CrimeNEWSನಮ್ಮರಾಜ್ಯರಾಜಕೀಯ

ಸಿಎಂ ಸೇರಿದಂತೆ ಎಲ್ಲರೂ ಭ್ರಷ್ಟರೇ : ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ನೇರ ಆರೋಪ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಈ ಸರ್ಕಾರದಲ್ಲಿ ರಾಜ್ಯದ ಮುಖ್ಯಮಂತ್ರಿ, ಸಚಿವರು, ಶಾಸಕರು ಸೇರಿದಂತೆ ಎಲ್ಲರೂ ಭ್ರಷ್ಟರಾಗಿದ್ದಾರೆ ಎಂದು ನೇರ ಆರೋಪ ಮಾಡಿರುವ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಇನ್ನು 15 ದಿನದಲ್ಲಿ ಗುತ್ತಿಗೆದಾರರಿಂದ ಕಮಿಷನ್ ಬೇಡಿಕೆ ಕುರಿತು ಮತ್ತೊಮ್ಮೆ ಪ್ರಧಾನಿ ಮೋದಿಗೆ ಪತ್ರ ಬರೆಯುತ್ತೇವೆ ಎಂದು  ಹೇಳಿದ್ದಾರೆ.

ಬುಧವಾರ ನಗರದ ಕುಮಾರ ಪಾರ್ಕ್‍ನಲ್ಲಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ತಮ್ಮ ನೇತೃತ್ವದ ಗುತ್ತಿಗೆದಾರರ ಸಂಘದ ನಿಯೋಗ ಭೇಟಿ ಮಾಡಿದ ಬಳಿಕ ಮಾತನಾಡಿದರು. ಈ ಸರ್ಕಾರ ಮೂರು ವರ್ಷಗಳಿಂದ ಗುತ್ತಿಗೆದಾರರಿಗೆ ಕೊಡಬೇಖಿರುವ 22 ಸಾವಿರ ಕೋಟಿ ರೂ.ಬಾಕಿ ಉಳಿಸಿಕೊಂಡಿದೆ ಎಂದು ಕಿಡಿಕಾರಿದರು.

ಸಿದ್ದರಾಮಯ್ಯ ವಿಧಾನ ಮಂಡಲ ಅಧಿವೇಶನದಲ್ಲಿ ಬಿಜೆಪಿ ಸರ್ಕಾರದ ಶೇ.40ರಷ್ಟು ಕಮಿಷನ್ ವಿಚಾರ ಪ್ರಸ್ತಾಪ ಮಾಡುವುದಾಗಿ ಹೇಳಿದ್ದಾರೆ. ಕಮಿಷನ್ ಸಂಗ್ರಹಿಸುವುದಿಲ್ಲ ಎಂದು ಹೇಳುತ್ತಾರೆ. ಆದರೆ, ಈ ಕುರಿತು ನಮ್ಮ ಬಳಿ ದಾಖಲೆಗಳಿವೆ ಎಂದು ಹೇಳಿದರು.

ಭ್ರಷ್ಟಾಚಾರದಲ್ಲಿ ಮಂತ್ರಿ, ಶಾಸಕರು ನಂಬರ್ 1 ಸ್ಥಾನದಲ್ಲಿದ್ದಾರೆ. ಇದಕ್ಕೆ ಸಿಎಂ ಅವರು ಹೊರತಾಗಿಲ್ಲ. ಕೆಲವು ಕಡೆ ಶೇ.100ರಷ್ಟು ಭ್ರಷ್ಟಾಚಾರವಿದೆ. ಒಂದು ನಯಾಪೈಸೆ ಕೆಲಸ ಮಾಡದೇ ಶೇ.100ರಷ್ಟು ಹಣವನ್ನು ತಿಂದಿದ್ದಾರೆ. ಇನ್ನು ಎಲ್ಲ ಶಾಸಕರು ಶೇ.10ರಿಂದ 15ರಷ್ಟು ಕಮಿಷನ್ ಕೇಳುತ್ತಾರೆ. ಇಡೀ ವ್ಯವಸ್ಥೆಯೇ ಭ್ರಷ್ಟವಾಗಿದೆ. ಒಬ್ಬರಿಗೆ ಅಂತ ರ‍್ಯಾಂಕಿಂಗ್ ಕೊಡಲು ಆಗುವುದಿಲ್ಲಎಂದು ಆರೋಪಿಸಿದರು.

ಇನ್ನು ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಅವರು ಕಲೆಕ್ಷನ್ ಮಾಡಿಕೊಡಲು ಹೇಳಿದ್ದಾರೆ. ನಮಗೆ ಈಗ ಬಂದಿರುವ ವರದಿ ಪ್ರಕಾರ ಕಮಿಷನ್ ಕೇಳಿದ್ದಾರೆ. ಪರೋಕ್ಷವಾಗಿ ಸಚಿವರಿಂದ ಬೆದರಿಕೆ ಇದೆ ಎಂದು ಆತಂಕ ವ್ಯಕ್ತಪಡಿಸಿದರು.

ಜಿಲ್ಲಾ ಉಸ್ತುವಾರಿ ಸಚಿವರೇ ಹಣ ಸಂಗ್ರಹ ಮಾಡುತ್ತಿದ್ದಾರೆ. 3 ವರ್ಷದಿಂದ ಬಾಕಿ ಪಾವತಿಯಾಗಿಲ್ಲ. ರಾಜರಾಜೇಶ್ವರಿ ನಗರದಲ್ಲಿ 10 ಸಾವಿರ ಕೋಟಿ ರೂ.ಗಳಷ್ಟು ಕೆಲಸ ಮಾಡಿಸಿದ್ದಾರೆ. ಆದರೆ, ಏನು ಅಭಿವೃದ್ಧಿ ಆಗಿದೆ ಎಂದು ಕೆಂಪಣ್ಣ ಕೇಳಿದರು.

ಇತ್ತ ಕಮಿಷನ್ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರ ನ್ಯಾಯಾಂಗ ತನಿಖೆ ಮಾಡಿದರೆ, ಸೂಕ್ತ ದಾಖಲೆಗಳನ್ನು ನಾವು ಒದಗಿಸುತ್ತೇನೆ. ಇಲ್ಲವಾದರೆ ನಮ್ಮ ಆರೋಪ ಸುಳ್ಳೆಂದು ಸಾಬೀತು ಮಾಡಿದರೆ ಏನು ಬೇಕಾದರೂ ಶಿಕ್ಷೆ ಕೊಡಿ, ಅನುಭವಿಸಲು ನಾವು ಸಿದ್ಧ ಎಂದು ಸಿಎಂಗೆ ಸವಾಲ್‌ ಎಸೆದರು.

ಕಮಿಷನ್‌ ವಿರುದ್ಧದ ನಮ್ಮ ಹೋರಾಟ ಮುಂದುವರಿಯಲಿದೆ. ಅಧಿಕಾರಿಗಳು ಸಿಎಂ ಮಾತನ್ನು ಕೇಳದ ಸ್ಥಿತಿಯಿದೆ. ಟೆಂಡರ್ ಕರೆಯುವ ಪ್ರಕ್ರಿಯೆ ಬದಲಾಯಿಸಲು ಸಿಎಂ ಹೇಳಿದ್ದರು. ಆದರೆ, ಅಧಿಕಾರಿಗಳು ಸಿಎಂ ಮಾತೇ ಕೇಳುತ್ತಿಲ್ಲ ಎಂದು ಆರೋಪಿಸಿದರು.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು