NEWSಕೃಷಿನಮ್ಮಜಿಲ್ಲೆ

ಕಬ್ಬಿನ ಬಾಕಿ ಹಣ ಪಾವತಿಸದ ಬಣ್ಣಾರಿ ಸಕ್ಕರೆ ಕಾರ್ಖಾನೆ ಉಪ ಕಚೇರಿಗೆ ಬೀಗ ಜಡಿದು ರೈತರ ಪ್ರತಿಭಟನೆ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಕಬ್ಬಿನ ಬಾಕಿ ಹಣ ಪಾವತಿಸದೆ ಕಾರ್ಖಾನೆಗೆ ಕಬ್ಬು ಕಟಾವು ಅನುಮತಿ ನೀಡಬಾರದು ಎಂದು ಬಣ್ಣಾರಿ ಸಕ್ಕರೆ ಕಾರ್ಖಾನೆ ಉಪ ಕಚೇರಿಗೆ ಬೀಗ ಜಡಿದು ರೈತರು ಪ್ರತಿಭಟನೆ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯ ಕಬ್ಬು ಬೆಳೆಗಾರರ ಸಂಘದ ಮೈಸೂರು ತಾಲೂಕು ಘಟಕದ ವತಿಯಿಂದ ಬಣ್ಣಾರಿ ಅಮ್ಮನ್ ಕಾರ್ಖಾನೆಯ ಮೈಸೂರು ತಾಲೂಕಿನ ಕಡಕೋಳದಲ್ಲಿರುವ ಡಿವಿಜನ್ ಆಫೀಸ್‌ಗೆ ಗುರುವಾರ ಬೀಗ ಜಡಿದು ಪ್ರತಿಭಟನೆ ನಡೆಸಿ ಕಾರ್ಖಾನೆ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕಳೆದ ವರ್ಷದ ಬಾಕಿ ಹಣ ಒಂದು ಟನ್ ಕಬ್ಬಿಗೆ 150 ರೂ. ನೀಡಿ ನಂತರ ಕಾರ್ಖಾನೆ ಕಬ್ಬು ಅರೆಯುವುದನ್ನು ಪ್ರಾರಂಭ ಮಾಡಬೇಏಖು. 24.07.2023ರಂದು ಮೈಸೂರಿನ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲೆಯ ರೈತರು ಮತ್ತು ಕಾರ್ಖಾನೆಯವರ ನಡುವೆ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿಗಳು ಆದೇಶ ಮಾಡಿದರು ಸಹ ಕಾರ್ಖಾನೆ ಅವರು ಹಣ ನೀಡದೆ ಕಾರ್ಖಾನೆ ಆರಂಭಿಸಿ ರೈತರಿಗೆ ವಂಚನೆ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಕಳೆದ ವರ್ಷದ ಬಾಕಿ ಹಣವನ್ನು ಕೊಟ್ಟು ನಂತರ ಕಾರ್ಖಾನೆ ಪ್ರಾರಂಭ ಮಾಡಲಿ ಅಲ್ಲಿಯವರೆಗೂ ಕಬ್ಬು ಕಟಾವು ಮಾಡುವುದು ಬೇಡ ಎಂದು ಬಣ್ಣಾರಿ ಕಾರ್ಖಾನೆಯ ಎಲ್ಲ ತಾಲೂಕಿನ ಶಾಖ ಕಚೇರಿಗಳಿಗೂ ಬೀಗ ಜಡಿದು ಸಂಜೆ ಒಳಗೆ ಹಣ ನೀಡುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ನಾಳೆಯಿಂದ ಕಾರ್ಖಾನೆ ವಿರುದ್ಧ ಉಗ್ರ ಹೋರಾಟ ನಡೆಸುವುದಾಗಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬರಡನಪುರ ನಾಗರಾಜ್ ಎಚ್ಚರಿಕೆ ನೀಡಿದರು.

ವಿಷಯ ತಿಳಿದು ಸ್ಥಳಕ್ಕೆ ಬಂದ ಭಣಾರಿ ಕಾರ್ಖಾನೆಯ ವಿಭಾಗೀಯ ಅಧಿಕಾರಿ ವೈ.ಎನ್.ನಾಗರಾಜ್ ನಿಮ್ಮ ಬೇಡಿಕೆಯನ್ನು ಮೇಲಧಿಕಾರಿಗಳ ಗಮನಕ್ಕೆ ತರುತ್ತೇವೆ ಎಂದು ಕೇಳಿದಾಗ ನಾಳೆಯಿಂದ ಕಾರ್ಖಾನೆ ಹಳೆಯ ಬಾಕಿ ಹಣವನ್ನು ನೀಡುವವರೆಗೂ ಕಚೇರಿಯನ್ನು ತೆರೆಯುವುದಿಲ್ಲ ಎಂದು ಒಪ್ಪಿದರು.

ಈ ವೇಳೆ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದಾಗ ಕಚೇರಿಯ ಕಾರ್ಯನಿರ್ವಹಣಾಧಿಕಾರಿ ನಾಗೇಶ್ ಬಂದು 150 ರೂಪಾಯಿಗೆ ಸಂಬಂಧಪಟ್ಟಂತೆ ನ್ಯಾಯಾಲಯದಲ್ಲಿ ಇರುವುದರಿಂದ ನಾವು ಏನು ಮಾಡಲು ಸಾಧ್ಯವಿಲ್ಲ ಎಂದಾಗ ರೈತರು ಹಾಗಾದರೆ ನೀವು ರೈತರಿಗೆ ಹಳೆ ಬಾಕಿ ಹಣ ನೀಡದೆ ಕಾರ್ಖಾನೆ ತೆರೆಯಲು ಅನುಮತಿ ನೀಡಲಾಗಿದೆಯೇ ಎಂದು ಪ್ರಶ್ನಿಸಿ ಮಾತಿನ ಚಕಮಕಿ ನಡೆಯಿತು.

ನಂತರ ನಾಗೇಶ್ ಅವರು ನಿಮ್ಮ ಬೇಡಿಕೆಯ ಬಗ್ಗೆ ಕಾರ್ಖಾನೆಯ ಆಡಳಿತ ಮಂಡಳಿ ಗಮನಕ್ಕೆ ತಂದು ಇಂದು ಸಂಜೆಯೊಳಗೆ ಬಗೆಹರಿಸುವುದಾಗಿ ಭರವಸೆ ನೀಡಿದ ಬಳಿಕ ನಾಳೆವರೆಗೆ ಗಡುವು ನೀಡಿ ಪೊಲೀಸ್‌ ವೃತ್ತ ನಿರೀಕ್ಷಕರಾದ ಶೇಖರ್ ಅವರ ಸಮ್ಮುಖದಲ್ಲಿ ಚರ್ಚಿಸಿ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಮುಕ್ತಾಯಗೊಳಿಸಲಾಯಿತು.

ಪ್ರತಿಭಟನೆಯಲ್ಲಿ ಚಾಮರಾಜನಗರ ಜಿಲ್ಲಾ ಉಪಾಧ್ಯಕ್ಷರಾದ ಪಟೇಲ್ ಶಿವಮೂರ್ತಿ, ಮೈಸೂರು ತಾಲೂಕು ಅಧ್ಯಕ್ಷ ಲಕ್ಷ್ಮಿಪುರ ವೆಂಕಟೇಶ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಕಮಲಮ್ಮ, ಮುಖಂಡರಾದ ಕುರುಬೂರು ಪ್ರದೀಪ್, ಹೆಗ್ಗೂರು ರಂಗರಾಜು, ಅಂಬಳೆ ಮಂಜುನಾಥ್, ವರಕೋಡು ನಾಗೇಶ್, ಜಯರಾಮು, ಮಾರ್ಬಳ್ಳಿ ನೀಲಕಂಠಪ್ಪ,ವಾಜಮಂಗಲ ಮಾದೇವು, ಮಾಲಿಂಗ ನಾಯಕ, ನಾಗರಾಜು, ಹೆಗ್ಗೋಟಾರ ಶಿವ ಸ್ವಾಮಿ, ಉಡಿಗಾಲ ರೇವಣ್ಣ, ಸುಂದರಪ್ಪ, ಕುರುಬೂರು ಜಗ್ಗೇಶ್ ಭಾಗವಹಿಸಿದ್ದರು.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು