CrimeNEWSನಮ್ಮರಾಜ್ಯ

ವಾಹನಗಳ ದಂಡದ 50% ವಿನಾಯಿತಿಯ ಕಾಲಮಿತಿ ಮೂರು ತಿಂಗಳು ವಿಸ್ತರಿಸಿ: ಸಿಎಂಗೆ ಜಗದೀಶ್‌ ವಿ.ಸದಂ ಪತ್ರ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಂಚಾರಿ ನಿಯಮ ಉಲ್ಲಂಘನೆಯ ದಂಡದ ಬಾಕಿ ಮೊತ್ತ ಪಾವತಿಯ ಶೇ. 50 ವಿನಾಯಿತಿಯ ಕಾಲಮಿತಿಯನ್ನು ಮೂರು ತಿಂಗಳು ವಿಸ್ತರಿಸಬೇಕೆಂದು ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್‌ ವಿ.ಸದಂ ಆಗ್ರಹಿಸಿದ್ದಾರೆ.

ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಪತ್ರ ಬರೆದ ಸದಂ ಅವರು, ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಶಿಫಾರಸಿನಂತೆ, ವಾಹನ ಸವಾರರು ಬಾಕಿ ಉಳಿಸಿಕೊಂಡಿರುವ ದಂಡವನ್ನು ಫೆಬ್ರವರಿ 11ರೊಳಗೆ ಪಾವತಿಸಿದಲ್ಲಿ ಶೇ. 50 ವಿನಾಯಿತಿ ನೀಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಹೀಗೆ ವಿನಾಯಿತಿ ನೀಡುವ ಮೂಲಕ ವಾಹನಸವಾರರಿಗೆ ನೆರವಾಗುವುದು ಸ್ವಾಗತಾರ್ಹ. ಆದರೆ ಅತ್ಯಲ್ಪ ಅವಧಿಯ ಕಾಲಮಿತಿ ನಿಗದಿಪಡಿಸುವ ಮೂಲ ಕೇವಲ ಶ್ರೀಮಂತ ವಾಹನ ಸವಾರರಿಗೆ ಮಾತ್ರ ನೆರವಾಗಲು ರಾಜ್ಯ ಸರ್ಕಾರ ಮುಂದಾಗಿರುವುದು ಖಂಡನೀಯ ಎಂದು ಹೇಳಿದ್ದಾರೆ.

ಕೇವಲ ಒಂದು ವಾರಗಳ ಸಮಯಾವಕಾಶ ನೀಡುವುದರಿಂದ ಬಡ ಮತ್ತು ಮಧ್ಯಮ ವರ್ಗದ ವಾಹನ ಸವಾರರಿಗೆ ಹಣ ಹೊಂದಿಸಲು ಕಷ್ಟವಾಗುತ್ತದೆ. ಅಲ್ಲದೇ, ಅನೇಕ ವಾಹನ ಸವಾರರು ತಮ್ಮ ಮಕ್ಕಳ ಶಾಲಾ ಶುಲ್ಕ ಪಾವತಿಸುವುದು ಸೇರಿದಂತೆ ನಾನಾ ರೀತಿಯ ಅಗತ್ಯ ಖರ್ಚುಗಳು ಈ ಸಮಯದಲ್ಲಿರುತ್ತದೆ. ವಿನಾಯಿತಿ ಯೋಜನೆಯನ್ನು ದಿಢೀರ್‌ ಘೋಷಿಸಿರುವುದರಿಂದ ಮೊದಲೇ ಹಣವನ್ನು ಕೂಡಿಟ್ಟುಕೊಳ್ಳಲೂ ವಾಹನ ಸವಾರರಿಗೆ ಅವಕಾಶ ಸಿಕ್ಕಿರುವುದಿಲ್ಲ.

ಆದ್ದರಿಂದ ಮುಖ್ಯಮಂತ್ರಿಯವರು ಈ ವಿನಾಯಿತಿ ಯೋಜನೆಯ ಕಾಲಮಿತಿಯನ್ನು ಮೂರು ತಿಂಗಳ ತನಕ ವಿಸ್ತರಿಸಬೇಕು. ಈ ಮೂಲಕ ಬಡ ಹಾಗೂ ಮಧ್ಯಮ ವರ್ಗದ ವಾಹನ ಸವಾರರಿಗೂ ವಿನಾಯಿತಿಯ ಲಾಭ ಸಿಗುವಂತೆ ಮಾಡಬೇಕು ಎಂದು ಜಗದೀಶ್‌ ವಿ. ಸದಂ ಆಗ್ರಹಿಸಿದ್ದಾರೆ.

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ