NEWSನಮ್ಮಜಿಲ್ಲೆರಾಜಕೀಯ

ಪ್ರತಿಯೊಬ್ಬ ಮತದಾರರೂ ತಪ್ಪದೆ ಮತಚಲಾಯಿಸಿ: ಜಿಲ್ಲಾಧಿಕಾರಿ ಡಾ.ಶಿವಶಂಕರ್‌ ಕರೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು ಗ್ರಾಮಾಂತರ: ಪ್ರತಿಯೊಬ್ಬ ಪ್ರಜೆಯು ನಿರ್ಭೀತರಾಗಿ ಮತದಾನ ಮಾಡುವ ಜೊತೆಗೆ ಚುನಾವಣೆ ಸಂದರ್ಭದಲ್ಲಿ ಯಾವುದೇ ಆಸೆ ಆಮಿಷಕ್ಕೆ ಒಳಗಾಗದೆ ಮತ ಚಲಾವಣೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ.ಎನ್‌.ಶಿವಶಂಕರ್‌ ಕರೆ ನೀಡಿದ್ದಾರೆ.

ಜಿಲ್ಲಾಡಳಿತ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿಂದು ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಜಿಲ್ಲೆಯ 18 ವರ್ಷ ಮೇಲ್ಪಟ್ಟ ಅರ್ಹ ಪ್ರಜೆಗಳು ಮತದಾರರಾಗಿ ನೋಂದಣಿ ಮಾಡಿಕೊಳ್ಳಬೇಕು. ನೋಂದಣಿಯಾಗುವ ಜೊತೆಗೆ ಪ್ರತಿ ಚುನಾವಣೆಯಲ್ಲಿ ಭಾಗಿಯಾಗಿ ಮತದಾನ ಮಾಡಬೇಕು. 2011 ರ ಜನವರಿ 25 ರಿಂದ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಆಚರಣೆ ಮಾಡಲಾಗುತ್ತಿದೆ. ಈ ದಿನದ ಉದ್ದೇಶ ಮತದಾನ ಬಗ್ಗೆ ತಿಳುವಳಿಕೆ, ಜಾಗೃತಿ ನೀಡುವುದು ಎಂದರು.

ಇನ್ನು ಈ ಬಾರಿ ಯುವ ಮತದಾರರ ಸಂಖ್ಯೆಯನ್ನು ಹೆಚ್ಚಿಸಲು ಜಿಲ್ಲೆಯ ವಿವಿಧ ಕಾಲೇಜುಗಳಿಗೆ ಭೇಟಿ ನೀಡಿ ಮತದಾರರ ನೋಂದಣಿಗೆ ಮನವಿ ಮಾಡುವ ಕೆಲಸವಾಗಿದೆ. ಯುವ ಮತದಾರರ ನೋಂದಾಯಿಸಲು ಗ್ರಾಮಪಂಚಾಯಿತಿ, ತಾಲೂಕು ಪಂಚಾಯಿತಿ ಮಟ್ಟದಲ್ಲಿ ಸಾಕಷ್ಟು ಕಾರ್ಯಕ್ರಮ ಮಾಡಲಾಗಿದೆ. ಜಿಲ್ಲೆಯಲ್ಲಿ ಸ್ವೀಪ್ ಚಟುವಟಿಕೆಗಳು ಯಶಸ್ವಿಯಾಗಿ ನಡೆದಿದೆ.

ಮತದಾನವನ್ನು ನಿರ್ಭಿತಿಯಿಂದ ಯಾವುದೇ ಆಮಿಷಕ್ಕೆ ಒಳಗಾಗದೆ ಮತ ಚಲಾವಣೆ ಮಾಡಬೇಕು. ಶತಾಯುಷಿಗಳು ಕೂಡ ಮತದಾನ ಮಾಡುವ ಉದಾಹರಣೆ ಇದೆ. ಇದರಿಂದ ಯುವಕರು ಸಹ ಉತ್ಸುಕರಾಗಿ ಮತದಾನದ ಕಾರ್ಯದಲ್ಲಿ ತೊಡಗಿಕೊಳ್ಳಬೇಕು. ಕಾರ್ಯಕ್ರಮದ ಯಶಸ್ವಿಗಾಗಿ ಎಲ್ಲ ಅಧಿಕಾರಿಗಳು ಸಾಕಷ್ಟು ಶ್ರಮ ವಹಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಹೇಳಿದರು.

ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ಎನ್.ಅನುರಾಧ, ಮಾತನಾಡಿ ಎಲ್ಲ ಪ್ರಜೆಗಳಿಗೆ ಮತದಾನ ಹಕ್ಕು ಮಾತ್ರವಲ್ಲ, ಅದು ಜವಾಬ್ದಾರಿ. ಜಿಲ್ಲೆಯಲ್ಲಿನ ಎಲ್ಲಾ ಪ್ರಜೆಗಳು ಕೂಡ ಮತದಾರರಾಗಿ ನೊಂದಣಿ ಮಾಡಬೇಕು. ಮತದಾನ ಮಾಡಬೇಕು. ಈ ವರ್ಷ 14ನೇ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಪ್ರತಿಯೊಂದು ಬಾರಿ ಒಂದೊಂದು ಧ್ಯೇಯ ವಾಕ್ಯದೊಂದಿಗೆ ಕಾರ್ಯಕ್ರಮ ಆಚರಿಸಲಾಗುತ್ತದೆ. ಈ ಬಾರಿ ಮತದಾನಕ್ಕಿಂತ ಇನ್ನೊಂದಿಲ್ಲ, ನಾನು ಖಚಿತವಾಗಿ ಮತದಾನ ಮಾಡುತ್ತೇನೆ ಎಂಬ ಧ್ಯೇಯ ವಾಕ್ಯ ನೀಡಲಾಗಿದೆ ಎಂದರು.

ಸ್ವೀಪ್ ಚಟುವಟಿಕೆಗಳ ಮೂಲಕ ಜಾಗೃತಿ ಮೂಡಿಸಿ ಜಿಲ್ಲೆಯಲ್ಲಿ 2019 ಲೋಕಸಭಾ ಚುನಾವಣೆಯಲ್ಲಿ ಶೇ.82 ರಷ್ಟು ಮತದಾನವಾಗಿತ್ತು. ಚುನಾವಣೆ ನಂತರ ಹೆಚ್ಚಿನ ಜಾಗೃತಿ ಮೂಲಕ ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಮತದಾನದ ಪ್ರಮಾಣವು ಶೇ.85 ರಷ್ಟು ಏರಿಕೆಯಾಗಿದೆ. ಈ ಬಾರಿ ಪ್ರಮಾಣ ಮತ್ತಷ್ಟು ಹೆಚ್ಚಿಸಲು ಪ್ರಯತ್ನಿಸಲಾಗುತ್ತಿದೆ ಎಂದರು.

ಜಿಲ್ಲೆಯ ಸ್ವೀಪ್ ಕಾರ್ಯಕ್ರಮದಲ್ಲಿ ಗ್ರಾಮಪಂಚಾಯಿತಿ, ತಾಲೂಕು ಪಂಚಾಯಿತಿ ಅಧಿಕಾರಿಗಳು ಕೆಲಸ ಮಾಡಿದ್ದಾರೆ. ನಗರದಲ್ಲಿ ಮತದಾನಕ್ಕೆ ಆಸಕ್ತಿ ಕಡಿಮೆ ಇದ್ದು ಬೇರೆ ಬೇರೆ ಕಾರ್ಯಕ್ರಮದ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ. ಜಿಲ್ಲೆಯಲ್ಲಿ ಸ್ವೀಪ್ ಕೆಲಸಗಳನ್ನು ಮುಂದುವರಸಲಾಗುತ್ತದೆ. ಎಲ್ಲರೂ ಶೇ.100 ರಷ್ಟು ನೋಂದಾಯಿಸಲು ಹಾಗೂ ಮತದಾನ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಹೊಸದಾಗಿ ನೋಂದಣಿಯಾದ ಯುವ ಮತದಾರರಿಗೆ ಗುರುತಿನ ಚೀಟಿ ವಿತರಿಸಲಾಯಿತು. ಮತದಾನದ ಜಾಗೃತಿ ಬಗ್ಗೆ ನಡೆಸಲಾದ ಕಿರುಚಿತ್ರ, ಪ್ರಬಂಧ, ರಸಪ್ರಶ್ನೆ ಸೇರಿದಂತೆ ಸಾಕಷ್ಟು ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು.

ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್, ಮುಖ್ಯ ಯೋಜನಾಧಿಕಾರಿ ರಾಮಕೃಷ್ಣಯ್ಯ, ಜಿಲ್ಲಾ ಪಂಚಾಯತಿ ಮುಖ್ಯ ಲೆಕ್ಕಾಧಿಕಾರಿ ಶ್ರೀನಿವಾಸ್, ಯೋಜನಾ ನಿರ್ದೇಶಕರಾದ ವಿಠಲ್ ಕಾವಳೆ, ಶಾಲ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಕೃಷ್ಣಮೂರ್ತಿ ಸೇರಿದಂತೆ ಜಿಲ್ಲಾ ಮಟ್ಟದ ಅಕಾರಿಗಳು, ವಿವಿಧ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರು, ವಿದ್ಯಾರ್ಥಿಗಳು ಇದ್ದರು.

Leave a Reply

error: Content is protected !!
LATEST
KSRTC : ಗಣಪತಿ ಪ್ರತಿಷ್ಠಾಪಿಸಿದ್ದರಿಂದ ಡಿಪೋ ಮುಂದೆ ಚಾಲಕ ರವಿ ಪಾರ್ಥಿವ ಶರೀರ ಇಡಲಾತ್ತು, ಪ್ರಮಾದವಾಗಿಲ್ಲ- ಡಿಎಂ ಸಮ... 10 ವರ್ಷದ ಆಧಾರ್‌ ನವೀಕರಣಕ್ಕೆ ಡೆಡ್‌ಲೈನ್‌ ಫಿಕ್ಸ್‌: ನಾಳೆ ಅಂತಿಮ ಗಡುವು- ಬಳಿಕ ದಂಡ ನಾಗಮಂಗಲ ಕೋಮುಗಲಭೆ ಪ್ರಕರಣ: ಇನ್ಸ್‌ಪೆಕ್ಟರ್ ಅಶೋಕ್ ಕುಮಾರ್ ಅಮಾನತು KSRTC ಸಿಬ್ಬಂದಿಯಿಂದಲೇ ಡಿಸಿಗೆ ಇರಿಯಲು ಯತ್ನ- ಕೈ ಅಡ್ಡಹಾಕಿ ಪ್ರಾಣಾಪಾಯದಿಂದ ಪಾರಾದ ಜಗದೀಶ್ ಕುಮಾರ್‌ "ARM" ಸಿನಿಮಾ ಇಂದು ಪ್ರಪಂಚದಾದ್ಯಂತ ಐದು ಭಾಷೆಗಳಲ್ಲಿ ಬಿಡುಗಡೆ ಸೆ.14ರಂದು ಸಾರಿಗೆ ಸಿಬ್ಬಂದಿಗಳಿಗೆ ಔಷಧೀಯ ಸಸ್ಯಗಳ  ಉಚಿತ ವಿತರಣೆ: ಅಧಿಕಾರಿಗಳು ಭಾಗಿ ಟೊವಿನೋ ಥಾಮಸ್ ಸಿನಿಮಾ ವಿತರಿಸಲಿದೆ ಹೊಂಬಾಳೆ ಫಿಲ್ಮ್! ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ ಬಂಧನ ಅವಧಿ ಮತ್ತೆ ಒಂದು ದಿನ ವಿಸ್ತರಣೆ KSRTC ಚಿಕ್ಕಮಗಳೂರು: ಘಟಕದ ಗೇಟ್‌ ಬಳಿ ತ್ಯಾಜ್ಯಗಳ ನಡುವೆ ಚಾಲಕನ ಪಾರ್ಥಿವ ಶರೀರವಿಟ್ಟು ಅಂತಿಮ ದರ್ಶನಕ್ಕೆ ವ್ಯವಸ್ಥೆ-... ವಾಲ್ಮೀಕಿ ಹಗರಣ: ಬಳ್ಳಾರಿಯಿಂದ ಬಿಜೆಪಿ ಪಾದಯಾತ್ರೆ - ಛಲವಾದಿ ನಾರಾಯಣಸ್ವಾಮಿ