NEWSಕೃಷಿನಮ್ಮರಾಜ್ಯ

ದೇಶಾದ್ಯಂತ ರೈತ ಹುತಾತ್ಮ ದಿನ ಆಚರಣೆ: ದೆಹಲಿ ರೈತ ಹೋರಾಟದಲ್ಲಿ ಪ್ರಾಣತ್ಯಾಗ ಮಾಡಿದ 750 ರೈತರಿಗೆ ನಮನ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ವರ್ಷಕಾಲ ನಡೆದ ದೆಹಲಿ ರೈತ ಹೋರಾಟದಲ್ಲಿ ಪ್ರಾಣತ್ಯಾಗ ಮಾಡಿದ 750 ರೈತರಿಗೆ ನಮನ ಸಲ್ಲಿಸಲು ಇಂದು (ಡಿ.11) ದೇಶಾದ್ಯಂತ ರೈತ ಹುತಾತ್ಮ ದಿನವನ್ನಾಗಿ ಆಚರಿಸಲಾಯಿತು.

ರಾಜ್ಯದ ರಾಜಧಾನಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕಳೆದ 20ದಿನಗಳಿಂದ ನಡೆಸುತ್ತಿರುವ ಅಹೋರಾತ್ರಿ ಧರಣಿಯಲ್ಲಿ ಭಾನುವಾರ ಕೆಂದ್ರ ಸರ್ಕಾರ ರೈತರಿಗೆ ಮಾರಕವಾದ 3 ಕೃಷಿ ಕಾಯ್ದೆಗಳನ್ನ ಹಿಂದೆ ಪಡೆದ ನಂತರ ಒಂದು ವರ್ಷಕ್ಕೂ ಹೆಚ್ಚು ಕಾಲ ದೆಹಲಿಯಲ್ಲಿ ನಡೆದ ರೈತ ಆಂದೋಲನದವನ್ನು ನಿಲ್ಲಿಸಿ ದೆಹಲಿ ಬಾರ್ಡರ್ ನಿಂದ ಹಿಂತಿರುಗಿದ ದಿನವಾದ ಇಂದು ಅವರ ಸ್ಮರಣಾರ್ಥ ಹುತಾತ್ಮ ದಿನವನ್ನಾಗಿ ಆಚರಿಸಲಾಯಿತು.

ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಸಂಘಟನೆಯು ದೇಶಾದ್ಯಂತ ರೈತ ಹುತಾತ್ಮ ದಿನವಾಗಿ ಆಚರಿಸಲು ತೀರ್ಮಾನಿಸಿ, ದಕ್ಷಿಣ ಭಾರತ ರಾಜ್ಯಗಳ ರೈತ ಮುಖಂಡರು ಇಂದು ಫ್ರೀಡಂ ಪಾರ್ಕ್ ನಲ್ಲಿ ಕಣ್ಣಿಗೆ ಕಪ್ಪು ಪಟ್ಟಿ ಧರಿಸಿ ಮೇಣದ ಬತ್ತಿ ಉರಿಸಿ ಪ್ರಾಣತ್ಯಾಗ ಮಾಡಿದ ರೈತರಿಗೆ ನಮನ ಸಲ್ಲಿಸಿದರು.

ಸಂಯುಕ್ತ ಕಿಸಾನ್ ಮೋರ್ಚಾ ರಾಷ್ಟ್ರೀಯ ಸಂಚಾಲಕ ಕೆ.ವಿ. ಬಿಜು ಮಾತನಾಡಿ, ಕೇಂದ್ರ ಸರ್ಕಾರ ಹೋರಾಟದಲ್ಲಿ ಮಡಿದ ರೈತರಿಗೆ 5 ಲಕ್ಷ ರೂ. ಪರಿಹಾರ ಕೊಡುತ್ತೇವೆ ಎಂದು ಭರವಸೆ ನೀಡಿ ಇನ್ನೂ ಕೂಡ ಸಾವನ್ನಪ್ಪಿದವರ ಕುಟುಂಬಗಳ ರಕ್ಷಣೆ ಮಾಡಿಲ್ಲ, ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ಶಾಸನ ರೂಪಿಸುತ್ತೇವೆ ಎಂದು ಹೇಳಿ, ಜಾರಿ ಮಾಡಿಲ್ಲ, ರೈತರ ವಂಚಿಸುವ ಕೆಲಸ ಆಗಬಾರದು ಎಂದು ಸರ್ಕಾರವನ್ನು ಎಚ್ಚರಿಸಿದರು.

ತೆಲಂಗಾಣ ರಾಜ್ಯದ ರೈತ ಮುಖಂಡ ವೆಂಕಟೇಶ್ವರ ರಾವ್ ಮಾತನಾಡಿ, ದೆಹಲಿ ರೈತ ಹೋರಾಟದಲ್ಲಿ ಮಡಿದ 750 ರೈತ ಕುಟುಂಬಗಳಿಗೆ ತೆಲಂಗಾಣ ಸರ್ಕಾರದ ಮುಖ್ಯಮಂತ್ರಿ ಕೆಸಿಆರ್ ಅವರು ಪ್ರತಿ ಕುಟುಂಬಕ್ಕೆ ಮೂರು ಲಕ್ಷದಂತೆ ಪರಿಹಾರ ನೀಡಿದ್ದಾರೆ. ಕೇಂದ್ರ ಸರ್ಕಾರಕ್ಕೆ ಯಾಕೆ ಸಾಧ್ಯವಾಗುತ್ತಿಲ್ಲ ಎಂದು ಪ್ರಶ್ನೆ ಮಾಡಿದರು.

ಕೇಂದ್ರ ಸರ್ಕಾರ ಬಂಡವಾಳ ಶಾಹಿಗಳ ಕಾರ್ಪೊರೇಟ್ ಸಂಸ್ಥೆಗಳ ಹಿತರಕ್ಷಣೆಗೆ ಹೆಚ್ಚು ಹೊತ್ತು ನೀಡುವುದು ಒಳ್ಳೆ ಬೆಳವಣಿಗೆ, ಇಲ್ಲ ದೇಶದ ರೈತರು ಬೆಳೆದ ಉತ್ಪನ್ನಗಳನ್ನು ಶ್ರೀಲಂಕಾ ಬಾಂಗ್ಲಾ ದೇಶಗಳಿಗೆ ದಾನ ಮಾಡುವ ನಮ್ಮ ಪ್ರಧಾನಿಗೆ ನಮ್ಮ ರೈತರ ಸಾವು ಕಾಣುತ್ತಿಲ್ಲವೇ ಎಂದು ಪ್ರಶ್ನೆ ಮಾಡಿದರು.

ನಮ್ಮ ತೆಲಂಗಾಣ ರಾಜ್ಯದಲ್ಲಿ ಶೇ.9 ಸಕ್ಕರೆ ಇಳುವರಿ ಬರುವ ಕಬ್ಬಿಗೆ 3200 ನಿಗದಿ ಮಾಡಿದ್ದಾರೆ ಕರ್ನಾಟಕ ಏಕೆ ಹೆಚ್ಚುವರಿ ನಿಗದಿ ಮಾಡಲು ಸಾಧ್ಯವಿಲ್ಲ ತೆಲಂಗಾಣದಲ್ಲಿ ಸರ್ಕರ ರೈತರಿಗೆ ಗೂಬ್ಬರ ಬೀಜ ಖರೀದಿಗೆ ಎಕರೆಗೆ 10‌ ಸಾವಿರ ರೂ. ನಿಡುತಾರೆ ಇದೆ ರೀತಿ ದೇಶದ ಎಲ್ಲ ಭಾಗದಲ್ಲಿ ಆಗಬೇಕು ರೈತರು ಸಂಘಟಿತರಾಗಿ ಹೋರಾಟ ಮುಂದುವರಿಸಿ ದೇಶದ ರೈತರೆಲ್ಲ ನಿಮ್ಮ ಜೊತೆಯಲ್ಲಿದ್ದೇವೆ ಎಂದರು.

ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ಸಂಯುಕ್ತ ಕಿಸಾನ್ ಮೋರ್ಚ ದಕ್ಷಿಣ ಭಾರತ ರಾಜ್ಯಗಳ ಮುಖ್ಯಸ್ಥ ಕುರುಬೂರು ಶಾಂತಕುಮಾರ್ ಮಾತನಾಡಿ, ಕಾರ್ಪೊರೇಟ್ ಕಂಪನಿಗಳಿಗೆ ಬಂಡವಾಳಶಾಹಿಗಳಿಗೆ 10 ಲಕ್ಷ ಕೋಟಿ ರೂ. ಸಾಲ ಮನ್ನ ಮಾಡುವ ಕೇಂದ್ರ ಸರ್ಕಾರಕ್ಕೆ ರೈತರ ಸಾಲ ಮನ್ನಾ ಮಾಡಲು ಯಾಕೆ ಸಾಧ್ಯವಾಗುತ್ತಿಲ್ಲ.

ಸುಳ್ಳು ಭರವಸೆಗಳನ್ನು ನೀಡುತ್ತಲೆ ಕಾಲ ಕಳೆದು ರೈತರನ್ನು ದಿಕ್ಕು ತಪ್ಪಿಸುವ ಕಾರ್ಯ ಮಾಡಬೇಡಿ, ಡಬಲ್ ಇಂಜಿನ ಸರ್ಕಾರ ಡಬಲ್ ಗೇಮ್ ಆಡಬಾರದು, ಪ್ರಕೃತಿ ಮುನಿಸು ಈ ವರ್ಷ ಅತಿವೃಷ್ಟಿ ಮಳೆ ಹಾನಿಯಿಂದ ಆಹಾರ ಉತ್ಪಾದನೆ ಕಡಿಮೆಯಾಗುತ್ತಿದೆ, ಗ್ರಾಹಕರು ಆಹಾರಕ್ಕಾಗಿ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗುತ್ತದೆ, ಆಗಲಾದರೂ ರೈತರ ಶಕ್ತಿ ತಿಳಿಯುತ್ತದೆ ಎಂದು ಸರ್ಕಾಋದ ವಿರುದ್ಧ ಗುಡುಗಿದರು.

ಇನ್ನು ದೆಹಲಿ ರೈತ ಹೋರಾಟದಲ್ಲಿ ಮಡಿದ 750 ಕುಟುಂಬಗಳಿಗೆ, ದೇಶದ ರೈತರು ಋಣಿಗಳು, ಪ್ರಾಣಪಾಣೆ ಮಾಡಿದ ರೈತರ ಆತ್ಮಕ್ಕೆ ಶಾಂತಿ ಸಿಗಲಿ, ಪ್ರತಿವರ್ಷ ಈ ಕಾರ್ಯಕ್ರಮವನ್ನು ನಡೆಸುತ್ತೇವೆ ಎಂದರು.

ಕಬ್ಬು ಬೆಳೆಗಾರರ ಆಹೋ ರಾತ್ರಿ ಧರಣಿ 20ನೆ ದಿನಕೆ ಮುಂದುವರಿದಿದ್ದು ತಮಿಳುನಾಡಿನ ಮಾಣಿಕ್ಯಂ, ಉತ್ತರಕನ್ನಡ ಜಿಲ್ಲೆ ಅಧ್ಯಕ್ಷ ಕುಮಾರ ಬೂಬಾಟಿ, ರಾಜ್ಯ ರೈತಸಂಘದ ಅಧ್ಯಕ್ಷ ನಾರಾಯಣರೆಡ್ಡಿ, ಪಿ.ಸೂಮಶೇಖರ್, ಬರಡನಪುರ ನಾಗರಾಜ್, ಅತ್ತಹಳ್ಳಿ ದೇವರಾಜ್, ಕಿರಗಸೂರ ಶಂಕರ, ಗುರುಸಿದ್ದಪ್ಪಕೂಟಗಿ ಮತ್ತಿತರರು ಇದ್ದರು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ