NEWSಕೃಷಿದೇಶ-ವಿದೇಶನಮ್ಮರಾಜ್ಯ

ಫೆ.13ರಂದು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದೆಹಲಿಯಲ್ಲಿ ರೈತರ ಮಹಾಸಂಗಮ: ಕುರುಬೂರು ಶಾಂತಕುಮಾರ್‌

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ದೆಹಲಿಯಲ್ಲಿ ಫೆಬ್ರವರಿ 13ರಂದು ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯತರ) ಸಂಘಟನೆಯಿಂದ ವಿವಿಧ ಬೇಡಿಕೆಗಳಿ ಈಡೇರಿಕೆಗೆ ಆಗ್ರಹಿಸಿ ದೇಶದ ರೈತರ ಮಹಾಸಂಗಮ ರ‍್ಯಾಲಿ ಹಮ್ಮಿಕೊಳ್ಳಲಾಗಿದೆ ಎಂದು ದಕ್ಷಿಣ ಭಾರತ ಸಂಯುಕ್ತ ಕಿಸಾನ್ ಮೋರ್ಚಾ ಸಂಚಾಲಕ, ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ತಿಳಿಸಿದ್ದಾರೆ.

ಮೈಸೂರಿನಲ್ಲಿ ಗುರುವಾರ ಮಧ್ಯಾಹ್ನ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಂದು ವರ್ಷ ಕಾಲ ಹೋರಾಟ ಮಾಡಿದ ರೈತರಿಗೆ ಪ್ರಧಾನಿಯವರು ಭರವಸೆ ನೀಡಿ ಹುಸಿಗೊಳಿಸಿದ್ದಾರೆ. ಹೀಗಾಗಿ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ಶಾಸನ ಜಾರಿಗಾಗಿ ಅದೂ ಕೂಡ ಕೃಷಿ ಉತ್ಪನ್ನಗಳಿಗೆ ಎಂ.ಎಸ್.ಸ್ವಾಮಿನಾಥನ್ ಆಯೋಗದ ವರದಿಯಂತೆ ಬೆಂಬಲ ಬೆಲೆ ನಿಗದಿ ಮಾಡಲು ದೇಶದ ರೈತರ ಸಂಪೂರ್ಣ ಕೃಷಿ ಸಾಲ ಮನ್ನಾಕಾಗಿ ಒತ್ತಾಯಿಸಲು ಈ ರ‍್ಯಾಲಿ ಆಯೋಜಿಸಲಾಗುತ್ತಿದೆ ಎಂದು ತಿಳಿಸಿದರು.

ಇನ್ನು ದೆಹಲಿಯಲ್ಲಿ ಫೆ.13ರಂದು ದೇಶದ ಎಲ್ಲ ರೈತ ಸಂಘಟನೆಗಳ ಮಹಾಸಂಗಮ ರ‍್ಯಾಲಿ ನಡೆಯಲಿದ್ದು, ಈಗಾಗಲೇ ಸಂಯುಕ್ತ ಕಿಸಾನ್ ಮೋರ್ಚಾ ವತಿಯಿಂದ ದೇಶದ ವಿವಿಧ ರಾಜ್ಯಗಳಲ್ಲಿ 14 ಕಿಸಾನ್ ಮಹಾ ಪಂಚಾಯತ್ ಸಮಾವೇಶಗಳನ್ನು ನಡೆಸಿ ರೈತರ ಜಾಗೃತಿ ಪಡಿಸಲಾಗಿದೆ ಎಂದು ವಿವರಿಸಿದರು.

ದೇಶದ ರೈತರನ್ನು ರಕ್ಷಣೆ ಮಾಡಲು ಕೇಂದ್ರ ಸರ್ಕಾರ ವಿಶ್ವ ವ್ಯಾಪಾರ ಒಪ್ಪಂದದಿಂದ ಹೊರಗೆ ಬರಬೇಕು. ಕಬ್ಬಿನ ಎಫ್‌ಆರ್‌ಪಿ ದರವನ್ನು ಕನಿಷ್ಠ 4000 ರೂ.ಗಳಿಗೆ ಏರಿಕೆ ಮಾಡಬೇಕು. 60 ವರ್ಷ ತುಂಬಿದ ರೈತರಿಗೆ ಕನಿಷ್ಠ 10,000 ಪಿಂಚಣಿ ನೀಡುವ ಯೋಜನೆ ಜಾರಿಗೆ ತರಬೇಕು. ಬೆಳೆ ವಿಮೆ ಪದ್ಧತಿ ಬದಲಾಯಿಸಬೇಕು. ಎಲ್ಲ ಬೆಳೆಗಳಿಗೂ ಬೆಳೆವಿಮೆ ಜಾರಿ ಆಗಬೇಕು ಎಂಬ ಒತ್ತಾಯಗಳನ್ನು ಈ ರ‍್ಯಾಲಿಯಲ್ಲಿ ಮಾಡಲಾಗುವುದು ಎಂದು ತಿಳಿಸಿದರು.

ಇನ್ನು ರಾಜ್ಯ ಸರ್ಕಾರ ಬಣ್ಣಾರಿ ಸಕ್ಕರೆ ಕಾರ್ಖಾನೆಯನ್ನು ಸರ್ಕಾರದ ವಶಕೆ ಪಡೆಯಬೇಕು. ಮುಖ್ಯಮಂತ್ರಿಯವರ ಕ್ಷೇತ್ರದಲ್ಲಿರುವ ಬಣ್ಣಾರಿ ಸಕ್ಕರೆ ಕಾರ್ಖಾನೆ ರಹದಾರಿ ನಿಯಮಗಳನ್ನು ಉಲ್ಲಂಗಿಸಿ ಸರ್ಕಾರಕ್ಕೆ ಹಾಗೂ ರೈತರಿಗೆ ಹಲವಾರು ವಿಧದಲ್ಲಿ ಸುಳ್ಳು ಮಾಹಿತಿ ವರದಿ ಸಲ್ಲಿಸಿ ವಂಚನೆ ಮಾಡುತ್ತಿದೆ. ಹೀಗಾಗಿ ರಾಜ್ಯ ಸರ್ಕಾರ ಕೂಡಲೇ ಈ ಬಗ್ಗೆ ದಕ್ಷ ಅಧಿಕಾರಿಗಳ ತಂಡ ರಚಿಸಿ ತನಿಖೆ ನಡೆಸಿ ಸಕ್ಕರೆ ಕಾರ್ಖಾನೆಯನ್ನು ತನ್ನ ವಶಕ್ಕೆ ಪಡೆದು ರೈತರಿಗೆ ನ್ಯಾಯ ಕೊಡಿಸಬೇಕು ಎಂದು ಆಗ್ರಹಿಸಿದರು.

ಸಹಕಾರಿ ವ್ಯವಸ್ಥೆಯಲ್ಲಿರುವ ಎಪಿಎಂಸಿ, ಸಹಕಾರಿ ಬ್ಯಾಂಕುಗಳು, ಹಾಲು ಉತ್ಪಾದಕರ ಸಂಸ್ಥೆಗಳ ಕಾರ್ಯನಿರ್ವಾಹಣೆಯಲ್ಲಿ ಸರ್ಕಾರದ ನಾಮನಿರ್ದೇಶನ ಪ್ರತಿನಿಧಿಗಳನ್ನು ನೇಮಕ ಮಾಡುವುದನ್ನು ಕೈ ಬಿಡಬೇಕು ಸಂಸ್ಥೆಗಳು ದುರ್ಬಲವಾಗಲು ರಾಜಕೀಯ ಪ್ರವೇಶ ಕಾರಣವಾಗಿದೆ ಎಂಬುದನ್ನು ಸರ್ಕಾರ ಅರಿತುಕೊಳ್ಳಬೇಕು ಎಂದು ಹೇಳಿದರು.

ಕರ್ನಾಟಕ ಜಲ ಸಂರಕ್ಷಣಾ ಸಮಿತಿ ವತಿಯಿಂದ, ಇಂದಿನ ಮಾಧ್ಯಮ ಹಾಗೂ ಪ್ರಜಾತಂತ್ರ ವ್ಯವಸ್ಥೆ, ಕುರಿತು ವಿಚಾರ ವಿಮರ್ಶ ಗೋಷ್ಠಿ ಇದೇ ಜ. 24 ರಂದು ಬೆಂಗಳೂರಿನ ಶಾಸಕರ ಭವನದ ಸಭಾಂಗಣದಲ್ಲಿ ನಡೆಯಲಿದೆ. ನಿವೃತ್ತ ನ್ಯಾಯಾಧೀಶರು, ಸಮಾಜ ಚಿಂತಕರು, ಮಾಧ್ಯಮ ಕ್ಷೇತ್ರದ ಚಿಂತಕರು ಗೋಷ್ಠಿಯಲ್ಲಿ ಭಾಗವಹಿಸಿ ಅಭಿಪ್ರಾಯಗಳನ್ನು ಮಂಡಿಸಲಿದ್ದಾರೆ ಎಂದು ಇದೇ ವೇಳೆ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಅತ್ತಹಳ್ಳಿ ದೇವರಾಜ್, ಪಿ.ಸೂಮಶೇಖರ್, ಬರಡನಪುರ ನಾಗರಾಜ್, ಕಿರಗಸೂರ ಶಂಕರ, ರಂಗರಾಜು, ಮಾರ್ಬಳ್ಳಿ ನೀಲಕಂಠಪ್ಪ, ಬಸವರಾಜು, ಗೌರಿಶಂಕರ್, ವೆಂಕಟೇಶ, ನಾಗೇಶ, ಪಟೇಲ್ ಶಿವಮೂರ್ತಿ, ರೇವಣ್ಣ, ಶಿವಣ್ಣ ಇತರರು ಇದ್ದರು.

Leave a Reply

error: Content is protected !!
LATEST
ಚಾಮುಂಡಿ ಹುಟ್ಟುಹಬ್ಬ: ಬೆಳ್ಳಿ ಪಲ್ಲಕ್ಕಿ ಉತ್ಸವಕ್ಕೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚಾಲನೆ ನಾಡ ಅಧಿದೇವತೆ ಚಾಮುಂಡಿ ತಾಯಿಯ ವರ್ಧಂತಿ ಸಂಭ್ರಮ: ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ...