ನಾಳೆ ಕನಿಷ್ಠ ಹೆಚ್ಚುವರಿ ಪಿಂಚಣಿಗೆ ಆಗ್ರಹಿಸಿ EPS-95 ಬಿಎಂಟಿಸಿ ಕೆಎಸ್ಆರ್ಟಿಸಿ ನಿವೃತ್ತ ನೌಕರರ ಪ್ರತಿಭಟನೆ: ನಂಜುಂಡೇಗೌಡ

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಪಿಎಸ್ ನಿವೃತ್ತರ ಪಿಂಚಣಿದಾರರ 37ನೇ ಪ್ರತಿಭಟನಾ ಸಭೆಯಲ್ಲಿ ಪಿಎಫ್ ಅಧಿಕಾರಿಗಳ ಕಚೇರಿ ಆವರಣದಲ್ಲಿ ಇದೇ ಜನವರಿ 27 ರಂದು ಹಮ್ಮಿಕೊಳ್ಳಲಾಗಿದೆ. ಈ ಬಾರಿ 2020 ರ ನಂತರ ನಿವೃುತ್ತರಾದ ಸಂಸ್ಥೆಯ ನೌಕರರೂ ಅಧಿಕ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ ಎಂದು EPS-95 ಬಿಎಂಟಿಸಿ ಹಾಗೂ ಕೆಎಸ್ಆರ್ಟಿಸಿ ನಿವೃತ್ತ ನೌಕರರ ಸಂಘದ ಅಧ್ಯಕ್ಷ ನಂಜುಂಡೇಗೌಡ ತಿಳಿಸಿದ್ದಾರೆ.

ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ಬಿಎಂಟಿಸಿ & ಕೆಎಸ್ಆರ್ಟಿಸಿ ಹಾಗೂ ಚಿಕ್ಕಬಳ್ಳಾಪುರದ ಕೆಎಸ್ಆರ್ಟಿಸಿ ಕ್ಷೇಮಾಭಿವೃದ್ಧಿ ಟ್ರಸ್ಟ್ ಅಂದು ಬೆಳಗ್ಗೆ 10:30 ಗಂಟೆಗೆ “ನಿಧಿ ಆಪ್ಕೆ ನಿಕಟ್” ಇಪಿಎಸ್ ಪಿಂಚಣಿದಾರರ 37ನೇ ಪ್ರತಿಭಟನಾ ಸಭೆ ನಗರದ ರಿಚ್ಮಂಡ್ ವೃತ್ತದಲ್ಲಿರುವ ಪಿಎಫ್ ಕಚೇರಿ ಆವರಣದಲ್ಲಿ ನಡೆಯಲಿದೆ ಎಂದು ತಿಳಿಸಿದರು.
ಇನ್ನು ಪಾರ್ಲಿಮೆಂಟ್ ಬಜೆಟ್ ಅಧಿವೇಶನ ಜನವರಿ 28 ರಿಂದ ಫೆಬ್ರವರಿ 13ರವರೆಗೆ ಮೊದಲನೇ ಹಂತ, ಮಾರ್ಚ್ 9 ರಿಂದ ಏಪ್ರಿಲ್ 02 ರವರೆಗೆ ಎರಡನೇ ಹಂತ, ಸೇರಿ ಒಟ್ಟು 30 ದಿನಗಳ ಅಧಿವೇಶನ ನಡೆಯಲಿದ್ದು, ಫೆಬ್ರವರಿ 01ರಂದು ಕೇಂದ್ರ ಹಣಕಾಸು ಸಚಿವರಾದ ನಿರ್ಮಲ ಸೀತಾರಾಮನ್ 2026-27ನೇ ಸಾಲಿನ ಬಜೆಟ್ ಮಂಡಿಸಲಿದ್ದಾರೆ.
“ಸಮರಸವೇ ಜೀವನ, ವಿರಸವೇ ಮರಣ” ಎಂಬ ನಾಣ್ನುಡಿ ಎಂದಿಗೂ ಪ್ರಸ್ತುತ. ಕಠಿಣ ಪರಿಶ್ರಮದಿಂದ, ಸಂಸ್ಥೆಯ ನೌಕರರು ತಮ್ಮ ಬದುಕಿನುದ್ದಕ್ಕೂ ಹೋರಾಟ ಮಾಡುತ್ತಲೇ ಬಂದಿದ್ದು, ಇದು ಹೊಸತೇನಲ್ಲ. ಹೋರಾಟವೇ ನಮ್ಮ ಬದುಕು ಎಂದರೆ ತಪ್ಪಾಗಲಾರದು.
ಬಜೆಟ್ ಅಧಿವೇಶನ ಪಾರ್ಲಿಮೆಂಟ್ ನಲ್ಲಿ ವಿವಿಧ ದಿನಾಂಕಗಳು ಸೇರಿ 06 ದಿನಗಳ ಕಾಲ ಹಾಗೂ ರಾಜ್ಯಸಭೆಯಲ್ಲಿ 06 ದಿನಗಳ ಕಾಲ ಇದ್ದು, ಇಪಿಎಸ್ ಪಿಂಚಣಿ ವಿಷಯಕ್ಕೆ ಸಂಬಂಧಿಸಿದಂತೆ ಸದಸ್ಯರು ಕೇಳುವ ಪ್ರಶ್ನೆಗಳಿಗೆ ಕಾರ್ಮಿಕ ಹಾಗೂ ಉದ್ಯೋಗ ಖಾತೆ ಸಚಿವರು ಉತ್ತರಿಸುವ ಪ್ರಶ್ನೋತ್ತರ ಕಾರ್ಯಕ್ರಮವಿರುತ್ತದೆ. ಈ ದೃಷ್ಟಿಯಿಂದ ಜ.27, 2026 ರ “ನಿಧಿ ಆಪ್ಕೆ ನಿಕಟ್” ಕಾರ್ಯಕ್ರಮದಂದು, ಪಿಎಫ್ ಕಚೇರಿ ಆವರಣದಲ್ಲಿ ಇಪಿಎಸ್ ನಿವೃತ್ತರು ಕೈಗೊಳ್ಳುವ, ಪ್ರತಿಭಟನಾ ಸಭೆ ಅತ್ಯಂತ ಮಹತ್ವದ್ದಾಗಿದೆ.
ಜನವರಿ 30ರಂದು ದೆಹಲಿಯ ಕೇಂದ್ರೀಯ ಭವಿಷ್ಯ ನಿಧಿ ಕಚೇರಿಯಲ್ಲಿ 116 ನೇ ಸಿಬಿಟಿ ಸಮಿತಿ ಸಭೆ ಜರುಗಲಿದೆ. ಫೆಬ್ರವರಿ 01ರಂದು ಬಜೆಟ್ ಮಂಡನೆಯಾಗುತ್ತಿರುವುದರಿಂದ, ಇಪಿಎಸ್ ನಿವೃತ್ತರ ಈ ಪ್ರತಿಭಟನಾ ಕಾರ್ಯಕ್ರಮ ಅತ್ಯಂತ ಪರಿಣಾಮಕಾರಿಯಾಗಿರಬೇಕು?. ಈ ಬಾರಿ ಇದು “ಮಾಡು, ಇಲ್ಲವೇ ಮಡಿ”ಹೋರಾಟವಾಗಿರುತ್ತದೆ.
ಇಪಿಎಸ್ ನಿವೃತ್ತರ ಬಹುದಿನಗಳ ಬೇಡಿಕೆಯನ್ನು ಈಡೇರಿಸಬೇಕೆಂದು ಆಗ್ರಹಿಸಿ, ರಾಷ್ಟ್ರೀಯ ಸಂಘರ್ಷ ಸಮಿತಿ, ಭಾರತೀಯ ಮಜ್ದೂರ್ ಸಂಘ, ರಾಷ್ಟ್ರೀಯ ಸಮನ್ವಯ ಸಮಿತಿ, ಇನ್ನು ಹಲವಾರು ರಾಷ್ಟ್ರೀಯ ಸಂಘಟನೆಗಳು ನಿರಂತರವಾಗಿ ಹೋರಾಟ ಮಾಡುತ್ತಿದ್ದು, ಸರ್ವರೂ ಸಮಾನರು, ನಾವೆಲ್ಲರೂ ಇಪಿಎಸ್ ಪಿಂಚಣಿದಾರರು, ನಮಗೆ ಬದುಕು ಮುಖ್ಯ !!!.
ಇಪಿಎಸ್ ನಿವೃತ್ತರ ಪ್ರತಿಭಟನಾ ಸಭೆ ಹಾಗೂ ಮನವಿ ಪತ್ರ ಸಲ್ಲಿಸುವ ಕಾರ್ಯಕ್ರಮದ ಮೂಲಕ ನಮ್ಮ ಕೂಗು ದೆಹಲಿಯ ಸಿಬಿಟಿ ಸಭೆ ಹಾಗೂ ಬಜೆಟ್ ಅಧಿವೇಶನಕ್ಕೆ ತಲಪಬೇಕು, ಹಾಗಾಗಿ ಕನಿಷ್ಠ ಹೆಚ್ಚುವರಿ ಪಿಂಚಣಿ ಹಾಗೂ ಅಧಿಕ ಪಿಂಚಣಿ ಈ ಎರಡು ಅಂಶಗಳಿಗೆ ಸಂಬಂಧಿಸಿದಂತೆ ಶಾಂತಿಯುತ ಪ್ರತಿಭಟನೆ ಹಾಗೂ ಮನವಿಪತ್ರ ಸಲ್ಲಿಸುವ ಕಾರ್ಯಕ್ರಮ ನಡೆಯುತ್ತಿದೆ.
ಪ್ರತಿಭಟನಾ ಸಭೆಗೆ ವಿಶೇಷ ಆಹ್ವಾನಿತರಾಗಿ ಬಿಎಂಟಿಸಿ ಸಂಸ್ಥೆಯ ನಿರ್ವಾಹಕಿ ಹಾಗೂ ರಂಗಭೂಮಿ ಕಲಾವಿದೆ ಉಮಾ ಪಿ. ನಮ್ಮ ಸಂಘದ ಎಲ್ಲ ಪದಾಧಿಕಾರಿಗಳು, ಚಿಕ್ಕಬಳ್ಳಾಪುರ ಕೆಎಸ್ಆರ್ಟಿಸಿ ಕ್ಷೇಮಾಭಿವೃದ್ಧಿ ಟ್ರಸ್ಟ್ ನ ಪದಾಧಿಕಾರಿಗಳು, ಸದಸ್ಯರು, ವಿವಿಧ ಸಂಘಟನೆಗಳ ಎಲ್ಲ ಇಪಿಎಸ್ ನಿವೃತ್ತರು, ಕಂಪನಿ ಹಾಗೂ ಕಾರ್ಖಾನೆಗಳ ನಿವೃತ್ತರು ಆಗಮಿಸಲಿದ್ದಾರೆ ಎಂದು ತಿಳಿಸಿದ್ದಾರೆ.
Related









