NEWSಕೃಷಿನಮ್ಮರಾಜ್ಯ

ಕಬ್ಬು ಬೆಳೆಗಾರರಿಗೆ ನ್ಯಾಯಯುತ ಬೆಲೆ ನಿಗದಿ ಮಾಡಿ: ರೈತರ ಆಗ್ರಹ -ಡಿಸಿಗೆ ಮನವಿ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಕಬ್ಬು ಬೆಳೆಗಾರರಿಗೆ ನ್ಯಾಯಯುತ ಬೆಲೆ ನಿಗದಿ ಮಾಡುವಂತೆ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರನ್ನು ಭೇಟಿ ಮಾಡಿದ ಮೈಸೂರು ಜಿಲ್ಲಾ ಘಟಕದ ರಾಜ್ಯ ಕಬ್ಬು ಬೆಳೆಗಾರರ ಸಂಘದ ಪದಾಧಿಕಾರಿಗಳು ಒತ್ತಾಯಿಸಿದ್ದಾರೆ.

ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ರಾಜ್ಯ ಕಬ್ಬು ಬೆಳೆಗಾರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬರಡನಪುರ ನಾಗರಾಜ್ ನೇತೃತವದಲ್ಲಿ ಡಿಸಿ ಅವರನ್ನು ಭೇಟಿ ಮಾಡಿದ ರೈತರು, ಕಬ್ಬಿನ ಸಕ್ಕರೆ ಇಳುವರಿಯಲ್ಲಿ, ತೂಕದಲ್ಲಿ ಮೋಸ ಮಾಡುವ ಬಣ್ಣಾರಿ ಸಕ್ಕರೆ ಕಾರ್ಖಾನೆಯವರು ಈ ವ್ಯಾಪ್ತಿಯ ಕಬ್ಬನ್ನು ಬೇರೆ ಜಿಲ್ಲೆಗಳ ಕಾರ್ಖಾನೆಗಳಿಗೆ ಸಾಗಾಣಿಕೆ ಮಾಡಲು ನಿರ್ಬಂಧ ಹೇರಬಾರದು ಎಂದು ಆಗ್ರಹಿಸಿ ಮನವಿ ಪತ್ರ ಸಲ್ಲಿಸಿದರು.

ಇನ್ನು ಪ್ರಸಕ್ತ ಬರದ ಹಿನ್ನೆಲೆಯಲ್ಲಿ ಕಬ್ಬು ಬೆಳೆ ಕಡಿಮೆ ಇದ್ದು ಕಬ್ಬು ಉತ್ಪಾದನೆ ವೆಚ್ಚ ಅಧಿಕವಾಗಿರುವ ಕಾರಣ ಟನ್ ಕಬ್ಬಿಗೆ 4000 ರೂ. ನಿಗದಿ ಪಡಿಸಬೇಕು. ಕೃಷಿ ಚಟುವಟಿಕೆ ನಡೆಸಲು ರೈತರರು ಬರದ ಹಿನ್ನೆಲೆ ಆರ್ಥಿಕ ಮುಗ್ಗಟ್ಟು ಎದುರಿಸುತ್ತಿದ್ದು, ಎಲ್ಲ ಬ್ಯಾಂಕ್‌ಗಳೂ ಕೂಡ ಸಹಕಾರ ಸಂಘಗಳ ಬ್ಯಾಂಕ್‌ಗಳಂತೆ ಬಡ್ಡಿ ರಹಿತ ಸಾಲ ನೀಡಲು ಕ್ರಮ ಕೈಗೊಳ್ಳಬೇಕು.

ಅಲ್ಲದೆ ಎಲ್ಲ ರೈತರಿಗೂ ಬರ ಪರಿಹಾರ ದೊರಕಿದರೆ ಕೃಷಿ ಚಟುವಟಿಕೆ ನಡೆಸಲು ಹೆಚ್ಚಿನ ಅನುಕೂಲವಾಗುತ್ತದೆ, ಈ ಬಗ್ಗೆ ತುರ್ತು ಅಗತ್ಯ ಕ್ರಮ ಕೈಗೊಳ್ಳಬೇಕು. ರಾಜ್ಯ ಸರ್ಕಾರ ಹಿಂದಿನ ವರ್ಷ ಘೋಷಣೆ ಮಾಡಿದ ಕಬ್ಬಿನ ಹೆಚ್ಚುವರಿ ದರ ಟನ್ ಕಬ್ಬಿಗೆ 150 ರೂ. ನಿಗದಿ ಮಾಡಿರುವುದನ್ನು ಬಣ್ಣಾರಿ ಸಕ್ಕರೆ ಕಾರ್ಖಾನೆ ರೈತರಿಗೆ ಪಾವತಿ ಮಾಡಿಲ್ಲ. ಕಾರ್ಖಾನೆ ಆರಂಭಕ್ಕೆ ಮೊದಲು ಕೊಡಿಸಲು ಕ್ರಮ ಕೈಗೊಳ್ಳಿ ಬರಗಾಲ ಸಂಕಷ್ಟದಲ್ಲಿ ರೈತರಿಗೆ ಹಣ ಕೊಡಿಸಿದರೆ ತುಂಬಾ ಅನುಕೂಲವಾಗಲಿದೆ ಎಂದು ತಿಳಿಸಿದರು.

ಮಳೆಗಾಲ ಆರಂಭವಾಗಿರುವ ಕಾರಣ ಕೃಷಿ ಚಟುವಟಿಕೆ ಮಾಡಲು ಹಾಗೂ ಬಾವಿಗಳ ಅಂತರ್ಜಲ ವೃದ್ಧಿಗೆ ಜಿಲ್ಲೆಯ ಎಲ್ಲ ಕೆರೆ, ಕಟ್ಟೆಗಳ ಹಾಗೂ ಕಾಲುವೆಗಳ ಹೂಳೆತ್ತುವ ಕಾರ್ಯ ಕೈಗೊಳ್ಳಬೇಕು. ಬ್ಯಾಂಕುಗಳ ಮುಂದೆ ರೈತರಿಗೆ ದೊರಕುವ ಸಾಲ ಮತ್ತು ಸೌಲಭ್ಯಗಳ ನಾಮಫಲಕ ಹಾಕುವಂತೆ ಕ್ರಮ ಕೈಗೊಳ್ಳಬೇಕು.

ಮಳೆ ಗಾಳಿಗೆ ಮೈಸೂರು ಜಿಲ್ಲೆಯಾದ್ಯಂತ ಸಾವಿರಾರು ಎಕರೆ ಬಾಳೆ ನಷ್ಟವಾಗಿದ್ದು ಪರಿಹಾರವನ್ನು ತಕ್ಷಣವೇ ನೀಡಬೇಕು ಹಾಗೂ ನರೇಗಾದಡಿ ಕೆಲಸ ಮಾಡಿರುವವರಿಗೆ ಕೂಲಿ ಹಣವನ್ನು ನೀಡದೆ ಬಾಕಿ ಉಳಿಸಿಕೊಂಡಿದ್ದು ಮತ್ತು ಕಳೆದ ವರ್ಷದ ಸಾಮಗ್ರಿ ಮೊತ್ತವನ್ನು ನೀಡಿಲ್ಲ ಕೂಡಲೇ ಈ ಬಗ್ಗೆ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.

ಖಾಸಗಿ ಶಾಲಾ, ಕಾಲೇಜುಗಳಲ್ಲಿ ಗ್ರಾಮೀಣ ಭಾಗದ ರೈತರ ಮಕ್ಕಳು, ಕೂಲಿ ಕಾರ್ಮಿಕರ, ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಪಡೆದುಕೊಳ್ಳಲು ದೇಣಿಗೆ ಮತ್ತು ಶುಲ್ಕ ಸುಲಿಗೆ ಮಾಡುತ್ತಿದ್ದು ಪಾವತಿಸಲು ಕಷ್ಟಕರವಾದ ಕಾರಣ ಶಿಕ್ಷಣದಿಂದ ವಂಚಿತರಾಗುತ್ತಾರೆ ಆದ್ದರಿಂದ ಇದಕ್ಕೆ ಕಡಿವಾಣ ಹಾಕಲು ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಕಾರ್ಖಾನೆ ತೆರೆಯಲು ಅವಕಾಶ ಕೊಡಬಾರದು ಹಾಗೇನಾದರೂ ಕೊಟ್ಟರೆ ಕಾರ್ಖಾನೆ ಮುಂದೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಇಂದಿನ ಸಭೆಯಲ್ಲಿ ಜಿಲ್ಲಾ ಕಾರ್ಯಧ್ಯಕ್ಷ ಕಿರಗಸೂರು ಶಂಕರ್, ಜಿಲ್ಲಾ ಉಪಾಧ್ಯಕ್ಷ ಮಾರ್ಬಳ್ಳಿ ನೀಲಕಂಠಪ್ಪ, ತಿ.ನರಸೀಪುರ ತಾಲೂಕು ಅಧ್ಯಕ್ಷ ಕುರುಬೂರು ಸಿದ್ದೇಶ್, ನಂಜನಗೂಡು ತಾಲೂಕು ಅಧ್ಯಕ್ಷ ದೇವನೂರು ವಿಜೇಂದ್ರ, ಪ್ರದೀಪ್ ಕುರುಬೂರು, ಅಂಬಳೆ ಮಂಜುನಾಥ್, ಸಾತ್ಗಳ್ಳಿ ಬಸವರಾಜು, ವರಕೋಡು ನಾಗೇಶ್, ರಾಜೇಶ್,ಕೂಡನಹಳ್ಳಿ ಸೋಮಣ್ಣ, ವಿಜಯೇಂದ್ರ, ಷಡಕ್ಷರಿ ಸ್ವಾಮಿ, ಕಿರಣ್ ನಂಜುಂಡಸ್ವಾಮಿ, ನಾಗೇಶ್ ದೊಡ್ಡ ಕಾಟೂರು, ಮಲ್ಲ ಶೆಟ್ಟಿ, ಪ್ರಕಾಶ್, ವಾಜಮಂಗಲ ಮಹದೇವು ಮಾಲಿಂಗ ನಾಯಕ, ಸಿದ್ದರಾಮ, ಗಿರೀಶ್, ಚಂದ್ರು, ಪ್ರಕಾಶ್, ಸೋಮಶೇಖರ್, ಷಡಕ್ಷರಿ ಮುಂತಾದವರು ಭಾಗವಹಿಸಿದ್ದರು.

Leave a Reply

error: Content is protected !!
LATEST
KSRTC ಬಸ್‌ನಲ್ಲಿ ಪ್ರಯಾಣಿಸುವಾಗ ಟಿಕೆಟ್‌ ಕಳೆದುಕೊಂಡ ಮಹಿಳೆ: ತನಿಖಾಧಿಕಾರಿಗಳಿಗೆ ಹೆದರಿ ಬಸ್‌ನಿಂದ ಕೆಳಗಿಳಿಸಿದ ಕಂಡ... ಜುಲೈ 7ರಂದು KSRTC ನೌಕರರ ಕ್ರೆಡಿಟ್‌ ಸಹಕಾರ ಸಂಘದ ಚುನಾವಣೆ- ಜೂ.27ರಿಂದ ನಾಮಪತ್ರ ಸಲ್ಲಿಕೆ ಕೇಂದ್ರದ ಬೃಹತ್ ಕೈಗಾರಿಕೆ ಸಚಿವ ಎಚ್‌ಡಿಕೆಗೆ ಜೆಡಿಎಸ್ ನಾಯಕರಿಂದ ಅದ್ದೂರಿ ಸ್ವಾಗತ ಪ್ರತಿ ಮನೆಯಿಂದ ₹100 ಘನತ್ಯಾಜ್ಯ ಶುಲ್ಕ ಸಂಗ್ರಹಕ್ಕೆ ಎಎಪಿ ವಿರೋಧ - ಜೂ.17ರಿಂದ ಮನೆಮನೆಗೆ ತೆರಳಿ ಜಾಗೃತಿ ಅಭಿಯಾನ KSRTC: ಬಾನಂದೂರು - ಶ್ರೀಕ್ಷೇತ್ರ ಆದಿ ಚುಂಚನಗರಿ ನಡುವಿನ ಬಸ್‌ ಸಂಚಾರಕ್ಕೆ ಶ್ರೀ ಅನ್ನದಾನೇಶ್ವರನಾಥ ಸ್ವಾಮೀಜಿ ಚಾಲನೆ KSRTC: ಜೂ.15ರಂದು ನೌಕರರ 38 ತಿಂಗಳ ವೇತನ ಹಿಂಬಾಕಿ ಸಂಬಂಧ ಕರೆದಿದ್ದ ಎಂಡಿಗಳ ಸಭೆ ಮುಂದೂಡಿಕೆ KSRTC- 3ನಿಗಮಗಳ 15 ಡಿಸಿಗಳ ವರ್ಗಾವಣೆ ಮಾಡಿ ಆದೇಶ: ಸಿಪಿಎಂ KSRTC: ಅಪಘಾತದಿಂದ ಮೃತಪಟ್ಟ ನಾಲ್ವರು ನೌಕರರ ಕುಟುಂಬಕ್ಕೆ ತಲಾ 1ಕೋಟಿ ರೂ. ಚೆಕ್‌ ವಿತರಣೆ KSRTC: ನಾಳೆಯಿಂದ ಶ್ರೀ ಬಾಲಗಂಗಾಧರ ನಾಥ ಸ್ವಾಮೀಜಿಗಳ ಜನ್ಮಸ್ಥಳ ಬಾನಂದೂರು- ಆದಿ ಚುಂಚನಗಿರಿಗೆ ನೇರ ಬಸ್ ಸೌಕರ್ಯ KSRTC: ಜೂ.15ರಂದು ನೌಕರರ 38 ತಿಂಗಳ ವೇತನ ಹಿಂಬಾಕಿ ಪಾವತಿ ಸಂಬಂಧ ಸಚಿವರ ಅಧ್ಯಕ್ಷತೆಯಲ್ಲಿ ಎಂಡಿಗಳ ಸಭೆ