ಬೆಂಗಳೂರು ಗ್ರಾಮಾಂತರ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು/ ಸರ್ಕಾರಿ ಮುಸ್ಲಿಂ ವಸತಿ ಶಾಲೆಗಳು/ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಗಳಲ್ಲಿ (CBSE) 6ನೇ ತರಗತಿ ಉಚಿತ ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿತ್ತು ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆ ಏರ್ಪಡಿಸಲಾಗಿದ್ದುಆನ್ ಲೈನ್ ಮೂಲಕ ಪ್ರವೇಶ ಪತ್ರವನ್ನು ಪಡೆಯಬಹುದಾಗಿದೆ.
ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು https:dom.karnataka.gov.in ವೆಬ್ಸೈಟ್ ಮೂಲಕ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಂಡು ಪ್ರವೇಶ ಪರೀಕ್ಷೆ ಬರೆಯಬಹುದಾಗಿದೆ.
ಪ್ರವೇಶ ಪರೀಕ್ಷೆಯನ್ನು ಏಪ್ರಿಲ್ 27 ರ ಭಾನುವಾರ ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಶಾಲೆ, ಉರ್ದು ಶಾಲಾ ಆವರಣ ಮತ್ತು ಸರ್ಕಾರಿ ಹೆಣ್ಣು ಮಕ್ಕಳ ಫ್ರೌಡ ಶಾಲೆ, ಜೂನಿಯರ್ ಕಾಲೇಜು ಹತ್ತಿರ, ವಿಜಯಪುರ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆಸಲಾಗುತ್ತದೆ.
ಪ್ರವೇಶಪತ್ರ ಸಂಬಂಧ ಯಾವುದೇ ಕುಂದು ಕೊರತೆಗಳಿದ್ದಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರು ಹತ್ತಿರದ ಜಿಲ್ಲಾ ಅಲ್ಪಸಂಖ್ಯಾತರ ಕಚೇರಿ ಅಥವಾ MDRS/Dr APJAKRS ಶಾಲೆಗಳು ಅಥವಾ ತಾಲ್ಲೂಕು ಮಾಹಿತಿ ಕೇಂದ್ರಗಳಿಗೆ ಭೇಟಿ ನೀಡಬಹುದು.
ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂ.ಸಂ. 8277799990 ಗೆ ಸಂಪರ್ಕಿಸಬಹುದಾಗಿದೆ ಹಾಗೂ ಈ ಕೆಳಕಂಡ ದೂರವಾಣಿ ಸಂಖ್ಯೆಗಳಿಗೆ ಸಂರ್ಪಕಿಸುವುದು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 7663333135, 9535808084, 7338227541, 9632249214, 8660971267, 9740729196, 9845622337, 7676905779, 9986874875, 8660197516, 7663333135, 9535808084, 080-29787455.
Related









