NEWSನಮ್ಮಜಿಲ್ಲೆ

ನಾಳೆ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: BMTC & KSRTC ನಂಜುಂಡೇಗೌಡ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನಿವೃತ್ತ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಷ್ಟ್ರೀಯ ಸಂಘರ್ಷ ಸಮಿತಿ ಹಾಗೂ ಬಿಎಂಟಿಸಿ & ಕೆಎಸ್‌ಆರ್‌ಟಿಸಿ ನಿವೃತ್ತ ನೌಕರರ ಸಂಘಟನೆ ವತಿಯಿಂದ ಇಪಿಎಸ್ ಪಿಂಚಣಿದಾರರ ಪ್ರತಿಭಟನೆಯನ್ನು ಜೂನ್ 27 ರಂದು ಬೆಳಗ್ಗೆ 11 ಗಂಟೆಗೆ ನಗರದ ರಿಚ್ಮಂಡ್ ವೃತ್ತದಲ್ಲಿರುವ ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಬಿಎಂಟಿಸಿ ಕೆಎಸ್‌ಆರ್‌ಟಿಸಿ ನಿವೃತ್ತ ನೌಕರರ ಸಂಘಟನೆಯ ಕಾರ್ಯಾಧ್ಯಕ್ಷ ನಂಜುಂಡೇಗೌಡ, ಲೋಕಸಭೆ ಚುನಾವಣೆ ಮುಗಿದು, ಕಳೆದ ವಾರ 18ನೇ ಲೋಕಸಭೆ ಅಸ್ತಿತ್ವಕ್ಕೆ ಬಂದಿದೆ. ಕೇಂದ್ರ ಸಚಿವ ಸಂಪುಟವು ರಚನೆಯಾಗಿದ್ದು, ಕೇಂದ್ರದ (minister for labour and employment) ಕಾರ್ಮಿಕ ಹಾಗೂ ಉದ್ಯೋಗ ಖಾತೆ ಸಂಪುಟ ದರ್ಜೆ ಹಾಗೂ ರಾಜ್ಯ ದರ್ಜೆ ಸಚಿವರಾಗಿ, ಮನ್ಸೂಖ್ ಮಾಂಡವಿಯಾ ಹಾಗೂ ಶೋಭಾ ಕರಂದ್ಲಾಜೆ ಅವರು ಪದಗ್ರಹಣ ಮಾಡಿದ್ದಾರೆ.

ಇದು ನಮ್ಮೆಲ್ಲ ಇಪಿಎಸ್ ನಿವೃತ್ತರಿಗೆ ಅತ್ಯಂತ ಸಂತೋಷದ ಸಂಗತಿ. ನಮ್ಮ ರಾಜ್ಯದವರೇ ಆದ ಶೋಭಾ ಕರಂದ್ಲಾಜೆ ಅವರು ಕನ್ನಡತಿ, ಸರಳ ಸ್ವಭಾವದವರು, ಮಾತೃಭಾಷೆಯಲ್ಲಿ ನಮ್ಮ ಸಂಕಷ್ಟಗಳನ್ನು ಆಲಿಸಿ, ಈಡೇರಿಸುತ್ತಾರೆ ಎಂಬ ನಿರೀಕ್ಷೆ ಎಲ್ಲ ಇಪಿಎಸ್ ನಿವೃತ್ತರಲ್ಲಿದೆ ಎಂದಿದ್ದಾರೆ.

ಇನ್ನು ಜೂನ್ 27ರಂದು ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ಆವರಣದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದು, ಈ ವೇಳೆ ಇಬ್ಬರೂ ಸಚಿವರಿಗೂ ಮನವಿ ಪತ್ರ ಸಲ್ಲಿಸಲಾಗುವುದು. ಜುಲೈ 22, 2024 ರಿಂದ ಕೇಂದ್ರ ಸರ್ಕಾರದ ಬಜೆಟ್ ಅಧಿವೇಶನ ನಡೆಯಲಿದ್ದು, ಈ ಅಧಿವೇಶದಲ್ಲಿ ನಮ್ಮ ಎಲ್ಲ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಲಾಗುವುದು ಎಂದು ತಿಳಿಸಿದ್ದಾರೆ.

ಈ ಸಚಿವರಿಬ್ಬರು ಸಿಬಿಟಿ ಸಭೆಯ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರಾಗಿದ್ದು, ಮುಂಬರುವ ಸಿಬಿಟಿ ಸಭೆಯಲ್ಲಿ ಆಧ್ಯತೆಯ ಮೇರೆಗೆ ನಮ್ಮ ಕನಿಷ್ಠ ಹೆಚ್ಚುವರಿ ಪಿಂಚಣಿ ಬೇಡಿಕೆ ಅಂದರೆ ರೂ. 7,500 + ಭತ್ಯೆ ಹಾಗೂ ವೈದ್ಯಕೀಯ ಸೌಲಭ್ಯಗಳನ್ನು ಈಡೇರಿಸಿ ಕೊಡಬೇಕೆಂದು ಒತ್ತಾಯಿಸಲಾಗುವುದು ಎಂದು ತಿಳಿಸಿದ್ದಾರೆ.

ಇನ್ನು ಇಪಿಎಸ್ ನಿವೃತ್ತರ ಈ ಎಲ್ಲ ಬೇಡಿಕೆಗಳಿಗೆ ಸಂಬಂಧಿಸಿದಂತೆ ಜೂ.27 ರಂದು ಬೆಳಗ್ಗೆ 11 ಗಂಟೆಗೆ ರಿಚ್ಮಂಡ್ ವೃತ್ತದಲ್ಲಿರುವ ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ಆವರಣದಲ್ಲಿ ನಡೆಯುವ ಪ್ರತಿಭಟನೆಯಲ್ಲಿ ಪ್ರತಿಯೊಬ್ಬ ನಿವೃತ್ತರು ಭಾಗವಹಿಸಬೇಕೆಂದು ನಂಜುಂಡೇಗೌಡ ಮನವಿ ಮಾಡಿದ್ದಾರೆ.

Leave a Reply

error: Content is protected !!
LATEST
KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ ದೀಪಾವಳಿ ಹಬ್ಬ ಹಿನ್ನೆಲೆ KKRTC ನೌಕರರಿಗೆ ಅ.29ರಂದೇ ವೇತನ ಕೊಡಲು ಎಂಡಿ ರಾಚಪ್ಪ ನಿರ್ದೇಶನ