NEWSಕೃಷಿದೇಶ-ವಿದೇಶ

ರೈತರ ಹೋರಾಟ ತೀವ್ರ ಸ್ವರೂಪ ಪಡೆಯುವ ಸಾಧ್ಯತೆ ಇದೆ: ಎಚ್ಚರಿಕೆ ನೀಡಿದ ಗುಪ್ತಚರ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಬೆಂಬಲ ಬೆಲೆ ಖಾತ್ರಿ ಪಡಿಸುವ ಕಾನೂನು ಜಾರಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರ ಹೋರಾಟ ತೀವ್ರ ಸ್ವರೂಪ ಪಡೆಯುವ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆ ಎಚ್ಚರಿಸಿದೆ.

ಸಣ್ಣ ಸಣ್ಣ ಗುಂಪುಗಳಲ್ಲಿ ದೆಹಲಿಗೆ ಆಗಮಿಸುತ್ತಿರುವ ರೈತರು ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ನಿವಾಸಕ್ಕೆ ಮುತ್ತಿಗೆ ಹಾಕುವ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆ ತಿಳಿಸಿದೆ. ಕೇಂದ್ರ ಸಚಿವರ ಜತೆಗಿನ ಮಾತುಕತೆ ವಿಫಲವಾದ ಬಳಿಕ ರೈತರು ದೆಹಲಿ ಚಲೋ ಹೋರಾಟ ಆರಂಭಿಸಿದ್ದಾರೆ. ಈ ಸಂಬಂಧ ಗುಪ್ತಚರ ಇಲಾಖೆ ವರದಿ ಬಿಡುಗಡೆ ಮಾಡಿದೆ. ವರದಿ ಪ್ರಕಾರ ಪಂಜಾಬ್ ಒಂದರಿಂದಲೇ 1500 ಟ್ರ್ಯಾಕ್ಟರ್, 509 ವಿವಿಧ ವಾಹನಗಳ ಮೂಲಕ ರೈತರು ದೆಹಲಿಯತ್ತ ಧಾವಿಸಿದ್ದಾರೆ. ಹರಿಯಾಣದಿಂದ ಬರುವ ರೈತರ ಸಂಖ್ಯೆ ಇನ್ನೂ ಹೆಚ್ಚಳವಾಗಲಿದೆ ಎಂದು ವರದಿಯಲ್ಲಿ ತಿಳಿಸಿದೆ.

ಪ್ರತಿಭಟನಾಕಾರರು ಸುಮಾರು ಆರು ತಿಂಗಳಿಗೆ ಬೇಕಾಗುವ ಆಹಾರ ಧಾನ್ಯಗಳನ್ನು ಟ್ರ್ಯಾಕ್ಟರ್‌ನಲ್ಲಿ ಸಂಗ್ರಹ ಮಾಡಿಕೊಂಡಿದ್ದಾರೆ. ಟ್ರ್ಯಾಕ್ಟರ್‌ಗಳನ್ನೇ ಶೆಲ್ಟರ್ ಮಾಡಿಕೊಂಡಿದ್ದಾರೆ. ಹೀಗಾಗಿ ಕಳೆದ ಬಾರಿಯಂತೆ ದೆಹಲಿಯ ಗಡಿಯಲ್ಲಿ ಸುದೀರ್ಘ ಧರಣಿ ನಡೆಯಬಹುದು. ಅಲ್ಲದೇ ಈ ಹೋರಾಟಕ್ಕೆ ದಕ್ಷಿಣ ರಾಜ್ಯಗಳ ನೆರವನ್ನು ಕೋರಲಾಗಿದೆ ಎಂದು ಇಲಾಖೆ ಎಚ್ಚರಿಸಿದೆ.

ಮುಂದುವರಿದು ರೈತರು ಸಣ್ಣ ಗುಂಪುಗಳಲ್ಲಿ ಬಂದು ದೆಹಲಿಯ ಸುತ್ತಮುತ್ತಲಿನ ಗುರುದ್ವಾರಗಳು, ಧರ್ಮಶಾಲಾಗಳು, ಆಶ್ರಮಗಳು, ಅತಿಥಿ ಗೃಹಗಳಲ್ಲಿ ಅಡಗಿಕೊಂಡಿದ್ದು, ಕ್ಷಿಪ್ರ ಪ್ರತಿಭಟನೆಗಳನ್ನು ನಡೆಸಲು ಯೋಜಿಸಿದ್ದಾರೆ. ಅವರು ಪ್ರಧಾನ ಮಂತ್ರಿ ಭವನ, ಗೃಹ ಸಚಿವರ ಭವನದಂತಹ ಸ್ಥಳಗಳಲ್ಲಿ ಪ್ರತಿಭಟನೆ ನಡೆಸಬಹುದೆಂದು ಎಚ್ಚರಿಸಲಾಗಿದೆ.

ಆಮ್ ಆದ್ಮಿ ಸರ್ಕಾರ ಬೆಂಬಲ: ಈ ನಡುವೆ ರೈತರು ಕರೆ ಕೊಟ್ಟಿರುವ ದೆಹಲಿ ಚಲೋ ಹೋರಾಟಕ್ಕೆ ದೆಹಲಿಯ ಆಮ್ ಆದ್ಮಿ ಸರ್ಕಾರ ಬೆಂಬಲ ನೀಡಿದೆ. ಬವಾನಾ ಸ್ಟೇಡಿಯಂನ್ನು ಜೈಲಾಗಿ ಪರಿವರ್ತಿಸುವ ಕೇಂದ್ರ ಸರ್ಕಾರದ ಪ್ರಸ್ತಾವನೆಯನ್ನು ತಿರಸ್ಕರಿಸಿರುವ ಕೇಜ್ರಿವಾಲ್ ಸರ್ಕಾರ ಅನ್ನದಾತರನ್ನು ಜೈಲಿಗೆ ಹಾಕುವುದು ತಪ್ಪು ಎಂದು ಹೇಳಿದೆ.

ರೈತರ ಪ್ರತಿಭಟನೆಯಲ್ಲಿ ಬಂಧಿತರಾದ ಪ್ರತಿಭಟನಾಕಾರರಿಗೆ ಬವಾನಾ ಕ್ರೀಡಾಂಗಣವನ್ನು ತಾತ್ಕಾಲಿಕ ಜೈಲಾಗಿ ಪರಿವರ್ತಿಸಿ, ವ್ಯವಸ್ಥೆ ಮಾಡಿಕೊಡುವಂತೆ ಸೋಮವಾರ ಕೇಂದ್ರ ಸರ್ಕಾರ ದೆಹಲಿ ಸರ್ಕಾರಕ್ಕೆ ಪತ್ರ ಬರೆದಿತ್ತು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ದೆಹಲಿ ಸರ್ಕಾರ ರೈತರ ಬೇಡಿಕೆಗಳು ನ್ಯಾಯಸಮ್ಮತವಾಗಿದೆ. ಶಾಂತಿಯುತ ಪ್ರತಿಭಟನೆಯು ಸಂವಿಧಾನದಲ್ಲಿ ಪ್ರತಿಯೊಬ್ಬ ನಾಗರಿಕನ ಹಕ್ಕು ಎಂದು ಹೇಳಿದೆ.

ಇಂದು (ಮಂಗಳವಾರ) ರಾಷ್ಟ್ರ ರಾಜಧಾನಿಯನ್ನು ಪ್ರವೇಶಿಸದಂತೆ ರೈತರ `ದೆಹಲಿ ಚಲೋ’ ಮೆರವಣಿಗೆಯನ್ನು ತಡೆಯಲು ದೆಹಲಿ ಗಡಿಗಳಲ್ಲಿ ಹಲವು ಹಂತದಲ್ಲಿ ಭದ್ರತಾ ವ್ಯವಸ್ಥೆ ಮಾಡಲಾಗಿದೆ. ಬ್ಯಾರಿಕೇಡ್‍ಗಳು, ಕಾಂಕ್ರೀಟ್ ಬ್ಲಾಕ್‍ಗಳು, ಕಬ್ಬಿಣದ ಮೊಳೆಗಳು ಮತ್ತು ಕಂಟೈನರ್‌ಗಳನ್ನು ಬಳಸಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ರೈತ ಮುಖಂಡರು ಮತ್ತು ಕೇಂದ್ರದ ನಡುವಿನ ಮಾತುಕತೆ ವಿಫಲವಾದ ಬಳಿಕ ರೈತರನ್ನು ಗಡಿಯಲ್ಲಿ ತಡೆಯುವ ಪ್ರಯತ್ನ ಆರಂಭವಾಗಿದೆ.

ಸಿಂಘು, ಟಿಕ್ರಿ ಮತ್ತು ಘಾಜಿಪುರ ಗಡಿಗಳಲ್ಲಿ ಗಲಭೆ ನಿಗ್ರಹ ಪಡೆಗಳಲ್ಲಿ ಪೊಲೀಸರು ಮತ್ತು ಅರೆಸೈನಿಕ ಸಿಬ್ಬಂದಿಯನ್ನು ಭಾರೀ ಸಂಖ್ಯೆಯಲ್ಲಿ ನಿಯೋಜಿಸಲಾಗಿದೆ. ರೈತರ ಪ್ರತಿಭಟನಾ ಮೆರವಣಿಗೆ ಸಲುವಾಗಿ ನಿರ್ದಿಷ್ಟ ಸ್ಥಳಗಳಲ್ಲಿ ತಾತ್ಕಾಲಿಕ ಜೈಲುಗಳನ್ನು ಸಹ ಸ್ಥಾಪಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Leave a Reply

error: Content is protected !!
LATEST
ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ