NEWSನಮ್ಮಜಿಲ್ಲೆ

ಜೂ.2ರಂದು ಇಪಿಎಸ್ ಪಿಂಚಣಿದಾರರ ಸಭೆ: BMTC & KSRTC ನಿವೃತ್ತ ನೌಕರರ ಸಂಘದ ಕಾರ್ಯಾಧ್ಯಕ್ಷ ನಂಜುಂಡೇಗೌಡ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಇಪಿಎಸ್ ಪಿಂಚಣಿದಾರರ 77ನೇ ಮಾಸಿಕ ಸಭೆ ಇದೇ ಜೂನ್ 2ರ ಭಾನುವಾರದಂದು ಲಾಲ್ ಬಾಗ್ ಆವರಣದಲ್ಲಿ ಜರುಗಲಿದೆ ಎಂದು ಬಿಎಂಟಿಸಿ & ಕೆಎಸ್ಆರ್ಟಿಸಿ ನಿವೃತ್ತ ನೌಕರರ ಸಂಘಟನೆಯ ಕಾರ್ಯಾಧ್ಯಕ್ಷ ನಂಜುಂಡೇಗೌಡ ತಿಳಿಸಿದ್ದಾರೆ.

ಕಳೆದ ಮೇ 27 ರಂದು ನಗರದ ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ಆವರಣದಲ್ಲಿ ಜರುಗಿದ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ ಅತ್ಯಂತ ಯಶಸ್ವಿಯಾಗಿದ್ದು, ಈ ಬಗ್ಗೆ ವಿಜಯಪಥ ಸೇರಿದಂತೆ ಹಲವಾರು ದಿನಪತ್ರಿಕೆಗಳಲ್ಲಿ ಪ್ರಕಟಗೊಂಡು ರಾಜ್ಯಾದ್ಯಂತ ಸುದ್ದಿಯಾದ ವಿಷಯ ನಮ್ಮೆಲ್ಲರಿಗೂ ತಿಳಿದಿದೆ.

ಈ ಬಾರಿ ನಮ್ಮ ಹೋರಾಟದ ಸಂಪೂರ್ಣ ಚಿತ್ರಣ ಹಾಗೂ ಮನವಿ ಪತ್ರವನ್ನು ಅಧಿಕಾರಿಗಳು ಕೇಂದ್ರ ಸರ್ಕಾರಕ್ಕೆ ಕಳುಹಿಸಿರುವ ಬಗ್ಗೆ ತಿಳಿದು ಬಂದಿದೆ. ಈ ನಡುವೆ ಹೆಚ್ಚುವರಿ ಪಿಂಚಣಿಗೆ ಸಂಬಂಧಿಸಿದಂತೆ ಮೇ 31 ರ ಗಡುವು ಮುಗಿದಿದ್ದು, ಇಪಿಎಫ್ಒ ಅಧಿಕಾರಿಗಳು ಯಾವುದಕ್ಕೂ ತಲೆಕೆಡಿಸಿಕೊಳ್ಳುವುದಿಲ್ಲ, ಹತ್ತಾರು ಸಬೂಬುಗಳನ್ನು ನೀಡಲು ಈಗಾಗಲೇ ಸಿದ್ಧತೆ ಮಾಡಿದ್ದಾರೆ.

ತಮ್ಮಲ್ಲಿ ಮಾನವ ಸಂಪನ್ಮೂಲಗಳ ಕೊರತೆ ಇದೆ, ಉದ್ಯೋಗದಾತರಿಂದ (employeer) ಸರಿಯಾದ ಮಾಹಿತಿ ಬಂದಿಲ್ಲ ಎಂದು ಅಥವಾ ಉದ್ಯೋಗದಾತರೇ (employeer) ಮತ್ತೆ ಕಾಲಾವಕಾಶ ಕೋರಿದ್ದಾರೆ ಎಂದು ಎಲ್ಲರೂ ಚುನಾವಣಾ ಪ್ರಕ್ರಿಯೆಯಲ್ಲಿ ನಿರತರಾಗಿದ್ದೇವೆಂದು ದಾಖಲೆಗಳನ್ನು ಸೃಷ್ಟಿಸಿಕೊಂಡು, ಉದ್ದೇಶಪೂರ್ವಕವಾಗಿ ಕಾಲ ವಿಳಂಬ ಮಾಡುತ್ತಾ, ನಿವೃತ್ತರ ಬದುಕನ್ನು ನಾಶ ಮಾಡಲು ಹೊರಟಿದ್ದಾರೆ. ಹೀಗಾಗಿ ಇದರ ವಿರುದ್ಧ ನಮ್ಮ ಹೋರಾಟ ಬಲಗೊಳ್ಳಬೇಕಿದೆ.

R.C.Guptha contempt of court case is posted for final hearing on 16/07/2024 before the Supreme Court. Every day is accountable & required to be explained properly or to face further consequences under Contempt of Court Act, which must be taken note of it by the concerned officers. There will be legal repercussion in this regard.

ಇನ್ನು ಎಲ್ಲದಕ್ಕೂ ಒಂದು ಮಿತಿ ಇದೆ. ಸರ್ವೋಚ್ಚ ನ್ಯಾಯಾಲಯವು ನೀಡಿರುವ ತನ್ನ ತೀರ್ಪನ್ನು ವರ್ಷಗಟ್ಟಲೆ ಅನುಷ್ಠಾನಗೊಳಿಸದೆ ಇರುವುದನ್ನು, ನ್ಯಾಯಾಲಯದ ಗಮನಕ್ಕೆ ತಂದಲ್ಲಿ, ಅಧಿಕಾರಿಗಳು ತೀವ್ರತರ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ನೂತನ ಕೇಂದ್ರ ಸರ್ಕಾರ ರಚನೆಯಾದ ನಂತರ ನಮ್ಮ ಹೋರಾಟದಲ್ಲಿ ಕೆಲವೊಂದು ಮಾರ್ಪಾಡುಗಳನ್ನು ಮಾಡಿಕೊಂಡು, ಆಯ್ಕೆಯಾದ ನೂತನ ಸಂಸದರನ್ನು ಕಂಡು, ಅಭಿನಂದಿಸಿ, ಮನವಿ ಪತ್ರ ಸಲ್ಲಿಸುವ ಮೂಲಕ ನಮ್ಮ ಅಹವಾಲನ್ನು ಮನವರಿಕೆ ಮಾಡಿಕೊಡೋಣ. ಎಲ್ಲ ಇಪಿಎಸ್ ನಿವೃತ್ತರು ಸಂಘಟನಾತ್ಮಕ ಹೋರಾಟ ಮಾಡಿದಲ್ಲಿ ಮಾತ್ರ ನಾವು ನಮ್ಮ ಗುರಿ ತಲಪಲು ಸಾಧ್ಯವಾಗುತ್ತದೆ. ಶಕ್ತಿ ಪ್ರದರ್ಶನಕ್ಕೆ ತಾವೆಲ್ಲರೂ ಸಜ್ಜಾಗಬೇಕು ಎಂದು ಕರೆ ನೀಡಲು ಈ ಸಭೆಯನ್ನು ಆಯೋಜನೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಹೌದು! ಈ ಮಾಸಿಕ ಸಭೆಗೆ ಎನ್ಎಸಿ ರಾಜ್ಯಾಧ್ಯಕ್ಷ ಜಿಎಸ್ಎಂ ಸ್ವಾಮಿ ಹಾಗೂ ಉಪಾಧ್ಯಕ್ಷ ವೀರಕುಮಾರ್ ಗಡದ್ ಭಾಗವಹಿಸಲಿದ್ದು, ನಮ್ಮ ಹೋರಾಟದ ಮುಂದಿನ ರೂಪುರೇಷೆ ಬಗ್ಗೆ ಸುದೀರ್ಘವಾಗಿ ಚರ್ಚಿಸಲಿದ್ದಾರೆ.

ಹೀಗಾಗಿ ತಾವೆಲ್ಲರೂ ವಿಶ್ವ ಪಾರಂಪರಿಕ ಲಾಲ್ ಬಾಗ್ ಹೂತೋಟದಲ್ಲಿ ವಾಯುವಿಹಾರ ನಡೆಸಿ, ತಮ್ಮ ಹಳೆಯ ಸ್ನೇಹಿತರ ಭೇಟಿ, ವಿಚಾರ ವಿನಿಮಯ ಹಾಗೂ ಈ ಎಲ್ಲಾ ಅಂಶಗಳ ಬಗ್ಗೆ ಚರ್ಚಿಸೋಣ. ಎಲ್ಲ ನಿವೃತ್ತ ನೌಕರರು ಜೂನ್‌2/ ರಂದು ಬೆಳಗ್ಗೆ 8ಗಂಟೆಗೆ ನಡೆದಯುವ ಸಭೆಯಲ್ಲಿ ಭಾಗವಹಿಸಬೇಕೆಂದು ನಂಜುಂಡೇಗೌಡ ಮನವಿ ಮಾಡಿದ್ದಾರೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ