NEWSಕೃಷಿನಮ್ಮಜಿಲ್ಲೆನಮ್ಮರಾಜ್ಯ

ಮೇಕೆದಾಟು ಬೇಕು ಎಂದು ಪಾದಯಾತ್ರೆ ಮಾಡಿದವರಿಂದಲೇ ಇಂದು ಕಾವೇರಿಗಾಗಿ ಬೀದಿಗಿಳಿದ ರೈತರ ಬಂಧನ: ಎಚ್‌ಡಿಕೆ ಕಿಡಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಇದೆಂಥಾ ಚೋದ್ಯ? ಒಂದು ಕಡೆ ಮೇಕೆದಾಟು ಬೇಕು ಎಂದು ಪಾದಯಾತ್ರೆ ಮಾಡಿದವರು, ಇಂದು ಕಾವೇರಿಗಾಗಿ ಬೀದಿಗಿಳಿದು ಹೋರಾಟ ನಡೆಸುತ್ತಿದ್ದ ರೈತರನ್ನು, ಹೋರಾಟಗಾರರನ್ನು ಬಂಧಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಎಚ್‌ಡಿಕೆ, ರಾತ್ರೋರಾತ್ರಿ ಹೋರಾಟಗಾರರನ್ನು ಬಂಧಿಸಿರುವುದು ಸರ್ಕಾರದ ಕಿಡಿಗೇಡಿತನದ ಪರಮಾವಧಿ. ಕರ್ನಾಟಕದಲ್ಲಿ ಕಾಂಗ್ರೆಸ್ಸಿಗರಿಗೆ ಒಂದು ನ್ಯಾಯ, ಕನ್ನಡಿಗರಿಗೆ ಇನ್ನೊಂದು ನ್ಯಾಯ ಎನ್ನುವುದು ಇದೆಯಾ ಎಂದು ಪ್ರಶ್ನಿಸಿದರು.

ಕೋವಿಡ್ ನಿಯಮ ಉಲ್ಲಂಘಿಸಿ ಕಾಂಗ್ರೆಸ್ ನಾಯಕರು ಮೇಕೆದಾಟು ಪಾದಯಾತ್ರೆ ಮಾಡಬಹುದಾದರೆ, ನಾಡಿನ ಜೀವನಾಡಿ ಕಾವೇರಿಗಾಗಿ ಕನ್ನಡಿಗರು ಪ್ರತಿಭಟನೆ ನಡೆಸಬಾರದೇ? ಶಾಂತವಾಗಿ ಹೋರಾಟ ನಡೆಸುತ್ತಿದ್ದ ರೈತರು, ಹೋರಾಟಗರನ್ನು ಬಂಧಿಸಿರುವುದು ಖಂಡನೀಯ. ಇದೇನು ಕನ್ನಡಿಗರ ಸರ್ಕಾರವೋ? ಸ್ಟಾಲಿನ್ ಅಧೀನದಲ್ಲಿರುವ ಬಾಡಿಗೆ ಸರ್ಕಾರವೋ? ಇಷ್ಟಕ್ಕೂ ಕನ್ನಡಿಗರು ಮತ ಹಾಕಿದ್ದು ಯಾರಿಗೆ‌ ಎಂದರು.

ಹೋರಾಟಗಾರರು, ರೈತರನ್ನು ಕೂಡಲೇ ಬಂಧಮುಕ್ತಗೊಳಿಸಬೇಕು. ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ನಿಲ್ಲಿಸಬೇಕು. ಕಾಂಗ್ರೆಸ್ ಪಕ್ಷವು ಡಿಎಂಕೆ ಪಕ್ಷದ ಬಿ ಟೀಂ ಆಗಿ ಪರಿವರ್ತನೆ ಆದ ಪರಿಣಾಮವೇ ಈ ಕಾವೇರಿ ಬಿಕ್ಕಟ್ಟು ಎನ್ನುವುದು ಕನ್ನಡಿಗರಿಗೆ ಈಗ ಸ್ಪಷ್ಟವಾಗಿ ಅರ್ಥವಾಗಿದೆ ಎಂದು ಹೇಳಿದರು.

Leave a Reply

error: Content is protected !!
LATEST
ಸ್ಯಾಂಡಲ್‌ವುಡ್‌ ಹಿರಿಯ ನಟ ಟಿ.ತಿಮ್ಮಯ್ಯ ಹೃದಯಾಘಾತದಿಂದ ನಿಧನ NWKRTCಯ 27ನೇ ಸಂಸ್ಥಾಪನಾ ದಿನ- 2023-24 ನೇ ಸಾಲಿನ ಅತ್ಯುತ್ತಮ ವಿಭಾಗ, ಉತ್ತಮ ಘಟಕ, ಅತ್ಯುತ್ತಮ ಅಧಿಕಾರಿಗಳಿಗೆ ಪುರಸ... KKRTC ಅಧಿಕಾರಿಗಳ ನಡೆಯಿಂದ ನೊಂದ ತಾಳಿಕೋಟೆ ಘಟಕ ಚಾಲಕನಿಂದ ದಯಾಮರಣಕ್ಕಾಗಿ ರಾಜ್ಯಪಾಲರಿಗೆ ಅರ್ಜಿ KSRTC: ₹30 ಸಾವಿರ ಲಂಚ ಪಡೆದ ಬಳಿಕ ಗುತ್ತಿಗೆ ಚಾಲಕರ ನೇಮಕ - 11 ತಿಂಗಳ ಬಳಿಕ ₹30 ಸಾವಿರದಿಂದ ₹18 ಸಾವಿರಕ್ಕೆ ಇಳಿದ ... ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ ಪೋಸ್ಟ್ ಆಫೀಸ್ ಸೇವೆಗಳು ಈಗ ಗ್ರಾಮ ಒನ್ ಕೇಂದ್ರಗಳಲ್ಲೂ ಲಭ್ಯ 5ವರ್ಷದೊಳಗಿನ ಮಕ್ಕಳಿಗೆ PCV ಲಸಿಕೆ ಹಾಕಿಸಿ: ಸುರಳ್ಕರ್ ವಿಕಾಸ್ ಕಿಶೋರ್ KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು