ಮೈಸೂರು: ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ ರಾಜ್ಯದಲ್ಲಿ ಬರಗಾಲ ಸೃಷ್ಟಿಯಾಗಿದ್ದರು ಕಾವೇರಿಕೊಳ್ಳದ ಜಲಾಶಯಗಳ ನೀರು ಖಾಲಿಯಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ಮೈಸೂರು, ಚಾಮರಾಜನಗರ, ಬೆಂಗಳೂರು ದಕ್ಷಿಣ ಧಾರವಾಡ, ಬೆಳಗಾವಿ, ಗುಲ್ಬರ್ಗ, ಬಿಜಾಪುರ ಗದಗ್ ಜಿಲ್ಲೆಗಳು ಸೇರಿದಂತೆ ರಾಜ್ಯಾದ್ಯಂತ ಇಂದು ಲೋಕಸಭಾ ಸದಸ್ಯರ ಕಚೇರಿ ಮುಂದೆ ರಾಜ್ಯ ರೈತ ಸಂಘಟನೆ ಒಕ್ಕೂಟ, ಕನ್ನಡ ಪರ ಸಂಘಟನೆಗಳು ರಾಜ್ಯ ಕಬ್ಬು ಬೆಳೆಗಾರ ಸಂಘ ಪ್ರತಿಭಟನೆ ನಡೆಸಿತು.
ತಾವು ಲೋಕಸಭಾ ಸದಸ್ಯರಾಗಿ ಕೂಡಲೇ ಈ ಒತ್ತಾಯಗಳ ಬಗ್ಗೆ ಕೇಂದ್ರ, ರಾಜ್ಯ ಸರ್ಕಾರದ ಗಮನ ಸೆಳೆದು ಪ್ರತಿಕ್ರಿಯೆ ನೀಡಬೇಕೆಂದು ಪ್ರತಿಭಟನಾ ನಿರತರು ಆಗ್ರಹಿಸಿದರು.
ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ ರಾಜ್ಯದಲ್ಲಿ ಬರಗಾಲ ಸೃಷ್ಟಿಯಾಗಿದ್ದರು ಕಾವೇರಿಕೊಳ್ಳದ ಜಲಾಶಯಗಳ ನೀರು ಖಾಲಿಯಾಗುತ್ತಿದೆ ಮಹದಾಯಿನದಿ ನೀರಿನ ವಿವಾದ ಕುರಿತು ಯಾವುದೇ ಗಂಭೀರ ಚಿಂತನೆ ನಡೆಯುತ್ತಿಲ್ಲ ಈ ಬಗ್ಗೆ ಯಾವುದೇ ಮಾತನಾಡದೆ ಮೂಕರಂತೆ ಇರುವ ತಮ್ಮ ಕಚೇರಿ ಮುಂದೆ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಕರ್ನಾಟಕ ಜಲ ಸಂರಕ್ಷಣಾ ಸಮಿತಿ ರಾಜ್ಯದ ಎಲ್ಲ ಲೋಕಸಭಾ ಸದಸ್ಯರ ಕಚೇರಿ ಮುಂದೆ 4ರಂದು ಪ್ರತಿಭಟನೆ ನಡೆಸಿ ಹಕ್ಕೊತಯ ಪತ್ರ ಸಲ್ಲಿಸಲು ಕರೆ ನೀಡಲಾಗಿದ್ದ ಕಾರಣ ಇಂದು ಒತ್ತಾಯ ಪತ್ರ ಸಲ್ಲಿಸುತ್ತಿದ್ದೇವೆ ಎಂದು ಹೇಳಿದರು.
ಕಬಿನಿ ಕಾವೇರಿ ನೀರು ತಮಿಳುನಾಡಿಗೆ ಹರಿಸಿ ರಾಜ್ಯದ ರೈತರನ್ನ ಬಲಿಕೊಟ್ಟಿರುವ ರಾಜ್ಯ ಸರ್ಕಾರ ಕೂಡಲೇ ಜಲಾಶಯದಿಂದ ತಮಿಳುನಾಡಿಗೆ ಬಿಡುತ್ತಿರುವ ನೀರು ನಿಲ್ಲಿಸಬೇಕು, ಕಾವೇರಿಕೊಳ್ಳದ ಹೆಚ್ಚುವರಿ ನೀರನ್ನು ಸಂಕಷ್ಟ ಕಾಲದಲ್ಲಿ ಬಳಸಿಕೊಳ್ಳಲು ಸಮುದ್ರಕ್ಕೆ ಹರಿಯುವ ಹೆಚ್ಚುವರಿ ನೀರನ್ನು ಸಂಗ್ರಹಿಸಿಟ್ಟಿಕೊಳ್ಳಲು ಮೇಕೆದಾಟು ಜಲಾಶಯ ಯೋಜನೆ ಕೂಡಲೇ ಕೈಗೆತ್ತಿಕೊಳ್ಳಬೇಕು.
ಮಹದಾಯಿ ನದಿ ನೀರಿನ ವಿವಾದ ಕೂಡಲೇ ಬಗೆಹರಿಸಿ ಯೋಜನೆ ಪೂರ್ಣಗೊಳಿಸಿ ಅಚ್ಚುಕಟ್ಟು ಭಾಗದ ನೀರಿನ ಸಮಸ್ಯೆ ಬಗೆಹರಿಸ ಬೇಕು. ಕಬ್ಬು ಬೆಳೆಗಾರರಿಗೆ ಬರಬೇಕಾದ ಹಿಂದಿನ ವರ್ಷದ ಬಾಕಿ ಹೆಚ್ಚುವರಿ 150ರೂ ಸಕ್ಕರೆ ಕಾರ್ಖಾನೆಗಳಿಂದ ಕೂಡಿಸಬೇಕು.
ಪ್ರಸಕ್ತ ಸಾಲಿನ 2023- 24ನೇ ಸಾಲಿನಲ್ಲಿ ಮಳೆ ಪ್ರಮಾಣ ಕಡಿಮೆಯಾಗಿ ಬರದಿಂದ ಕಬ್ಬಿನ ಉತ್ಪಾದನಾ ಇಳುವರಿ ಕಡಿಮೆಯಾಗಿದೆ ಆದ್ದರಿಂದ ಕಬ್ಬಿನ ದರ ಏರಿಕೆ ಟನಗೆ ನಾಲ್ಕು ಸಾವಿರ ನಿಗದಿ ಮಾಡಬೇಕು ಎಂದು ಒತ್ತಾಯಿಸಿದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಗಮನ ಸೆಳೆಯಲು ಲೋಕಸಭಾ ಸದಸ್ಯರನ್ನು ಜಾಗೃತಿ ಮೂಡಿಸಲು ರಾಜ್ಯಾದ್ಯಂತ ಹೋರಾಟ ನಡೆಸಲಾಗುತ್ತಿದೆ ಲೋಕಸಭಾ ಸದಸ್ಯರು ಗಂಭೀರವಾಗಿ ಚಿಂತನೆ ನಡೆಸದಿದ್ದರೆ ಕ್ಷೇತ್ರದ ಜನತೆಗೆ ನಿಮ್ಮ ನಿರ್ಲಕ್ಷತನದ ಬಗ್ಗೆ ಪ್ರಜಾ ಆಂದೋಲನ ರೂಪಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ರಾಜ್ಯ ಪದಾಧಿಕಾರಿಗಳಾದ ಅತ್ತಹಳ್ಳಿ ದೇವರಾಜ್, ಬರಡನಪುರ ನಾಗರಾಜ್, ಬಸವರಾಜ್ ಪಾಟೀಲ್ ಗುರುಸಿದ್ದಪ್ಪ, ರಮೇಶ್ ಉಗಾರ್, ಹಳ್ಳಿಕೆರೆಹುಂಡಿ ಭಾಗ್ಯರಾಜ್, ಜೈಕರ್ನಾಟಕ ಜನಪರ ವೇದಿಕೆ ಕುಮಾರಸ್ವಾಮಿ, ಉಳುವಪ್ಪ ಬಳಗೇರ, ಪರಶುರಾಮ್, ಕಮಲಮ್ಮ, ಎಎಪಿ ಮುಖಂಡರು ಮತ್ತು ಕಾರ್ಯಕರ್ತು ಇದ್ದರು.