ಮೈಸೂರು: ಜಿಲ್ಲೆಯ ರೈತರ ಸಮಸ್ಯೆಗಳನ್ನು ಬಗೆಹರಿಸುವಂತೆ ರಾಜ್ಯ ಕಬ್ಬು ಬೆಳೆಗಾರರ ಸಂಘದ ಮೈಸೂರು ಜಿಲ್ಲಾ ಘಟಕ ಒತ್ತಾಯಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿತು.
ಸಂಘದ ಜಿಲ್ಲಾ ಘಟಕದ ವತಿಯಿಂದ ಏ.8ರಂದು ಮೈಸೂರಿನ ಗನ್ ಹೌಸ್ ಬಳಿಯ ಕುವೆಂಪು ಉದ್ಯಾನವನದಲ್ಲಿ ರೈತರ ಕುಂದು ಕೊರತೆಗಳ ಸಭೆ ನಡೆಸಲಾಗಿಯಿತು. ನಂತರ ಮೈಸೂರಿನ ಜಿಲ್ಲಾಧಿಕಾರಿಗಳಿಗೆ ಅವರ ಅನುಪಸ್ಥಿತಿಯಲ್ಲಿ ಅಪರ ಜಿಲ್ಲಾಧಿಕಾರಿ ಶಿವರಾಜ್ ಅವರಿಗೆ ಒತ್ತಾಯ ಪತ್ರ ಸಲ್ಲಿಸಿದರು.
ಈಗಾಲೇ ಪೂರ್ವ ಮುಂಗಾರು ಮಳೆ ಪ್ರಾರಂಭವಾಗುತ್ತಿದ್ದು, ಕೃಷಿ ಚಟುವಟಿಕೆಗೆ ರೈತರು ಸಜ್ಜಾಗುತ್ತಿದ್ದಾರೆ. ಹೀಗಾಗಿ ತುರ್ತಾಗಿ ಹಸಿರೆಲೆ ಗೊಬ್ಬರಕ್ಕಾಗಿ ಬಿತ್ತನೆ ಬೀಜಗಳಾದ ಚಂಬೆ, ಹೆಸರು, ಉದ್ದು, ಹಲಸಂದೆ, ಹುರುಳಿ ಹಾಗೂ ಮುಸುಕಿನ ಜೋಳ ಮುಂತಾದ ಬಿತ್ತನೆ ಬೀಜಗಳು ತುಂಬಾ ಅವಶ್ಯಕತೆ ಇದ್ದು ಆರ್ಥಿಕ ಸಂಕಷ್ಟದಲ್ಲಿರುವ ರೈತರಿಗೆ ಉಚಿತವಾಗಿ ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ ತುರ್ತಾಗಿ ಸಿಗುವಂತೆ ಪೂರೈಕೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಇನ್ನು ರಾಜ್ಯ ಸರ್ಕಾರ ಗೃಹ ಬಳಕೆ ವಿದ್ಯುತ್ ಪೂರೈಕೆ ಯೋಜನೆಯನ್ನು ಹೊಸದಾಗಿ ರೂಪಿಸಲು ಹೊರಟಿರುವ ಕರೆನ್ಸಿ ರೂಪದ ವಿದ್ಯುತ್ ಪೂರೈಕೆ ಕೈಬಿಡಬೇಕು, ಕೃಷಿ ಪಂಪ್ ಸೆಟ್ ರೈತರಿಗೆ ಟಿಸಿ ಅಳವಡಿಸಲು ಹಿಂದಿನಂತೆ ಅಕ್ರಮ ಸಕ್ರಮ ಯೋಜನೆ ಮುಂದುವರಿಸಿ, ಹಗಲು ವೇಳೆ ನಿರಂತರ ಬೆಳಗ್ಗೆ 6 ರಿಂದ ಸಂಜೆ 6 ರವರಗೆ ವಿದ್ಯುತ್ ಪೂರೈಕೆ ಮಾಡಬೇಕು ಎಂದು ಆಗ್ರಹಿಸಿರು.
ಹೈನುಗಾರಿಕೆ ರೈತರಿಗೆ ಪ್ರೋತ್ಸಾಹ ಧನ ಲೀಟರ್ ಹಾಲಿಗೆ ಕೊಡುತಿರುವ 5 ರೂ.ಬಾಕಿ ಉಳಿಸಿಕೊಂಡಿರುವ ಹಾಲಿನ ಹಣ ಕೂದಲೇ ಬಿಡುಗಡೆ ಮಾಡಬೇಕು, ಅಲ್ಲದೆ ಹೆಚ್ಚುವರಿಯಾಗಿ ಲೀಟರ್‌ಗೆ ₹10 ಏರಿಕೆ ಮಾಡಿ ಹಾಲು ಉತ್ಪಾದಕ ರೈತರ ರಕ್ಷಣೆ
ಮಾಡಬೇಕು ಎಂದು ಒತ್ತಾಯಿಸಿದರು.
ನಕಲಿ – ಕಳಪೆ ಗುಣಮಟ್ಟದ ಬಿತ್ತನೆ ಬೀಜ, ರಸ ಗೊಬ್ಬರ ನರ್ಸರಿ ಸಸಿಗಳು ಹಾಗೂ ಕೀಟ ನಾಶಕ – ಕ್ರಿಮಿನಾಶಕ ಮಾರಾಟ ಮಾಡುವವರಿಗೆ ಜಾಮೀನು ರಹಿತ ಕಠಿಣ ಜೈಲು ಶಿಕ್ಷೆ ವಿಧಿಸುವ ಕಾನೂನು ಜಾರಿಗೆ ತರಬೇಕು. ರಸ ಗೊಬ್ಬರ,ಹನಿ ನೀರಾವರಿ ಉಪಕರಣಗಳು, ಟ್ರ್ಯಾಕ್ಟರ್, ಪವರ್ ಟಿಲ್ಲರ್ ಬಿಡಿಭಾಗಗಳ ಬೆಲೆಗಳು ಗಗನಕ್ಕೇರಿದ್ದು ಕಡಿವಾಣ ಹಾಕಲು ಕ್ರಮ ಕೈಗೊಳ್ಳಬೇಕು ಹಾಗೂ ಇವುಗಳ ಜಿಎಸ್ಟಿ ತೆರಿಗೆ ರದ್ದುಗೊಳಿಸಬೇಕು ಎಂದು ಆಗ್ರಹಿಸಿರು.
ರೈತರಿಗೆ ಸಹಕಾರಿ ಬ್ಯಾಂಕ್ಗಳ ರೀತಿ ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿಯೂ ಬಡ್ಡಿ ರಹಿತ ಸಾಲ ಸಿಗುವಂತಾಗಬೇಕು. ರಾಜ್ಯದಲ್ಲಿ ಆನ್ಲೈನ್ ಗೇಮ್ ಜೂಜಾಟ ನಿಷೇಧ ಮಾಡಬೇಕು, ತಡೆಗಟ್ಟಲು ಕಠಿಣ ಕಾನೂನು ನೀತಿ ಜಾರಿಯಾಗಬೇಕು. ಜೂಜಾಟಕ್ಕೆ ಸಿಲುಕಿ ಪ್ರಾಣ ಕಳೆದುಕೊಳ್ಳುತ್ತಿರುವ ಯುವಕರ ಭವಿಷ್ಯ ಕಾಪಾಡಬೇಕು ಎಂದರು.
ಇನ್ನು ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತ್ರಿ ಕಾನೂನು ಜಾರಿ ಮಾಡಲು, ಆಂಧ್ರ ಪ್ರದೇಶ ಸರ್ಕಾರದ ರೀತಿ ರಾಜ್ಯ ಸರ್ಕಾರ ಜಾರಿಗೆ ತರಲು ಕ್ರಮ ಕೈಗೊಳ್ಳಬೇಕು. ಕೃಷಿ ಹಾಗೂ ತೋಟಗಾರಿಕೆ ಬೆಳೆಗಳಿಗೂ ಬೆಳೆ ವಿಮೆ ಪರಿಹಾರ ಸಿಗುವಂತಾಗಬೇಕು ಹಾಗೂ ಕೃಷಿ ಸಾಲ ನೀತಿ ಬದಲಾಯಿಸಿ ರೈತರ ಭೂಮಿ ಮೌಲ್ಯಕ್ಕೆ ಶೇ.75 ರಷ್ಟು ಸಾಲ ಸಿಗುವಂತಾಗಬೇಕು.
ಕನಿಷ್ಠ 5 ಲಕ್ಷ ರೂ ಕೃಷಿ ಆಧಾರ ರಹಿತ,ಹಾಗೂ ಬಡ್ಡಿರಹಿತ ಸಾಲ ಸಿಗುವಂತಾಗಬೇಕು. ಕೃಷಿ ಸಾಲಕ್ಕೆ ಸಿಬಿಲ್ ಸ್ಕೋರ್ ಪರಿಗಣಿಸುವ ಮಾನದಂಡ ಪರಿಗಣನೆ ರದ್ದುಗೊಳಿಸಬೇಕು. ಕಬ್ಬಿಗೆ ಕಳೆದ ವರ್ಷ ಸರ್ಕಾರ ನಿಗದಿ ಪಡಿಸಿದ ಹೆಚ್ಚುವರಿ ಟನ್ ಗೆ 150 ರೂ.ನಂತೆ ಮೈಸೂರು ಜಿಲ್ಲೆ ವ್ಯಾಪ್ತಿಯಲ್ಲಿರುವ ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆ ಅವರು ಜಿಲ್ಲೆಯ ಕಬ್ಬು ಬೆಳೆಗಾರರಿಗೆ ಸುಮಾರು 30 ಕೋಟಿ ರೂ. ಬಾಕಿ ಇದ್ದು ಈ ಹಣ ಕೂಡಲೇ ಕೊಡಿಸಬೇಕು ಎಂದು ಆಗ್ರಹಿಸಿದರು.
ಸಕ್ಕರೆ ಕಾರ್ಖಾನೆಗಳು ಸಕ್ಕರೆ ಇಳುವರಿ ಮೋಸ ತಪ್ಪಿಸಲು ಕನಿಷ್ಠ ಮಿತಿ 9 ಇಳುವರಿಗೆ ಜಾರಿ ಆಗಬೇಕು. ಟ್ರ್ಯಾಕ್ಟರ್, ಪವರ್ ಟಿಲ್ಲರ್ ಕೃಷಿ ಯಂತ್ರಗಳ ಮಾರಾಟ ಕೇಂದ್ರಗಳಲ್ಲಿ ಸರ್ಕಾರ ನಿಗದಿ ಪಡಿಸಿದ ದರವನ್ನು ಬಹಿರಂಗವಾಗಿ ನಾಮಫಲಕ ಹಾಕಬೇಕು. ರಾಜ್ಯ ಸರ್ಕಾರ ರೈತರಿಗೆ ನೀಡುತ್ತಿದ್ದ ಕಿಸಾನ್ ಸಮ್ಮಾನ್ ಯೋಜನೆ ಹಣ 4000 ಕೂಡಲೇ ಬಿಡುಗಡೆ ಮಾಡಬೇಕು,ಹಾಗೂ ಅದನ್ನು 8000 ರೂ.ಗೆ ಏರಿಕೆ ಮಾಡಬೇಕು.
ಜಿಲ್ಲೆಯಾದ್ಯಂತ ಇರುವ ಕೆರೆ, ಕಟ್ಟೆಗಳ ಒತ್ತುವರಿ ತೆರವು ಗೊಳಿಸಿ ಹೂಳು ತೆಗೆದು ಆ ಮಣ್ಣನ್ನು ರೈತರ ಜಮೀನಿಗೆ ಬಿಡಿಸಬೇಕು,ಕಬಿನಿ – ಕಾವೇರಿ ಅಚ್ಚು ಕಟ್ಟು ಪ್ರದೇಶದ ಎಲ್ಲಾ ನಾಲೆಗಳ ಮುಖಾಂತರ ನೀರು ಹರಿಸಿ ಕೆರೆಕಟ್ಟೆಗಳ ತುಂಬಿಸುವ ಮೂಲಕ ಅಂತರ್ ಜಲ ಹೆಚ್ಚಿಸಬೇಕು. ಪ್ರತಿ 3 ತಿಂಗಳಿಗೊಮ್ಮೆ ರೈತರ ಕುಂದು ಕೊರತೆಗಳ ಸಭೆ ನಡೆಸಿ ರೈತರ ಸಮಸ್ಯೆಗಳ ಬಗೆ ಹರಿಸಬೇಕು. ಅದರಂತೆ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಪ್ರತಿ 2 ತಿಂಗಳಿಗೊಮ್ಮೆ ರೈತರ ಕುಂದು ಕೊರತೆಗಳ ಸಭೆ ನಡೆಸಬೇಕು ಜತೆಗೆ ಈ ಎಲ್ಲವುಗಳ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳಬೇಕು ಇಲ್ಲದಿದ್ದರೆ ತಮ್ಮ ಕಚೇರಿಯ ಮುಂದೆ ಉಗ್ರ ಹೋರಾಟ ರೂಪಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್, ರಾಜ್ಯ ಖಂಜಾಜಿ ಎಂ.ಬಿ.ಚೇತನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬರಡನಪುರ ನಾಗರಾಜ್, ಜಿಲ್ಲಾ ಕಾರ್ಯಾಧ್ಯಕ್ಷ ಕಿರಗಸೂರು ಶಂಕರ್, ಪರಶಿವಮೂರ್ತಿ, ಕುರುಬೂರು ಸಿದ್ದೇಶ, ಲಕ್ಷ್ಮೀಪುರ ವೆಂಕಟೇಶ್, ದೇವನೂರು ವಿಜೇಂದ್ರ,ಕೋಟೆ ಸುನೀಲ್, ಮಹದೇವಸ್ವಾಮಿ, ಯೋಗೇಶ್, ವರಕೋಡು ನಾಗೇಶ್, ಕುರುಬೂರು ಪ್ರದೀಪ್, ಕಿರಗಸೂರು ಪ್ರಸಾದ್ ನಾಯಕ, ನಿಂಗರಾಜು, ಕೆ.ಉಮೇಶ್, ವಾಂಜಮಂಗಳ ಮಹಾದೇವ, ನಾಗೇಂದ್ರ, ದೊಡ್ಡ ಕಾಟೂರು ನಾಗೇಶ್, ಮಹದೇವಸ್ವಾಮಿ, ಶ್ರೀಕಂಠ, ಮಹೇಶ್, ಮಹಾಲಿಂಗ ನಾಯಕ, ಮಹೇಶ, ಪ್ರಕಾಶ, ರಾಮಮೂರ್ತಿ, ಅಂಬಳೆ ಮಂಜುನಾಥ್, ಚುಂಚರಾಯನಹುಂಡಿ ಗಿರೀಶ್, ಹೆಗ್ಗೂರು ರಂಗರಾಜು, ಕೆಂಪೇಗೌಡ, ರಾಮಮೂರ್ತಿ, ನಾಗೇಂದ್ರ. ಮಂಟೆಸ್ವಾಮಿ ಮುಂತಾದವರು ಇದ್ದರು.
Related

You Might Also Like
ಆ.5ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಅಂಗವಾಗಿ ಒಂದು ದಿನದ ಸಾಮೂಹಿಕ ಉಪವಾಸ ಸತ್ಯಾಗ್ರಹ ಆರಂಭ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರಿಗೆ ಬರಬೇಕಾಗದ 38 ತಿಂಗಳ ಹಿಂಬಾಕಿಯನ್ನು ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕು ಹಾಗೂ 2024ರ ಜನವರಿ 1ರಿಂದ...
EPS Pensioners Protest: ಅಧಿವೇಶನ ಮುಗಿಯುವುದರೊಳಗೆ ಬೇಡಿಕೆ ಈಡೇರದಿದ್ದರೆ ಉಗ್ರ ಹೋರಾಟ: ನಂಜುಂಡೇಗೌಡ ಎಚ್ಚರಿಕೆ
ಬೆಂಗಳೂರು: ಇದೇ ಜುಲೈ 21ರಿಂದ ಪಾರ್ಲಿಮೆಂಟ್ ಅಧಿವೇಶನ ಪ್ರಾರಂಭವಾಗಿದ್ದು, ಈ ಅಧಿವೇಶನ ಮುಗಿಯುವುದರೊಳಗೆ ನಮ್ಮ ಬೇಡಿಕೆಗಳನ್ನು ಈಡೇರಿಸದೆ ಹೊದಲ್ಲಿ ನಾವು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಬಿಎಂಟಿಸಿ...
ಸಮಾನ ವೇತನಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ ಧರಣಿ ಸತ್ಯಾಗ್ರಹ ಮಾಡುತ್ತಿದ್ದ ಸಾರಿಗೆ ನೌಕರರ ಮುಖಂಡರ ಬಂಧನ
ಸಾರಿಗೆ ನೌಕರರ ಹೋರಾಟ ಹತ್ತಿಕ್ಕಿದ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಕೊಟ್ಟ ಭರವಸೆ ಈಡೇರಿಸುವ ಬದಲಿಗೆ ದೌರ್ಜನ್ಯ ಎಸಗಿದ ಕಾಂಗ್ರೆಸ್ ಸರ್ಕಾರ ಬೆಂಗಳೂರು: ಸಮಾನ ವೇತನ,...
ರೈತರು ಮರ ಕಟಾವು ಮಾಡುವ ನಿಯಮ ಸರಳಗೊಳಿಸಿ: ಅತ್ತಹಳ್ಳಿ ದೇವರಾಜ್ ಒತ್ತಾಯ
ಮೈಸೂರು: ರೈತರು ತಮ್ಮ ಜಮೀನಿನಲ್ಲಿ ಇರುವ ಮರ ಕಟಾವು ಮಾಡಿ ಸಾಗಾಣಿಕೆ ಮಾಡಿಕೊಳ್ಳುವ ನಿಯಮ ಸರಳೀಕರಣ ಗೊಳಿಸಿಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಕ್ರಮ ಕೈಗೊಳ್ಳಬೇಕು...
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥ: ಗ್ರಾಮದಲ್ಲೇ ಬೀಡುಬಿಟ್ಟ ವೈದ್ಯರ ತಂಡ
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯ ನಿಡಗುಂದಿ ತಾಲೂಕಿನ ಬ್ಯಾಲಿಹಾಳದಲ್ಲಿ ನಡೆದಿದೆ. ಗ್ರಾಮಕ್ಕೆ ಗ್ರಾಮ ಪಚಾಯಿತಿಯಿಂದ ಸರಬರಾಜು ಮಾಡಿರುವ ನೀರು...
KSRTC ನಾಲ್ಕೂ ನಿಗಮಗಳ ಸಾರಿಗೆ ನೌಕರರ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ-ಧರಣಿ ಸತ್ಯಾಗ್ರಹ ಆರಂಭ
ಬೆಂಗಳೂರು: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸಂಘಟನೆಗಳ ಒಕ್ಕೂಟ ಇಂದಿನಿಂದ (ಜು.29)...
ಅಂಗವಿಕಲರ ಬಸ್ಪಾಸ್ ಸೇರಿ ಎಲ್ಲ ಸರ್ಕಾರಿ ಸೌಲಭ್ಯಗಳಿಂದ ವಂಚಿತ ಅಂಗವಿಕಲ ಭೀಮಪ್ಪನಿಗೆ ಬೇಕಿದೆ ಸರ್ಕಾರದ ಆಸರೆ !
ತುಮಕೂರು: ಜಿಲ್ಲೆ ಹೊಸಹಳ್ಳಿ ಗ್ರಾಮ, ರೆಡ್ಡಿಹಳ್ಳಿ ಗ್ರಾಮಪಂಚಾಯಿತಿ ಮಿಡಿಗೆಸಿ, ಮಧುಗಿರಿ ತಾಲೂಕಿನ ಅಂಗವಿಕಲ ಭೀಮಪ್ಪನಿಗೆ ಸರ್ಕಾರಿ ಸೌಲಭ್ಯ ಸಿಗಬೇಕಿದೆ. ಪೋಲಿಯೋಗೆ ಒಳಗಾಗಿರುವ ಭೀಮಪ್ಪನಿಗೆ ಬೆರಳಿನ ಗುರುತು ಸಹ...
ನೀರಿನ ಒಳಹರಿವು ಹೆಚ್ಚಾದ ಹಿನ್ನೆಲೆ ತಲಕಾಡು ನಿಸರ್ಗ ಧಾಮಕ್ಕೆ ಬರುವ ಪ್ರವಾಸಿಗರಿಗೆ ನಿರ್ಬಂಧ
ಮೈಸೂರು: ನೀರಿನ ಒಳಹರಿವು ಹೆಚ್ಚಾದ ಹಿನ್ನೆಲೆಯಲ್ಲಿ, ಜಿಲ್ಲೆಯ ತಿ.ನರಸೀಪುರ ತಾಲೂಕಿನ ತಲಕಾಡು ನಿಸರ್ಗ ಧಾಮಕ್ಕೆ ಬರುವ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ತಾಲೂಕು ಆಡಳಿತ ಆದೇಶ ಹೊರಡಿಸಿದೆ. ಕೆಅರ್ಎಸ್,...
KSRTC: ನಾಳೆಯಿಂದ ಸಾರಿಗೆ ನೌಕರರ ಉಪವಾಸ-ಧರಣಿ ಸತ್ಯಾಗ್ರಹ: ಚಂದ್ರಶೇಖರ್
ಬೆಂಗಳೂರು: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸಂಘಟನೆಗಳ ಒಕ್ಕೂಟ ನಾಳೆಯಿಂದ (ಜು.29)...