Please assign a menu to the primary menu location under menu

CrimeNEWSದೇಶ-ವಿದೇಶನಮ್ಮಜಿಲ್ಲೆ

ಕೌಟುಂಬಿಕ ಕಲಹ: ಮನನೊಂದ ತಾಯಿ 2 ವರ್ಷದ ಮಗು ಕೊಂದು ಆತ್ಮಹತ್ಯೆಗೆ ಯತ್ನ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಕೌಟುಂಬಿಕ ಕಲಹದಿಂದ ಮನನೊಂದ ತಾಯಿಯೊಬ್ಬಳು ತನ್ನ 2 ವರ್ಷದ ಹೆಣ್ಣು ಮಗುವನ್ನು ಕೊಂದು ತಾನು ಆತ್ಮಹತ್ಯೆಗೆ ಯತ್ನಿಸಿರುವ ಹೃದಯ ವಿದ್ರಾವಕ ಘಟನೆ ಕೆ.ಆರ್.​ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಸೀಗೆಹಳ್ಳಿಯಲ್ಲಿ ನಡೆದಿದೆ.

ಶೃತಿಕಾ (2) ಮೃತಪಟ್ಟ ಮಗು. ಹತ್ಯೆ ಬಳಿಕೆ ತಾಯಿ ಚಿನ್ನಾ ಅತ್ಮಹತ್ಯೆಗೆ ಯತ್ನಿಸಿದಾಕೆ. ಇದು ಮಾರ್ಚ್‌ 17ರಂದು ನಡೆದಿರುವ ಘಟನೆಯಾಗಿದು, ತಡವಾಗಿ ಬೆಳಕಿಗೆ ಬಂದಿದೆ.

ಆಂಧ್ರಪ್ರದೇಶದ ಚಿತ್ತೂರು ಮೂಲದ ದಂಪತಿ ಚಿನ್ನಾ ಮತ್ತು ಆಕೆಯ ಪತಿ ಲಕ್ಷ್ಮೀನಾರಾಯಣ 2 ವರ್ಷದ ಮಗುವಿನ ಜತೆ ಮೂರು ತಿಂಗಳ ಹಿಂದೆ ಸೀಗೆಹಳ್ಳಿಗೆ ಬಂದು ವಾಸವಾಗಿದ್ದರು. ಪ್ರತಿದಿನ ಹಿಂಸೆ ನೀಡುತ್ತಿದ್ದನಂತೆ.

ಅದೇರೀತಿ ತನ್ನ ಚಾಳಿಯನ್ನು ಮುಂದುವರಿಸಿದ ಪತಿ ಲಕ್ಷ್ಮೀನಾರಾಯಣ ಇದೇ ಮಾ.16ರಂದು ರಾತ್ರಿ ಹೆಂಡತಿ ಜೊತೆ ಕಿರಿಕ್ ಮಾಡಿಕೊಂಡಿದ್ದಾನೆ. ಹೀಗಾಗಿ ಆತನ ಕಾಟಕ್ಕೆ ಬೇಸತ್ತಿದ್ದ ಚಿನ್ನಾ ಮಗುವನ್ನು ಉಸಿರುಗಟ್ಟಿಸಿ ಕೊಂದು ತಾನೂ ಚೂರಿಯಿಂದ ಕತ್ತು ಸೀಳಿಕೊಂಡಿದ್ದಾಳೆ.

ಈ ವೇಳೆ ಸ್ಥಳೀಯರು ಚಿನ್ನಾಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಆಸ್ಪತ್ರೆಯಲ್ಲಿ ಚಿನ್ನಾಗೆ ಚಿಕಿತ್ಸೆ ಮುಂದುವರಿದಿದೆ. ಈ ಸಂಬಂಧ ಲಕ್ಷ್ಮೀನಾರಾಯಣನ ದೂರಿನ ಮೇರೆಗೆ ಎಫ್ಐಆರ್ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Leave a Reply

error: Content is protected !!
LATEST
ಹೆಂಡತಿ, ಮಾವನ ಕಾಟ: ರೈಲಿಗೆ ತಲೆಕೊಟ್ಟು ಹೆಡ್‌ಕಾನ್‌ಸ್ಟೇಬಲ್ ಆತ್ಮಹತ್ಯೆ 9 ಸಾವಿರ ರೂ. ಲಂಚ ಪ್ರಕರಣ: ಪಿಡಿಒಗೆ 3 ವರ್ಷ ಜೈಲು ಶಿಕ್ಷೆ, 50 ಸಾವಿರ ರೂ.ದಂಡ KSRTC ತುಮಕೂರು: ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿರುವ ಚಾಲಕನಿಗೆ ಧೈರ್ಯ ತುಂಬಿದ ಡಿಸಿ, ಅಧಿಕಾರಿಗಳು KSRTC: ಡಿ.31ರ ಮುಷ್ಕರ ಬೆಂಬಲಿಸುವಂತೆ ಕೂಟಕ್ಕೆ ಜಂಟಿ ಕ್ರಿಯಾ ಸಮಿತಿ ಮನವಿ ಸರ್ಕಾರದ ನಡೆಯೇ  BMTC ಆರ್ಥಿಕವಾಗಿ ಕುಸಿಯಲು ಕಾರಣ: ವರದಿ ಕೊಟ್ಟ CAG KSRTC ಕುಣಿಗಲ್‌: ಹಲ್ಲೆಕೋರರ ವಿರುದ್ಧ ಕ್ರಮ ಜರುಗಿಸದಿರುವುದಕ್ಕೆ ಮನನೊಂದ ಚಾಲಕ ಆತ್ಮಹತ್ಯೆಗೆ ಯತ್ನ KSRTC: ಈ ಅಧಿವೇಶನದಲ್ಲಾದರೂ ಸಿಎಂ ಸರಿ ಸಮಾನ ವೇತನ ಬಗ್ಗೆ ದಿಟ್ಟ ಹೆಜ್ಜೆ ಇಡಲಿ BMTC: ಆಧಾರ್‌ ಕಾರ್ಡ್‌ ಯಾವ ಭಾಷೆಯಲ್ಲೇ ಇರಲಿ ಕರ್ನಾಟಕದ ವಿಳಾಸವಿದ್ದರೆ ಉಚಿತ ಪ್ರಯಾಣ ಹಾವೇರಿ: ಸರ್ಕಾರಿ ಬಸ್ ಹತ್ತಲು ಹೋದ ವೃದ್ಧೆ ಕಾಲುಗಳ ಮೇಲೆ ಹಿಂಬದಿ ಚಕ್ರ ಹರಿದು ಕಾಲುಗಳು ಕಟ್‌ KSRTC ಮಡಿಕೇರಿ: ಸಹೋದ್ಯೋಗಿ ಕಂಡಕ್ಟರ್‌ ಕೊಲ್ಲುವ ಬೆದರಿಕೆ ಹಾಕಿ ಗಾಳಿಯಲ್ಲಿ ಗುಂಡ್ಹಾರಿಸಿದ ಡ್ರೈವರ್‌ ಬಂಧನ