ಬೆಂಗಳೂರು: ಒಂಟಿಮನೆ ಯೋಜನೆಗೆ ಸಂಬಂಧಿಸಿದಂತೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಸ್ವಂತ ನಿವೇಶನ ಹೊಂದಿರುವವರಿಗೆ ಒಂಟಿಮನೆ ನಿರ್ಮಾಣ ಮಾಡಿಕೊಳ್ಳಲು 5 ಲಕ್ಷ ರೂ. ಸಹಾಯಧನಕ್ಕಾಗಿ 20.01.2023 ರವರೆಗೆ ಆನ್‌ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಲು ಅವಧಿಯನ್ನು ವಿಸ್ತರಿಸಲಾಗಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 2022-23ನೇ ಸಾಲಿನ ಕಲ್ಯಾಣ ಕಾರ್ಯಕ್ರಮಗಳಡಿ ಒಂಟಿಮನೆ ಯೋಜನೆಗೆ ಸಂಬಂಧಿಸಿದಂತೆ ಪಾಲಿಕೆಯ ವ್ಯಾಪ್ತಿಯಲ್ಲಿ ಸ್ವಂತ ನಿವೇಶನ ಹೊಂದಿರುವವರಿಗೆ ಒಂಟಿಮನೆ ನಿರ್ಮಾಣ ಮಾಡಿಕೊಳ್ಳಲು 5 ಲಕ್ಷ ರೂ. ಸಹಾಯಧನ ಆನ್‌ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಲು 18.11.2022ರವರಗೆ ಕೊನೆ ದಿನಾಂಕವಾಗಿ ನಿಗದಿಪಡಿಸಲಾಗಿತ್ತು.
ಆದರೆ ಈ ಅವಧಿಯಲ್ಲಿ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಸಲ್ಲಿಸಲು ಸಾಧ್ಯವಾಗಿರುವುದಿಲ್ಲವೆಂದು ಹಾಗೂ ಮತ್ತೊಮ್ಮೆ ಆನ್‌ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡುವಂತೆ ಸ್ಥಳೀಯ ಶಾಸಕರು ಹಾಗೂ ಕೆಲವು ಅರ್ಹರು ಪಾಲಿಕೆಯ ಗಮನಕ್ಕೆ ತಂದಿದ್ದಾರೆ.
ಆದುದರಿಂದ ಒಂಟಿಮನೆ ಯೋಜನೆಗೆ ಸಂಬಂಧಿಸಿದಂತೆ ಪಾಲಿಕೆಯ ವ್ಯಾಪ್ತಿಯಲ್ಲಿ ಸ್ವಂತ ನಿವೇಶನ ಹೊಂದಿರುವವರಿಗೆ ಒಂಟಿಮನೆ ನಿರ್ಮಾಣ ಮಾಡಿಕೊಳ್ಳಲು 5.00 ಲಕ್ಷ ರೂ ಸಹಾಯಧನ ಆನ್‌ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಲು ದಿನಾಂಕ: ದಿನಾಂಕ:20.01.2023ರವರೆಗೆ ಕೊನೆ ದಿನಾಂಕವಾಗಿ ನಿಗಧಿಪಡಿಸಲಾಗಿದ್ದು, ಅರ್ಹರು ಆನ್‌ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಆಸ್ತಕರು ಪಾಲಿಕೆಯ ವೆಬ್ ಜಾಲತಾಣವಾದ https://welfare.bbmpgov.in/ ಮುಖಾಂತರ ಉಚಿತವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ ಅಥವಾ ಬೆಂಗಳೂರು ಒನ್ ಕೇಂದ್ರದಲ್ಲಿ 30 ರೂ. ಶುಲ್ಕ ಪಾವತಿಸಿ ಆನ್‌ಲೈನ್ ಮುಖೇನ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ. ಎಲ್ಲಾ ವಲಯದ ಜಂಟಿ ಆಯುಕ್ತರು ರವರ ಕಛೇರಿಯಲ್ಲಿ ಸಹಾಯ ಕೇಂದ್ರವನ್ನು ಸ್ಥಾಪಿಸಿದ್ದು, ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ ಎಂದು ಕಲ್ಯಾಣ ವಿಭಾಗದ ವಿಶೇಷ ಆಯುಕ್ತರು ತಿಳಿಸಿದ್ದಾರೆ.