NEWSನಮ್ಮಜಿಲ್ಲೆ

KSRTC ಬಸ್ ಸೌಲಭ್ಯ ಕಲ್ಪಿಸುವಂತೆ ಡಿಎಂಗೆ ಮನವಿ ಮಾಡಿದರೂ ಕ್ಯಾರೆ ಎನ್ನುತ್ತಿಲ್ಲ- ಪ್ರತಿಭಟನೆ ಎಚ್ಚರಿಕೆ ಕೊಟ್ಟ ಗ್ರಾಮಸ್ಥರು

ವಿಜಯಪಥ ಸಮಗ್ರ ಸುದ್ದಿ

ಹನೂರು: ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸುವಂತೆ ಚಿಂಚಳ್ಳಿ ಗ್ರಾಮಸ್ಥರು ಮನವಿ ಸಲ್ಲಿಸಿದರು ಸಹ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧಿಕಾರಿಗಳು ಗಮನ ಹರಿಸುತ್ತಿಲ್ಲ ಎಂದು KSRTC ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಲೂಕಿನ ಚಿಂಚಳ್ಳಿ ಗ್ರಾಮವೂ ತಾಲೂಕು ಕೇಂದ್ರ ದಿಂದ 5.5ಕಿಲೋಮೀಟರ್ ಇದ್ದರೂ ಸಹ ಸಮರ್ಪಕವಾಗಿ ಬಸ್ ಸೌಲಭ್ಯ ಇಲ್ಲ. ಸಾರ್ವಜನಿಕರ ಅನುಕೂಲಕ್ಕೆ ಇಲ್ಲದ ಈ ಸಾರಿಗೆ ವ್ಯವಸ್ಥೆ ಮತ್ತ್ಯಾರಿಗಾಗಿ ಇದೆ ಎಂದು ಗ್ರಾಮಸ್ಥರು ಕಿಡಿಕಾರಿದ್ದಾರೆ.

ಇನ್ನು ಗ್ರಾಮಕ್ಕೆ ಸಮರ್ಪಕವಾಗಿ ಬಸ್‌ ಇಲ್ಲದ ಪರಿಣಾಮ ಶಾಲಾ ಮಕ್ಕಳು ಹಾಗೂ ಗ್ರಾಮಸ್ಥರು ಹರ ಸಾಹಸ ಪಡಬೇಕಾದ ಪರಿಸ್ಥಿತಿ ಉಂಟಾಗಿದೆ. ಸುಮಾರು 200ಮಕ್ಕಳು ತಾಲೂಕು ಕೇಂದ್ರವಾದ ಹನೂರು ಹಾಗೂ ಕೊಳ್ಳೇಗಾಲಕ್ಕೆ ವಿದ್ಯಾಭ್ಯಾಸಕ್ಕೆ ಹೋಗುತ್ತಿದ್ದಾರೆ. ಆದ್ದರಿಂದ ಸರಿಯಾದ ಸಮಯಕ್ಕೆ ಬಸ್ ಸೌಲಭ್ಯ ಕಲ್ಪಿಸಿ ಎಂದು ಆಗ್ರಹಿಸಿದ್ದಾರೆ.

ಈ ವೇಳೆ ಚಿಂಚಳ್ಳಿ ಗ್ರಾಮದ ಮುಖಂಡರೊಬ್ಬರು ಮಾತನಾಡಿ ಚಿಂಚಳ್ಳಿ ಗ್ರಾಮಕ್ಕೆ ಬಸ್ ಸೌಲಭ್ಯ ಕಲ್ಪಿಸುವಂತೆ ಮೂರು ಬಾರಿ ಘಟಕ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಲಾಗಿದೆ. ಆದರೆ ಇದುವರೆಗೂ ಬಸ್ ಸೌಲಭ್ಯ ಕಲ್ಪಿಸಿಲ್ಲ. ಈ ಸಂಬಂಧ ಡಿಪೋ ಮ್ಯಾನೇಜ‌ರ್ ಅವರಿಗೆ ಕರೆ ಮಾಡಿದರೆ ಸ್ವೀಕರಿಸುತ್ತಿಲ್ಲ. ಅಧಿಕಾರಿಗಳು ಮೀನಮೇಷ ಎಣಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತ ಪಡಿಸಿದರು.

ಈ ಬಗ್ಗೆ ಡಿಪೋ ಅಧಿಕಾರಿಗಳಿಗೆ ಮನವಿ ಮಾಡಿದರು ಸಹ ಕ್ಯಾರೇ ಎನ್ನುತ್ತಿಲ್ಲ. ಸಾರ್ವಜನಿಕರ ಸಮಸ್ಯೆ ಬಗೆಹರಿಸದೆ ಇದೇ ರೀತಿ ನಡೆದುಕೊಂಡು, ಸಮರ್ಪಕ ಬಸ್ ಸೌಲಭ್ಯ ಒದಗಿಸದಿದ್ದರೆ ಮುಂದಿನ ದಿನಗಳಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಬೇಕಾಗುತ್ತದೆ ಎದು ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

Leave a Reply

error: Content is protected !!
LATEST
ಚಾಮುಂಡಿ ಹುಟ್ಟುಹಬ್ಬ: ಬೆಳ್ಳಿ ಪಲ್ಲಕ್ಕಿ ಉತ್ಸವಕ್ಕೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚಾಲನೆ ನಾಡ ಅಧಿದೇವತೆ ಚಾಮುಂಡಿ ತಾಯಿಯ ವರ್ಧಂತಿ ಸಂಭ್ರಮ: ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ...