NEWSಕೃಷಿನಮ್ಮಜಿಲ್ಲೆ

ಮಾವು-ಹಲಸು ಮಾರಾಟ ಮೇಳ: ನೋಂದಾಯಿಸಲು ರೈತರಿಗೆ ಕರೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು ಗ್ರಾಮಾಂತರ: ಒಂದು ಋತುಮಾನ ಬೆಳೆಯಾಗಿರುವ ಮಾವು ಮತ್ತು ಹಲಸು ಪ್ರಸ್ತುತ ಹಂಗಾಮಿನಲ್ಲಿ ಕಟಾವಿಗೆ ಬಂದಿದ್ದು ಮಾವು, ಹಲಸು ಬೆಳೆಗಾರ ರೈತರಿಗೆ ಉತ್ತಮ ಬೆಲೆ ಸಿಗುವಂತೆ ಮಾಡುವ ಹಿನ್ನೆಲೆಯಲ್ಲಿ ಜಿಲ್ಲೆಯ ತೋಟಗಾರಿಕೆ ಇಲಾಖೆ ವತಿಯಿಂದ “ಮಾವು-ಹಲಸು ಪ್ರದರ್ಶನ ಮತ್ತು ಮಾರಾಟ ಮೇಳ ಆಯೋಜಿಸಲು ಉದ್ದೇಶಿಸಲಾಗಿದೆ.

ಹೀಗಾಗಿ ಈ ಮೇಳದಲ್ಲಿ 50ಕ್ಕೂ ಹೆಚ್ಚು ವಿವಿಧ ಮಾವು ತಳಿ, ಹಲಸು ತಳಿ ಪ್ರದರ್ಶನ ಮತ್ತು ಮಾರಾಟದ ವ್ಯವಸ್ಥೆಯನ್ನು ಹಮ್ಮಿಕೊಂಡು ರೈತರಿಂದ ನೇರವಾಗಿ ಖರೀದಿಸಲು ಅವಕಾಶ ಕಲ್ಪಿಸಲಾಗುತ್ತಿದೆ. ಆದ್ದರಿಂದ ರೈತರು ತಾವು ಬೆಳೆದ ಮಾವು ಮತ್ತು ಹಲಸು ಬೆಳೆಗಳನ್ನು ಮಾರಾಟ ಮಾಡಲು ಮೇ 8 ರಿಂದ 14ರ ವರೆಗೆ ಹತ್ತಿರದ ತಾಲೂಕು ತೋಟಗಾರಿಕೆ ಕಚೇರಿಯಲ್ಲಿ ನೊಂದಾಯಿಸಿಕೊಳ್ಳಬೇಕು ಎಂದು ತೋಟಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರ ದೂರವಾಣಿ ಸಂಖ್ಯೆ 9448999214, ದೇವನಹಳ್ಳಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ದೂ.ಸಂಖ್ಯೆ 9480461234.

ದೊಡ್ಡಬಳ್ಳಾಪುರ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ದೂ.ಸಂಖ್ಯೆ 94821296648, ಹೊಸಕೋಟೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ದೂ.ಸಂಖ್ಯೆ 9880210892 ಹಾಗೂ ನೆಲಮಂಗಲ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ದೂ.ಸಂಖ್ಯೆ 9880461607 ಗೆ ಸಂಪರ್ಕಿಸಬಹುದು.

Deva
the authorDeva

Leave a Reply

error: Content is protected !!
Latest news
ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗೆ 993 ರೂ. ಹೆಚ್ಚಳ- ಭಾರೀ ಏರಿಕೆ ಮೇ 1ರಿಂದಲೇ ಜಾರಿ KSRTC: ಮೇ 4ರಂದು ಸರ್ಕಾರದ ವಿಳಂಬ ನೀತಿ ಖಂಡಿಸಿ ಸಾರಿಗೆ ನೌಕರರ ಒಕ್ಕೂಟದಿಂದ ಧರಣಿ ಸರ್ಕಾರದ ಧೋರಣೆ ಖಂಡಿಸಿ ರಾಜ್ಯ ಸಾರಿಗೆ ನೌಕರರಿಂದ ಕರಾಳ ಕಾರ್ಮಿಕ ದಿನಾಚರಣೆ- ಡ್ಯೂಟಿ ಮೇಲೆ ಮೌನ ಪ್ರತಿಭಟನೆ GBA ದಕ್ಷಿಣ: ಮಳೆ ಬಂದಾಗ ಹೆಚ್ಚು ನೀರು ನಿಲ್ಲುವ ಪ್ರದೇಶಗಳಿಗೆ ಆಯುಕ್ತ ರಮೇಶ್ ಭೇಟಿ ಸರ್ಕಾರ ಸಾರಿಗೆ ನೌಕರರ ಏಳಿಗೆ ಬಗ್ಗೆ ಯೋಚಿಸಲೂ ಆಗದಂತಹ ನಿಕೃಷ್ಟ ಹಂತ ತಲುಪಿರುವುದು ದುರಂತವೇ ಸರಿ: ವಿಪಕ್ಷ ನಾಯಕ ಆರ್‌... KKRTC: ಭ್ರಷ್ಟ ಅಧಿಕಾರಿಗಳ ವಿರುದ್ಧ ಎಂಡಿಗೆ ಲಿಖಿತ ದೂರು ಕೊಟ್ಟು 3 ತಿಂಗಳುಗಳು ಕಳೆದರೂ ಯಾವುದೇ ಕ್ರಮವಿಲ್ಲ ಏಕೆ- ಯಾ... KSRTC- ನಮ್ಮ ಹೋರಾಟ ಕಡೆಗಣಿಸುತ್ತಿದ್ದೀರಿ ಇದು ನಿಮಗೆ ಸಲ್ಲ- ಮುಂದಿನ ದಿನಗಳಲ್ಲಿ ತಕ್ಕಪಾಠ ಕಲಿಸುತ್ತೇವೆ ಕೇಂದ್ರ ಸರ್... ಸಾರಿಗೆ ನೌಕರರಿಗೆ 26 ತಿಂಗಳ ವೇತನ ಹಿಂಬಾಕಿ ಪಾವತಿಗೆ ಮೊದಲ ಹಂತವಾಗಿ 450 ಕೋಟಿ ರೂ. ಬಿಡುಗಡೆ ಮಾಡಿದ ಸರ್ಕಾರ ! KSRTC: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಗುಡ್ಡಕ್ಕೆ ಡಿಕ್ಕಿ ಹೊಡೆದು ನಿಂತ ಬಸ್‌- ತಪ್ಪಿದ ಭಾರಿ ಅನಾಹುತ KSRTC ಪ್ರಮುಖ ಬೇಡಿಕೆಗಳ ಸರ್ಕಾರ ಇನ್ನೂ ನೌಕರರ ಶ್ರಮಕ್ಕನ್ವಯ ಇತ್ಯರ್ಥಪಡಿಸಿಲ್ಲ: ಜ್ಯೋತಿ ಅನಂತಸುಬ್ಬರಾವ್ ಅಸಮಾಧಾನ