CrimeNEWSಸಂಸ್ಕೃತಿಸಿನಿಪಥ

ಖ್ಯಾತ ಕಲಾವಿದ ಬಿ.ಕೆ.ಎಸ್‌. ವರ್ಮಾ ಹೃದಯಾಘಾತದಿಂದ ನಿಧನ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಂಗಳೂರು ಮೂಲದ ಖ್ಯಾತ ಕಲಾವಿದ 73 ವರ್ಷದ ಬಿ.ಕೆ.ಎಸ್‌. ವರ್ಮಾ ಇಂದು ಮುಂಜಾನೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಇಂದು ಮಧ್ಯಾಹ್ನ 3ರಿಂದ ರವೀಂದ್ರ ಕಲಾಕ್ಷೇತ್ರದ ಬಳಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಕನ್ನಡಾಂಬೆ ಹಾಗೂ ರಾಘವೇಂದ್ರ ಸ್ವಾಮಿ ಅವರ ಚಿತ್ರ ಸೇರಿದಂತೆ ಅನೇಕ ಉತ್ತಮ ಚಿತ್ರಗಳನ್ನು ಇವರು ರಚಿಸಿದ್ದಾರೆ. ಪರಿಸರ ಹಾಗೂ ಸಾಮಾಜಿಕ ಸಮಸ್ಯೆಗಳ ಬಗ್ಗೆ ಪೇಂಟಿಂಗ್‌ ಮೂಲಕ ಜನರು ಮೆಚ್ಚುವಂತೆ ಅತ್ಯುತ್ತಮವಾಗಿ ಚಿತ್ರವನ್ನು ರಚಿಸುತ್ತಿದ್ದರು.

ವರ್ಮಾ ಅವರು ಡಾ.ರಾಜ್‌ಕುಮಾರ್, ಕನ್ನಡಾಂಬೆ ಹಾಗೂ ರಾಘವೇಂದ್ರ ಸ್ವಾಮಿ ಅವರ ಕಲಾಕೃತಿಗಳು ಕನ್ನಡಿಗರ ಹೃದಯದಲ್ಲಿ ಸದಾ ನೆಲೆಸಿವೆ. ಈ ಬಗ್ಗೆ ಸಾಕಷ್ಟು ಚರ್ಚೆಗಳೂ ಆಗಿದ್ದವು. ಮೈಸೂರಿನ ರಾಜಾ ರವಿವರ್ಮಾ ಅವರ ಕಲಾಕೃತಿಗಳನ್ನು ಮೈಸೂರಿನ ಅರಮನೆಯಲ್ಲಿ ವೀಕ್ಷಿಸುತ್ತಿದ್ದ ವರ್ಮಾ ಅವರು ಅದರಿಂದ ಪ್ರಭಾವಿತರಾಗಿ, ತಮ್ಮ ಮೂಲ ಹೆಸರಾದ ಬುಕ್ಕಸಾಗರ ಕೃಷ್ಣಯ್ಯ ಶ್ರೀನಿವಾಸ್ ಜತೆ ವರ್ಮಾ ಎಂಬ ಹೆಸರನ್ನೂ ಸೇರಿಸಿಕೊಂಡಿದ್ದರು.

ಬಿ.ಕೆ.ಎಸ್ ವರ್ಮ ಎಂದು ಕಲಾ ಪ್ರಪಂಚಕ್ಕೆ ಪರಿಚಿತರಾಗಿರುವ ಚಿತ್ತಾರಲೋಕದ ಅವಿಸ್ಮರಣೀಯ ಕಲಾವಿದನ ಬಾಲ್ಯದ ಹೆಸರು ಬುಕ್ಕಸಾಗರ ಕೃಷ್ಣಯ್ಯ ಶ್ರೀನಿವಾಸನೆಂದು. ಕಲೆಯನ್ನು ಜೀವನದ ಅವಿಭಾಜ್ಯ ಅಂಗವನ್ನಾಗಿ ಸ್ವೀಕರಿಸಿ ಮುನ್ನಡೆದು ಅದರಲ್ಲಿ ಸಿದ್ಧಿಯನ್ನು ಸಾಧಿಸಿದ್ದಾರೆ. ಚಿತ್ರಕಲಾ ಜೀವನ ಮುಂದುವರೆದಂತೆ ವರ್ಮಾ ಎಂಬ ಹೆಸರನ್ನು ತಾವೇ ಸ್ಫೂರ್ತಿಗೋಸ್ಕರ ತಮ್ಮ ಹೆಸರಿನ ಜತೆಗೆ ಸೇರಿಸಿಕೊಂಡಿದ್ದಾರೆ.

ಒಮ್ಮೆ ‘ಮೈಸೂರಿನ ಜಗನ್ಮೋಹನ ಅರಮನೆ’ಯಲ್ಲಿ ರಾಜಾ ರವಿವರ್ಮಾ ಅವರ ಪೇಂಟಿಂಗ್‌ಗಳನ್ನು ವೀಕ್ಷಿಸುತ್ತಿದ್ದಾಗ ತನ್ಮಯರಾಗಿ ವರ್ಮಾ ಎಂಬ ಹೆಸರನ್ನು ತಮ್ಮ ಹೆಸರಿನ ಜತೆಗೆ ಸೇರಿಸಿಕೊಂಡ ನಂತರ ಅವರ ಜೀವನದ ದಿಸೆಯೇ ಬದಲಾಯಿತಂತೆ. ಆ ದಿನಗಳಲ್ಲಿ ಬ್ಲೇಡಿನಿಂದ, ಉಗುರಿನಿಂದ, ಎಂಬಾಸಿಂಗ್, ಥ್ರೇಡ್ ಪೇಂಟಿಂಗ್ ಮಾಡಿ ಹಣಗಳಿಸಿದ್ದರು.

ತಮ್ಮ ಎರಡೂ ಕೈಗಳ ಬೆರೆಳುಗಳನ್ನೆ ಉಪಯೋಗಿಸಿ ಸುಂದರವಾದ ಚಿತ್ತಾರಗಳನ್ನು ಮೂಡಿಸುತ್ತಿದ್ದ ಅವರ ಪರಿ ಅನನ್ಯ. ಅವರು ಬಿಡಿಸಿದ ‘ಓಂಗಣೇಶ ಚಿತ್ತಾರ’ ಜನರ ಆಸಕ್ತಿಯನ್ನು ಕೆರಳಿಸಿತು. ಎರಡೆ ನಿಮಿಷಗಳಲ್ಲಿ ಸುಂದರವಾದ ಚಿತ್ರವನ್ನು ಬಿಡಿಸುವ ಇವರ ಕಲೆಯನ್ನು ಮೆಚ್ಚಿ ಸ್ವಾಗತಿಸಿದ ಕಲಾವಿದರಲ್ಲಿ ಮುಖ್ಯರೆಂದರೆ ಸೂಪರ್ ಸ್ಟಾರ್ ರಜನಿಕಾಂತ್, ಮೇರುನಟ ಡಾ. ರಾಜ್ ಕುಮಾರ್, ಅಂತಾರಾಷ್ಟ್ರೀಯ ಸುಪ್ರಸಿದ್ಧ ಕಲಾವಿದ ಡಾ.ರೋರಿಕ್ ಮತ್ತು ದೇವಿಕಾರಾಣಿ ದಂಪತಿಗಳು.

ಕೇವಲ ಎರಡೇ ನಿಮಿಷಗಳಲ್ಲೇ ಸೃಷ್ಟಿಸುವ ಸಾಮರ್ಥ್ಯದ ಸಾವಿರಾರು ಚಿತ್ರಗಳು ವರ್ಮಾ ಅವರ ಚಿತ್ತಾರ ಲೋಕದ ಅನರ್ಘ್ಯ ರತ್ನಗಳಂತೆ ರಸಿಕರ ಮನಸ್ಸನ್ನು ರಂಜಿಸಿವೆ. ನಿರಂತರವಾಗಿ ಈ ಕಲೆಯಲ್ಲಿ ಹೊಸಹೊಸ ಪ್ರಯೋಗಗಳನ್ನು ಮಾಡುತ್ತಾ ಅವಿರತವಾಗಿ ಶ್ರಮಿಸುತ್ತಿದ್ದ ವರ್ಮಾ ಅವರು ಕನ್ನಡಿಗರು. ಬೆಂಗಳೂರಿನ ರಾಮಾಂಜನೇಯ ಗುಡ್ಡದ ಸೃಷ್ಟಿಯ ಹಿಂದೆ ಶ್ರೀನಿವಾಸ್ ಅವರ ಕಲ್ಪನಾಶಕ್ತಿ ಅಡಗಿತ್ತು.

ಇಂಥ ವರ್ಮಾ ಅವರು ಇಂದು ನಮ್ಮನ್ನು ಅಗಲಿದ್ದು, ಇವರ ಅಗಲಿಕೆಗೆ ವಿವಿಧ ಕ್ಷೇತ್ರ ಗಣ್ಯರು ಕಲಾವಿದರು ಕಂಬನಿ ಮಿಡಿದಿದ್ದಾರೆ.

Leave a Reply

error: Content is protected !!
LATEST
KSRTCಯ 4ನಿಗಮಗಳ ಸಾರಿಗೆ ನೌಕರರಿಗೆ ಶೇ.45ರಷ್ಟು ವೇತನ ಹೆಚ್ಚಳಕ್ಕೆ ವೇದಿಕೆ ಆಗ್ರಹ NWKRTC: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲಕನ ಕಾಲು ಮುರಿತ ಸಾರಿಗೆ ನೌಕರರು ಕರ್ತವ್ಯದ ವೇಳೆ ರೀಲ್ಸ್​ ಮಾಡಿದರೆ ಕೆಲಸದಿಂದ ವಜಾ: ಸಚಿವ ರಾಮಲಿಂಗಾ ರೆಡ್ಡಿ ಎಚ್ಚರಿಕೆ ಜು.22ರಂದು ಬೆಂವಿವಿಯ ಸಂವಹನ ವಿಭಾಗದ ಸುವರ್ಣ ಮಹೋತ್ಸವ- ರಾಷ್ಟ್ರೀಯ ಸಮ್ಮೇಳನ ಕಿರಿಯ ವಕೀಲರಿಗೆ ಗೌರವಾನ್ವಿತ ಸಂಬಳ ಕೊಡಿ: ಹಿರಿಯ ವಕೀಲರಿಗೆ ಸುಪ್ರೀಂ ಕೋರ್ಟ್‌ ಸಿಜೆ ಚಂದ್ರಚೂಡ್ ಕಿವಿ ಮಾತು ಬದಲಿ ಜಾಗದಲ್ಲಿ ಮನೆ ಕಟ್ಟಿಕೊಡ್ತೇವೆ: ಕಂದಾಯ ಸಚಿವ ಕೃಷ್ಣ ಬೈರೇಗೌಡ 24 ಗಂಟೆ ಉಚಿತ ವಿದ್ಯುತ್‌, ಪ್ರತಿಯೊಬ್ಬರಿಗೂ ಉಚಿತ ಚಿಕಿತ್ಸೆ, ಗುಣಮಟ್ಟದ ಶಿಕ್ಷಣ, ಯುವಕರಿಗೆ ಉದ್ಯೋಗ ಮಹಿಳೆಯರಿಗೆ ತಿ... ಮಳೆ ಹಾನಿ ಪ್ರದೇಶಗಳಿಗೆ ಸಚಿವ ಕೆ.ವೆಂಕಟೇಶ್ ಭೇಟಿ: ಮೃತ ಕುಟುಂಬಕ್ಕೆ ಸಾಂತ್ವನ ಪರಿಹಾರ ಧನ ವಿತರಣೆ ಗೊರೂರು ಜಲಾಶಯದಿಂದ 25ಸಾವಿರ ಕ್ಯೂಸೆಕ್ಸ್ ನೀರು ಬಿಡುಗಡೆ: ಇಂಜಿನಿಯರ್ ಆನಂದ್ ಶೈಕ್ಷಣಿಕ ಸಂಸ್ಥೆಗಳು ಶೇ. 25 ರಷ್ಟು ಸೇವಾ ಶುಲ್ಕ ಪಾವತಿಸಿ ಲಾಭ ಪಡೆಯಿರಿ: ತುಷಾರ್  ಗಿರಿನಾಥ್