NEWSನಮ್ಮಜಿಲ್ಲೆಶಿಕ್ಷಣ-

ಸಮಾನತೆ ಯಾತ್ರೆ: ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನ ಕಣ್ತುಂಬಿಕೊಂಡ ಬೆಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: 78ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಲಾಲ್‌ಬಾಗ್‌ನಲ್ಲಿ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಕೇಂದ್ರಿತ 216ನೇ ಫಲಪುಷ್ಪ ಪ್ರದರ್ಶನವನ್ನು ಕೊನೆಯ ದಿನವಾದ ಸೋಮವಾರ  ಬೆಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಕಣ್ತುಂಬಿಕೊಂಡರು.

ಡಾ.ಬಿ.ಆರ್.ಅಂಬೇಡ್ಕರ್ ಕೇಂದ್ರಿತ ಫಲಪುಷ್ಪ ಪ್ರದರ್ಶನ ವೀಕ್ಷಿಸಲು ಬೆಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗಾಗಿ ವಿಶೇಷ ಪ್ರವಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. “ಸಮಾನತೆ ಯಾತ್ರೆ” ಹೆಸರಿನಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿಗಳು ಲಾಲ್‌ಬಾಗ್‌ಗೆ ಭೇಟಿ ನೀಡಿ ಪುಷ್ಪಪ್ರದರ್ಶನವನ್ನು ವೀಕ್ಷಿಸಿದರು.

ವಿದ್ಯಾರ್ಥಿಗಳ ಪ್ರವಾಸಕ್ಕಾಗಿ ವಿವಿ ಆಡಳಿತ ಮಂಡಳಿ ಬಸ್ ವ್ಯವಸ್ಥೆ ಮಾಡಿದ್ದು, 10ಕ್ಕೂ ಹೆಚ್ಚು ಬಿಎಂಟಿಸಿ ಬಸ್‌ಗಳಲ್ಲಿ 600ಕ್ಕೂ ಅಧಿಕ ವಿದ್ಯಾರ್ಥಿಗಳು ಪ್ರಯಾಣಿಸಿ ಪುಷ್ಪಪ್ರದರ್ಶನ ವೀಕ್ಷಿಸಿದರು. ಸಮಾನತೆ ಯಾತ್ರೆಯ ಪ್ರವಾಸಕ್ಕೆ ಬೆಂಗಳೂರು ವಿಶ್ವವಿದ್ಯಾಲಯ ಕುಲಪತಿ ಡಾ.ಜಯಕರ ಎಸ್.ಎಂ, ಕುಲಸಚಿವ ಶೇಕ್ ಲತೀಫ್ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.

ಪುಷ್ಪಪ್ರದರ್ಶನದಲ್ಲಿ ಹೂಗಳಲ್ಲಿ ಅರಳಿ ನಿಂತಿದ್ದ ಬಾಬಾಸಾಹೇಬ ಡಾ.ಬಿ.ಆರ್.ಅಂಬೇಡ್ಕರ್‌ ಅವರ ಜೀವನ ಸಾಧನೆ, ಕೊಡುಗೆಗಳು, ಪ್ರಮುಖ ಘಟ್ಟಗಳು, ಚಿಂತನೆಗಳು, ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಆಶಯಗಳನ್ನು ವೀಕ್ಷಿಸಿದರು.

ಸಮಾನತೆ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಕುಲಪತಿ ಡಾ‌.ಎಸ್.ಎಂ.ಜಯಕರ, ಇತಿಹಾಸದ ಭಾಗವಾಗಿರುವ ಡಾ.ಬಿ.ಆರ್.ಅಂಬೇಡ್ಕರ್‌ರ ಅಧ್ಯಯನ ವಿದ್ಯಾರ್ಥಿಗಳಿಗೆ ಸ್ಫೂರ್ತಿದಾಯಕವಾಗಿರಲಿದೆ. ಪುಷ್ಪಪ್ರದರ್ಶನ ವೀಕ್ಷಿಸುವ ಮೂಲಕ ವಿದ್ಯಾರ್ಥಿಗಳು ಡಾ.ಬಿ.ಆರ್.ಅಂಬೇಡ್ಕರರ ಚಿಂತನೆ, ಆಶಯ, ವ್ಯಕ್ತಿ ಉದ್ದೇಶಗಳನ್ನು ಅಳವಡಿಸಿಕೊಳ್ಳಬೇಕು. ವಿದ್ಯಾರ್ಥಿಗಳ ಜ್ಞಾನರ್ಜನೆಗೆ ವಿಶ್ವವಿದ್ಯಾಲಯ ಸದಾ ಬೆಂಬಲವಾಗಿರಲಿದೆ ಎಂದರು.

ಸಂಶೋಧನಾ ವಿದ್ಯಾರ್ಥಿ ಹಾಗೂ ಮುಖಂಡ ಚಂದ್ರು ಪೆರಿಯಾರ್ ಮಾತನಾಡಿ, “ಸ್ವಾತಂತ್ರ್ಯೋತ್ಸವದಂದು ಅಂಬೇಡ್ಕರ್‌ರವರ ಕೇಂದ್ರಿತ ಫಲಪುಷ್ಪ ಪ್ರದರ್ಶನ ಆಯೋಜಿಸಿ ರಾಜ್ಯ ಸರ್ಕಾರ ಮತ್ತು ತೋಟಗಾರಿಕೆ ಇಲಾಖೆ ವಿಶ್ವದ ಗಮನ ಸೆಳೆದಿದೆ. ಇನ್ನು ವಿವಿಯೂ ಕೂಡ ನಮಗೆ ಈ ಅವಕಾಶ ಕಲ್ಪಿಸಿಕೊಟ್ಟಿರುವುದು ಸಂತಸ ತಂದಿದೆ. ಈ ಕಾರ್ಯ ದೇಶದ ಎಲ್ಲ ವಿಶ್ವವಿದ್ಯಾಲಯಗಳಿಗೆ ಮಾದರಿಯಾಗಬೇಕು ಎಂದರು.

ವಿತ್ತಾಧಿಕಾರಿ ಡಾ.ಸುನೀತಾ,ವಿದ್ಯಾರ್ಥಿ ಕಲ್ಯಾಣ ನಿರ್ದೇಶಕ ಪ್ರೊ. ಜಯರಾಮ್ ನಾಯಕ್, ಪ್ರೊ.ಪಿ.ಸಿ.ನಾಗೇಶ್, ಸಿಂಡಿಕೇಟ್ ಸದಸ್ಯೆ ಡಾ. ಸರ್ವಮಂಗಳ, ನಿಕಟಪೂರ್ವ ಕುಲಸಚಿವ (ಮೌಲ್ಯಮಾಪನ) ಪ್ರೊ.ಸಿ. ಶಿವರಾಜು, ಪ್ರೊ.ಸಿ.ಡಿ. ವೆಂಕಟೇಶ್, ಡಾ. ದಿನೇಶ್ ಮತ್ತಿತರರು ಉಪಸ್ಥಿತರಿದ್ದರು.

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ