NEWSಕೃಷಿದೇಶ-ವಿದೇಶನಮ್ಮರಾಜ್ಯ

ಕೃಷಿ ಸಾಲ ಸಂಪೂರ್ಣ ಮನ್ನಾಕ್ಕಾಗಿ ಡಿ.23 ರಂದು ಬೆಂಗಳೂರಿನಲ್ಲಿ ಮಹಾಧಿವೇಶನ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ದೇಶದ ಎಲ್ಲ ರಾಜ್ಯಗಳಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೆತರ) ಸಂಘಟನೆಯಿಂದ ಕಿಸಾನ್ ಮಹಾಪಂಚಾಯತ್ ಕೇರಳದ ಪಾಲಕಾಡನಲ್ಲಿ ಡಿ.20ರಂದು, ತಮಿಳುನಾಡಿನ ಚೆನ್ನೈನಲ್ಲಿ ಡಿ.21ರಂದು ಕರ್ನಾಟಕದ ಬೆಂಗಳೂರಿನಲ್ಲಿ ಡಿ.23ರಂದು ಮತ್ತು ತೆಲಂಗಾಣದ ಹೈದರಾಬಾದ್‌ದಲ್ಲಿ ಡಿ.26 ರಂದು ಬೃಹತ್ ಅಧಿವೇಶನಗಳನ್ನು ನಡೆಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ರೈತರ ಎಚ್ಚರಿಕೆಯ ಶಕ್ತಿ ಪ್ರದರ್ಶನ ಮಾಡಲಾಗುವುದು ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್‌ ತಿಳಿಸಿದ್ದಾರೆ.

ಇಂದು ನಗರದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರ ಬೆಳೆ ಸಾಲದ ಬಡ್ಡಿಮನ್ನ ಎನ್ನುವುದು ನಾಟಕೀಯವಾಗಿದೆ. ರೈತರ ಸಾಲಮನ್ನಾ ಆಗದಂತೆ ವಂಚಿಸಲು ಬ್ಯಾಂಕುಗಳು ಬಡ್ಡಿ ದುಪ್ಪಟ್ಟು ಆಗುತ್ತದೆ ಸುಸ್ತಿಯಾಗುತ್ತದೆ ಎಂದು ಹೆದರಿಸಿ ಆಂಗ್ಲ ಭಾಷೆಯ ಪತ್ರಕ್ಕೆ ರೈತರ ಸಹಿ ಪಡೆದು ಸಾಲ ನವೀಕರಣ ಮಾಡುತ್ತಿದ್ದಾರೆ. ಇದರಿಂದ ರೈತರು ಸಾಲ ಮನ್ನಾದಿಂದ ವಂಚಿತವಾಗುತ್ತಾರೆ ಈ ಬಗ್ಗೆ ರೈತರು ಜಾಗೃತರಾಗಿರಬೇಕು ಎಂದು ಹೇಳಿದರು.

ಕಳೆದ ಮೂರು ವರ್ಷಗಳಿಂದ ಅತಿವೃಷ್ಟಿ ಪ್ರವಾಹ ಹಾನಿ ಅನಾವೃಷ್ಟಿಯಿಂದ ಬರಗಾಲಕ್ಕೆ ತುತ್ತಾಗಿರುವ ರಾಜ್ಯದ ಎಲ್ಲಾ ರೈತರ ಕೃಷಿ ಸಾಲ ಸಂಪೂರ್ಣ ಮನ್ನಾ ಮಾಡಬೇಕು ಕೃಷಿ ಸಾಲ ಪಡೆದ ರೈತರು ಬೆಳೆ ಬೆಳೆಯಲು ಹೂಡಿಕೆ ಮಾಡಿ ಬೆಳೆ ನಾಶವಾಗಿ ಕೈಸುಟ್ಟಕೊಂಡು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅದಕ್ಕಾಗಿ ಸಾಲಮನ್ನಾ ಆಗಲೇಬೇಕು.

ಕೈಗಾರಿಕೆ, ಉದ್ಯಮಿಗಳಿಗೆ ಸಂಕಷ್ಟದ ನೆರವು ಎಂದು 12 ಲಕ್ಷ ಕೋಟಿ ಮನ್ನಾ ಮಾಡಿರುವ ರೀತಿ ರೈತರ ಸಾಲ ಮನ್ನಾ ಆಗಬೇಕು, ಇದೇ ದಿನ ರೈತರು ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ 23 ರಂದು ಸಾಲ ಮನ್ನಾ ಕೋರಿಕೆ ಅರ್ಜಿ ಸಲ್ಲಿಸಲಾಗುತ್ತದೆ ಸಾಲ ಪಡೆದ ರೈತರೇ ಈ ಅಧಿವೇಶನಕ್ಕೆ ಸ್ವಯಂ ಪ್ರೇರಿತರಾಗಿ ಬರಬೇಕು ಎಂದು ಕುರುಬೂರು ಶಾಂತಕುಮಾರ್ ಮನವಿ ಮಾಡಿದ್ದಾರೆ.

ಎಲ್ಲ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ಕಾನೂನು ಜಾರಿ ಆಗಬೇಕು ಸ್ವಾಮಿನಾಥನ್ ಆಯೋಗದ ವರದಿಯಂತೆ ಕನಿಷ್ಠ ಬೆಂಬಲ ಬೆಲೆ ನಿಗದಿಯಾಗಬೇಕು ಪ್ರಧಾನಿಯವರು ರೈತರಿಗೆ ಭರವಸೆ ನೀಡಿದಂತೆ ಕೇಂದ್ರ ಸರ್ಕಾರ ಕೂಡಲೇ ಈ ಕಾನೂನು ಜಾರಿ ಮಾಡಬೇಕು. ರೈತರು ಬರಗಾಲದ ಸಂಕಷ್ಟದಿಂದ ನರಳುತ್ತಿದ್ದಾರೆ, ರಾಜ್ಯ ಸರ್ಕಾರ 2000 ರೂ ಭಿಕ್ಷಾ ರೂಪದ ಪರಿಹಾರ ನೀಡುವುದು ಬೇಡ ಸಂಪೂರ್ಣ ಬೆಳೆ ನಷ್ಟ ಪರಿಹಾರ ಕನಿಷ್ಠ 25,000 ರೂ. ನಿಡಬೇಕು.

ಪಂಜಾಬ್ ರಾಜ್ಯದಲ್ಲಿ ಟನ್ ಕಬ್ಬಿಗೆ 4000 ನಿಗದಿ ಮಾಡಿದ್ದಾರೆ, ರಾಜ್ಯದಲ್ಲಿ ಎರಡು ಮೂರು ಸಭೆಗಳಾದರೂ ಬಣ್ಣಾರಿ ಸಕ್ಕರೆ ಕಾರ್ಖಾನೆ ಮಣಿಸಲು ಸರ್ಕಾರಕ್ಕೆ ಸಾಧ್ಯವಾಗಿಲ್ಲ ತೂಕದಲ್ಲಿ ಮೋಸ ಇಳುವರಿಯಲ್ಲಿ ಮೋಸ ಹಣ ಪಾವತಿಯಲ್ಲಿ ಮೋಸ ಮಾಡುತ್ತಿದ್ದರೂ ಸರ್ಕಾರ ಕಾರ್ಖಾನೆಗಳ ಮೇಲೆ ಕಠಿಣ ಕ್ರಮ ಕೈಗೊಳ್ಳುತ್ತಿಲ್ಲ, ಕೂಡಲೇ ಬಣ್ಣಾರಿ ಕಾರ್ಖಾನೆ ವಂಚನೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ತನಿಖಾ ಸಮಿತಿ ರಚಿಸಿ ಕ್ರಮ ಕೈಗೊಳ್ಳಲಿ.

ದೇಶದ 140 ಕೋಟಿ ಜನರಿಗೆ ಆಹಾರ ಉತ್ಪಾದಿಸಲು ತಮ್ಮ ಜೀವನವನ್ನೆ ತ್ಯಾಗ ಮಾಡುತ್ತಿರುವ 60 ವರ್ಷ ಪೂರೈಸಿದ ರೈತರಿಗೆ ತಿಂಗಳಿಗೆ ಕನಿಷ್ಠ 5000 ಪಿಂಚಣಿ ನೀಡುವ ಯೋಜನೆ ಜಾರಿಗೆ ತರಬೇಕು. ರೈತನ ಮಗನ ಮದುವೆಯಾಗುವ ವಧುವಿಗೆ ಸರ್ಕಾರಿ ಕೆಲಸದಲ್ಲಿ ಶೇಕಡ 10 ಮೀಸಲಾತಿ ನೀಡುವ ನೀತಿ ಜಾರಿಗೆ ತರಬೇಕು.

ರೈತರ ಮಕ್ಕಳು ಕೃಷಿಯಿಂದ ವಲಸೆ ಹೋಗುವುದನ್ನು ತಪ್ಪಿಸಬೇಕು. ದೇಶದ ರೈತರನ್ನು ಸಂರಕ್ಷಿಸಲು ವಿಶ್ವ ವ್ಯಾಪಾರ ಒಪ್ಪಂದದಿಂದ ಭಾರತ ಸರ್ಕಾರ ಹೊರ ಬರಬೇಕು. ಹತ್ತಾರು ವರ್ಷಗಳಿಂದ ಬಗರ್ ಹುಕುಂ ಸಾಗುವಳಿ ವ್ಯವಸಾಯ ಮಾಡುತ್ತಿರುವ ರೈತರಿಗೆ ಅಡೆತಡೆಗಳನ್ನು ನಿವಾರಿಸಿ ಕೂಡಲೇ ಸಾಗುವಳಿ ಪತ್ರ ನೀಡಬೇಕು ಎಂದು ಆಗ್ರಹಿಸಿದರು.

ರಾಜ್ಯಾದ್ಯಂತ ಎಲ್ಲ ರೈತ ಸಂಘಟನೆಗಳ ಮುಖಂಡರು, ರೈತರು ಸ್ವಯಂ ಪ್ರೇರಿತರಾಗಿ ಹೆಚ್ಚಿನ ಸಂಖ್ಯೆಯಲ್ಲಿ ಡಿ.23ರಂದು ಹಮ್ಮಿಕೊಂಡಿರುವ ಮಹಾಧಿವೇಶದಲ್ಲಿ ಭಾಗವಹಿಸಿ ಸಾಲಮನ್ನಾ ಆಗಲೇಬೇಕು ಎಂಬ ಕೋರಿಕೆಯ ಅರ್ಜಿ ಸಲ್ಲಿಸುವ ಮೂಲಕ ಸರ್ಕಾರಕ್ಕೆ ಒತ್ತಾಯಿಸುವ ಕಾರ್ಯಕ್ಕೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ರೈತ ಮುಖಂಡರಾದ ಅತ್ತಹಳ್ಳಿ ದೇವರಾಜ್, ಬರಡನಪುರ ನಾಗರಾಜ್, ವೆಂಕಟೇಶ್, ಹೆಗ್ಗುರು ರಂಗರಾಜು, ನೀಲಕಂಠಪ್ಪ, ವಾಜಮಂಗಲ ಮಹದೇವ ಮತ್ತಿತರರು ಇದ್ದರು.

Leave a Reply

error: Content is protected !!
LATEST
ಪೆಟ್ರೋಲ್‌, ಡೀಸೆಲ್‌ ದರ ಏರಿಕೆ ವಿರೋಧಿಸಿ ನಾಳೆ ರಾಜ್ಯಾದ್ಯಂತ ಎಎಪಿ ಪ್ರತಿಭಟನೆ ನಟ ದರ್ಶನ್‌ ಸ್ಥಿತಿಗೆ ಮರುಗಿ ಅಭಿಮಾನಿ ಅನ್ನನೀರು ಬಿಟ್ಟು ಆತ್ಮಹತ್ಯೆಗೆ ಶರಣು? KSRTC ‘ಅಶ್ವಮೇಧ’ಗಳಿಂದ ಸಂಸ್ಥೆಗೆ ಶೇ.10ಕ್ಕೂ ಹೆಚ್ಚು ಲಾಭ : ಸಚಿವ ರಾಮಲಿಂಗಾರೆಡ್ಡಿ ಅತೀ ಶೀಘ್ರದಲ್ಲೇ NWKRTC ಒಡಲು ಸೇರಲಿವೆ 350 ಹೊಸ ಎಲೆಕ್ಟ್ರಿಕ್​ ಬಸ್‌ಗಳು 15 ದಿನದ ಹಸುಳೆಗೆ ಯಶಸ್ವಿ ಹೃದಯ ಶಸ್ತ್ರ ಚಿಕಿತ್ಸೆ - ಇಂದಿರಾ ಗಾಂಧಿ ಮಕ್ಕಳ ಆಸ್ಪತ್ರೆ ವೈದ್ಯರ ಸಾಧನೆ ಬಾಲ ಕಾರ್ಮಿಕ ಪದ್ದತಿಯ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಸ್ತ್ರ: ಅಪರ ಸಿವಿಲ್ ನ್ಯಾಯಾಧೀಶೆ ಶಕುಂತಲಾ ಯೋಗ ಮಾಡಿ ಸಮೃದ್ಧ ಆರೋಗ್ಯವಂತ ಜೀವನ ನಡೆಸಿ: ಡಾ. ದಿವ್ಯಾ ಸಲಹೆ ಪೆಟ್ರೋಲ್, ಡೀಸೆಲ್ ದರ ಹೆಚ್ಚಿಸಿ ಜನರ ಜೇಬಿಗೆ ಕತ್ತರಿ ಹಾಕಿದ ಸರ್ಕಾರ: ಎಎಪಿ ಆಕ್ರೋಶ KSRTC ಬಸ್‌ನಲ್ಲಿ ಪ್ರಯಾಣಿಸುವಾಗ ಟಿಕೆಟ್‌ ಕಳೆದುಕೊಂಡ ಮಹಿಳೆ: ತನಿಖಾಧಿಕಾರಿಗಳಿಗೆ ಹೆದರಿ ಬಸ್‌ನಿಂದ ಕೆಳಗಿಳಿಸಿದ ಕಂಡ... ಜುಲೈ 7ರಂದು KSRTC ನೌಕರರ ಕ್ರೆಡಿಟ್‌ ಸಹಕಾರ ಸಂಘದ ಚುನಾವಣೆ- ಜೂ.27ರಿಂದ ನಾಮಪತ್ರ ಸಲ್ಲಿಕೆ