NEWSನಮ್ಮಜಿಲ್ಲೆಬೆಂಗಳೂರು

ಒಟಿಎಸ್ ಯೋಜನೆ ಮತ್ತೆ 15 ದಿವಸ ವಿಸ್ತರಿಸಿ: ಆಪ್ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಒತ್ತಾಯ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿನ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಮಾಲೀಕರಿಗೆ ಒಟಿಎಸ್ ವ್ಯವಸ್ಥೆಯಲ್ಲಿ ನೀಡಲಾಗಿದ್ದ ಸಮಯವನ್ನು ಮತ್ತೆ 15 ದಿವಸಗಳ ಕಾಲ ವಿಸ್ತರಣೆ ಮಾಡುವಂತೆ ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು  ಒತ್ತಾಯಿಸಿದ್ದಾರೆ.

ಈ ಬಗ್ಗೆ ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದು ಬಿಬಿಎಂಪಿ ವ್ಯಾಪ್ತಿಯಲ್ಲಿನ 2.87 ಲಕ್ಷ ಆಸ್ತಿಗಳಿಂದ 831 ಕೋಟಿ ತೆರಿಗೆ ಬಾಕಿ ಇದೆ . ಬೆಂಗಳೂರಿನ ನಾಗರಿಕರು ಆಸ್ತಿ ತೆರಿಗೆಯನ್ನು ಕಟ್ಟಲು ವಲಯಗಳನ್ನು ಘೋಷಿಸುವ ವಿಚಾರದಲ್ಲಿ ಸಾಕಷ್ಟು ಗೊಂದಲಗಳು ಇದೆ.

ಬಿಬಿಎಂಪಿ ಪುನರ್ ನಿಗದಿ ಮಾಡಿರುವ ಬೇಡಿಕೆ ಪತ್ರದಲ್ಲಿಯೂ ಸಾಕಷ್ಟು ಗೊಂದಲಗಳಿರುವ ಕಾರಣದಿಂದ ಆಸ್ತಿ ತೆರಿಗೆ ಕಟ್ಟಲು ನಾಗರಿಕರುಗಳಿಗೆ ಸಾಧ್ಯವಾಗುತ್ತಿಲ್ಲ. ಈ ಎಲ್ಲಾ ವಿಚಾರಗಳನ್ನು ಪರಿಗಣಿಸಿ ಮತ್ತೆ 15 ದಿವಸಗಳ ಕಾಲ ಓ ಟಿ ಎಸ್ ಯೋಜನೆಯನ್ನು ವಿಸ್ತರಣೆ ಮಾಡಬೇಕೆಂದು ಮುಖ್ಯಮಂತ್ರಿ ಚಂದ್ರು ತಮ್ಮ ಪತ್ರದಲ್ಲಿ ಒತ್ತಾಯಿಸಿದ್ದಾರೆ.

ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಮಾಲೀಕರುಗಳ ಜೊತೆ ಕಂದಾಯಾಧಿಕಾರಿಗಳು ಖುದ್ದಾಗಿ ಚರ್ಚಿಸಬೇಕು ಹಾಗೂ ಗೊಂದಲಗಳನ್ನು ಪರಿಹಾರ ಮಾಡಬೇಕು. ಬೆಂಗಳೂರಿನ ನಾಗರಿಕರು ತಮ್ಮ ಜೀವಿತಾವಧಿಯಲ್ಲಿ ಕಷ್ಟಪಟ್ಟು ಉಳಿಸಿದ ಹಣದಿಂದ ಕಟ್ಟಿರುವ ಆಸ್ತಿಗಳನ್ನು ಯಾವುದೇ ಕಾರಣಕ್ಕೂ ಅಟ್ಯಾಚ್ (ಋಣ ಭಾರ) ಮಾಡಿಕೊಳ್ಳುವ ಪ್ರಕ್ರಿಯೆಯನ್ನು ಕೈ ಬಿಡಬೇಕೆಂದು ಮುಖ್ಯಮಂತ್ರಿ ಚಂದ್ರು ತಮ್ಮ ಪತ್ರದಲ್ಲಿ ಒತ್ತಾಯಿಸಿದ್ದಾರೆ.

Leave a Reply

error: Content is protected !!
LATEST
KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ ಸಿಮೆಂಟ್ ಲಾರಿಗೆ ಕಾರು ಡಿಕ್ಕಿ: ತಂದೆ, 2ವರ್ಷದ ಮಗು ಮೃತ, ತಾಯಿ ಸ್ಥಿತಿ ಗಂಭೀರ