ಕಡಿಮೆ ಖರ್ಚು ಹೆಚ್ಚು ಇಳುವರಿ ಬಗ್ಗೆ ಜಾಗೃತಿಗಾಗಿ ಕಾರ್ಯಾಗಾರ ನಡೆಸಿ: ಜಂಟಿ ಕೃಷಿ ನಿರ್ದೇಶಕರಿಗೆ ರೈತರ ಆಗ್ರಹ

ಮೈಸೂರು: ತಾಲೂಕು ಮಟ್ಟದಲ್ಲಿ ರೈತರಿಗೆ, ಮಣ್ಣು ಪರೀಕ್ಷೆ, ರಸಗೊಬ್ಬರ, ಕೀಟನಾಶಕ, ಬಿತ್ತನೆ ಬೀಜ ಹಾಗೂ ನೀರು ಬಳಕೆ ಮಾಡಿ ಕಡಿಮೆ ಖರ್ಚಿನಲ್ಲಿ ಹೆಚ್ಚು ಇಳುವರಿ ಪಡೆಯುವ ಬಗ್ಗೆ ಜಾಗೃತಿ ಮೂಡಿಸಲು ಕಾರ್ಯಾಗಾರ ನಡೆಸುವಂತೆ ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರಾಜ್ಯ ಕಬ್ಬು ಬೆಳೆಗಾರರ ಸಂಘ ಒತ್ತಾಯಿಸಿದೆ.
ಇಂದು ನಗರದ ಕಾಡಾ ಕಚೇರಿಗೆ ಭೇಟಿ ನೀಡಿ ರೈತ ಸಂಘಸ ಪದಾಧಿಕಾರಿಗಳು ಜಂಟಿ ಕೃಷಿ ನಿರ್ದೇಶಕ ಕೆ.ಎಚ್.ರವಿ ಅವರಿಗೆ ಸಂಘದ ವತಿಯಿಂದ ಒತ್ತಾಯ ಪತ್ರ ನೀಡಿ, ರೈತರಿಗೆ ಆಧುನಿಕ ಕೃಷಿ ಮಾಡುವ ಬಗ್ಗೆ ಮಾಹಿತಿ ಕೊರತೆಯಿದ್ದು, ಕಡಿಮೆ ಖರ್ಚು ಮಾಡಿ ಅಧಿಕ ಇಳುವರಿ ಪಡೆಯುವ ಬಗ್ಗೆ ಜಾಗೃತಿ ಮೂಡಿಸಲು ಕಾರ್ಯಾಗಾರ ನಡೆಸಬೇಕು ಎಂದು ಮನವಿ ಮಾಡಿದರು.
ಇನ್ನು ಮೈಸೂರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಹಾಗೂ ಸ್ವಕ್ಷೇತ್ರವಾದ್ದರಿಂದ ಮೊದಲಿಗೆ ಮೈಸೂರಿನಲ್ಲಿ ತಾಲೂಕು ಮಟ್ಟದ ಕಾರ್ಯಾಗಾರ ಪ್ರಾರಂಭ ಮಾಡಿದರೆ ಸರ್ಕಾರದ ಗಮನ ಸೆಳೆಯಬಹುದು. ಕೃಷಿ ಪರಿಕರಗಳಾದ ರಸಗೊಬ್ಬರ, ಕೀಟನಾಶಕ ಮತ್ತು ಬಿತ್ತನೆ ಬೀಜ ಹಾಗೂ ನೀರು ಅತಿಯಾದ ಬಳಕೆಯಿಂದ ಮಣ್ಣು ಸತ್ವ ಕಳೆದುಕೊಂಡಿದ್ದು ಮಣ್ಣಿನ ಆರೋಗ್ಯ ರಕ್ಷಣೆ ಮಾಡಿ ಉತ್ತಮ ಬೆಳೆ ಬೆಳೆಯಲು ಜಾಗೃತಿಗೊಳಿಸಬೇಕು.
ನಕಲಿ-ಕಳಪೆ ಬಿತ್ತನೆ ಬೀಜ, ರಸಗೊಬ್ಬರ, ನರ್ಸರಿ ಸಸಿಗಳು ಕೀಟ ನಾಶಕಗಳನ್ನು ನಕಲಿ-ಕಳಪೆ ಮಾರಾಟ ಮಾಡುವವರಿಗೆ ಜಾಮೀನು ರಹಿತ ಕಠಿಣ ಜೈಲು ಶಿಕ್ಷೆ ವಿಧಿಸಬೇಕು. ರಸಗೊಬ್ಬರ, ಹನಿ ನೀರಾವರಿ ಉಪಕರಣಗಳು, ಟ್ರ‍್ಯಾಕ್ಟರ್, ಪವರ್ ಟಿಲ್ಲರ್ ಬಿಡಿಭಾಗಗಳ ಬೆಲೆಗಳು ಗಗನಕ್ಕೇರಿದ್ದು ಕಡಿವಾಣ ಹಾಕಲು ಕ್ರಮ ಕೈಗೊಳ್ಳಬೇಕು ಹಾಗೂ ಇವುಗಳ ಮೇಲಿನ ಜಿ.ಎಸ್.ಟಿ ತೆರಿಗೆ ರದ್ದುಗೊಳಿಸಲು ಕ್ರಮ ಕೈಗೊಳ್ಳಬೇಕು.
ಕೃಷಿ ಹಾಗೂ ತೋಟಗಾರಿಕೆ ಬೆಳೆಗಳಿಗೂ ಬೆಳೆ ವಿಮೆ ಪರಿಹಾರ ಸಿಗುವಂತಾಗಬೇಕು. ಟ್ರ‍್ಯಾಕ್ಟರ್, ಪವರ್ ಟಿಲ್ಲರ್ ಕೃಷಿ ಯಂತ್ರಗಳ ಮಾರಾಟ ಕೇಂದ್ರಗಳಲ್ಲಿ ಸರ್ಕಾರ ನಿಗದಿಪಡಿಸಿದ ದರವನ್ನು ಬಹಿರಂಗವಾಗಿ ನಾಮಫಲಕ ಹಾಕಬೇಕು. ರಸಗೊಬ್ಬರಗಳ ಜೊತೆ ಮೈಕ್ರೋ ಫುಡ್ ಲಿಂಕ್ ಮಾರಾಟಕ್ಕೆ ಒತ್ತಡ ಹೇರದಂತೆ ಕ್ರಮ ಕೈಗೊಳ್ಳಬೇಕು.
ಕೃಷಿ ಪರಿಕರಗಳ ಅಂಗಡಿಗಳಲ್ಲಿ ನರ್ಸರಿ ಸಸಿಗಳನ್ನು ಮಾರಾಟ ಮಾಡಬಾರದು. ರಸಗೊಬ್ಬರ ಮಾರಾಟದ ಅಂಗಡಿ ಮುಂದೆ ಬೆಲೆಗಳ ನಾಮಫಲಕ ಕಡ್ಡಾಯವಾಗಿ ಹಾಕಲು ಕ್ರಮ ಕೈಗೊಳ್ಳಬೇಕು. ಪರಿಕರಗಳನ್ನು ಖರೀದಿ ಮಾಡಿದ ರೈತನಿಗೆ ಅಧಿಕೃತ ಬಿಲ್ ಕೊಡಬೇಕು ಹಾಗೂ ಬಿಲ್‌ನಲ್ಲಿ ಇಬ್ಬರು ಸಹಿ ಹಾಕಿರಬೇಕು.
ಇದಕ್ಕಾಗಿ ಪ್ರತಿ 3 ತಿಂಗಳಿಗೊಮ್ಮೆ ರೈತರ ಕುಂದು ಕೊರತೆಗಳ ಸಭೆ ನಡೆಸಿ ಸಮಸ್ಯೆಗೆಳ ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕು. ಜಿಲ್ಲೆಯ ಎಲ್ಲ ತಾಲೂಕುಗಳಲ್ಲೂ ರೈತರ ಕುಂದು ಕೊರತೆಗಳ ಸಭೆ ನಡೆಸಿ ರೈತರು ಅಲೆದಾಡುವುದನ್ನು ತಪ್ಪಿಸಬೇಕು ಎಂದು ರೈತರು ಜಂಟಿ ಕೃಷಿ ನಿರ್ದೇಶಕರಿಗೆ ಒತ್ತಾಯ ಪತ್ರ ನೀಡಿದರು.
ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್, ಬರಡನಪುರ ನಾಗರಾಜ್, ಮಾರ್ಬಳ್ಳಿ ನೀಲಕಂಠಪ್ಪ, ಲಕ್ಷ್ಮೀಪುರ ವೆಂಕಟೇಶ್, ಮಂಜುಳಾ, ಬನ್ನೂರು ಸೂರಿ, ವಾಜಮಂಗಳ ಮಹದೇವು, ಕೆಂಡಗಣ್ಣಪ್ಪ ಸ್ವಾಮಿ, ಪ್ರಭುಸ್ವಾಮಿ, ಕಾಟೂರು ನಾಗೇಶ್, ಗಿರೀಶ್, ಸಾತಗಳ್ಳಿ ಬಸವರಾಜ್, ಸಾತಗಳ್ಳಿ ಮಹೇಶ್, ಮಾರ್ಬಳ್ಳಿ ಬಸವರಾಜ್, ಶಿವಣ್ಣ, ಪಿ.ನಾಗೇಂದ್ರ ವಾಜಮಂಗಳ, ಜಯರಾಮ ವರಕೋಡು, ಶಿವಕುಮಾರ್, ಪ್ರಕಾಶ್, ಎನ್.ನಾಗೇಂದ್ರ, ಪ್ರಭಾಕರ್, ಮೂರ್ತಿ ಇನ್ನೂ 50ಕ್ಕೂ ಹೆಚ್ಚು ರೈತರು ಇದ್ದರು.
Related

You Might Also Like
ಕಾವೇರಿ ನದಿಗೆ 31,550 ಕ್ಯೂಸೆಕ್ ನೀರು ಬಿಡುಗಡೆ- ನದಿ ತಟದ ಜನರಿಗೆ ಸೂಚನೆ
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮತ್ತೆ ವರುಣನ ಆರ್ಭಟ ಹೆಚ್ಚಾಗಿದ್ದು ಈ ಹಿನ್ನೆಲೆ ಹಳೇ ಮೈಸೂರು ಭಾಗದ ಜೀವನಾಡಿ ಕೆಆರ್ಎಸ್ ಡ್ಯಾಂಗೆ ಒಳಹರಿವು ಹೆಚ್ಚಾಗುತ್ತಿದೆ. ಹೀಗಾಗಿ ನದಿ...
BMTC: ಬ್ರೇಕ್ ಫೇಲಾಗಿ ಕಂದಕಕ್ಕೆ ನುಗ್ಗಿದ ಬಸ್- ಅದೃಷ್ಟವಶಾತ್ ಪ್ರಯಾಣಿಕರು ಸೇಫ್
ಆನೇಕಲ್: ಬ್ರೇಕ್ ಫೇಲಾಗಿ ರಸ್ತೆ ಬದಿಯ ಕಂದಕಕ್ಕೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಬಸ್ ನುಗ್ಗಿರುವ ಘಟನೆ ಬೆಂಗಳೂರು ಹೊರವಲಯ ಜಿಗಣಿ ಸಮೀಪದ ಹರಪ್ಪನಹಳ್ಳಿ ಬಳಿ...
ಹೆಬ್ಬಾಳ ಭಾಗದ ಬಹುದೊಡ್ಡ ಟ್ರಾಫಿಕ್ ಸಮಸ್ಯೆಗೆ ಕೊನೆಗೂ ಇಂದು ಸಿಗುತ್ತಿದೆ ಮುಕ್ತಿ
ಬೆಂಗಳೂರು: ರಾಜ್ಯ ರಾಜಧಾನಿಯ ಹೆಬ್ಬಾಳ ಭಾಗದ ಬಹುದೊಡ್ಡ ಟ್ರಾಫಿಕ್ ಸಮಸ್ಯೆಗೆ ಕೊನೆಗೂ ಇಂದು ಮುಕ್ತಿ ಸಿಗುತ್ತಿದೆ. ಹೌದು! ಬಹುನಿರೀಕ್ಷಿತ ಹೆಬ್ಬಾಳ ವಿಸ್ತರಿತ ಮೇಲ್ಸೇತುವೆ ಉದ್ಘಾಟನೆ ಆಗುತ್ತಿದೆ. ಇಂದು...
ಸರ್ಕಾರಿ ಬಸ್ ಗಾಜು ಒಡೆದು, ಚಾಲನಾ ಸಿಬ್ಬಂದಿ ಮೇಲೆ ಬೈಕ್ ಸವಾರನಿಂದ ಹಲ್ಲೆ
ಹುಬ್ಬಳ್ಳಿ: ಗದುಗಿನಿಂದ ಹುಬ್ಬಳ್ಳಿಗೆ ಬರುತ್ತಿದ್ದ ಸರ್ಕಾರಿ ಸಾರಿಗೆ ಬಸನ್ನು ನಗರದ ಗದಗ ರಸ್ತೆ ಬಳಿ ಬೈಕ್ ಸವಾರನೊಬ್ಬ ಅಡ್ಡಗಟ್ಟಿ ಬಸ್ ಗಾಜು ಒಡೆದು ಹಾಕಿರುವುದಲ್ಲದೆ ಚಾಲಕ ಹಾಗೂ...
ಕೊಟ್ಟ ಚಿನ್ನಾಭರಣ- ನಗದನ್ನು ವಾಪಸ್ ಕೊಡಿಸಿ ಎಂದರೆ 2 ಲಕ್ಷ ಲಂಚಕೊಡಿ ಎಂದ ಪೊಲೀಸರು: ಲೋಕಾಯುಕ್ತ ಖೆಡ್ಡಕ್ಕೆ ಬಿದ್ದರು
ಬೆಂಗಳೂರು: ಕೊಟ್ಟಿರುವ ಆಭರಣ ಮತ್ತು ನಗದನ್ನು ವಾಪಸ್ ಕೊಡಿಸಿ ಎಂದು ದೂರು ನೀಡಲು ಪೊಲೀಸ್ ಠಾಣೆಗೆ ಹೋದರೆ ನಮಗೆ 2 ಲಕ್ಷ ರೂ. ಲಂಚ ಕೊಟ್ಟರೆ ವಾಪಸ್...
ಭೀಕರ ಅಪಘಾತ: ಲಾರಿಗೆ ಸರ್ಕಾರಿ ಬಸ್ ಡಿಕ್ಕಿ -ಮೂವರ ಸಾವು, 7ಮಂದಿಗೆ ಗಂಭೀರಗಾಯ
ಯಲ್ಲಾಪುರ: ನಿಂತಿದ್ದ ಲಾರಿಗೆ ಸರ್ಕಾರಿ ಬಸ್ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಮೃತಪಟ್ಟು 7 ಮಂದಿ ಗಂಭೀರವಾಗಿ ಗಾಯಗೊಂಡಿೆಉವ ಘಟನೆ ಉತ್ತರಕನ್ನಡ...
KSRTC: ಯಾವುದೇ ಕಾರಣಕ್ಕೂ ನೌಕರರ ವಾರದ ರಜೆ ರದ್ದುಪಡಿಸಬಾರದು- ಹಿಂದಿನ ವ್ಯವಸ್ಥಾಪಕ ನಿರ್ದೇಶಕರ ಆದೇಶ
ವಾರದ ರಜೆ ರದ್ದು ಪಡಿಸಿದರೆ ಅಂಥ ಅಧಿಕಾರಿಯ ವಿರುದ್ಧ ಮೇಲಧಿಕಾರಿಗಳಿಗೆ ದೂರು ನೀಡುವ ಅಧಿಕಾರಿ ನೌಕರರಿಗೆ ಇದೆ ಬೆಂಗಳೂರು: ನೌಕರರಿಗೆ ವಾರದ ರಜೆಯನ್ನು ನಿಗದಿತ ದಿನದಂದು ನೀಡಬೇಕು...
ಚಂದ್ರಶೇಖರನಾಥ ಶ್ರೀಗಳ ಪೂರ್ವಾಶ್ರಮದ ಹೆಸರು ಕೆ.ಟಿ.ಗೋವಿಂದೇಗೌಡ
ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧಿಪತಿ 80 ವರ್ಷದ ಶ್ರೀ ಚಂದ್ರಶೇಖರನಾಥ ಸ್ವಾಮಿಗಳು ಇಂದು ರಾತ್ರಿ 12.01 ರ ಸಮಯದಲ್ಲಿ ಇಹಲೋಕ ತ್ಯಜಿಸುವ ಮೂಲಕ ಶ್ರೀ ಕೃಷ್ಣನ...
ಶ್ರೀ ಕೃಷ್ಣ ಜನ್ಮಾಷ್ಟಮಿಯ ಸಂಭ್ರಮ: ದೇವಕಿ ಸುತನ ವೇಷದಲ್ಲಿ ಮಿಂಚಿದ ಲಿಟಲ್ ಲಿಶಾನ್
ಬೆಂಗಳೂರು: ರಾಜ್ಯಾದ್ಯಂತ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಶನಿವಾರ ಅದ್ದೂರಿಯಾಗಿ ಆಚರಿಸುತ್ತಿದ್ದು, ಪುಟಾಣಿಗಳು ಶ್ರೀಕೃಷ್ಣ - ರಾಧೆ ವೇಷ ಧರಿಸಿ ಮಿಂಚುತ್ತಿದ್ದಾರೆ. ಈ ಪೈಕಿ ಮಕ್ಕಳ ಚಂದದ ಫೋಟೋಗಳನ್ನು...