CRIMENEWSನಮ್ಮಜಿಲ್ಲೆ

KKRTC ಬಸ್‌- ಕಾರು ನಡುವೆ ಭೀಕರ ಅಪಘಾತ: ಮೂವರು ಸಾವು, ಒಬ್ಬರ ಸ್ಥಿತಿ ಗಂಭೀರ

ವಿಜಯಪಥ ಸಮಗ್ರ ಸುದ್ದಿ

ಬೆಳಗಾವಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಬಸ್‌ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಓರ್ವರ ಸ್ಥಿತಿ ಗಂಭೀರವಾಗಿರುವ ಘಟನೆ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ನಡೆದಿದೆ.

ಕಲಬುರಗಿ ಜಿಲ್ಲೆಯ ಅಪ್ಜಲಪುರ ಮೂಲದವರಾದ ಗೀರಿಶ ಬಳ್ಳೋರಗಿ, ರಾಹುಲ್ ಮ್ಯಾಲೇಶಿ, ಸಂಗು ಅಮರಗೊಂಡ ಅಪಘಾತದಲ್ಲಿ ಅಸುನೀಗದವರು. ಇನ್ನು ರಾಧಿಕಾ ಮ್ಯಾಲೇಶಿ ಎಂಬುವರು ಗಂಭೀರ ಗಾಯಗೊಂಡಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮುರಗುಂಡಿ ಗ್ರಾಮದ ಹೊರವಲಯದಲ್ಲಿ ಈ ಅವಘಡ ಸಂಭವಿಸಿದ್ದು, ಕಾರಿನಲ್ಲಿದ್ದವರೆಲ್ಲ ಕೊಲ್ಲಾಪುರ ಮಹಾಲಕ್ಷ್ಮಿ ದೇವಿ ದರ್ಶನ ಮಾಡಿ ವಾಪಸ್‌ ಬರುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ಇತ್ತ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಥಣಿ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ ಬಳಿಕ ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.

Megha
the authorMegha

Leave a Reply

error: Content is protected !!
Latest news
NWKRTC: ಧಾರವಾಡ ಗ್ರಾ.ವಿಭಾಗದ ನಿವೃತ್ತ ಅಧಿಕಾರಿಗಳಿಗೆ ಹೃದಯಸ್ಪರ್ಷಿ ಬೀಳ್ಕೊಡುಗೆ KSRTC: ಮೂರು ದಶಕಗಳ ಸುದೀರ್ಘ ಸೇವೆ ಬಳಿಕ ಸಂಸ್ಥೆಯ ಬಸ್‌ ಚಾಲಕ ನಿವೃತ್ತಿ-  ಮರೆಯಲಾಗದ ಸಂದರ್ಭ ಸೆರೆ! ಇಂಧನ, ಗ್ಯಾಸ್ ಬೆಲೆಯೇರಿಕೆ, ವಿದ್ಯುತ್ ಖಾಸಗೀಕರಣ ವಿರೋಧಿಸಿ ರಾರೈಸಂ ಪ್ರತಿಭಟನೆ -ಸರ್ಕಾರಗಳ ವಿರುದ್ಧ ಘೋಷಣೆ KKRTC: ಬಸ್ ನಿಲ್ದಾಣದಲ್ಲಿ ಮಹಿಳೆ ಜತೆ ಅನುಚಿತ ವರ್ತನೆ-ಕಿಡಿಗೇಡಿಗೆ ಚಪ್ಪಲಿ ಏಟು ಪ್ರಮಾಣ ವಚನ ಸ್ವೀಕಾರಕ್ಕೆ ಮುಹೂರ್ತ ಫಿಕ್ಸ್ – ಜೂ.3ರಂದು ನೂತನ ಸಿಎಂಆಗಿ ಗದ್ದುಗೆ ಏರಲಿರುವ ಡಿ.ಕೆ.ಶಿವಕುಮಾರ್‌ ಪೆಟ್ರೋಲ್‌, ಡೀಸೆಲ್‌ ಬಳಿಕ CNG ದರದಲ್ಲೂ ಏರಿಕೆ- ಎರಡನೇ ಬಾರಿಗೆ 2ರೂ. ಹೆಚ್ಚಳ -ಗ್ರಾಹಕರಿಗೆ ಶಾಕ್‌ ಕೊಟ್ಟ MGL ಆದೇಶ ಕಾಯ್ದಿರಿಸಿದ 3 ತಿಂಗಳೊಳಗಾಗಿ ಎಲ್ಲ ಕೋರ್ಟ್‌ಗಳಲ್ಲೂ ಅಂತಿಮ ತೀರ್ಪು ಹೊರಬೀಳಬೇಕು: ಸುಪ್ರೀಂ ಮಹತ್ವದ ಆದೇಶ ಗೃಹಲಕ್ಷ್ಮಿ ಹಣ ಮೃತರ ಖಾತೆಗೆ ಜಮೆ ಆಗದಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಗ್ಯಾರಂಟಿ ಯೋಜನೆ ಅಧ್ಯಕ್ಷ ತಾಕೀತು ವಿದ್ಯುತ್ ಗ್ರಾಹಕರಿಗೆ ಗುಡ್‌ನ್ಯೂಸ್‌: ಬಿಲ್‌ಗಳಿಗೆ ಕನಿಷ್ಠ 15 ದಿನಗಳ ಪಾವತಿ ಅವಧಿ ಕಡ್ಡಾಯ ಮಾಡಿ KERC ಆದೇಶ- ಜೂನ್‌... BMTC KSRTC ನಿವೃತ್ತ ನೌಕರರ ಪ್ರತಿಭಟನೆ: ಕನಿಷ್ಠ ಪಿಂಚಣಿ 7500 ರೂ. ನೀಡಲು ಆಗ್ರಹ