NEWSಕೃಷಿಮೈಸೂರು

ಬೇಡಿಕೆಯ ಬೆಳೆ ಬೆಳೆದು ಆರ್ಥಿಕ ಸದೃಢರಾಗಿ: ರೈತರಿಗೆ ಕುಲಪತಿ ಡಾ.ವಿಷ್ಣವರ್ಧನ ಕಿವಿಮಾತು

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಕೃಷಿ ಪದ್ಧತಿಯಲ್ಲಿ ರಾಸಾಯನಿಕ ಗೊಬ್ಬರದ ಬಳಕೆ ಕಡಿಮೆ ಮಾಡಿ ಹಸಿರೆಲೆ ಹಾಗೂ ಜೈವಿಕ ಗೊಬ್ಬರಗಳನ್ನು ಸರಿಯಾದ ರೀತಿಯಲ್ಲಿ ಬಳಸಿಕೊಂಡರೆ ಮುಂದಿನ ಪೀಳಿಗೆಗೆ ಉತ್ತಮ ಕೃಷಿ ಭೂಮಿ ಹಾಗೂ ಉತ್ತಮ ಪರಿಸರ ನೀಡಲು ಸಾಧ್ಯ ಎಂದು ಬಾಗಲಕೋಟೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ. ವಿಷ್ಣವರ್ಧನ ಅಭಿಪ್ರಾಯಪಟ್ಟರು.

ತೋಟಗಾರಿಕೆ ಇಲಾಖೆ ಹಾಗೂ ತೋಟಗಾರಿಕೆ ಮಹಾವಿದ್ಯಾನಿಲಯ ಮತ್ತು ಆಕಾಶವಾಣಿ ಸಹಯೋಗದಲ್ಲಿ ಕರ್ಜನ್ ಪಾರ್ಕ್‌ನಲ್ಲಿರುವ ಡಾ. ಎಂ.ಎಚ್.ಮರೀಗೌಡ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ “ಹಣ್ಣು-ಹೊನ್ನು ಬಾನುಲಿ ಸರಣಿ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಕೃಷಿ ಭೂಮಿಯನ್ನು ಬೇರೆ ಬೇರೆ ಉದ್ಯಮಗಳಿಗೆ ಅತಿಯಾಗಿ ಬಳಸಿಕೊಳ್ಳುತ್ತಿದ್ದು ಪ್ರತಿ ವರ್ಷವು ಕೃಷಿ ಭೂಮಿ ವಿಸ್ತೀರ್ಣ ಕಡಿಮೆಯಾಗುತ್ತಿದೆ. ಇಂದಿನ ಯುವಕರು ಕೃಷಿ ಭೂಮಿ ಇದ್ದರು ಪಟ್ಟಣದ ಕಡೆಗೆ ಮುಖಮಾಡಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಕರ್ನಾಟಕ ತೋಟಗಾರಿಕೆಯಲ್ಲಿ ಅತೀ ಹೆಚ್ಚು ತೆಂಗು ಬೆಳೆಯನ್ನು ಬೆಳೆಯಲು ಮುಂದಾಗಿದೆ. ಇದೇ ರೀತಿ ತೋಟಗಾರಿಕೆಯಲ್ಲಿ ಲಾಭದಾಯಕವಾದ ಹಲವಾರು ಬೆಳೆಗಳಿವೆ ರೈತರು ತೋಟಗಾರಿಕೆ ಬೆಳವಣಿಗೆಯನ್ನು ಹೆಚ್ಚು ಮಾಡಬೇಕು ಮಿಶ್ರ ಕೃಷಿಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಸಲಹೆ ನೀಡಿದರು.

ತೋಟಗಾರಿಕೆ ಮಹಾವಿದ್ಯಾಲಯದ ಡೀನ್ ಡಾ.ಹಂಚಿನಮನಿ ಮಾತನಾಡಿ, ವಿದೇಶಗಳಲ್ಲಿ ಬೆಳೆಯಲಾಗದ ಹಲವು ಕೃಷಿ ಉತ್ಪನ್ನಗಳನ್ನು ಭಾರದಲ್ಲಿ ಬೆಳೆಯಬಹುದು. ಭಾರತ ವೈವಿಧ್ಯಮ ಕೃಷಿ ಉತ್ಪನ್ನಗಳನ್ನು ಬೆಳೆಯುವ ದೇಶವಾಗಿದೆ ಎಂದು ಹೇಳಿದರು.

ಇನ್ನು ವಿದೇಶದ ಮಾರುಕಟ್ಟೆಗಳಲ್ಲಿ ಭಾರತದ ಕೃಷಿ ಉತ್ಪನ್ನಗಳಿಗೆ ಬೇಡಿಕೆ ಇದೆ. ಹೀಗಾಗಿ ಹೊರ ದೇಶಕ್ಕೆ ರಫ್ತು, ಮಾಡುವ ಗುಣಮಟ್ಟದ ಬೆಳೆಗಳನ್ನು ಬೆಳೆಯಿರಿ ಕಾಶ್ಮೀರದಿಂದ ಕನ್ಯಾಕುಮಾರಿಯ ವರೆಗೆ ಭಾರತದಲ್ಲಿ ವೈವಿಧ್ಯಮಯವಾ ಕೃಷಿ ಉತ್ಪನ್ನಗಳನ್ನು ಬೆಳೆಯಲಾಗುತ್ತಿದೆ ಎಂದರು.

ರೈತರು ಬೇಡಿಕೆ ಇರುವ ಬೆಳೆ ಬೆಳೆದು ಆರ್ಥಿಕವಾಗಿ ಸದೃಢರಾಗಬೇಕು ಮಣ್ಣಿನ ಗುಣಮಟ್ಟವನ್ನು ಹೆಚ್ಚಿಸಿ ಸಂರಕ್ಷಿಸುವ ಕಡೆ ಚಿಂತಿಸಬೇಕು ಎಂದು ಕಿವಿ ಮಾತು ಹೇಳಿದರು.

ಕಾರ್ಯಕ್ರಮದಲ್ಲಿ ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರಾದ ಮಂಜುನಾಥ್ ಅಂಗಡಿ ಅಕಾಶವಾಣಿ ಕಾರ್ಯಕ್ರಮ ನಿರ್ವಾಹಕರು ಎನ್ ಕೇಶವಮೂರ್ತಿ ಹಾಗೂ ರೈತರು ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Megha
the authorMegha

Leave a Reply

error: Content is protected !!
Latest news
NWKRTC: ಧಾರವಾಡ ಗ್ರಾ.ವಿಭಾಗದ ನಿವೃತ್ತ ಅಧಿಕಾರಿಗಳಿಗೆ ಹೃದಯಸ್ಪರ್ಷಿ ಬೀಳ್ಕೊಡುಗೆ KSRTC: ಮೂರು ದಶಕಗಳ ಸುದೀರ್ಘ ಸೇವೆ ಬಳಿಕ ಸಂಸ್ಥೆಯ ಬಸ್‌ ಚಾಲಕ ನಿವೃತ್ತಿ-  ಮರೆಯಲಾಗದ ಸಂದರ್ಭ ಸೆರೆ! ಇಂಧನ, ಗ್ಯಾಸ್ ಬೆಲೆಯೇರಿಕೆ, ವಿದ್ಯುತ್ ಖಾಸಗೀಕರಣ ವಿರೋಧಿಸಿ ರಾರೈಸಂ ಪ್ರತಿಭಟನೆ -ಸರ್ಕಾರಗಳ ವಿರುದ್ಧ ಘೋಷಣೆ KKRTC: ಬಸ್ ನಿಲ್ದಾಣದಲ್ಲಿ ಮಹಿಳೆ ಜತೆ ಅನುಚಿತ ವರ್ತನೆ-ಕಿಡಿಗೇಡಿಗೆ ಚಪ್ಪಲಿ ಏಟು ಪ್ರಮಾಣ ವಚನ ಸ್ವೀಕಾರಕ್ಕೆ ಮುಹೂರ್ತ ಫಿಕ್ಸ್ – ಜೂ.3ರಂದು ನೂತನ ಸಿಎಂಆಗಿ ಗದ್ದುಗೆ ಏರಲಿರುವ ಡಿ.ಕೆ.ಶಿವಕುಮಾರ್‌ ಪೆಟ್ರೋಲ್‌, ಡೀಸೆಲ್‌ ಬಳಿಕ CNG ದರದಲ್ಲೂ ಏರಿಕೆ- ಎರಡನೇ ಬಾರಿಗೆ 2ರೂ. ಹೆಚ್ಚಳ -ಗ್ರಾಹಕರಿಗೆ ಶಾಕ್‌ ಕೊಟ್ಟ MGL ಆದೇಶ ಕಾಯ್ದಿರಿಸಿದ 3 ತಿಂಗಳೊಳಗಾಗಿ ಎಲ್ಲ ಕೋರ್ಟ್‌ಗಳಲ್ಲೂ ಅಂತಿಮ ತೀರ್ಪು ಹೊರಬೀಳಬೇಕು: ಸುಪ್ರೀಂ ಮಹತ್ವದ ಆದೇಶ ಗೃಹಲಕ್ಷ್ಮಿ ಹಣ ಮೃತರ ಖಾತೆಗೆ ಜಮೆ ಆಗದಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಗ್ಯಾರಂಟಿ ಯೋಜನೆ ಅಧ್ಯಕ್ಷ ತಾಕೀತು ವಿದ್ಯುತ್ ಗ್ರಾಹಕರಿಗೆ ಗುಡ್‌ನ್ಯೂಸ್‌: ಬಿಲ್‌ಗಳಿಗೆ ಕನಿಷ್ಠ 15 ದಿನಗಳ ಪಾವತಿ ಅವಧಿ ಕಡ್ಡಾಯ ಮಾಡಿ KERC ಆದೇಶ- ಜೂನ್‌... BMTC KSRTC ನಿವೃತ್ತ ನೌಕರರ ಪ್ರತಿಭಟನೆ: ಕನಿಷ್ಠ ಪಿಂಚಣಿ 7500 ರೂ. ನೀಡಲು ಆಗ್ರಹ