CrimeNEWSಸಿನಿಪಥ

ಇಹಲೋಕ ತ್ಯಜಿಸಿದ ತಮಿಳು ಖ್ಯಾತ ಹಾಸ್ಯ ನಟ ಆರ್. ಮಯಿಲ್‌ಸಾಮಿ

ವಿಜಯಪಥ ಸಮಗ್ರ ಸುದ್ದಿ

ಚೆನ್ನೈ: ತಮಿಳಿನ ಖ್ಯಾತ ಹಾಸ್ಯ ನಟ ಆರ್. ಮಯಿಲ್‌ಸಾಮಿ (57) ಇಂದು (ಫೆ.19ರ ಭಾನುವಾರ) ಮುಂಜಾನೆ ಹಠತ್‌ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮಯಿಲ್‌ಸಾಮಿ ಅವರಿಗೆ ತಡರಾತ್ರಿ ಆರೋಗ್ಯದಲ್ಲಿ ಏರುಪೇರಾಗಿದ್ದು ಕೂಡಲೇ ಅವರನ್ನು ಕುಟುಂಬದವರು ಪೋರೂರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಅವರು ಮಾರ್ಗದ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ, ಈ ಬಗ್ಗೆ ಆಸ್ಪತ್ರೆಯಲ್ಲಿ ಕರೆದೋಯ್ದಾಗ ವೈದ್ಯರು ಮೃತಪಟ್ಟಿರುವದನ್ನು ಘೋಷಿಸಿದ್ದಾರೆ.

ಮಯಿಲ್‌ಸಾಮಿ ಅವರು ಹಲವಾರು ತಮಿಳು ಚಲನಚಿತ್ರಗಳಲ್ಲಿ ಹಾಸ್ಯ ಸೇರಿದಂತೆ ವಿವಿಧ ಪಾತ್ರಗಳಲ್ಲಿ ಅಭಿನಯಿಸುವ ಮೂಲಕ ಜಯಪ್ರಿಯರಾಗಿದ್ದಾರೆ. ಅವರು ಸ್ಟ್ಯಾಂಡ್ ಅಪ್ ಹಾಸ್ಯನಟ, ನಿರೂಪಕ, ರಂಗಭೂಮಿ ಕಲಾವಿದರಾಗಿಯೂ ಜನರ ಮೆಚ್ಚುಗೆ ಗಳಿಸಿದ್ದಾರೆ.

ಹಾಸ್ಯ ಕಾರ್ಯಕ್ರಮವೊಂದರ ನಿರೂಪಕ ಹಾಗೂ ತೀರ್ಪುಗಾರರಾಗಿ ಮೊದಲ ಬಾರಿಗೆ ಅವರು ದೂರದರ್ಶನಗಳಲ್ಲಿ ಕಾಣಿಸಿಕೊಂಡಿದ್ದರು. ಬಳಿಕ 1984ಲ್ಲಿ ಬಿಡುಗಡೆಯಾದ ನಿರ್ಮಾಪಕ ಹಾಗೂ ನಟ ಕೆ.ಭಾಗ್ಯರಾಜ್ ಅವರ ಚಿತ್ರ ಧವನಿ ಕನವುಗಲ್ ಮೂಲಕ ಹಾಸ್ಯ ನಟರಾಗಿ ತಮಿಳು ಚಲನಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು.

ಮಯಿಲ್‌ಸಾಮಿ ಹಠಾತ್ ನಿಧನಕ್ಕೆ ತಮಿಳು ಚಿತ್ರರಂಗ, ಸ್ಯಾಂಡಲ್‌ವುಡ್‌ ಸೇರಿದಂತೆ ಅನೇಕರು ಸಂತಾಪ ಸೂಚಿಸಿದ್ದು ಅವರ ಕುಟುಂಬಕ್ಕೆ ಅಗಲಿಕೆಯ ಶಕ್ತಿಯನ್ನು ಆ ದೇವರು ಕೊಡಲಿ ಎಂದು ಪ್ರಾರ್ಥಿಸಿದ್ದಾರೆ.

Leave a Reply

error: Content is protected !!
LATEST
ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ