ಬೆಂಗಳೂರು: ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಸ್.ಎಂ.ಕೃಷ್ಣ (92) ಅವರು ನಿಧನರಾಗಿದ್ದಾರೆ. ಎಸ್ಎಂ ಕೃಷ್ಣ ಅವರ ನಿಧನ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಇಂದಿನಿಂದ ಮೂರು ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಿದೆ.
ಇದೇ ವೇಳೆ ಬುಧವಾರ ಡಿ.11ರಂದು ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಸರ್ಕಾರಿ ಮತ್ತು ಖಾಸಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇದರ ಜತೆಗೆ ಡಿಸೆಂಬರ್ 10 ರಿಂದ ಡಿಸೆಂಬರ್ 12ರವರೆಗೆ ಶೋಕಾಚರಣೆಗೆ ಘೋಷಣೆ ಮಾಡಲಾಗಿದೆ. ಈ ಮೂರು ದಿನಗಳ ಕಾಲ ರಾಜ್ಯ ಸರ್ಕಾರದ ಎಲ್ಲ ಕಟ್ಟಡಗಳ ಮೇಲೆ ರಾಷ್ಟ್ರಧ್ವಜ ಅರ್ಧಕ್ಕೆ ಹಾರಿಸಿ ಅಗಲಿದ ಹಿರಿಯ ಚೇತನಕ್ಕೆ ಶ್ರದ್ಧಾಂಜಲಿ ಸಲ್ಲಿಸಲಾಗುವುದು ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.
ಕೃಷ್ಣ ಅವರ ಅಂತ್ಯಕ್ರಿಯೆ ಅವರ ತವರು ಮದ್ದೂರಿನ ಸೋಮನಹಳ್ಳಿಯಲ್ಲಿ ಬುಧವಾರ ಸಂಜೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಲಾಗುವುದು. ಕೃಷ್ಣಗೆ ಇಷ್ಟವಾದ ಜಾಗದಲ್ಲಿಯೇ, ಅಂದರೆ ಕಾಫಿಡೇ ಆವರಣದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ಕರ್ನಾಟಕ ಮುತ್ಸದ್ದಿ ರಾಜಕಾರಣಿ, ಮಾಜಿ ವಿದೇಶಾಂಗ ಸಚಿವ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಇಂದು ನಸುಕಿನ ಜಾವ 2:30ರ ಸುಮಾರಿಗೆ ನಿಧನರಾದರು. ಅವರಿಗೆ 92 ವರ್ಷ ವಯಸ್ಸಾಗಿತ್ತು.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಮೊದಲು ವೈದೇಹಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಬಳಿಕ ಶ್ವಾಸಕೋಶದ ಸೋಂಕು ಕಾಣಿಸಿಕೊಂಡ ಹಿನ್ನೆಲೆ ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿತ್ತು. ಡಾ. ಸತ್ಯನಾರಾಯಣ ಮೈಸೂರು, ಡಾ. ಸುನೀಲ್ ಕಾರಂತ್ ನೇತೃತ್ವದ ವೈದ್ಯರ ತಂಡ ಚಿಕಿತ್ಸೆ ನೀಡಿತ್ತು. ಶ್ವಾಸಕೋಶದ ಸೋಂಕಿನ ಕಾರಣಕ್ಕೆ ಕೃಷ್ಣ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಐಸಿಯುಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿತ್ತು.
ಕರ್ನಾಟಕದ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿ ಎಂಬ ಗ್ರಾಮದಲ್ಲಿ 1932 ರ ಮೇ 1ರಂದು ಒಕ್ಕಲಿಗ ಕುಟುಂಬದಲ್ಲಿ ಜನಿಸಿದ ಕೃಷ್ಣ ಪೂರ್ತಿ ಹೆಸರು ಸೋಮನಹಳ್ಳಿ ಮಲ್ಲಯ್ಯ ಕೃಷ್ಣ. ಹುಟ್ಟೂರಿನಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿದ ಅವರು, ಮೈಸೂರಿನ ಶ್ರೀ ರಾಮಕೃಷ್ಣ ವಿದ್ಯಾಶಾಲೆಯಲ್ಲಿ ಪ್ರೌಢ ಶಿಕ್ಷಣ, ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ತಮ್ಮ ಬ್ಯಾಚುಲರ್ ಆಫ್ ಆರ್ಟ್ಸ್, ಯೂನಿವರ್ಸಿಟಿ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ಪಡೆದಿದ್ದರು.
ಬಳಿಕ ಅಮೆರಿಕದ ಟೆಕ್ಸಾಸ್‌ನ ಡಲ್ಲಾಸ್‌ನಲ್ಲಿರುವ ಸದರ್ನ್ ಮೆಥೋಡಿಸ್ಟ್ ವಿಶ್ವವಿದ್ಯಾಲಯ ಮತ್ತು ವಾಷಿಂಗ್ಟನ್ ಡಿಸಿಯ ಜಾರ್ಜ್ ವಾಷಿಂಗ್ಟನ್ ವಿಶ್ವವಿದ್ಯಾಲಯದ ಲಾ ಸ್ಕೂಲ್ನಿಂದಲೂ ಪದವಿ ಪಡೆದಿದ್ದರು.
ಸ್ವತಂತ್ರ ಅಭ್ಯರ್ಥಿಯಾಗಿ ರಾಜಕಾರಣಕ್ಕೆ ಎಂಟ್ರಿ: 1962 ರಲ್ಲಿ ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಮೂಲಕ ಗೆಲುವು ಸಾಧಿಸಿದ ಕೃಷ್ಣ ಆ ಮೂಲಕ ಚುನಾವಣಾ ರಾಜಕೀಯ ಜೀವನಕ್ಕೆ ಧುಮುಕಿದ್ದರು. ಆ ಬಳಿಕ ಅವರು ‘ಪ್ರಜಾ ಸೋಷಿಯಲಿಸ್ಟ್ ಪಕ್ಷ’ಕ್ಕೆ ಸೇರಿದ್ದರು. ಆದರೆ 1967 ರ ಚುನಾವಣೆಯಲ್ಲಿ ಮದ್ದೂರಿನಿಂದ ಕಾಂಗ್ರೆಸ್‌ನ ಎಂಎಂ ಗೌಡ ವಿರುದ್ಧ ಸೋಲನುಭವಿಸಿದ್ದರು.
1968 ರಲ್ಲಿ ಹಾಲಿ ಸಂಸದರು ನಿಧನರಾದಾಗ ಅವರು ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸುವ ಮೂಲಕ ರಾಷ್ಟ್ರ ರಾಜಕೀಯಕ್ಕೆ ಅಡಿಯಿಟ್ಟರು. 1968 ರ ಉಪಚುನಾವಣೆಯ ನಂತರ ಮಂಡ್ಯ ಕ್ಷೇತ್ರದಿಂದ ಮೂರು ಬಾರಿ ಸಂಸದರಾಗಿ ಆಯ್ಕೆಯಾಗಿ ಕಾರ್ಯನಿರ್ವಹಿಸಿದರು. 1971 ಮತ್ತು 1980 ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಚುನಾವಣೆಗಳನ್ನು ಗೆದ್ದಿದ್ದರು. ಆಗ ಮಂಡ್ಯವನ್ನು ಕಾಂಗ್ರೆಸ್ ಭದ್ರಕೋಟೆಯಾಗಿ ಉಳಿಸುವಲ್ಲಿ ಎಸ್ಎಂ ಕೃಷ್ಣ ಪಾತ್ರ ಪ್ರಮುಖವಾದದ್ದಾಗಿತ್ತು.
ಪಾಂಚಜನ್ಯ ಯಾತ್ರೆಯಿಂದ ಮುಖ್ಯಮಂತ್ರಿ ಹುದ್ದೆಯತ್ತ: 1999 ರಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿದ್ದ ಅವರು ಅದೇ ವರ್ಷ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲುವಿನತ್ತ ಮುನ್ನಡೆಸಿದರು. ಆ ಸಂದರ್ಭದಲ್ಲಿ ಎಸ್ಎಂ ಕೃಷ್ಣ ನಡೆಸಿದ್ದ ಪಾಂಚಜನ್ಯ ಯಾತ್ರೆ ಕರ್ನಾಟಕ ರಾಜಕಾರಣದಲ್ಲಿ ಕಾಂಗ್ರೆಸ್ಗೆ ಶಕ್ತಿ ತುಂಬಿತ್ತು.
2004 ರ ಡಿಸೆಂಬರ್ನಲ್ಲಿ ಮಹಾರಾಷ್ಟ್ರದ ರಾಜ್ಯಪಾಲರಾಗಿ ನೇಮಕಗೊಂಡ ಕೃಷ್ಣ 2008 ರ ಮಾರ್ಚ್ 5 ರಂದು ಮಹಾರಾಷ್ಟ್ರದ ರಾಜ್ಯಪಾಲ ಹುದ್ದೆಗೆ ರಾಜೀನಾಮೆ ನೀಡಿದರು. ನಂತರ ರಾಜ್ಯಸಭೆಗೆ ಆಯ್ಕೆಯಾದ ಅವರು 2009 ರ ಮೇ 22ರಂದು ಅಂದಿನ ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ಅವರ ಸಂಪುಟದಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವರಾದರು.
ಇಳಿವಯಸ್ಸಿನಲ್ಲಿ ಬಿಜೆಪಿ ಸೇರ್ಪಡೆ: ರಾಜಕೀಯ ಜೀವನದುದ್ದಕ್ಕೂ ಕಾಂಗ್ರೆಸ್ನಲ್ಲೇ ಪ್ರಬಲ ನಾಯಕರಾಗಿದ್ದ ಎಸ್ಎಂ ಕೃಷ್ಣ, ರಾಜಕೀಯ ಜೀವನದ ಕೊನೆಗಾಲದಲ್ಲಿ, 2017 ರ ಜನವರಿ 29 ರಂದು ಕಾಂಗ್ರೆಸ್ ದಸ್ಯತ್ವಕ್ಕೆ ರಾಜೀನಾಮೆ ನೀಡಿದರು. 2017 ರ ಮಾರ್ಚ್ನಲ್ಲಿ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾದರು.
ವಯೋಸಹಜ ಅನಾರೋಗ್ಯ ಮತ್ತು ಇತರ ಕಾರಣಗಳಿಂದಾಗಿ 2023 ರ ಜನವರಿ 7 ರಂದು ರಾಜಕೀಯದಿಂದ ನಿವೃತ್ತಿ ಘೋಷಣೆ ಮಾಡಿದರು. ಪ್ರೇಮಾ ಅವರನ್ನು ವಿವಾಹವಾಗಿದ್ದ ಎಸ್ಎಂ ಕೃಷ್ಣಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ.
ಕೃಷ್ಣ ಅವರ ಜೀವನಚರಿತ್ರೆ ‘ಸ್ಮೃತಿ ವಾಹಿನಿ’ 2019ರ ಡಿಸೆಂಬರ್ನಲ್ಲಿ ಲೋಕಾರ್ಪಣೆಗೊಂಡಿತು. ಕನ್ನಡದ ಮೇರು ನಟ ಡಾ. ರಾಜ್ಕುಮಾರ್ ಅವರನ್ನು ಕಾಡುಗಳ್ಳ ವೀರಪ್ಪನ್ ಅಪಹರಿಸಿದ್ದು (ಎಸ್ಎಂ ಕೃಷ್ಣ ಮುಖ್ಯಮಂತ್ರಿಯಾಗಿದ್ದಾಗ), ಜೆಡಿಎಸ್ ವರಿಷ್ಠ ಹೆಚ್ಡಿ ದೇವೇಗೌಡರು ಕಾಂಗ್ರೆಸ್ ಸೇರಲು ಮುಂದಾಗಿದ್ದರು ಎಂಬುದೂ ಸೇರಿದಂತೆ ಅನೇಕ ಸ್ವಾರಸ್ಯಕರ ಘಟನೆಗಳನ್ನು ‘ಸ್ಮೃತಿ ವಾಹಿನಿ’ಯಲ್ಲಿ ಅವರು ಉಲ್ಲೇಖಿಸಿದ್ದಾರೆ.
Related
You Might Also Like
ಹಾವೇರಿ: ಸರ್ಕಾರಿ ಬಸ್ ಹತ್ತಲು ಹೋದ ವೃದ್ಧೆ ಕಾಲುಗಳ ಮೇಲೆ ಹಿಂಬದಿ ಚಕ್ರ ಹರಿದು ಕಾಲುಗಳು ಕಟ್
ಹಾವೇರಿ: ಚೆಲಿಸುತ್ತಿದ್ದ ಬಸ್ ಹತ್ತಲು ಹೋಗಿ ವೃದ್ಧೆಯೊಬ್ಬರು ಕೆಳಗೆ ಬಿದ್ದ ಪರಿಣಾಮ ಬಸ್ಸಿನ ಹಿಂಬದಿ ಚಕ್ರ ಹರಿದು ಎರಡು ಕಾಲುಗಳು ತುಂಡಾಗಿರುವ ಘಟನೆ ನಗರದ ಕೇಂದ್ರ ನಿಲ್ದಾಣದಲ್ಲಿ...
KSRTC ಮಡಿಕೇರಿ: ಸಹೋದ್ಯೋಗಿ ಕಂಡಕ್ಟರ್ ಕೊಲ್ಲುವ ಬೆದರಿಕೆ ಹಾಕಿ ಗಾಳಿಯಲ್ಲಿ ಗುಂಡ್ಹಾರಿಸಿದ ಡ್ರೈವರ್ ಬಂಧನ
ಮಡಿಕೇರಿ: ನಿತ್ಯ ತಾನು ಬಸ್ ಚಲಾಯಿಸುತ್ತಿದ್ದ ಮಾರ್ಗವನ್ನು ಬದಲಾಯಿಸಿ ಬೇರೆ ಮಾರ್ಗಕ್ಕೆ ಕರ್ತವ್ಯಕ್ಕೆ ನಿಯೋಜಿಸಿದ್ದಕ್ಕೆ ಸಹೋದ್ಯೋಗಿ ನಿರ್ವಾಹಕನೆ ಕಾರಣ ಕಾರಣ ಎಂದು ನಿರ್ವಾಹಕನ ಮೇಲೆ ಮುಗಿಬಿದ್ದು ಸಾರ್ವಜನಿಕ...
KKRTC ರಾಯಚೂರು: ಲಿಂಗಸುಗೂರು ಘಟಕ ವ್ಯವಸ್ಥಾಪಕ, ಡಿಸಿ ಅಮಾನತಿಗೆ ಕರವೇ ಆಗ್ರಹ
ಲಿಂಗಸಗೂರು: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ರಾಯಚೂರು ವಿಭಾಗದ ಲಿಂಗಸುಗೂರು ಘಟಕದಲ್ಲಿ ಚಾಲಕ ಹಾಗೂ ನಿರ್ವಾಹಕರಿಗೆ ಘಟಕ ವ್ಯವಸ್ಥಾಪಕರು ದಿನನಿತ್ಯ ಒಂದಿಲೊಂದು ರೀತಿಯಲ್ಲಿ ಕಿರುಕುಳು ನೀಡುತ್ತಿದ್ದು...
ಮೈಸೂರು: ಸಾಲದ ಸುಳಿಗೆ ಸಿಲುಕಿದ KSRTC ಕಂಡಕ್ಟರ್: ನಾಲೆಗೆ ಹಾರಿ ಆತ್ಮಹತ್ಯೆ
ಮೈಸೂರು: ಸಾಲದ ಸುಳಿಯಲ್ಲಿ ಸಿಲುಕಿ ಅದನ್ನು ತೀರಿಸಲಾಗದೆ ಮನಸ್ಸಿನಲ್ಲಿ ಭಾರಿ ನೋವು ಅನುಭವಿಸುತ್ತಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮೈಸೂರು ವಿಭಾಗದ ನಿರ್ವಾಹಕರೊಬ್ಬರು ನದಿಗೆ ಹಾರಿ...
ಎಸ್.ಎಂ.ಕೃಷ್ಣ ಇನ್ನಿಲ್ಲ- ಪ್ರೇಮ ಕೃಷ್ಣಗೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮುಶೋಕ ಸಂದೇಶ
ಬೆಂಗಳೂರು: ಡಿಸೆಂಬರ್ 10ರ ಮಂಗಳವಾರ ನಸುಕಿನಲ್ಲಿ ನಿಧನರಾದ ಕರ್ನಾಟಕ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಪತ್ನಿ ಪ್ರೇಮ ಕೃಷ್ಣ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ...
ಮಾಜಿ ಸಿಎಂ ಎಸ್.ಎಂ.ಕೃಷ್ಣ ನಿಧನಕ್ಕೆ ಸಿಎಂ, ಮಾಜಿ ಸಿಎಂಗಳು ಸೇರಿ ಅನೇಕ ಗಣ್ಯರ ಸಂತಾಪ
ಬೆಂಗಳೂರು: ಕರ್ನಾಟಕ ಕಂಡ ಧೀಮಂತ ರಾಜಕಾರಣಿ, ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ ಎಸ್.ಎಂ. ಕೃಷ್ಣ ಅವರು ನಿಧನರಾಗಿದ್ದಾರೆ. ಅವರ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ. ಮಾಜಿ...
ಅಕ್ರಮ ಪಡಿತರ ವಿರುದ್ಧ ವಿಶೇಷ ಕಾರ್ಯಾಚರಣೆ: ಆಹಾರ ಸಚಿವ ಮುನಿಯಪ್ಪ
ಬೆಳಗಾವಿ: ಅಕ್ರಮ ಪಡಿತರ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಸಾಬೀತಾದ ವ್ಯಕ್ತಿಗಳ ವಿರುದ್ಧ ಆರೋಪವೂ ಸಾಬೀತಾದಲ್ಲಿ ನ್ಯಾಯಾಲಯದ ಆದೇಶದಂತೆ ಕಾನೂನು ರೀತಿ ಕ್ರಮ ಜರುಗಿಸಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು...
KSRTC ನಿವೃತ್ತ ನೌಕರರಿಗೆ ಫ್ರೀ ಪಾಸ್ ಕೊಡಿ: ಹಣ ಕಟ್ಟಿದ ಮೇಲೆ ಪಾಸ್ ನೀಡುವುದು ಸಲ್ಲ
ಬೆಂಗಳೂರು: ರಾಜಕಾರಣಿಗಳಿಗೆ ಹಾಗೂ ಸ್ವತಂತ್ರ್ಯ ಹೋರಾಟಗಾರರು ಸೇರಿದಂತೆ ಹಲವಾರು ಜನರಿಗೆ ಈಗಲೂ ಸಹ ಸಾರಿಗೆ ಸಂಸ್ಥೆ ಫ್ರೀ ಪಾಸ್ಗಳನ್ನು ನೀಡಿದೆ. ಆದರೆ ಸಂಸ್ಥೆಯಲ್ಲಿ (30) ಮೂವತ್ತಕ್ಕೂ ಹೆಚ್ಚು...
BMTC- ಅನ್ಯ ಭಾಷೆ ಆಧಾರ್‌ಕಾರ್ಡ್ ವಿಳಾಸ ಕರ್ನಾಟಕದಾಗಿದ್ದಲ್ಲಿ ಮಾನ್ಯ ಮಾಡಿ: ಸಿಟಿಎಂ ಆದೇಶ
ಬೆಂಗಳೂರು: ಶಕ್ತಿ ಯೋಜನೆಯಡಿ ಅನ್ಯ ಭಾಷೆಯ ಆಧಾರ್ಕಾರ್ಡ್ನ ವಿಳಾಸವು ಕರ್ನಾಟಕದಾಗಿದ್ದಲ್ಲಿ ಮಾನ್ಯ ಮಾಡಬೇಕು ಎಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನೌಕರರಿಗೆ ಮುಖ್ಯ ಸಂಚಾರಿ ವ್ಯವಸ್ಥಾಪಕರು ಸೂಚನೆ...
ಜಾಲಪ್ಪ ಓದಿದ ಶಾಲೆಯಲ್ಲೇ ಕುಡಿಯುವ ನೀರಿಗೆ ಪರದಾಟ- ಕೇಳುವವರೆ ಇಲ್ಲ ಸರ್ಕಾರಿ ಶಾಲೆ ಮಕ್ಕಳ ಸಮಸ್ಯೆ
ತೂಬಗೆರೆ: ಸರ್ಕಾರಿ ಶಾಲೆ ಅಂದರೆ ಕೀಳಾಗಿ ನೋಡುವ ಮನೋಭವನೆ ಈ ಹಿಂದಿನಿಂದಲೂ ಇದೆ. ಅದೇರೀತಿ ಜಾಲಪ್ಪ ನವರಿಂದ ಹಿಡಿದು ಅನೇಕ ಘಟಾನುಘಟಿಗಳು, ಗಣ್ಯವ್ಯಕ್ತಿಗಳು ಕಲಿತ ಶಾಲೆ ಮೂಲಭೂತ...
ಗ್ರಾಪಂ ಮಟ್ಟದಲ್ಲೇ ಅರ್ಹರಿಗೆ ಬಿಪಿಎಲ್ ಪಡಿತರ ಕಾರ್ಡ್ ವಿತರಣೆ :ಆಹಾರ ಸಚಿವ ಮುನಿಯಪ್ಪ
ಬೆಳಗಾವಿ: ಗ್ರಾಮ ಪಂಚಾಯಿತಿ ಮಟ್ಟದಲ್ಲೇ ನಮ್ಮ ಅಧಿಕಾರಿಗಳು ಪರಿಪಕ್ವವಾದ ಅಂಕಿ ಅಂಶಗಳನ್ನು ಗುರುತಿಸಿ ನಂತರ ಅರ್ಹರಿಗೆ ಬಿಪಿಎಲ್ ಪಡಿತರ ಕಾರ್ಡ್ ವಿತರಿಸಲು ಕ್ರಮ ತೆಗೆದುಕೊಳ್ಳಲು ತಿಳಿಸಲಾಗಿದೆ ಎಂದು...
KSRTC ನಿವೃತ್ತ ನೌಕರರಿಗೆ ಸಿಹಿ ಸುದ್ದಿ- ಉಪಧನ, ಗಳಿಕೆ ರಜೆ ನಗದೀಕರಣ ಪಾವತಿಗೆ 224 ಕೋಟಿ ರೂ. ವಿಶೇಷ ಅನುದಾನ ಬಿಡುಗಡೆ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ಸಂಸ್ಥೆಗಳಿಗೆ 2020ರ ಜನವರಿ 1ರ ಪರಿಷ್ಕೃತ ವೇತನ ಶ್ರೇಣಿಯಲ್ಲಿ ಸೇವಾ ವಿಮುಕ್ತಿ ಹೊಂದಿದ ನೌಕರರ ಉಪಧನ ಹಾಗೂ ಗಳಿಕೆ...