NEWSಸಿನಿಪಥ

‘ಫ್ಯಾಮಿಲಿ ಸ್ಟಾರ್’: ವಿಜಯ್ ದೇವರ ಕೊಂಡಗೆ ‘ಡಾರ್ಲಿಂಗ್’ ಎಂದು ವಿಶ್ ಮಾಡಿದ ರಶ್ಮಿಕಾ

ವಿಜಯಪಥ ಸಮಗ್ರ ಸುದ್ದಿ

ಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ನಡುವಿನ ಸ್ನೇಹದ ಬಗ್ಗೆ ಯಾರೂ ಅಲ್ಲಗಳೆಯುವಂತಿಲ್ಲ. ಈ ಜೋಡಿಯ ನಡುವಿನ ಸಂಬಂಧವನ್ನು ನಾನಾ ರೀತಿಯಲ್ಲಿ ಬಿಂಬಿಸಲಾಗುತ್ತಿದೆ. ಇದಕ್ಕೆ ಪುಷ್ಠಿ ನೀಡುವಂತೆ ಇಬ್ಬರೂ ಅನುಮಾನ ಬರುವಂತೆ ನಡೆದುಕೊಳ್ಳುತ್ತಲೇ ಇರುತ್ತಾರೆ. ಈ ಬಾರಿಯೂ ಅದೇ ಆಗಿದೆ.

ವಿಜಯ್ ದೇವರಕೊಂಡ ನಟನೆಯ ‘ಫ್ಯಾಮಿಲಿ ಸ್ಟಾರ್’ ಸಿನಿಮಾ ಬಿಡುಗಡೆಗೆ ಸಿದ್ಧತೆ ಮಾಡಿಕೊಂಡಿದೆ. ಈ ಸಂದರ್ಭದಲ್ಲಿ ಈ ಚಿತ್ರಕ್ಕೆ ರಶ್ಮಿಕಾ ಮಂದಣ್ಣ ಶುಭಾಶಯ ಕೋರಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಅವರು ಐ ವಿಶ್ ಮೈ ಡಾರ್ಲಿಂಗ್ಸ್ ಎಂದು ಬರೆದುಕೊಂಡಿದ್ದಾರೆ. ಇದು ಮತ್ತಷ್ಟು ಚರ್ಚೆಗೆ ಕಾರಣವಾಗಿದೆ.

ಹೌದು! ಗೀತ ಗೋವಿಂದಂ’ ಸಿನಿಮಾದಲ್ಲಿ ವಿಜಯ್ ಹಾಗೂ ರಶ್ಮಿಕಾ ಒಟ್ಟಾಗಿ ನಟಿಸಿದಾಗಿನಿಂದಲೂ ಇಬ್ಬರ ಮಧ್ಯೆ ಒಳ್ಳೆಯ ಬಾಂಧವ್ಯ ಬೆಳೆದಿದೆ. ಒಬ್ಬರ ವೃತ್ತಿ ಜೀವನಕ್ಕೆ ಮತ್ತೊಬ್ಬರು ಬೆಂಬಲವಾಗಿ ನಿಲ್ಲುತ್ತಿದ್ದಾರೆ. ವಿಜಯ್ ಬಳಿ ರಶ್ಮಿಕಾ ಹಲವು ಸಲಹೆಗಳನ್ನು ಕೇಳುತ್ತಾರಂತೆ. ಈ ವಿಚಾರವನ್ನು ಅವರೇ ಈ ಮೊದಲು ಹೇಳಿಕೊಂಡಿದ್ದರು.

ವಿಜಯ್ ದೇವರಕೊಂಡ (Vijay Devarakonda) ಹಾಗೂ ಮೃಣಾಲ್ ಠಾಕೂರ್ ನಟನೆಯ ‘ಫ್ಯಾಮಿಲಿ ಸ್ಟಾರ್’ ಸಿನಿಮಾ ಸದ್ಯ ರಿಲೀಸ್​ಗೆ ರೆಡಿ ಇದ್ದು, ಬರುವ ಏಪ್ರಿಲ್ 5ರಂದು ಈ ಸಿನಿಮಾ ವಿಶ್ವಾದ್ಯಂತ ಬಿಡುಗಡೆ ಆಗಲಿದೆ. ಇತ್ತೀಚೆಗೆ ಸಿನಿಮಾದ ಟ್ರೇಲರ್ ರಿಲೀಸ್ ಆಗಿದ್ದು ಎಲ್ಲರೂ ಆಲ್​ ದಿ ಬೆಸ್ಟ್ ಹೇಳುತ್ತಿದ್ದಾರೆ. ರಶ್ಮಿಕಾ ಮಂದಣ್ಣ ಕೂಡ ವಿಜಯ್ ದೇವರಕೊಂಡಗೆ ವಿಶ್ ಮಾಡಿದ್ದಾರೆ. ‘ಅಲ್ ದಿ ಬೆಸ್ಟ್ ಡಾರ್ಲಿಂಗ್ಸ್’ ಎಂದು ಪ್ರಿತಿಯಿಂದ ಶುಭಕೋರಿದ್ದಾರೆ.

ಗೀತ ಗೋವಿಂದಂ’ ಸಿನಿಮಾದಲ್ಲಿ ವಿಜಯ್ ಹಾಗೂ ರಶ್ಮಿಕಾ ಒಟ್ಟಾಗಿ ನಟಿಸಿದಾಗಿನಿಂದಲೂ ಇಬ್ಬರ ಮಧ್ಯೆ ಒಳ್ಳೆಯ ಬಾಂಧವ್ಯ ಬೆಳೆದಿದೆ. ಒಬ್ಬರ ವೃತ್ತಿ ಜೀವನಕ್ಕೆ ಮತ್ತೊಬ್ಬರು ಬೆಂಬಲವಾಗಿ ನಿಲ್ಲುತ್ತಿದ್ದಾರೆ. ವಿಜಯ್ ಬಳಿ ರಶ್ಮಿಕಾ ಹಲವು ಸಲಹೆಗಳನ್ನು ಕೇಳುತ್ತಾರಂತೆ. ಈ ವಿಚಾರವನ್ನು ಅವರೇ ಈ ಮೊದಲು ಹೇಳಿಕೊಂಡಿದ್ದರು. ಅದೇ ರೀತಿ ಸಿನಿಮಾ ರಿಲೀಸ್ ಸಂದರ್ಭದಲ್ಲಿ ಒಬ್ಬರಿಗೊಬ್ಬರು ವಿಶ್ ಮಾಡಿಕೊಳ್ಳುತ್ತಾರೆ.

‘ಫ್ಯಾಮಿಲಿ ಸ್ಟಾರ್’ ಸಿನಿಮಾ ರಿಲೀಸ್ ಸಂದರ್ಭದಲ್ಲಿ ರಶ್ಮಿಕಾ ಟ್ವೀಟ್ ಮಾಡಿದ್ದಾರೆ. ‘ನಾನು ನನ್ನ ಡಾರ್ಲಿಂಗ್​​ಗಳಾದ ವಿಜಯ್ ದೇವರಕೊಂಡ ಹಾಗೂ ಪರಶುರಾಮ್ ಪೆಟ್ಲಾಗೆ (ನಿರ್ದೇಶಕ) ವಿಶ್ ಮಾಡುತ್ತೇನೆ. ಏಪ್ರಿಲ್ 5ರಂದು ಸಿನಿಮಾ ರಿಲೀಸ್ ಆಗಲಿದೆ. ಸಾಕಷ್ಟು ಎಗ್ಸೈಟ್ ಆಗಿದ್ದೇನೆ. ಪಾರ್ಟಿ ಬೇಕು’ ಎಂದಿರುವ ಅವರು, ಮೃಣಾಲ್​ಗೆ ‘ಆಲ್ ದಿ ಬೆಸ್ಟ್ ಮೈ ಲವ್’ ಎಂದು ಬರೆದಿದ್ದಾರೆ.

‘ಫ್ಯಾಮಿಲಿ ಸ್ಟಾರ್’ ಟ್ರೇಲರ್ ಇತ್ತೀಚೆಗೆ ಬಿಡುಗಡೆ ಆಗಿದೆ. ಈ ಟ್ರೇಲರ್ ಎಲ್ಲ ಕಡೆಗಳಿಂದ ಮೆಚ್ಚುಗೆ ಪಡೆಯುತ್ತಿದೆ. ಈ ಸಿನಿಮಾ ನೋಡಲು ಫ್ಯಾನ್ಸ್ ಕಾದಿದ್ದಾರೆ. ವಿಜಯ್ ದೇವರಕೊಂಡ ಅವರು ಕೊನೆಯದಾಗಿ ಕಾಣಿಸಿಕೊಂಡಿದ್ದು ‘ಖುಷಿ’ ಚಿತ್ರದಲ್ಲಿ. ಈ ಸಿನಿಮಾದಲ್ಲಿ ಅವರು ಸಮಂತಾ ಜೊತೆ ತೆರೆ ಹಂಚಿಕೊಂಡಿದ್ದರು.

Leave a Reply

error: Content is protected !!
LATEST
KSRTC: ಏಪ್ರಿಲ್‌-ಜೂನ್‌ ಪೀಕ್‌ ಸೀಸನ್‌ ಎಂದು ಚಾಲನಾ ಸಿಬ್ಬಂದಿಗಳಿಗೆ ರಜೆ ಕೊಡದೆ ಹಿಂಸಿಸುತ್ತಿರುವ ಅಧಿಕಾರಿಗಳು..! ಬಿಜೆಪಿ ರಾಜಕೀಯ ಲಾಭಕ್ಕೆ ನೇಹಾ ಪ್ರಕರಣ ಬಳಸಿಕೊಳ್ಳುತ್ತಿರುವುದು ನಾಚಿಕೆಗೇಡಿನ ವಿಚಾರ: ಜಗದೀಶ್ ವಿ. ಸದಂ IVRS, ಬಲ್ಕ್ SMS ಮೂಲಕ ಮತದಾರರಿಗೆ ಮೊಬೈಲ್‌ ಸಂದೇಶ: ತುಷಾರ್ ಗಿರಿನಾಥ್ KSRTC: ವೇತನ ಸಮಸ್ಯೆ ಪರಿಹರಿಸದೆ ಅಸಡ್ಡೆ ತೋರಲು ಇವರು ಕಾರಣಗಳು....!? ರಾಜಕೀಯ ಪಕ್ಷಗಳ ಚುನಾವಣಾ ಪ್ರಣಾಳಿಕೆಗಳು ಜನರ ವಂಚಿಸುವ ಮಂತ್ರ ದಂಡಗಳು : ಕುರುಬೂರ್‌ ಶಾಂತಕುಮಾರ್‌ 'ನಮ್ಮ ನಡೆ ಮತಗಟ್ಟೆಯ ಕಡೆ' ಜಾಗೃತಿ ಜಾಥಾಗೆ ಮನೋಜ್ ಕುಮಾರ್ ಮೀನಾ, ತುಷಾರ್ ಗಿರಿನಾಥ್ ಚಾಲನೆ ಕೊಡಗು: ಹುಲಿದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ ತಾಳವಾಡಿ: ಜಮೀನಿಗೆ ನುಗ್ಗುತ್ತಿರುವ ಕಾಡಾನೆ ಹಿಮ್ಮೆಟ್ಟಿಸಿದ ರೈತರು ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ : ಬೆಚ್ಚಿಬಿದ್ದ ಜನತೆ ಇಂದು ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ: 102 ಕ್ಷೇತ್ರಗಳಲ್ಲಿ ಆರಂಭ