NEWS

ಡಿ.23 ರಂದು ವಿಶ್ವ ರೈತ ದಿನಾಚರಣೆ ಅಂಗವಾಗಿ ಧಾರವಾಡದಲ್ಲಿ ರೈತ ಸಮಾವೇಶ: ದೇವರಾಜ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದಿಂದ ಇದೇ ಡಿ.23 ರಂದು ಧಾರವಾಡದ ಹಳಿಯಾಳ ರಸ್ತೆಯಲ್ಲಿರುವ ಅಕ್ಕಮಹಾದೇವಿ ಆಶ್ರಮದಲ್ಲಿ ಬೆಳಗ್ಗೆ 11 ಗಂಟೆಗೆ ವಿಶ್ವರೈತ ದಿನಾಚರಣೆ ಅಂಗವಾಗಿ ರಾಜ್ಯ ಮಟ್ಟದ ರೈತ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘ ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್ ತಿಳಿಸಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಅಂದು ಸ್ವಾಭಿಮಾನಿ ರೈತರ ಪಡೆಯೊಂದಿಗೆ ಸಮಾವೇಶದ ಜತೆಗೆ ವಿಶ್ವರೈತ ದಿನಾಚರಣೆ ಮಾಡುತ್ತಿದ್ದೇವೆ. ಕಳೆದ ಬಾರಿ ಮೈಸೂರಿನಲ್ಲಿ ಆಚ ರಿಸಲಾಗಿತ್ತು ಈ ವರ್ಷ ಧಾರವಾಡದಲ್ಲಿ ಆಚರಿಸುತ್ತಿದ್ದು ಈ ಸಮಾವೇಶದಲ್ಲಿ ರೈತರಿಗಾಗಿ ದುಡಿಯುವ ಹಾಗೂ ದೇಶದ ಅನ್ನಕ್ಕಾಗಿ ಅವಿರತವಾಗಿ ದುಡಿಯುತ್ತಿರುವ ರೈತರನ್ನು ಗುರುತಿಸಿ ಕಾಯಕ ಯೋಗಿ ಪುರಸ್ಕಾರ ನೀಡಿ ಗೌರವಿಸುವ ಕಾರ್ಯವನ್ನು ಸಮಾವೇಶದಲ್ಲಿ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

ದೆಹಲಿ ರೈತರ ಹೋರಾಟದಲ್ಲಿ ಒಂದು ವರ್ಷ ಕಾಲ ನಿರಂತರ ಹೋರಾಟ ನಡೆಸಿದ ಸಂಯುಕ್ತ ಕಿಸಾನ್ ಮೋರ್ಚಾ ರಾಷ್ಟ್ರೀಯ ಮುಖಂಡ ಪಂಜಾಬಿನ ಜಗಜಿತ್ ಸಿಂಗ್ ಧಲೇವಾಲ ಈ ಸಮಾವೇಶವನ್ನು ಉದ್ಘಾಟಿಸಲಿದ್ದಾರೆ. ಸಮಾವೇಶದ ಅಧ್ಯಕ್ಷತೆಯನ್ನು ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ವಹಿಸಲಿದ್ದಾರೆ.

ಕಬ್ಬಿನ ಉತ್ಪಾದನೆ ಹೆಚ್ಚಿಸುವ ತಂತ್ರ ಜ್ಞಾನದ ಬಗ್ಗೆ ಒಂದು ಎಕರೆಗೆ 160 ಟನ್ ಕಬ್ಬು ಬೆಳೆಯುತ್ತಿರುವ ಮಹಾರಾಷ್ಟ್ರದ ಕೃಷಿ ರತ್ನ ಡಾ. ಸಂಜು ಮಾನೆ ಅವರು ತಮ್ಮ ಅನುಭವ ಹಂಚಿಕೊಳ್ಳಲಿದ್ದಾರೆ. ಕಬ್ಬಿನಿಂದ ಬರುವ ಎಥನಾಲ್ ಉತ್ಪಾದನೆ ಹಾಗೂ ಬಳಕೆ ಬಗ್ಗೆ ಬೆಂಗಳೂರಿನ ಜಿಕೆವಿಕೆಯ ಪರಿಣಿತರಾದ ಡಾ. ಹರಿಣಿಕುಮಾರ್ ರೈತರಿಗೆ ಮಾಹಿತಿ ನೀಡಿಲಿದ್ದಾರೆ.

ರೈತ ಚಳವಳಿಯ ಮಹತ್ವ ಕುರಿತು ಮಾತನಾಡಲು ರೈತಪರ ಚಿಂತಕರು ,ಕೃಷಿ ಸಾಹಿತಿಗಳು ಆಗಮಿಸಲಿದ್ದಾರೆ. ಹೀಗಾಗಿ ಈ ಸಮಾವೇಶಕ್ಕೆ ರೈತರು ಸ್ವಯಂ ಪ್ರೇರಿತರಾಗಿ ಸಹಸ್ರಾರು ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸಬೇಕೆಂದು ದೇವರಾಜ್‌ ಮನವಿ ಮಾಡಿದ್ದಾರೆ.

Leave a Reply

error: Content is protected !!
LATEST
ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ : ಸಚಿವ ಎಚ್.ಕೆ. ಪಾಟೀಲ ಹಸಿರು ಪಟಾಕಿ ಬಳಸಿ ದೀಪಾವಳಿ ಹಬ್ಬ ಆಚರಿಸಿ- ನಿಷೇಧಿತ ಪಟಾಕಿ ಮಾರಾಟ, ಬಳಕೆ ನಿಷೇಧ: ಜಿಲ್ಲಾಧಿಕಾರಿ ಡಾ.ಶಿವಶಂಕರ ಕೆಂಗೇರಿ ಕೆರೆಯಲ್ಲಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ₹5 ಲಕ್ಷ ಪರಿಹಾರ APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ