NEWSನಮ್ಮಜಿಲ್ಲೆ

ಜಿಲ್ಲೆಯಲ್ಲಿ ಅತಿಯಾದ ಬಿಸಿ ಗಾಳಿ- ಬಿಸಿಲು: ಮುಂಜಾಗ್ರತ ಕ್ರಮ ವಹಿಸಲು ಜನರಿಗೆ ಡಿಸಿ ಲತಾ ಮನವಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು ಗ್ರಾಮಾಂತರ: ಹವಾಮಾನ ಇಲಾಖೆಯು ಜಿಲ್ಲೆಯಲ್ಲಿ ಪ್ರಸ್ತುತ ದಿನಗಳಲ್ಲಿ ಉಷ್ಣಾಂಶವು ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಗಿಂತ ಹೆಚ್ಚಾಗುವ ಬಗ್ಗೆ ವರದಿ ಮಾಡಿದ್ದು ಅತಿಯಾದ ಬಿಸಿಲು ಮತ್ತು ಬಿಸಿ ಗಾಳಿ ಉಂಟಾಗಬಹುದೆಂದು ಮುನ್ಸೂಚನೆ ನೀಡಿದ್ದು ಇದರಿಂದ ಜಿಲ್ಲೆಯ ಸಾರ್ವಜನಿಕರು ಬಿಸಿಲಿನ ಶಾಖದಿಂದ ತಪ್ಪಿಸಿಕೊಳ್ಳಲು ಈ ಕೆಳಕಂಡ ಕ್ರಮಗಳನ್ನು ಅನುಸರಿಸಬೇಕು ಎಂದು ಜಿಲ್ಲಾಧಿಕಾರಿ ಆರ್.ಲತಾ ತಿಳಿಸಿದ್ದಾರೆ.

ಬಿಸಿಲಿನ ಶಾಖದಿಂದ ತಪ್ಪಿಸಿಕೊಳ್ಳಲು ಏನು ಮಾಡಬೇಕು(Do’s)ಮತ್ತು ಏನು ಮಾಡಬಾರದು(Don’t)ಎಂಬ ವಿಷಯಗಳ ಕುರಿತು ಮುಂಜಾಗ್ರತ ಕ್ರಮ ವಹಿಸಬೇಕಾಗಿ ಕೋರಿದ್ದಾರೆ.

ಏನು ಮಾಡಬೇಕು(Do’s)?: 1) ಸಾರ್ವಜನಿಕರು ರೇಡಿಯೋ ಟಿವಿ ದಿನಪತ್ರಿಕೆಗಳಲ್ಲಿ ಬರುವ ಅತಿಯಾದ ಬಿಸಿಲಿನ ಮುನ್ಸೂಚನೆಗಳನ್ನು ಪಡೆದುಕೊಳ್ಳುವುದು. 2) ಬಾಯಾರಿಕೆ ಇಲ್ಲದಿದ್ದರೂ ಸಾಕಷ್ಟು ಮತ್ತು ಸಾಧ್ಯವಾದಷ್ಟು ಹೆಚ್ಚಾಗಿ ನೀರನ್ನು ಕುಡಿಯುವುದು. 3)ಹಗುರವಾದ ತಿಳಿ ಬಣ್ಣದ ತಡಿಲವಾದ ಮತ್ತು ರಂಧ್ರವುಳ್ಳ ಹತ್ತಿ ಬಟ್ಟೆಗಳನ್ನು ಧರಿಸುವುದು.

4) ಹೊರಗೆ ಹೋಗುವಾಗ ರಕ್ಷಣಾತ್ಮಕ ಕನ್ನಡಕಗಳು, ಟೋಪಿ, ಬೂಟು ಅಥವಾ ಚಪ್ಪಲಿಗಳನ್ನು ಬಳಸುವುದು. 5) ಬಸ್ಸಿನಲ್ಲಿ ದೂರದ ಪ್ರಯಾಣವನ್ನು ರಾತ್ರಿ ವೇಳೆ ಮಾಡುವುದು ಒಂದು ವೇಳೆ ಪ್ರಯಾಣ ಮಾಡುವ ಸಂದರ್ಭ ಬಂದಲ್ಲಿ ಕುಡಿಯುವ ನೀರನ್ನು ತೆಗೆದುಕೊಂಡು ಹೋಗುವುದು. 6) ಹೊರಗಡೆ ಕೆಲಸ ಮಾಡುತ್ತಿದ್ದವರು ಟೋಪಿ ಅಥವಾ ಛತ್ರಿಯನ್ನು ಬಳಸುವುದು ಮತ್ತು ತಲೆ ಕುತ್ತಿಗೆ, ಮುಖ ಮತ್ತು ಕೈಕಾಲುಗಳ ಮೇಲೆ ಒದ್ದೆಯಾದ ಬಟ್ಟೆಯನ್ನು ಬಳಸುವುದು.

7) ಓ. ಆರ್. ಎಸ್ ಮನೆಯಲ್ಲಿ ತಯಾರಿಸಿದ ಲಸ್ಸಿ ಶರಬತ್, ನಿಂಬೆ ನೀರು, ಮಜ್ಜಿಗೆಗಳನ್ನು ಬಳಸುವುದು. 8) ಮನೆಯನ್ನು ತಂಪಾಗಿಸಿಕೊಳ್ಳುವುದು, ಒದ್ದೆಯಾದ ಬಟ್ಟೆಗಳನ್ನು ಬಳಸುವುದು ಮತ್ತು ಆಗಾಗ್ಗೆ ತಣ್ಣೀರಿನಲ್ಲಿ ಸ್ನಾನ ಮಾಡುವುದು ಹಾಗೂ ತಂಪಾದ ಸಮಯದಲ್ಲಿ ಕೆಲಸ ಮಾಡುವುದು. 9) ಕೆಲಸ ನಿರ್ವಹಿಸುವ ಗರ್ಭಿಣಿ ಮಹಿಳೆಯರು ಮತ್ತು ಅನಾರೋಗ್ಯದಲ್ಲಿರುವ ಕಾರ್ಮಿಕರ ಕಡೆಗೆ ಹೆಚ್ಚಿನ ಗಮನ ವಹಿಸುವುದು.

ಏನು ಮಾಡಬಾರದು(Don’ts): 1) ಮಕ್ಕಳು ಸಾಕುಪ್ರಾಣಿಗಳನ್ನು ಬಿಸಿಲಿನಲ್ಲಿ ನಿಲ್ಲಿಸಬಾರದು, ವಾಹನಗಳ ಹತ್ತಿರ ಬಿಡಬೇಡಿ. ವಿಶೇಷವಾಗಿ ಮಧ್ಯಾಹ್ನ 12 ಗಂಟೆಯಿಂದ ಮಧ್ಯಾಹ್ನ 3:00 ಗಂಟೆಯ ನಡುವೆ ಬಿಸಿಲಿಗೆ ಹೋಗುವುದು ತಪ್ಪಿಸಿ. 2) ಕಪ್ಪು ಬಟ್ಟೆ ಅಥವಾ ಬಿಗಿಯಾದ ಬಟ್ಟೆಗಳನ್ನು ಧರಿಸುವುದನ್ನು ತಪ್ಪಿಸಿ.

3) ಹೊರಗಿನ ತಾಪಮಾನ ಹೆಚ್ಚಾದಾಗ ಶ್ರಮದಾಯಕ ಚಟುವಟಿಕೆಗಳನ್ನು ತಪ್ಪಿಸಿ, ಮಧ್ಯಾಹ್ನ 12 ರಿಂದ ಮಧ್ಯಾಹ್ನ 3 ರವರೆಗೆ ಕೆಲಸ ಮಾಡುವುದನ್ನು ತಪ್ಪಿಸಿ. 4) ಅಡುಗೆ ಪ್ರದೇಶವನ್ನು ಸಮರ್ಪಕವಾಗಿ ಗಾಳಿಯಾಡಲು ಬಾಗಿಲು ಮತ್ತು ಕಿಟಕಿಗಳನ್ನು ತೆರೆಯುವುದು.

5) ದೇಹವನ್ನು ನಿರ್ಜಲೀಕರಣ ಗೊಳಿಸುವ ಆಲ್ಕೋಹಾಲ್, ಚಹಾ, ಕಾಫಿ ಮತ್ತು ಹಾನಿಕಾರಕ ತಂಪು ಪಾನೀಯ, ಆಹಾರ ಹಾಗೂ ಹಳಸಿದ ಆಹಾರವನ್ನು ಸೇವಿಸಬಾರದು ಎಂದು ತಿಳಿಸಿದ್ದಾರೆ.

Leave a Reply

error: Content is protected !!
LATEST
ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ ಪೋಸ್ಟ್ ಆಫೀಸ್ ಸೇವೆಗಳು ಈಗ ಗ್ರಾಮ ಒನ್ ಕೇಂದ್ರಗಳಲ್ಲೂ ಲಭ್ಯ 5ವರ್ಷದೊಳಗಿನ ಮಕ್ಕಳಿಗೆ PCV ಲಸಿಕೆ ಹಾಕಿಸಿ: ಸುರಳ್ಕರ್ ವಿಕಾಸ್ ಕಿಶೋರ್ KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು?