NEWSನಮ್ಮಜಿಲ್ಲೆನಮ್ಮರಾಜ್ಯ

ಜು.28ರಂದು ಕನಿಷ್ಠ ಪಿಂಚಣಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: “ನಿಧಿ ಆಪ್ಕೆ ನಿಕಟ್” ಇಪಿಎಸ್ ಪಿಂಚಣಿದಾರರ 28ನೇ ಪ್ರತಿಭಟನೆಯನ್ನು ರಿಚ್‌ಮಂಡ್ ವೃತ್ತದಲ್ಲಿರುವ ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ಆವರಣದಲ್ಲಿ ನಾಳೆ ಜುಲೈ 28 ರಂದು ಹಮ್ಮಿಕೊಳ್ಳಲಾಗಿದೆ ಎಂದು ಬಿಎಂಟಿಸಿ & ಕೆಎಸ್‌ಆರ್‌ಟಿಸಿ ನಿವೃತ್ತ ನೌಕರರ ಸಂಘದ ಅಧ್ಯಕ್ಷ ನಂಜುಂಡೇಗೌಡ ತಿಳಿಸಿದ್ದಾರೆ.

ನಿನ್ನೆ ಹುಬ್ಬಳ್ಳಿಯಲ್ಲಿ ರಾಷ್ಟ್ರೀಯ ಸಂಘರ್ಷ ಸಮಿತಿ ಏರ್ಪಡಿಸಿದ್ದ ಬೃಹತ್ ಸಮಾವೇಶದಲ್ಲಿ, ಇಪಿಎಸ್ ನಿವೃತ್ತರ ಆಕ್ರೋಶದ ಕಟ್ಟೆ ಒಡೆದಿತ್ತು. ಕಮಾಂಡರ್ ಅಶೋಕ್ ರಾಹುತ್ ಅವರು ನಮ್ಮ ಬೇಡಿಕೆಗಳ ಬಗ್ಗೆ ಕೇಂದ್ರ ಸರ್ಕಾರಕ್ಕೆ ಕಡೆಯ ಅವಕಾಶ ನೀಡಿದ್ದಾರೆ.

ನಮ್ಮ ಹೋರಾಟ ಕನಿಷ್ಠ ಹೆಚ್ಚುವರಿ ಪಿಂಚಣಿ ಹಾಗೂ ಹೈಯರ್ ಪಿಂಚಣಿ (ನ್ಯಾಯಾಲಯದ ತೀರ್ಪಿನ ಪ್ರಕಾರ) ಎರಡೂ ಅಂಶಗಳು ಈಡೇರಿರುವವರೆಗೂ ಈ ಹೋರಾಟ ನಿಲ್ಲದು ಎಂದು ಹೇಳಿದ್ದಾರೆ.

ಇನ್ನು ಯಾವುದೇ ಸರ್ಕಾರಿ ಕಚೇರಿ ಆವರಣದಲ್ಲಿ ನಡೆಯುವ ಪ್ರತಿಭಟನೆಯ ಸಂಕ್ಷೀಪ್ತ ವಿವರಗಳನ್ನು ಆ ಕಚೇರಿಯ ಮುಖ್ಯಸ್ಥರು, ತಮ್ಮ ಉನ್ನತ ಮಟ್ಟದ ಮೇಲಧಿಕಾರಿಗಳಿಗೆ ವರದಿ ನೀಡಲೇಬೇಕು?. ಹಾಗಾಗಿ ನಮ್ಮ ಎಲ್ಲ ಪ್ರತಿಭಟನಾ ಕಾರ್ಯಕ್ರಮಗಳು ಕೇಂದ್ರ ಸರ್ಕಾರಕ್ಕೆ ಮುಟ್ಟಿದೆ.

ಪಾರ್ಲಿಮೆಂಟ್ ಮುಂಗಾರು ಅಧಿವೇಶನ ಚಾಲನೆಯಲ್ಲಿರುವ ಸಂದರ್ಭದಲ್ಲಿ ನಮ್ಮ ಪ್ರತಿಭಟನೆಯ ಕೂಗು ಸಂಸದರಿಗೆ ಮುಟ್ಟಬೇಕು. ಈ ದೆಶೆಯಲ್ಲಿ ನಾವೆಲ್ಲರೂ ಸಂಘಟಿತರಾಗಿ ಹೋರಾಟವನ್ನು ತೀವ್ರಗೊಳಿಸುವುದು ಅವಶ್ಯಕವಾಗಿದೆ. ನಮ್ಮ ಹೋರಾಟದ ಸಂದೇಶ ದೆಹಲಿ ತಲುಪಬೇಕು. ಈ ದೃಷ್ಟಿಯಿಂದ, ಅತಿ ಹೆಚ್ಚಿನ ಸಂಖ್ಯೆಯಲ್ಲಿ ಎಲ್ಲ ಇಪಿಎಸ್ ನಿವೃತ್ತರು ಭಾಗವಹಿಸಬೇಕೆಂದು ಮನವಿ ಮಾಡಿದರು.

ನಮ್ಮ ರಾಜ್ಯದವರೇ ಆದ ಕೇಂದ್ರ ಕಾರ್ಮಿಕ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಮತ್ತು ಇಪಿಎಸ್ ಪಾರ್ಲಿಮೆಂಟರಿ ಕಮಿಟಿ ಅಧ್ಯಕ್ಷರಾದ ಬಸವರಾಜ ಬೊಮ್ಮಾಯಿ, ಈ ಇಬ್ಬರು ಉನ್ನತ ಸ್ಥಾನದಲ್ಲಿದ್ದು, ಇಪಿಎಸ್ ನಿವೃತ್ತರ ಬೇಡಿಕೆಗಳ ಬಗ್ಗೆ ಸಂಪೂರ್ಣ ಅರಿವಿದೆ. ನಮ್ಮ ಎಲ್ಲ ಮನವಿಪತ್ರಗಳು ಈ ಮುಖಂಡರಿಗೆ ಮುಟ್ಟಿದೆ ಎಂದು ತಿಳಿಸಿದ್ದಾರೆ.

ರಾಷ್ಟ್ರೀಯ ಸಂಘರ್ಷ ಸಮಿತಿ, ಬಿಎಂಟಿಸಿ & ಕೆಎಸ್‌ಆರ್‌ಟಿಸಿ ಹಾಗೂ ಕೆಎಸ್‌ಆರ್‌ಟಿಸಿ ಕ್ಷೇಮಾಭಿವೃದ್ಧಿ ಟ್ರಸ್ಟ್, ಚಿಕ್ಕಬಳ್ಳಾಪುರ ವತಿಯಿಂದ ನಡೆಯುವ ಇಪಿಎಸ್ ನಿವೃತ್ತರ ಈ ಪ್ರತಿಭಟನಾ ಸಭೆ ಹಾಗೂ ಮನವಿ ಪತ್ರ ಸಲ್ಲಿಸುವ ಕಾರ್ಯಕ್ರಮದ ಮೂಲಕ ನಮ್ಮ ಕೂಗು ದೆಹಲಿಗೆ ತಲಪಬೇಕು.

ಎನ್ಎಸಿ ರಾಜ್ಯಾಧ್ಯಕ್ಷ ಜಿಎಸ್ಎಮ್ ಸ್ವಾಮಿ, ಇತರೆ ಮುಖಂಡರು ಹಾಗೂ ನಮ್ಮ ಸಂಘದ ಪದಾಧಿಕಾರಿಗಳು, ಚಿಕ್ಕಬಳ್ಳಾಪುರ ಕೆಎಸ್‌ಆರ್‌ಟಿಸಿ ಕ್ಷೇಮಾಭಿವೃದ್ಧಿ ಟ್ರಸ್ಟ್ ನ ಪದಾಧಿಕಾರಿಗಳು, ಸದಸ್ಯರು, ವಿವಿಧ ಸಂಘಟನೆಗಳ ಎಲ್ಲಾ ಇಪಿಎಸ್ ನಿವೃತ್ತರು ಈ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ.

ಹೀಗಾಗಿ ಇಪಿಎಸ್ ನಿವೃತ್ತರ ಈ ಎಲ್ಲ ಬೇಡಿಕೆಗಳಿಗೆ ಸಂಬಂಧಿಸಿದಂತೆ ಜುಲೈ 28ರ ಸೋಮವಾರ ಬೆಳಗ್ಗೆ 10:30 ಗಂಟೆಗೆ ನಗರದ ರಿಚ್ಮಂಡ್ ವೃತ್ತದಲ್ಲಿರುವ ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ಆವರಣದಲ್ಲಿ ಜರುಗುವ ಶಾಂತಿಯುತ ಪ್ರತಿಭಟನೆ ಹಾಗೂ ಅಧಿಕಾರಿಗಳ ಮೂಲಕ ಕೇಂದ್ರ ಸರ್ಕಾರದ ಸಚಿವರಿಗೆ ಮನವಿ ಪತ್ರವನ್ನು ಸಲ್ಲಿಸುವ ಸಭೆಗೆ ಎಲ್ಲ ಇಪಿಎಸ್ ನಿವೃತ್ತರು ಆಗಮಿಸಸಬೇಕೆಂದು ನಂಜುಂಡೇಗೌಡ ಕಾರ್ಯಕಾರಿ ಸಮಿತಿ ಪರವಾಗಿ ಮನವಿ ಮಾಡಿದ್ದಾರೆ.

Megha
the authorMegha

Leave a Reply

error: Content is protected !!