ಮೈಸೂರು: ರೈತರ ಸಮಸ್ಯೆ ಬಗೆ ಹರಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ರಾಜ್ಯ ರೈತ ಸಂಘಟನೆಗಳ ಒಕ್ಕೂಟ , ರಾಜ್ಯ ಕಬ್ಬು ಬೆಳೆಗಾರರ ಸಂಘದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಪರವಾಗಿ ತಹಸೀಲ್ದಾರ್ ರೇಖಾ ಅವರಿಗೆ ಒತ್ತಾಯ ಪತ್ರ ಸಲ್ಲಿಸಿದರು.
ಮಂಗಳವಾರ ಪ್ರತಿಭಟನೆ ನಡೆಸಿದ ಮೈಸೂರು ಭಾಗದ ರೈತ ಮುಖಂಡರು, ಪ್ರಸಕ್ತ ಸಾಲಿಗೆ ಕೇಂದ್ರ ಸರ್ಕಾರ ಟನ್ ಕಬ್ಬಿಗೆ 3550 ರೂ. ನಿಗದಿ ಮಾಡಿದೆ. ಪ್ರಸಕ್ತ 2025-2026ನೇ ಸಾಲಿಗೆ ಕಬ್ಬಿನ ಎಫ್ಆರ್ಪಿ ದರಕ್ಕೆ ಹೆಚ್ಚುವರಿಯಾಗಿ ರಾಜ್ಯ ಸಲಹಾ ಬೆಲೆ ಎಸ್ಎಪಿ ದರ ಏರಿಕೆ ಮಾಡಿ ಟನ್‌ಗೆ 4500 ರೂ. ನಿಗದಿ ಪಡಿಸಿ ಈ ಹೆಚ್ಚುವರಿ ಹಣ ಕೊಡಿಸಬೇಕು ಆಗ್ರಹಿಸಿದರು.
ಬಣ್ಣಾರಿ ಸಕ್ಕರೆ ಕಾರ್ಖಾನೆಯಿಂದ ಕಳೆದ ವರ್ಷದ ಉಪ ಉತ್ಪನ್ನಗಳ ಲಾಭ ಹಂಚಿಕೆ ಮಾಡಿ ಕೊಡಿಸಬೇಕು. ಎಫ್ಆರ್ಪಿ ದರ ಪುನರ್ ಪರಿಶೀಲನೆ ಮಾಡಿ ಸಿಎಸಿಪಿ ವರದಿಯಂತೆ ಪ್ರತಿ ಟನ್ ಕಬ್ಬಿಗೆ ರೈತನ ಹೊಲದಲ್ಲಿನ ದರ ಟನ್‌ಗೆ 4500 ರೂ. ಬೆಲೆ ನಿಗದಿ ಪಡಿಸಬೇಕು.
ಕಳೆದ 2023-2024 ನೇ ಸಾಲಿನಲ್ಲಿ ರಾಜ್ಯ ಸರ್ಕಾರ ಹೆಚ್ಚುವರಿಯಾಗಿ ಟನ್‌ಗೆ 150 ರೂ. ಬೆಲೆ ನಿಗದಿ ಪಡಿಸಿದ್ದು, ಕಾರ್ಖಾನೆಗಳು ಇನ್ನು ಆ ಹಣವನ್ನು ಕೊಟ್ಟಿಲ್ಲ ಅದಕ್ಕೆ ಬಡ್ಡಿ ಸೇರಿಸಿ ತಕ್ಷಣವೇ ಬಾಕಿ ಹಣ ಬಿಡುಗಡೆ ಮಾಡಬೇಕು. ಕಬ್ಬಿನ ಎಫ್ಆರ್ಪಿ ದರ ರೈತನ ಹೊಲದಲ್ಲಿನ ದರ ಎಂದು ಬದಲಾಗಬೇಕು ಎಂದು ಆಗ್ರಹಿಸಿದರು.
ಇನ್ನು ಬಣ್ಣಾರಿ ಸಕ್ಕರೆ ಕಾರ್ಖಾನೆಯಲ್ಲಿ ಸಕ್ಕರೆ ಇಳುವರಿ ಮೋಸ ತಪ್ಪಿಸಲು ಇಳುವರಿ ಮಿತಿ ಕನಿಷ್ಠ ಶೇ.9ಕ್ಕೆ ನಿಗದಿ ಆಗಬೇಕು. ಕಬ್ಬಿನ ತೂಕದಲ್ಲಿ ಮೋಸ ತಪ್ಪಿಸಲು ಕಾರ್ಖಾನೆಗಳ ಮುಂದೆ ಸರ್ಕಾರದಿಂದ ತೂಕದ ಯಂತ್ರ ಸ್ಥಾಪಿಸಬೇಕು ಎಂದು ಒತ್ತಾಯಿಸಿದರು.
ಇತ್ತ ಜಿಲ್ಲೆಯಲ್ಲಿ ಭತ್ತದ ಬೆಳೆ ಹೆಚ್ಚು ನಾಟಿ ಮಾಡಿದ್ದು ಯೂರಿಯಾ ರಸ ಗೊಬ್ಬರದ ಅವಶ್ಯಕತೆ ಹೆಚ್ಚು ಇದೆ. ಹೀಗಾಗಿ ರೈತರಿಗೆ ಸಮಸ್ಯೆಯಾಗದಂತೆ ಮುಕ್ತವಾಗಿ ಸಿಗಲು ತುರ್ತು ಅಗತ್ಯ ಕ್ರಮ ಕೈಗೊಳ್ಳಬೇಕು. ಮೈಸೂರು ತಾಲೂಕಿನ ಕಡಕೋಳ ಗ್ರಾಮದಿಂದ ವಾಜಮಂಗಲಕ್ಕೆ ಹೋಗುವ ಹೈಟೆನ್ಶನ್ ವೈರ್ ಹಾದು ಹೋಗುತ್ತಿದ್ದು ಇದರಿಂದ ರೈತರು ಜಮೀನು ಕಳೆದುಕೊಳ್ಳುತ್ತಿದ್ದಾರೆ.
ಈ ಭಾಗದ ಬಹುತೇಕ ರೈತರು ತುಂಡು ಭೂಮಿ ಹೊಂದಿದ್ದು ಜೀವನಕ್ಕೆ ಇದೇ ಆಧಾರವಾಗಿದೆ. ಎಲ್ಲರೂ ಸಣ್ಣ, ಅತಿ ಸಣ್ಣ ರೈತರಿದ್ದು ಇವರು ತೀವ್ರ ಸಂಕಷ್ಟಕ್ಕೆ ಸಿಲುಕಲ್ಲಿದ್ದಾರೆ ಅಂತಹ ರೈತರಿಗೆ ಪರ್ಯಾಯವಾಗಿ ಭೂಮಿ ನೀಡಬೇಕು ಅಥವಾ ಶಾಶ್ವತ ನ್ಯಾಯಯುತ ಪರಿಹಾರ ಕೊಡಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್, ಜಿಲ್ಲಾಧ್ಯಕ್ಷ ಪಿ. ಸೋಮಶೇಖರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬರಡನಪುರ ನಾಗರಾಜ್, ಮಾರ್ಬಳ್ಳಿ ನೀಲಕಂಠಪ್ಪ, ಮೈಸೂರು ತಾಲೂಕು ಅಧ್ಯಕ್ಷ ಲಕ್ಷ್ಮೀಪುರ ವೆಂಕಟೇಶ್, ನಂಜನಗೂಡು ತಾಲೂಕು ಅಧ್ಯಕ್ಷ ದೇವನೂರು ವಿಜಯೇಂದ್ರ, ವರಕೋಡು ನಾಗೇಶ್, ಕೆಂಡಗಣಪ್ಪ, ಬನ್ನೂರು ಸೂರಿ, ವಾಜಮಂಗಲ ಮಹದೇವು, ಕಾಟೂರು ಮಹದೇವಸ್ವಾಮಿ, ಕಾಟೂರು ನಾಗೇಶ್, ಕೊಡನಹಳ್ಳಿ ಸೋಮಣ್ಣ, ಅಂಬಳೆ ಮಂಜುನಾಥ್, ದೇವನೂರು ಮಹದೇವಸ್ವಾಮಿ, ಸಾತಗಳ್ಳಿ ಬಸವರಾಜ್, ಕೂರ್ಗಳ್ಳಿ ರವಿಕುಮಾರ್, ಪಿ.ನಾಗೇಂದ್ರ, ಮಾರ್ಬಳ್ಳಿ ಬಸವರಾಜ, ಸಿದ್ಧರಾಮ, ನಂಜುಂಡಸ್ವಾಮಿ, ಗಣೇಶ್, ವಾಜಮಂಗಲ ನಾಗೇಂದ್ರ, ಚಂದ್ರು, ಸ್ವಾಮಿ, ಪುಟ್ಟಸ್ವಾಮಿ, ಶಿವಕುಮಾರ್, ಲೀಲಾ ಸೇರಿ ನೂರಾರು ರೈತರು ಇದ್ದರು.
Related

You Might Also Like
KKRTC ಬಸ್ – ಟಿಪ್ಪರ್ ನಡುವೆ ಭೀಕರ ಅಪಘಾತ: ಕಂಡಕ್ಟರ್ ಸ್ಥಳದಲ್ಲೇ ಸಾವು, ಚಾಲಕ ಸೇರಿ ಹಲವರಿಗೆ ಗಾಯ
ಹೊಸಪೇಟೆ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಬಸ್ ಹಾಗೂ ಟಿಪ್ಪರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಿರ್ವಾಹಕ ಸ್ಥಳದಲ್ಲೇ ಮೃತಪಟ್ಟಿದ್ದು, ಹಲವರು ಗಾಯಗೊಂಡಿರುವ ಘಟನೆ ಚಿಲಕನಹಟ್ಟಿ (ಮರಿಯಮ್ಮನಹಳ್ಳಿ)...
KSRTC ನೌಕರರು ಮುಷ್ಕರ ನಡೆಸಿದರೆ ಕಠಿಣ ಕ್ರಮ: 2035ರವರೆಗೆ ಎಸ್ಮಾ ವಿಸ್ತರಣೆ – ಚರ್ಚೆ ಇಲ್ಲದೇ ಸದನದಲ್ಲಿ ವಿಧೇಯಕ ಅಂಗೀಕಾರ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರು ಮುಷ್ಕರ ನಡೆಸಿದರೆ ಕಠಿಣ ಕ್ರಮ ಕೈಗೊಳ್ಳುವ ಎಸ್ಮಾ ಕಾಯ್ದೆ 10 ವರ್ಷಗಳ ಅವಧಿಗೆ ವಿಸ್ತರಣೆಯಾಗುವ ಅತ್ಯಾವಶ್ಯಕ...
KSRTC ನೌಕರರ ಸಾಮಾನ್ಯ ಮರಣ ಪ್ರಕರಣಕ್ಕಿದ್ದ 10 ಲಕ್ಷ ರೂ. ಪರಿಹಾರ ಮೊತ್ತ 14 ಲಕ್ಷ ರೂ.ಗಳಿಗೆ ಏರಿಸಿ ಎಂಡಿ ಆದೇಶ
ಪರಿಷ್ಕರಿಸಿದ 14 ಲಕ್ಷ ರೂ. ಪರಿಹಾರ ಮೊತ್ತ ಸೆಪ್ಟೆಂಬರ್ 1-2025ರಿಂದ ಜಾರಿ ಬೆಂಗಳೂರು: 10 ಲಕ್ಷ ರೂ.ಗಳಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರ ಕುಟುಂಬ...
KSRTC- ಪ್ರತಿಷ್ಠಿತ ವಿಶ್ವ ದಾಖಲೆ ಸೇರಿದ ಶಕ್ತಿ ಯೋಜನೆ: ಅತೀವ ಸಂತಸ, ಹೆಮ್ಮೆಯ ಕ್ಷಣ- ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳಲ್ಲಿ 2023ರ ಜೂನ್ 11ರಿಂದ ಜಾರಿಗೆ ಬಂದ ಶಕ್ತಿ ಯೋಜನೆ ಪ್ರತಿಷ್ಠಿತ ವಿಶ್ವ ದಾಖಲೆಗೆ ಸೇರ್ಪಡೆ (Golden Book...
KKRTC ವಿಜಯಪುರ: ಸಂಸ್ಥೆ ನಿಯಮವನ್ನೇ ಗಾಳಿಗೆ ತೂರಿ ಮತ್ತೆ ಮತ್ತೆ ನೌಕರರಿಂದ ಸ್ವಂತ ಕಾರನ್ನು ಸರ್ವಿಸ್ ಮಾಡಿಸಿಕೊಳ್ಳುತ್ತಿರುವ ಡಿಎಂ
ವಿಜಯಪುರ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅದರಲ್ಲೂ ವಿಜಯಪುರ ವಿಭಾಗದಲ್ಲಿ ಇವರ ಬಹುತೇಕ ಎಲ್ಲ ಘಟಕ ವ್ಯವಸ್ಥಾಪಕರು ಸೇರಿದಂತೆ ವಿಭಾಗೀಯ ನಿಯಂತ್ರಣಾಧಿಕಾರಿಗಳೂ ಅಂಕುಶವಿಲ್ಲದ ಆನೆಯಂತಾಗಿದ್ದಾರೆ. ಅಂದರೆ...
ಕಾವೇರಿ ನದಿಗೆ 31,550 ಕ್ಯೂಸೆಕ್ ನೀರು ಬಿಡುಗಡೆ- ನದಿ ತಟದ ಜನರಿಗೆ ಸೂಚನೆ
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮತ್ತೆ ವರುಣನ ಆರ್ಭಟ ಹೆಚ್ಚಾಗಿದ್ದು ಈ ಹಿನ್ನೆಲೆ ಹಳೇ ಮೈಸೂರು ಭಾಗದ ಜೀವನಾಡಿ ಕೆಆರ್ಎಸ್ ಡ್ಯಾಂಗೆ ಒಳಹರಿವು ಹೆಚ್ಚಾಗುತ್ತಿದೆ. ಹೀಗಾಗಿ ನದಿ...
BMTC: ಬ್ರೇಕ್ ಫೇಲಾಗಿ ಕಂದಕಕ್ಕೆ ನುಗ್ಗಿದ ಬಸ್- ಅದೃಷ್ಟವಶಾತ್ ಪ್ರಯಾಣಿಕರು ಸೇಫ್
ಆನೇಕಲ್: ಬ್ರೇಕ್ ಫೇಲಾಗಿ ರಸ್ತೆ ಬದಿಯ ಕಂದಕಕ್ಕೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಬಸ್ ನುಗ್ಗಿರುವ ಘಟನೆ ಬೆಂಗಳೂರು ಹೊರವಲಯ ಜಿಗಣಿ ಸಮೀಪದ ಹರಪ್ಪನಹಳ್ಳಿ ಬಳಿ...
ಹೆಬ್ಬಾಳ ಭಾಗದ ಬಹುದೊಡ್ಡ ಟ್ರಾಫಿಕ್ ಸಮಸ್ಯೆಗೆ ಕೊನೆಗೂ ಇಂದು ಸಿಗುತ್ತಿದೆ ಮುಕ್ತಿ
ಬೆಂಗಳೂರು: ರಾಜ್ಯ ರಾಜಧಾನಿಯ ಹೆಬ್ಬಾಳ ಭಾಗದ ಬಹುದೊಡ್ಡ ಟ್ರಾಫಿಕ್ ಸಮಸ್ಯೆಗೆ ಕೊನೆಗೂ ಇಂದು ಮುಕ್ತಿ ಸಿಗುತ್ತಿದೆ. ಹೌದು! ಬಹುನಿರೀಕ್ಷಿತ ಹೆಬ್ಬಾಳ ವಿಸ್ತರಿತ ಮೇಲ್ಸೇತುವೆ ಉದ್ಘಾಟನೆ ಆಗುತ್ತಿದೆ. ಇಂದು...
ಸರ್ಕಾರಿ ಬಸ್ ಗಾಜು ಒಡೆದು, ಚಾಲನಾ ಸಿಬ್ಬಂದಿ ಮೇಲೆ ಬೈಕ್ ಸವಾರನಿಂದ ಹಲ್ಲೆ
ಹುಬ್ಬಳ್ಳಿ: ಗದುಗಿನಿಂದ ಹುಬ್ಬಳ್ಳಿಗೆ ಬರುತ್ತಿದ್ದ ಸರ್ಕಾರಿ ಸಾರಿಗೆ ಬಸನ್ನು ನಗರದ ಗದಗ ರಸ್ತೆ ಬಳಿ ಬೈಕ್ ಸವಾರನೊಬ್ಬ ಅಡ್ಡಗಟ್ಟಿ ಬಸ್ ಗಾಜು ಒಡೆದು ಹಾಕಿರುವುದಲ್ಲದೆ ಚಾಲಕ ಹಾಗೂ...