NEWSಕೃಷಿನಮ್ಮಜಿಲ್ಲೆಶಿಕ್ಷಣ-

ಮನುಷ್ಯನಿಗೆ ಆಹಾರ ಎಷ್ಟು ಮುಖ್ಯವೋ, ಪರಿಸರವು ಅಷ್ಟೇ ಮುಖ್ಯ: ಕುರುಬೂರ್ ಶಾಂತಕುಮಾರ್

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ದೇವರಕಾಡು, ಗೋಮಾಳ, ಮೀಸಲು ಅರಣ್ಯ ಕಾಣೆಯಾಗುತ್ತಿವೆ ಹೀಗಾದರೆ ಪರಿಸರ ಉಳಿಯಲು ಹೇಗೆ ಸಾಧ್ಯ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷರಾಧ ರೈತರತ್ನ ಕುರುಬೂರ್ ಶಾಂತಕುಮಾರ್ ಆತಂಕ ವ್ಯಕ್ತಪಡಿಸಿದರು.

ಮೈಸೂರು ಜಿಲ್ಲೆಯ ವರರ್ಕೂಡಿನಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಆವರಣದಲ್ಲಿ ಇಂದು ವಿಶ್ವಪರಿಸರ ದಿನದ ಅಂಗವಾಗಿ ಆಯೋಜಿಸಿದ್ದ ಗಿಡ ನೆಟ್ಟು ಮರ ಬೆಳೆಸಿ ಪರಿಸರ ರಕ್ಷಿಸಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮನುಷ್ಯನಿಗೆ ಆಹಾರ ಎಷ್ಟು ಮುಖ್ಯವೋ, ಪರಿಸರವು ಅಷ್ಟೇ ಮುಖ್ಯವಾಗಿದೆ. ಜನಸಂಖ್ಯೆ ಏರಿಕೆಗೆ ಅನುಗುಣವಾಗಿ ಪರಿಸರ ಬೆಳೆಯುತ್ತಿಲ್ಲದ ಅರಣ್ಯ ಪ್ರದೇಶ ಕಡಿಮೆಯಾಗುತ್ತಿದೆ, ಕಾರಣ ಹವಾಗುಣ ವೈಪರಿತ್ಯವಾಗುತ್ತಿದೆ ಎಂದು ಹೇಳಿದರು.

ಇನ್ನು ಶಿಕ್ಷಣ ಸಂಸ್ಥೆಗಳಲ್ಲಿ ಮಕ್ಕಳಿಗೆ ಪರಿಸರದ ಬಗ್ಗೆ ಕಾಳಜಿ, ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪರಿಸರ ಸಂರಕ್ಷಣೆಯ ಮಹತ್ವದ ಬಗ್ಗೆ ಜನ ಜಾಗೃತಿ ಮೂಡಿಸಬೇಕು. ಪರಿಸರ ಸಂಪತ್ತು ನಾಶವಾಗುತ್ತಿರುವ ಹಿನ್ನೆಲೆಯಲ್ಲಿ ಉಷ್ಣಾಂಶ ಏರಿಕೆಯಾಗುತ್ತಿದೆ. ಮಳೆ ಮಾರುತ ಬದಲಾಗುತ್ತಿದೆ. ಅಂತರ್ಜಲ ಕುಗ್ಗುತಿದೆ. ಇದು ಕೃಷಿ ಕ್ಷೇತ್ರದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ, ಅದಕ್ಕಾಗಿ ರೈತರು ಜಾಗೃತರಾಗಿ ಪರಿಸರ ಸಂರಕ್ಷಿಸಲು ಮುಂದಾಗಬೇಕು ಎಂದರು.

ನೂರಾರು ಹಸಿರು ಗಿಡಗಳನ್ನು ನೆಟ್ಟು ರೈತ ಸಂಕುಲಕ್ಕೆ ಸಂದೇಶ ಸಾರಿದ ಪರಿಸರ ಸ್ನೇಹಿ ರೈತ ಹುಣಸೂರಿನ ತಮ್ಮಯ್ಯ ಮಾತನಾಡಿ, ಪರಿಸರ ದಿನ ನಾಮ್‌ಕೇವಾಸ್ತೆ ಆಗಬಾರದು. ಪರಿಸರ, ಪ್ರಕೃತಿ ಆರೋಗ್ಯ ಚೆನ್ನಾಗಿದ್ದರೆ ನಾವೆಲ್ಲ ನೆಮ್ಮದಿ ಹಾಗೂ ಶಾಂತಿಯಿಂದ ಆರೋಗ್ಯವಂತರಾಗಿ ಬಾಳಬಹುದು ಎಂದರು.

ನಾವು ಮುಂದಿನ ತಲೆಮಾರಿಗೆ ಆಸ್ತಿ, ಹಣ ಬಿಟ್ಟು ಹೋಗುವ ಬದಲು ಉತ್ತಮ ಪರಿಸರ ಪ್ರಕೃತಿಯನ್ನು ಕಟ್ಟಿ ಬಿಟ್ಟು ಹೋದರೆ ನಮ್ಮ ಜೀವನ ಸಾರ್ಥಕ. ಪರಿಸರ, ಪ್ರಕೃತಿಗೆ ಮನುಷ್ಯನ ಎಲ್ಲ ಆಸೆಗಳನ್ನು ಪೂರೈಸುವ ಶಕ್ತಿ ಇದೆ. ಆದರೆ ದುರಾಸೆಗಳನ್ನು ಅಲ್ಲ ನಮಗೆ ಜನ್ಮ ಕೊಟ್ಟ ತಂದೆ ತಾಯಿಗಳನ್ನು ಕಳೆದುಕೊಂಡರೆ ಮತ್ತೆ ಸಿಗುವುದಿಲ್ಲ ಅದೇ ರೀತಿ ಪ್ರಕೃತಿ ಪರಿಸರವನ್ನು ನಾಶ ಮಾಡಿದರೆ ನಮ್ಮ ಆರೋಗ್ಯ ಉತ್ತಮ ಸ್ಥಿತಿಯಲ್ಲಿ ಇರಲು ಸಾಧ್ಯವಿಲ್ಲ ಇದನ್ನು ಪ್ರತಿಯೊಬ್ಬರೂ ಅರ್ಥೈಸಿಕೊಂಡರೆ ಸಾರ್ಥಕ ಎಂದರು.

ಹುಟ್ಟುಹಬ್ಬ ಆಚರಣೆಯ ಸಂದರ್ಭದಲ್ಲಿ ಗಿಡ ಮರ ನೆಟ್ಟು ರಕ್ಷಣೆ ಮಾಡುವ ಕಾರ್ಯವೆಸಗಿದರೆ ಉತ್ತಮ ಸಮಾಜಕ್ಕೆ ಕೊಡುಗೆಯಾಗುತ್ತದೆ ಎಂದು ತಿಳಿಸಿದರು.

ಸಾಮಾಜಿಕ ವಲಯ ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಲಿಂಗರಾಜು ಮಾತನಾಡಿ, ಭಾರತ ದೇಶದಲ್ಲಿ ಶೇ.33ರಷ್ಟು ಅರಣ್ಯ ಪ್ರದೇಶ ಇರಬೇಕು. ಈಗ 21% ಗೆ ಇಳಿಕೆಯಾಗಿದೆ. ಕಾಡಿನಲ್ಲಿ ವಾಸ ಮಾಡುವ ವನ್ಯಪ್ರಾಣಿಗಳು ಪರಿಸರಕ್ಕೆ ಅತ್ಯವಶ್ಯಕವಾಗಿದೆ. ಪರಿಸರ ಜಾಗೃತಿ ಮೂಡಿಸಲು ಶಿಕ್ಷಣ ಸಂಸ್ಥೆಗಳು ಸಂಘ ಸಂಸ್ಥೆಗಳು ಹೆಚ್ಚು ಒತ್ತು ನೀಡಬೇಕು ಎಂದರು.

ಮೊರಾರ್ಜಿ ದೇಸಾಯಿ ಶಾಲೆಯ ಮುಖ್ಯೋಪಾಧ್ಯಾಯ ನಿಂಗಪ್ಪನವರು ಪರಿಸರ ಮಹತ್ವದ ಬಗ್ಗೆ ತಿಳಿಸಿದರು. ವಸತಿ ಶಾಲೆಯ ವಿದ್ಯಾರ್ಥಿಗಳು, ಮೈಸೂರು ಚಾಮರಾಜನಗರ ಜಿಲ್ಲೆಯ ರೈತ ಸಂಘಟನೆಗಳ ಪದಾಧಿಕಾರಿಗಳು ಶಾಲಾ ಆವರಣದಲ್ಲಿ ನೂರಾರು ಗಿಡ ನೆಟ್ಟು ಪರಿಸರದ ಬಗ್ಗೆ ಕಾಳಜಿ ಮೆರೆದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬರಡನಪುರ ನಾಗರಾಜ್ ಸ್ವಾಗತಿಸಿದರೆ, ಅತ್ತಹಳ್ಳಿ ದೇವರಾಜ್, ಕಿರಗಸೂರ್ ಶಂಕರ್ ಕಾರ್ಯಕ್ರಮ ನಿರೂಪಣೆ ಮಾಡಿದರು. ಮೊರಾಜಿ ದೇಸಾಯಿ ವಸತಿ ಶಾಲೆಯ ಕಾಲೇಜು ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿಗಳು, ಶಿಕ್ಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಲ್ಲರಿಗೂ ಒಂದೊಂದು ಹಣ್ಣಿನ ಗಿಡವನ್ನು ಸಾಮಾಜಿಕ ವಲಯ ಅರಣ್ಯ ಇಲಾಖೆ ವತಿಯಿಂದ ನೆನಪಿಗಾಗಿ ನೀಡಲಾಯಿತು.‌

Leave a Reply

error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...