NEWSನಮ್ಮಜಿಲ್ಲೆಸಂಸ್ಕೃತಿ

ಸಾವಿರ ವರ್ಷಗಳ ಇತಿಹಾಸವಿರುವ ಈಶ್ವರ ದೇವಾಲಯ ಜೀರ್ಣೋದ್ಧಾರಕ್ಕೆ ಚಾಲನೆ: ನೇಮಿರಾಜ್

ವಿಜಯಪಥ ಸಮಗ್ರ ಸುದ್ದಿ

ಕೃಷ್ಣರಾಜಪೇಟೆ: ಪುರಾತನ ದೇವಾಲಯಗಳ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ಪುರಾತನ ದೇವಾಲಯಗಳನ್ನು ಪುನರುಜ್ಜಿವನ ಮಾಡುವ ಕೆಲಸವನ್ನು ರಾಜ್ಯಾಧ್ಯಂತ ಶ್ರದ್ಧಾ ಭಕ್ತಿಯಿಂದ ಮಾಡುತ್ತಿದೆ ಎಂದು ಟ್ರಸ್ಟ್ ನಿರ್ದೇಶಕ ನೇಮಿರಾಜ್ ಹೇಳಿದ್ದಾರೆ.

ಅವರು ತಾಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಮಂಚಿಬೀಡು ಗ್ರಾಮದಲ್ಲಿ ಶಿಥಿಲವಾಗಿರುವ 1000 ವರ್ಷಗಳ ಪುರಾತನ ಈಶ್ವರ ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು.

ಪುರಾತನ ದೇವಾಲಯಗಳಲ್ಲಿ ಅಪಾರವಾದ ಶಕ್ತಿಯಿದೆಯಲ್ಲದೆ, ಶ್ರೀ ಸಾಮಾನ್ಯರಲ್ಲಿ ಹೆಚ್ಚಿನ ಭಕ್ತಿಯಿದೆ. ನಮ್ಮ ನೆಲದ ಇತಿಹಾಸ ಮತ್ತು ಪರಂಪರೆಯ ಮೇಲೆ ಬೆಳಕು ಚೆಲ್ಲುವ ದೇವಾಲಯಗಳ ಸಂರಕ್ಷಣೆಯು ನಮ್ಮೆಲ್ಲರ ಹೊಣೆಯಾಗಿದೆ ಎಂದರು.

ಇನ್ನು ಮಂಡ್ಯ, ಹಾಸನ, ಚಾಮರಾಜನಗರ ಜಿಲ್ಲೆಗಳಲ್ಲಿ ಹೊಯ್ಸಳ ದೇವಾಲಯಗಳು ಅಪಾರವಾಗಿವೆ. ಮಂಚಿಬೀಡು ಗ್ರಾಮದಲ್ಲಿ ಶಿಥಿಲವಾಗಿ ಪಾಳುಬಿದ್ದಿರುವ ಈಶ್ವರ ದೇವಾಲಯವನ್ನು ಧರ್ಮೋತ್ಥಾನ ಟ್ರಸ್ಟ್ ವತಿಯಿಂದ 35 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ಪುನರ್ ನಿರ್ಮಾಣ ಮಾಡಲಾಗುತ್ತಿದ್ದು ಒಂದು ವರ್ಷದ ಅವಧಿಯಲ್ಲಿ ದೇವಾಲಯದ ಪುನರ್ ನಿರ್ಮಾಣ ಕಾರ್ಯವು ಸಂಪೂರ್ಣಗೊಳ್ಳಲಿದೆ ಎಂದರು.

ಮುಂದಿನ ವಾರದಿಂದ ಕೆಲಸ ಶುರುವಾಗಲಿದ್ದು, ದೇವಾಲಯದ ಪುನರ್ ನಿರ್ಮಾಣ ಕಾರ್ಯಕ್ಕೆ ಗ್ರಾಮಸ್ಥರು ಸಂಪೂರ್ಣ ಸಹಕಾರ ನೀಡುವ ಮೂಲಕ ಒಂದು ಸಾವಿರ ವರ್ಷಗಳ ಇತಿಹಾಸವಿರುವ ಈಶ್ವರ ದೇವಾಲಯದ ನಿರ್ಮಾಣ ಕೆಲಸದಲ್ಲಿ ಕೈ ಜೋಡಿಸಬೇಕು ಎಂದು ಮನವಿ ಮಾಡಿದರು.

ದೇವಾಲಯ ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷ ಗ್ರಾಮದ ಮುಖಂಡ ದೊಡ್ಡತಮ್ಮಯ್ಯ ಮಾತನಾಡಿ, ಒಂದು ಸಾವಿರ ವರ್ಷಗಳ ಇತಿಹಾಸವಿರುವ ಗ್ರಾಮದ ಈಶ್ವರ ದೇವಾಲಯವು ಪುನರ್ ನಿರ್ಮಾಣವಾಗುತ್ತಿರುವುದು ಸಂತೋಷ ತಂದಿದೆ. ದೇವಾಲಯದ ಜೀರ್ಣೋದ್ದಾರ ಕಾಮಗಾರಿ ಸಂಪೂರ್ಣಗೊಂಡು ಲೋಕಾರ್ಪಣೆ ಆಗುವವರೆಗೂ ಟ್ರಸ್ಟ್ ಜೊತೆಗಿದ್ದು ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು.

ಇದೇ ವೇಳೆ ಸಂಪೂರ್ಣ ಶಿಥಿಲವಾಗಿರುವ ದೇವಾಲಯ ಪುನರ್ ನಿರ್ಮಾಣ ಕಾರ್ಯಕ್ಕೆ ಮುಂದಾಗಿರುವ ದೇವಾಲಯ ಜೀರ್ಣೋದ್ದಾರ ಸಮಿತಿಯ ಗೌರವಾಧ್ಯಕ್ಷ ನಾರಾಯಣಗೌಡ ಅವರು ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ಮೂಲಕ ಪೂಜ್ಯ ಖಾವಂದರ ಗಮನ ಸೆಳೆದು ಪುರಾತನ ದೇವಾಲಯ ಪುನರ್ ನಿರ್ಮಾಣ ಮಾಡುತ್ತಿರುವುದಕ್ಕೆ ನಾರಾಯಣಗೌಡ ಅವರನ್ನು ಗ್ರಾಮಸ್ಥರು ಸನ್ಮಾನಿಸಿರು.

ಕಾರ್ಯಕ್ರಮದಲ್ಲಿ ದೇವಾಲಯ ಪುನರ್ ನಿರ್ಮಾಣ ಸಮಿತಿಯ ಕಾರ್ಯದರ್ಶಿ ಬಸವಲಿಂಗಪ್ಪ, ಧರ್ಮೋತ್ಥಾನ ಟ್ರಸ್ಟ್ ನ ಜಯಕೀರ್ತಿ, ಆಕಾಶ್, ಎಂ.ಎಸ್.ಹರೀಶ್, ಕೆಂಡಗಣ್ಣ ಸ್ವಾಮಿ, ಪ್ರವೀಣ್, ನಾಗರಾಜು ಭಾಗವಹಿಸಿದ್ದರು.
l ವರದಿ. ಡಾ.ಕೆ.ಆರ್.ನೀಲಕಂಠ ಕೃಷ್ಣರಾಜಪೇಟೆ

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ