್ಶ... BMTC ಚಾಲಕರಿಗೆ ಕೂಡಲೇ ವೇತನ ಪಾವತಿಸಿ: ಎಎಪಿಯ ಜಗದೀಶ್ ವಿ. ಸದಂ ಆಗ್ರಹ ಬಸವನಹಳ್ಳಿ: ನಿವೃತ್ತ ಸಹಾಯಕ ತೋಟಗಾರಿಕಾ ಇಲಾಖೆಯ ನಿರ್ದೇಶಕ ಚಿಕ್ಕಮಾಯಿಗೌಡರ ಪತ್ನಿ ಸಿದ್ದಮ್ಮ ನಿಧನ KSRTC ನೌಕರರ 2024ರ ವೇತನ ಪರಿಷ್ಕರಣೆ, 38 ತಿಂಗಳ ಹಿಂಬಾಕಿ ಬಿಡುಗಡೆಗೆ ಜೂನ್‌ 6ರಬಳಿಕ ನಿರ್ಧಾರ: ರಾಮಲಿಂಗಾರೆಡ್ಡಿ ಚಿಕ್ಕಮಗಳೂರಲ್ಲಿ ಧಾರಾಕಾರ ಮಳೆ- ಬೆಂಗಳೂರಿಗೂ ಆಗಮಿಸಲಿದ್ದಾನೆ ವರುಣ