
ಬೆಂಗಳೂರು: ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ಅವರ ಜಯಂತಿಯನ್ನು ಏ.14 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸರಳವಾಗಿ, ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಪ್ರೇಮ ತಿಳಿಸಿದ್ದಾರೆ.
ಇನ್ನು ಜಿಲ್ಲೆಯ ಎಲ್ಲ ದಲಿತ ಸಂಘಟನೆಗಳು, ಜನಪರ ಸಂಘಟನೆಗಳು, ಕನ್ನಡ ಪರ ಸಂಘಟನೆಗಳು, ಜನಪ್ರತಿನಿಧಿಗಳು, ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಕೋರಿದ್ದಾರೆ.