EPS ಪಿಂಚಣಿದಾರರ ಪ್ರತಿಭಟನೆ: ಜನ ಪ್ರತಿನಿಧಿಗಳು, ಸರ್ಕಾರಿ ನೌಕರರು ಎಲ್ಲ ಸೌಲಭ್ಯಗಳ ಅನುಭವಿಸುತ್ತಾರೆ -ನಮಗೆ ಮಾತ್ರ ತಾರತಮ್ಯ ಏಕೆ? ಆಕ್ರೋಶ

ಬೆಂಗಳೂರು: ಇಪಿಎಸ್ ನಿವೃತ್ತರನ್ನು ಮಾತ್ರ ಪಿಂಚಣಿ ವಿಷಯದಲ್ಲಿ ಕಡೆಗಣಿಸಿದ್ದು, ಪ್ರಜಾ ಪ್ರತಿನಿಧಿಗಳು ಹಾಗೂ ಕೇಂದ್ರ ಸರ್ಕಾರಿ ನೌಕರರು ಎಲ್ಲ ಸವಲತ್ತುಗಳನ್ನು ಅನುಭವಿಸುತ್ತಿದ್ದಾರೆ. ಆದರೆ ನಮಗೆ ಮಾತ್ರ ಏಕೆ ಈ ರೀತಿಯ ತಾರತಮ್ಯ, ಇದು ಖಂಡನೀಯ ಎಂದು ಎನ್ಎಸಿ ರಾಜ್ಯಾಧ್ಯಕ್ಷ ಜೆಎಸ್ಎಂ ಸ್ವಾಮಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ನಗರದ ಇಪಿಎಫ್ಒ ಕಚೇರಿ ಆವರಣದಲ್ಲಿ ಮಂಗಳವಾರ ಜರುಗಿದ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ವೇಳೆ 70-80ರ ವಯೋವೃದ್ಧರು ಪಥ ಸಂಚಲನ ನಡೆಸುವ ಮೂಲಕ, ಧಿಕ್ಕಾರದ ಘೋಷಣೆಯೊಂದಿಗೆ ಮನವಿ ಪತ್ರವನ್ನು ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತರ ಮೂಲಕ ಕೇಂದ್ರ ಸಚಿವರಿಗೆ ನೀಡಿದರು. ಈ ವೇಳೆ ಜೆಎಸ್ಎಂ ಸ್ವಾಮಿ ಮಾತನಾಡಿದರು.
ಬೆಂಗಳೂರು ನಗರ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಇಪಿಎಸ್ ನಿವೃತ್ತರು ಸರಳ ಬದುಕಿಗಾಗಿ ದಶಕಗಳಿಂದ ಹೋರಾಟ ಮಾಡುತ್ತಿದ್ದಾರೆ. ಎಪ್ಪತ್ತು, ಎಂಬತ್ತರ ವೃದ್ಧರು ನಗರದ ರಿಚ್ಮಂಡ್ ವೃತ್ತದಲ್ಲಿರುವ ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ಆವರಣದಲ್ಲಿ ತಿಂಗಳಿಗೊಮ್ಮೆ ಸೇರಿ ಬೇಡಿಕೆ ಈಡೇರಿಸಿ ಎಂದು ಒತ್ತಾಯ ಮಾಡುತ್ತಿದ್ದಾರೆ. ಆದರೂ ಸರ್ಕಾರಕ್ಕೆ ನಮ್ಮ ಕೂಗನ್ನು ಕೇಳಿಸಿಕೊಳ್ಳುವ ತಾಳ್ಮೆ ಇಲ್ಲ ಎಂದರೆ ಅರ್ಥ ಏನು ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಬಿಎಂಟಿಸಿ & ಕೆಎಸ್‌ಆರ್‌ಟಿಸಿ ನಿವೃತ್ತ ನೌಕರರ ಸಂಘದ ಅಧ್ಯಕ್ಷ ನಂಜುಂಡೇಗೌಡ ಮಾತನಾಡಿ, ನಮ್ಮ ಹೋರಾಟ ಇಷ್ಟಕ್ಕೆ ನಿಲ್ಲದು, ಕಮಾಂಡರ್ ಅಶೋಕ್ ರಾವುತ್ ಅವರ ತಂಡ ದೆಹಲಿಯಲ್ಲಿ ಇನ್ನೂ ಮೂರು ದಿನಗಳ ಕಾಲ ಇದ್ದು, ಕೇಂದ್ರ ಸರ್ಕಾರದ ಉನ್ನತ ಸಚಿವರನ್ನು ಕಂಡು, ನಮ್ಮ ಬೇಡಿಕೆಗಳ ಕುರಿತು ಚರ್ಚಿಸಿ, ಎಲ್ಲ ಬೇಡಿಕೆಗಳು ಈಡಿರುವ ಸಂಭವವಿದೆ ಎಂದು ಆಶಾಭಾವನೆ ವ್ಯಕ್ತಪಡಿಸಿದರು.
ಇನ್ನು ಕಾರ್ಯಧ್ಯಕ್ಷ ಶಂಕರ್ ಕುಮಾರ್ ಮಾತನಾಡಿ, ನಮ್ಮ ಎಲ್ಲ ಬೇಡಿಕೆಗಳನ್ನು ಇಂದಲ್ಲ ನಾಳೆ ಈಡೇರಿಸಿಕೊಂಡೆ ತೀರುತ್ತೇವೆ. ನಿವೃತ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದು ಇಳಿ ವಯಸ್ಸಿನಲ್ಲೂ ಹೋರಾಟಕ್ಕೆ ಬರುತ್ತಿರುವ ಮುಸ್ಸಂಜೆಯ ಯುವಕರ ಕಂಡು ಕಣ್ಣುತುಂಬಿಕೊಂಡು ನೋವಿನಿಂದ ಕೇಂದ್ರ ಸರ್ಕಾರದ ನಡೆಯ ವಿರುದ್ಧ ಕಿಡಿಕಾರಿದರು.
ಸಂಘದ ಪ್ರಧಾನ ಕಾರ್ಯದರ್ಶಿ ಸುಬ್ಬಣ್ಣ ಮಾತನಾಡಿ, ಇಪಿಎಸ್ ನಿವೃತ್ತರು ಈಗಾಗಲೇ ಸಾಕಷ್ಟು ದೂರ ಕ್ರಮಿಸಿದ್ದು, ನಮ್ಮ ನಾಯಕರು ಕೇಂದ್ರ ಸರ್ಕಾರದ ಮಟ್ಟದಲ್ಲಿ ನಡೆಸಿರುವ ಮಾತುಕತೆ ಫಲಪ್ರದವಾಗುವ ಎಲ್ಲ ಲಕ್ಷಣಗಳಿವೆ. ಫಲಿತಾಂಶಕ್ಕಾಗಿ ಕಾಯೋಣ ಎಂದು ಹುಮ್ಮಸ್ಸು ಇಮ್ಮಡಿಗೊಳಿಸಿದರು.
ಚಿಕ್ಕಬಳ್ಳಾಪುರ ಕೆಎಸ್ಆರ್‌ಟಿಸಿ ನಿವೃತ್ತ ನೌಕರರ ಟ್ರಸ್ಟ್ ನ ಸಂಘಟನಾ ಕಾರ್ಯದರ್ಶಿ ಮೇಲೂರು ಅಮರ್ ಮಾತನಾಡಿ, ಎಲ್ಲ ಇಪಿಎಸ್ ನಿವೃತ್ತರು ಒಂದಾಗಿ, ಸಂಘಟನಾತ್ಮಕವಾಗಿ ಹೋರಾಟ ಮಾಡಿದಲ್ಲಿ, ನಮ್ಮ ಎಲ್ಲ ಬೇಡಿಕೆಗಳು ಈಡೇರಲಿವೆ ಎಂದರು.
ಈ ನಡುವೆ ಮನವಿ ಪತ್ರ ಸ್ವೀಕರಿಸಲು ಸ್ಥಳಕ್ಕೆ ಬಂದ ಇಪಿಎಫ್ಒ ಅಧಿಕಾರಿಗಳನ್ನು ಪ್ರತಿಭಟನಾಕಾರರು ತೀವ್ರ ತರಾಟೆಗೆ ತೆಗೆದುಕೊಂಡರು, ಮನವಿ ಪತ್ರವನ್ನು ಸ್ವೀಕರಿಸಿ, ಮಾತನಾಡಿದ ಅಧಿಕಾರಿಗಳು, ಇಂದಿನ ಎಲ್ಲ ಸಂಪೂರ್ಣ ಚಿತ್ರಣವನ್ನು ಕೇಂದ್ರ ಸಚಿವರ ಕಾರ್ಯಾಲಯಕ್ಕೂ ಹಾಗೂ ದೆಹಲಿಯಲ್ಲಿನ ತಮ್ಮ ಮೇಲಧಿಕಾರಿಗಳಿಗೆ ಕಳುಹಿಸಿ ಕೊಡುತ್ತೇವೆ ಎಂದು ತಿಳಿಸಿದರು.
ಪ್ರತಿಭಟನೆಯಲ್ಲಿ ಟ್ರಸ್ಟ್ ನ ಸಂಘಟನಾ ಕಾರ್ಯದರ್ಶಿ ಸತ್ಯನಾರಾಯಣ, ನಮ್ಮ ಸಂಘದ ಪದಾಧಿಕಾರಿಗಳಾದ ರುಕ್ಮಿಶ್, ಕೃಷ್ಣಮೂರ್ತಿ, ಸಂಘದ ಸಂಘಟನಾ ಕಾರ್ಯದರ್ಶಿ ಮನೋಹರ್ ಸೇರಿದಂತೆ ನೂರಾರು ಇಳಿ ವಯಸ್ಸಿನ ಉತ್ಸಾಹಿ ಯುವಕರು ಭಾಗವಹಿಸಿದ್ದರು.
Related

You Might Also Like
ಹಾಳಾಗಿರುವ ಒಳಚರಂಡಿ ಸ್ಲ್ಯಾಬ್ ಬದಲಾಯಿಸಿ: ಅಧಿಕಾರಿಗಳಿಗೆ ಸ್ನೇಹಲ್ ತಾಕೀತು
ಬೆಂಗಳೂರು: ಪೂರ್ವ ವಲಯ ವ್ಯಾಪ್ತಿಯಲ್ಲಿ ಹಾಳಾಗಿರುವ ಒಳಚರಂಡಿ ಮೇಲ್ಭಾಗದ ಕವರ್ ಸ್ಲ್ಯಾಬ್ ಬದಲಾಯಿಸಲು ಪೂರ್ವ ವಲಯ ಆಯುಕ್ತರಾದ ಸ್ನೇಹಲ್ ಜಲಮಡಂಳಿ ಅಧಿಕಾರಿಗಳಿಗೆ ತಾಕೀತು ಮಾಡಿದರು. ಪೂರ್ವ ವಲಯ...
ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಿ: ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ವಸ್ತ್ರದ್ ಸಲಹೆ
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ಸ್ವೀಪ್ ಕಾರ್ಯ ಚಟುವಟಿಕೆಗಳನ್ನು ನಿರಂತರವಾಗಿ ಕೈಗೊಳ್ಳುವ ಮೂಲಕ ಮತದಾರರಿಗೆ ಜಾಗೃತಿ ಮೂಡಿಸಿ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಿ ಎಂದು ಅಧಿಕಾರಿಗಳಿಗೆ...
ಗ್ರಾಪಂ- ಮನೆ ಬಾಗಿಲಿಗೆ ಇ-ಸ್ವತ್ತು ಖಾತೆ ವಿತರಣೆ: ಜಿಪಂ ಸಿಇಒ ಡಾ.ಅನುರಾಧ
ಪಂಚಾಯತ್ ರಾಜ್ ಇಲಾಖೆಯಿಂದ ಮಹತ್ವಕಾಂಕ್ಷಿ ಕಾರ್ಯಕ್ರಮ ಗ್ರಾಮಠಾಣಾ ವ್ಯಾಪ್ತಿಯ ಮನೆ ಬಾಗಿಲಿಗೇ ಈ ಸ್ವತ್ತು ಖಾತೆ ನೀಡುವ ಯೋಜನೆ ಆರಂಭ ಬೆಂಗಳೂರು ಗ್ರಾಮಾಂತರ: ಪಂಚಾಯತ್ ರಾಜ್ ಮತ್ತು...
ರೈತರಿಗಾಗಿ ಜಿಲ್ಲಾ ಮಟ್ಟದ ಮಾವು- ಹಲಸು ಮೇಳ: ಸಚಿವ ಮುನಿಯಪ್ಪ
ಬೆಂಗಳೂರು ಗ್ರಾಮಾಂತರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ ಸಂಯುಕ್ತಾಶ್ರಯದಲ್ಲಿ ದೇವನಹಳ್ಳಿಯಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ...
ಖಾಸಗಿ ಕಂಪನಿಯ ಮುಖ್ಯ ಕಾನೂನು ಸಲಹೆಗಾರರಾಗಿ ನೇಮಕಗೊಂಡ ವಕೀಲ ಶಿವರಾಜುರಿಗೆ ಅಭಿನಂದನೆಗಳು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಹಲವು ನೌಕರರು ಸೇರಿದಂತೆ ಇತರರಿಗೆ ಉಚಿತವಾಗಿ ಕಾನೂನು ಸೇವೆ ನೀಡಿದ ಫಲವಾಗಿ ವಕೀಲರಾದ ಎಚ್.ಬಿ.ಶಿವರಾಜು ಅವರಿಗೆ ಕೈ...
KSRTC ನೂತನ ಎಂಡಿ ಅಕ್ರಮ್ ಪಾಷಗೆ ಸ್ವಾಗತ ಕೋರಿದ ನಿಗಮದ ಪ್ರಭಾರ ಎಂಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಐಎಎಸ್ ಅಧಿಕಾರಿ ಅಕ್ರಮ್ ಪಾಷ ಇಂದು ಅಧಿಕಾರ ಸ್ವೀಕರಿಸಿದರು. ನಿಗಮದ ಪ್ರಭಾರ ಎಂಡಿಯಾಗಿದ್ದ ಬಿಎಂಟಿಸಿ...
ಟೇಕಾಫ್ ಆದ ಕೆಲವೇ ಕ್ಷಣದ ಏರ್ ಇಂಡಿಯಾ ವಿಮಾನ ಪತನ: ಇಬ್ಬರು ಸೇಫ್
ಅಹಮದಾಬಾದ್: ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ತಾಂತ್ರಿಕ ದೋಷದಿಂದ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಏರ್ ಇಂಡಿಯಾ ವಿಮಾನ ಪತನಗೊಂಡ ಘಟನೆಗೆ ಸಂಬಂಧಿಸಿದಂತೆ 240 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ವಿಮಾನದಲ್ಲಿ...
KSRTC ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಅಕ್ರಮ್ ಪಾಷ ನೇಮಕ: ಸರ್ಕಾರ ಆದೇಶ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಅಕ್ರಂಪಾಷಾ ಅವರನ್ನು ನೇಮಿಸಿ ಸರ್ಕಾರ ಗುರುವಾರ (ಜೂ.12) ಆದೇಶ ಹೊರಡಿಸಿದೆ. ಇದೇ ಜೂನ್ 2ರ ಸೋಮವಾರ...
NWKRTC: ವರುಣನ ಅಬ್ಬರಕ್ಕೆ ಕಾರವಾರದ ಬಸ್ ಡಿಪೋ ಜಲಾವೃತ- ಮಳೆ ನೀರಿನಲ್ಲೇ ನಿಂತು ಹೆರಿಗೆ ಮಾಡಿಸಿದ ವೈದ್ಯರು
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಧಾರಾಕರ ಮಳೆಯಾಗುತ್ತಿದ್ದು, ಈ ಮಳೆಗೆ ವಾಯುವ್ಯ ರಸ್ತೆ ಸಾರಿಗೆ ನಿಮಗದ ಘಟಕ ಸಂಪೂರ್ಣ ಜಲಾವೃತವಾಗಿದ್ದು, ಬಸ್ಗಳನ್ನು ತೆಗೆಯುವುದಕ್ಕೂ ಸಿಬ್ಬಂದಿ ಪರದಾಡಿತ...